Breaking News

Daily Archives: ಅಕ್ಟೋಬರ್ 5, 2024

ಶಬರಿ ಕೊಳ್ಳ ಪ್ರವಾಸಿ ತಾಣ ಮಾಡಲು ಕ್ರಮ: ಸಂಸದ ಜಗದೀಶ ಶೆಟ್ಟರ್‌

ರಾಮದುರ್ಗ: ‘ತಾಲ್ಲೂಕಿನ ಸುರೇಬಾನ ಸಮೀಪದ ಶಬರಿ ಕೊಳ್ಳದ ದೇವಸ್ಥಾನವನ್ನು ಪ್ರವಾಸಿ ತಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು. ತಾಲ್ಲೂಕಿನ ಶಬರಿ ಕೊಳ್ಳದ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ದೇವಿ ದರ್ಶನದ ನಂತರ ಮಾತನಾಡಿದ ಅವರು, ತಾಲ್ಲೂಕಿನಲ್ಲಿರುವ ಐತಿಹಾಸಿಕ ಶಬರಿಕೊಳ್ಳದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ದೊರಕಿಸಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದರು. ರಾಮದುರ್ಗ ಮಂಡಲ ಅಧ್ಯಕ್ಷ ಡಾ. ಕೆ.ವಿ …

Read More »

ಉರ್ದು ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢಶಾಲೆಯನ್ನಾಗಿ ಶೀಘ್ರದಲ್ಲಿಯೇ ಮಾಡಲಾಗುವುದು’ ಎಂದ ಶಾಸಕ ಗಣೇಶ ಹುಕ್ಕೇರಿ

ಚಿಕ್ಕೋಡಿ: ‘ಚಿಕ್ಕೋಡಿ ಸದಲಗಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಲ್ಪಸಂಖ್ಯಾತರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸಲಾಗುತ್ತಿದೆ. ಹಿರೇಕೋಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢಶಾಲೆಯನ್ನಾಗಿ ಶೀಘ್ರದಲ್ಲಿಯೇ ಮಾಡಲಾಗುವುದು’ ಎಂದು ಶಾಸಕ ಗಣೇಶ ಹುಕ್ಕೇರಿ ಭರವಸೆ ನೀಡಿದರು.   ತಾಲ್ಲೂಕಿನ ಹಿರೇಕೋಡಿ ಗ್ರಾಮದಲ್ಲಿ ಶನಿವಾರ ಮುಸ್ಲಿಂ ಸಮುದಾಯದವರಿಗಾಗಿ ₹20 ಲಕ್ಷ ವೆಚ್ಚದ ಶಾದಿ ಮಹಲ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ‘ಮುಸ್ಲಿಂ ಸಮುದಾಯದ ಜನರಿಗೆ …

Read More »

ರಾಜ್ಯದ ಗರ್ಭಿಣಿ ಮತ್ತು ಬಾಣಂತಿಯರು ಸೈಬರ್ ವಂಚಕರಿಂದ ಎಚ್ಚರದಿಂದ ಇರಬೇಕು’: ಹೆಬ್ಬಾಳಕರ

ಬೆಳಗಾವಿ: ‘ಪೋಷಣ್‌ ಟ್ರ್ಯಾಕರ್‌ ಆಯಪ್‌ ಹ್ಯಾಕ್‌ ಮಾಡುತ್ತಿರುವ ಮಾಹಿತಿ ಸಿಕ್ಕಿದ್ದು, ರಾಜ್ಯದ ಗರ್ಭಿಣಿಯರು ಮತ್ತು ಬಾಣಂತಿಯರು ಸೈಬರ್ ವಂಚಕರಿಂದ ಎಚ್ಚರದಿಂದ ಇರಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೋಷಣ್‌ ಆಯಪ್‌ನಲ್ಲಿ ಅಂಗನವಾಡಿ ಕೇಂದ್ರಗಳ ಮಕ್ಕಳ ಹಾಜರಾತಿ, ಗರ್ಭಿಣಿಯರು ಮತ್ತು ಬಾಣಂತಿಯರ ಸಂಖ್ಯೆ, ಅವರಿಗೆ ಬಿಡುಗಡೆಯಾದ ಹಣ ಮತ್ತಿತರ ವಿವರ ಹಾಕಿರುತ್ತೇವೆ. ಇದನ್ನೇ ಬಳಸಿಕೊಂಡು ಕೆಲವು ವಂಚಕರು ಲಿಂಕ್‌ …

Read More »

ಅ. 8ಕ್ಕೆ ಚನ್ನಮ್ಮನ ಕಿತ್ತೂರಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ: ಶಾಸಕ ಬಾಬಾಸಾಹೇಬ

ಕಿತ್ತೂರು: ‘ಇಲ್ಲಿಯ ಕೋಟೆ ಆವರಣಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅ. 8ಕ್ಕೆ ಭೇಟಿ ನೀಡಿ, ಮಹತ್ವಾಕಾಂಕ್ಷೆಯ ಯೋಜನೆ ಆಗಿರುವ ‘ಥೀಮ್ ಪಾರ್ಕ್’ ಸೇರಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಕೋಟೆ ಆವರಣದೊಳಗೆ ನಡೆದಿರುವ ಸ್ವಚ್ಛತೆ ಮತ್ತು ಇತರ ಸಿದ್ಧತಾ ಕಾರ್ಯ ವೀಕ್ಷಣೆಗೆ ಅಧಿಕಾರಿಗಳ ಜತೆ ಶನಿವಾರ ಆಗಮಿಸಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.   ಅ. 23 ರಿಂದ 25 ರವರೆಗೆ ನಡೆಯಲಿರುವ ‘ಚನ್ನಮ್ಮನ …

Read More »

ಬೆಳಗಾವಿ: ಕಳಸಾ-ಬಂಡೂರಿ ಯೋಜನೆಗೆ ವಿರೋಧ

ಬೆಳಗಾವಿ: ‘ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನ ಪರಿಸರಕ್ಕೆ ಮಾರಕವಾಗಲಿದೆ. ಇದರ ಬಗ್ಗೆ ಮಹದಾಯಿ ಜಲವಿವಾದ ನ್ಯಾಯಾಧಿಕರಣ ನೀಡಿದ ತೀರ್ಪು ಕೂಡ ಅವೈಜ್ಞಾನಿಕವಾಗಿದೆ’ ಎಂದು ವಿವಿಧ ಪರಿಸರ ಸಂಘಟನೆಗಳ ಕಾರ್ಯಕರ್ತರು ಜಂಟಿ ಹೇಳಿಕೆ ನೀಡಿದರು. ಪರ್ಯಾವರಣಿ, ಪರಿಸರಕ್ಕಾಗಿ ನಾವು, ಪರಿವರ್ತನಾ, ಗ್ರಾಕೂಸ್‌ ಹಾಗೂ ಜಾಗೃತಿ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಒಕ್ಕೊರಲಿನಿಂದ ಯೋಜನೆಗೆ ವಿರೋಧ ವ್ಯಕ್ತಪಡಿಸಿದರು.   ನಿತಿನ್ ಧೋಂಡ ಮಾತನಾಡಿ, ‘ನ್ಯಾಯಾಧಿಕರಣದ ತೀರ್ಪಿನ ಪ್ರಕಾರ, ಕುಡಿಯುವ ನೀರಿನ ಅಗತ್ಯತೆ …

Read More »

ಹರಿಯಾಣ & ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿಗೆ ಆಘಾತ?

ಬಿಜೆಪಿ ಬಲಿಷ್ಠವಾಗಿದೆ, ಬಿಜೆಪಿ ಪಕ್ಷವು ಎಂತಹ ಚುನಾವಣೆ ಇದ್ದರೂ ಯಾವುದೇ ಅಡೆತಡೆ ಇಲ್ಲದೆ ಗೆದ್ದು ಬೀಗಲಿದೆ, ಬಿಜೆಪಿ ಪಕ್ಷವನ್ನು ಸೋಲಿಸುವುದು ಕಷ್ಟ… ಹೀಗೆ ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಪಕ್ಷದ ಬಗ್ಗೆ ಕೆಲವು ಕಠಿಣವಾದ ನಂಬಿಕೆಗಳು ಹುಟ್ಟಿಕೊಂಡಿದ್ದವು. ಈ ನಂಬಿಕೆಗಳು ಚುನಾವಣೆಯಲ್ಲಿ ಕೈಹಿಡಿದು ನಡೆಸುವ ನಿರೀಕ್ಷೆ ಕೂಡ ಇತ್ತು. ಆದರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ನಡೆದ ಘಟನೆಗಳು ಇದೀಗ ಬಿಜೆಪಿ ಪಕ್ಷವನ್ನು ಸೋಲಿನ ಸುಳಿಗೆ ತಳ್ಳಿದೆಯಾ? ಹರಿಯಾಣ & ಜಮ್ಮು …

Read More »

ಖೈದಿಗಳಿಗೆ 4 ದಿನ ಭರ್ಜರಿ ಮಾಂಸದೂಟ!

ಯಾವುದೋ ಒಂದು ದೊಡ್ಡ ತಪ್ಪಿನಿಂದ ಜೈಲುಪಾಲಾಗುವ ಖೈದಿಗಳು (Prisoners), ಒಂದು ಸಣ್ಣ ಬೆಳಕಿನಡಿ, ನಾಲ್ಕು ಗೋಡೆಗಳ ಮಧ್ಯೆ ಸೆರೆಮನೆ ವಾಸ ಅನುಭವಿಸಬೇಕಿರುತ್ತದೆ. ಇದು ಪ್ರತಿಯೊಂದು ಜೈಲಿನ ಮೂಲ ನಿಯಮ. ಇಲ್ಲಿ ಯಾವ ಐಷಾರಾಮಿ ಜೀವನ, ಭರ್ಜರಿ ಊಟ, ಉತ್ತಮ ಸೌಕರ್ಯ, ಸೌಲಭ್ಯಗಳು ಇರುವುದಿಲ್ಲ. ಜಗತ್ತಿನ ಮೂಲೆ ಮೂಲೆಯಲ್ಲಿ ಏನೆಲ್ಲಾ ಘಟನೆಗಳು ನಡೆಯುತ್ತಿವೆ ಎಂಬುದರ ಅರಿವಿರುವುದಿಲ್ಲ. ಖುಷಿ, ಆನಂದದ ಕ್ಷಣಕ್ಕೆ ಜಾಗವಿರುವುದಿಲ್ಲ. ಹೀಗಿರುವಾಗ ಈ ಒಂದು ಸರ್ಕಾರ ತಮ್ಮ ರಾಜ್ಯದಲ್ಲಿರುವ ಜೈಲಿನ …

Read More »

ರಾಜಧಾನಿಯಲ್ಲಿ ಸತತ 2 ದಿನವೂ ಗುಡುಗು ಸಹಿತ ಮಳೆ ಆರ್ಭಟ

ರಾಜಧಾನಿಯಲ್ಲಿ ಸತತ 2 ದಿನವೂ ಗುಡುಗು ಸಹಿತ ಮಳೆ ಆರ್ಭಟ ಬೆಂಗಳೂರು:ರಾಜಧಾನಿಯಲ್ಲಿ ಸತತ 2 ದಿನವೂ ಗುಡುಗು ಮಿಂಚು ಸಹಿತ ಮಳೆ ಮುಂದುವರಿದ್ದು, ಶುಕ್ರವಾರ ರಾತ್ರಿ ಹಾಗೂ ಶನಿವಾರ ಸುರಿದ ವರ್ಷಧಾರೆಯಿಂದ ನಗರದ ವಿವಿಧ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಯಿತು. ತಡರಾತ್ರಿವರೆಗೂ ಮಳೆ ಸುರಿಯುತ್ತಿತ್ತು. ಸರ್ಜಾಪುರ ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದ ಪರಿಣಾಮ ಸವಾರರು ಪರದಾಡಿದರು. ಪ್ರತಿ ಬಾರಿ ಮಳೆ ಬಂದಾಗ ಇದೇ ಸಮಸ್ಯೆ ಪುನರಾವರ್ತನೆಯಾಗುತ್ತಿದ್ದರೂ ಬಿಬಿಎಂಪಿ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳಿಯರು ಆಕ್ರೋಶ …

Read More »

ಶೋ ಹಾಳು ಮಾಡೋಕೆ ನಿಮ್ಮ ಅಪ್ಪನ ಆಣೆ ಸಾಧ್ಯವಿಲ್ಲʼ;ಕಿರಿಕ್‌ ಮಾಡಿದ್ದ ಜಗದೀಶ್‌..ಕಿಚಾಯಿಸಿದ ಸುದೀಪ್‌..!

ಬಿಗ್‌ಬಾಸ್‌ ಕನ್ನಡ ಸೀಸನ್‌ 11 ಮಹತ್ವದ ಘಟ್ಟಕ್ಕೆ ತಲುಪಿದೆ. ಇಂದು ವಾರದ ಕಥೆ ಕಿಚ್ಚನ ಜೊತೆಯತ್ತ ಪ್ರೇಕ್ಷಕರ ಗಮನ ಹೋಗಿದೆ. ಬಿಗ್‌ಬಾಸ್‌ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಮೊದಲ ವಾರ ಸೃಷ್ಟಿಸಿದ ಕೆಲವು ಅವಾಂತರಗಳು, ಬಿಗ್‌ಬಾಸ್‌ ಶೋ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದೇ ಈ ಕ್ಯೂರಿಯಾಸಿಟಿಗೆ ಕಾರಣ. ಖಡಕ್‌ ಮಾತು..ನೇರ ನುಡಿ ಮತ್ತು ಸ್ಪರ್ಧಿಗಳ ತಪ್ಪನ್ನ ನಾಜೂಕಾಗಿಯೇ ಎತ್ತಿತೋರಿಸುವ ಕಿಚ್ಚ, ಟೈಮ್‌ ಬಂದಾಗ್ಲೆಲ್ಲ ಬಿಗ್‌ಬಾಸ್‌ ವೇದಿಕೆ ಮೇಲೆ ರಾಂಗ್‌ ಆಗಿದ್ದಾರೆ. ಕೆಲವು …

Read More »

ದಾಂಡೇಲಿಯಲ್ಲಿ ವ್ಯಾಪಕ ಮಳೆ. ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ದಾಂಡೇಲಿ : ನಗರದಲ್ಲಿ ವ್ಯಾಪಕವಾಗಿ ಮಳೆಯಾಗಿ ಪಟೇಲ್ ವೃತ್ತದ ಹತ್ತಿರ ಎರಡು ಅಂಗಡಿ ಸೇರಿದಂತೆ ಸ್ಥಳೀಯ ಮನೆಗಳಿಗೆ ನೀರು ನುಗ್ಗಿರುವ ಘಟನೆ ಇಂದು ಶನಿವಾರ(ಅ.05) ನಡೆದಿದೆ. ನಗರದ ಪಟೇಲ್ ವೃತ್ತದ ಹತ್ತಿರ ಕಳೆದೆರಡು ತಿಂಗಳ ಹಿಂದೆ ಮುರಿದು ಬಿದ್ದಿದ್ದ ಬಿದಿರನ್ನು ತುಂಡರಿಸಿ ಅಲ್ಲಿ ರಾಶಿ ಹಾಕಿದ ಹಿನ್ನೆಲೆಯಲ್ಲಿ ಮಳೆಯ ನೀರು ಗಟಾರದಲ್ಲಿ ಸರಾಗವಾಗಿ ಹರಿಯದೆ ಇರುವುದರಿಂದ ಮಳೆಯ ನೀರು ಹಾಗು ತ್ಯಾಜ್ಯ ನೀರು ತುಂಬಿ ರಸ್ತೆ ಹಾಗೂ ಪಕ್ಕದಲ್ಲಿರುವ ಎರಡು ಅಂಗಡಿಗಳಿಗೆ …

Read More »