Breaking News

Daily Archives: ಅಕ್ಟೋಬರ್ 7, 2024

ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ಬೃಹತ್‌ ಡ್ರಗ್‌ ಜಾಲವೊಂದನ್ನು ಪತ್ತೆ ಮಾಡಿದ್ದಾರೆ. ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ. ಸುಮಾರು 6 ಕೆ.ಜಿ‌ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ …

Read More »

ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

ಹುಬ್ಬಳ್ಳಿ: ಕ್ರಿಕೆಟಿಗ ಕೆ.ಎಲ್.ರಾಹುಲ್ (KL Rahul) ಅವರು ಇಲ್ಲಿನ ಪ್ರತಿಭಾವಂತ ಬಡ ವಿದ್ಯಾರ್ಥಿಯೊಬ್ಬರ ಎರಡನೇ ವರ್ಷದ ಶೈಕ್ಷಣಿಕ ಶುಲ್ಕ ಪಾವತಿಸುವ ಮೂಲಕ ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ. ಇಲ್ಲಿನ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಬಿಕಾಂ ಕಲಿಯುತ್ತಿರುವ ಅಮೃತ್ ಮಾವಿನಕಟ್ಟಿ ಎನ್ನುವ ವಿದ್ಯಾರ್ಥಿಯ ಎರಡನೇ ವರ್ಷದ ಶುಲ್ಕವನ್ನು ಕೆ.ಎಲ್.ರಾಹುಲ್ ಅವರು ಪಾವತಿ ಮಾಡಿದ್ದಾರೆ. 3 ಮತ್ತು 4 ನೇ ಸೆಮಿಸ್ಟರ್ ನ 75,504 ರೂ. ಪಾವತಿಸಿದ್ದಾರೆ. ಇದರ ಮೂಲಕ ಕಳೆದ ವರ್ಷ ಬಿಕಾಂ …

Read More »

ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

ವಿಜಯನಗರ/ವಿಜಯಪುರ: ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾದ ಬೆನ್ನಲ್ಲೇ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ “ದಲಿತ ಸಿಎಂ’ ಚರ್ಚೆಗೆ ರೆಕ್ಕೆಪುಕ್ಕಗಳು ಬಂದಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿರುವ ಬಗ್ಗೆ ಹೆಚ್ಚಿನ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ರಾಜ್ಯದ ಕೆಲವು ನಾಯಕರು ಹೇಳಿಕೆ …

Read More »

ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!;

ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಬೀದರ: ತೊಗರಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ, ಕಿತ್ತು ಹಾಕಿರುವ ಘಟನೆ ರವಿವಾರ(ಅ6) ಕರ್ನಾಟಕ – ಮಹಾರಾಷ್ಟ್ರ ಗಡಿ ಗ್ರಾಮ ಉಜಳಂಬದಲ್ಲಿ ನಡೆದಿದೆ. ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಡಿವೈಎಸ್ಪಿ ಮತ್ತು ಸಿಪಿಐ ನೇತೃತ್ವದ ತಂಡ ದಾಳಿ ನಡೆಸಿದೆ. 3.7 ಎಕರೆ ಜಮೀನಿನಲ್ಲಿ ತೊಗರಿ ಬೆಳೆಯಲಾಗಿದ್ದು, ಮಧ್ಯದಲ್ಲಿ ಗಾಂಜಾ …

Read More »

25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

ಗದಗ: ಪರವಾನಗಿ ಹೊಂದಿದ ಭೂ ಮಾಪಕರ ಪರವಾನಗಿಯನ್ನು ನವೀಕರಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂ ದಾಖಲೆ ಸಹಾಯಕ ನಿರ್ದೇಶಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ರೋಣ ತಾಲೂಕು ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ (ಎಡಿಎಲ್‌ಆರ್‌)ವಿ. ಗಿರೀಶ್‌ ರವಿವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗಜೇಂದ್ರಗಡ ತಾಲೂಕಿನ ಅರುಣಕುಮಾರ್‌ ನೀರಲಕೇರಿಎಂಬುವರು ಸರ್ವೇಯರ್‌ ಪರವಾನಗಿ ನವೀಕರಿಸಿಕೊಡುವಂತೆ ವಿ. ಗಿರೀಶ್‌ ಬಳಿ ಹೋದಾಗ, ಪರವಾನಗಿ ನವೀಕರಣಕ್ಕೆ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ …

Read More »

ದರೋಡೆಗೆ ಯತ್ನ. ಪೊಲೀಸರಿಂದ ಓರ್ವನ ಕಾಲಿಗೆ ಗುಂಡು

ಹುಬ್ಬಳ್ಳಿ: ದರೋಡೆಗೆ ಯತ್ನಿಸಿದ ತಂಡದ ಮೇಲೆ ಪೊಲೀಸರು ಗುಂಡಿನ‌ ದಾಳಿ‌ ನಡಸಿದ್ದು, ಒಬ್ಬ ದರೋಡಕೋರನ ಕಾಲಿಗೆ ಗುಂಡು ತಗುಲಿದ ಘಟನೆ ರೇವಡಿಹಾಳ ಸೇತುವೆ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ. ಸೋಮವಾರ ಬೆಳಗಿನ‌ ಜಾವ 3:00 ಗಂಟೆ ಸುಮಾರಿಗೆ ಗೋಕುಲ ಗ್ರಾಮದಲ್ಲಿ 5-6 ಜನರ ತಂಡವು ರಜನಿಕಾಂತ ದೊಡ್ಡಮನಿ ಎಂಬುವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದೆ. ಈ ವೇಳೆ ಮನೆಯವರು ಎಚ್ಚರಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಗೋಕುಲ …

Read More »

ದರ್ಶನ್‌ ಭೇಟಿಗೆಂದು ಬಳ್ಳಾರಿ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ

ಬಳ್ಳಾರಿ: ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ (Darshan) ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಸೋಮವಾರ (ಅ.07) ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಜತೆಗೆ ಆಪ್ತರಾದ ಅನುಷಾ ಶೆಟ್ಟಿ ಸೇರಿ ಮೂವರು ಮಹಿಳೆಯರು ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಮಧ್ಯಾಹ್ನ 12.12ಕ್ಕೆ ಜೈಲಿಗೆ ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಭೇಟಿ ನೀಡುತ್ತಿರುವುದು ಇದು ಎಂಟನೇ ಬಾರಿ. ವಿಜಯಲಕ್ಷ್ಮಿ ಅವರೊಂದಿಗೆ ಸುಶಾಂತ ನಾಯ್ಡು ಸೇರಿದಂತೆ ಒಟ್ಟು ಐವರು ಆಗಮಿಸಿದ್ದಾರೆ. ಬ್ಯಾಗ್ ನಲ್ಲಿ ಬೇಕರಿ ತಿನಿಸು, ಡ್ರೈಫ್ರೂಟ್, …

Read More »

ಕಾರು ಅಪಘಾತ. ಜಾನಪದ‌ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ

ಮುಧೋಳ : ಜಾನಪದ‌ ಕಲಾವಿದ ಗುರುರಾಜ ಹೊಸಕೋಟಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಹೊಸಕೋಟಿಯವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಭಾನುವಾರ(ಅ.6) ರಾತ್ರಿ ಮುಧೋಳ ಮಾರ್ಗದಿಂದ ಮಹಾಲಿಂಗಪುರದ ಕಡೆಗೆ ತೆರಳುವಾಗ ಎದುರಿನಿಂದ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯಲ್ಲಿನ ಬಂಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಹೊಸಕೋಟಿ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ …

Read More »

ವ್ಯಾಜ್ಯಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ

ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ವತಿಯಿಂದ ವ್ಯಾಜ್ಯಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ 4 ಗ್ರಾಮಗಳನ್ನು ದತ್ತು ಪಡೆದುಕೊಂಡು ಕಾನೂನು ನೆರವನ್ನು ನೀಡಲಾಗುತ್ತಿದೆ ಎಂದು ಎಚ್.ಸಿ.ಇ.ಎಸ್ ಕಾನೂನು ಮಹಾವಿದ್ಯಾಲಯದ ಅಧ್ಯಕ್ಷ ಎಸ್.ಕೆ. ಪಾಟೀಲ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ಗ್ರಾಮಗಳಲ್ಲಿ, ಹೈಕೋರ್ಟ್, ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ 35 ಲಕ್ಷ ಪ್ರಕರಣಗಳು ಚಾಲ್ತಿಯಲ್ಲಿವೆ. ರಾಜಿ …

Read More »

ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬೊಮ್ಮಾಯಿ

ಗದಗ: ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ರಾಜಿನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡಿದರೆ …

Read More »