Breaking News

Daily Archives: ಅಕ್ಟೋಬರ್ 7, 2024

ಮುರುಘಾ ಶರಣರಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘರಾಜೇಂದ್ರ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಮಂಜೂರರಾಗಿದೆ. ಜೈಲಿನಿಂದ ಮುರುಘಾ ಶ್ರೀ ಬಿಡುಗಡೆಗೆ ಕೋರ್ಟ್ ಆದೇಶ ನೀಡಿದ್ದು, ಜೈಲಿನಿಂದ ಬಿಡುಗಡೆ ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಲಿದ್ದಾರೆ.   ಪೋಕ್ಸೊ ಪ್ರಕರಣದಲ್ಲಿ ಬಾಲಕಿಯರ ವಿಚಾರಣೆ ಬಳಿಕ ಜಾಮೀನು ನೀಡಲು ಈ ಹಿಂದೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಸೋಮವಾರ (ಅ.07) ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ …

Read More »

ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

ಕುಂದಾಪುರ: ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿ ಹಾಗೂ ಹೈದರಾಬಾದ್‌ಗೆ ಕಾರವಾರದಿಂದ ಕುಂದಾಪುರ -ಉಡುಪಿ- ಮಂಗಳೂರು ಮೂಲಕ ರೈಲು ಸಂಪರ್ಕ ಆರಂಭಿಸಬೇಕು ಎನ್ನುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ಹಾಗೂ ರಾಜ್ಯ ಸಚಿವ ವಿ. ಸೋಮಣ್ಣಗೆ ಮನವಿ ಸಲ್ಲಿಸಿದ್ದಾರೆ.   ಕಳೆದೊಂದು ದಶಕದಿಂದ ತಿರುಪತಿಗೆ ರೈಲು ಸಂಪರ್ಕ ಬೇಕೆನ್ನುವ ಬೇಡಿಕೆಯನ್ನು ಕರಾವಳಿಯ ಎಲ್ಲ ಊರುಗಳ ಜನರು ಇಡುತ್ತಿದ್ದು, ಈ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ …

Read More »

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ

ಬೆಳಗಾವಿ: ಹಳೆ‌ ದ್ವೇಷ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಮತೀರ್ಥ ನಗರ ನಿವಾಸಿ ನಿತೇಶಕುಮಾರ ಚವ್ಹಾಣ ಎಂಬ ವಿಚಾರಣಾಧೀನ ಕೈದಿ ಮೇಲೆ ಹಳೆ ದ್ವೇಷದಿಂದಾಗಿ ಶುಕ್ರವಾರ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ನಿತೇಶ್ ಕುಮಾರ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತ್ಯಾನಟ್ಟಿಯ ವಿಚಾರಣಾದೀನ ಕೈದಿಗಳಾದ ಬಸವರಾಜ ಹೊಳೆಪ್ಪ‌ ದಡ್ಡಿ, ಬಸವಣ್ಣಿ ಸಿದ್ದಪ್ಪ …

Read More »

ಆರ್. ಅಶೋಕ ಅವರ ಪ್ರಕರಣಕ್ಕೂ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸ:ಶೆಟ್ಟರ್

ಧಾರವಾಡ: ‘ವಿಪಕ್ಷ ನಾಯಕ ಆರ್. ಅಶೋಕ ಅವರ ಪ್ರಕರಣಕ್ಕೂ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸವಿದ್ದು, ಈ ಎರಡೂ ಪ್ರಕರಣವನ್ನು ಪರಸ್ಪರ ಹೋಲಿಕೆ ಮಾಡುವುದು ಸರಿಯಲ್ಲ’ ಎಂದು ಮಾಜಿ ಸಿಎಂ, ಬೆಳಗಾವಿಯ ಸಂಸದ ಜಗದೀಶ ಶೆಟ್ಟರ್ ಹೇಳಿದರು.   ನಗರದಲ್ಲಿ ರವಿವಾರ(ಅ6) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ಈಗಾಗಲೇ ಭೂ ವಂಚನೆ ಪ್ರಕರಣವು ಕೋರ್ಟ್‌ನಿಂದ ಎಲ್ಲವೂ ಬಗೆಹರಿದಿದೆ ಎಂಬುದಾಗಿ ಆರ್.ಅಶೋಕ ಅವರೇ ಸ್ಪಷ್ಟಪಡಿಸಿದ್ದಾರೆ. ಆದರೆ ಈಗ ಸಿದ್ದರಾಮಯ್ಯನವರು ತಮ್ಮ ಪ್ರಕರಣದ ಜತೆ ಇನ್ನೊಬ್ಬರ …

Read More »

ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

ತಿರುವನಂತಪುರ: ಈ ಬಾರಿ ಶಬರಿಮಲೆಗೆ ಅಯ್ಯಪ್ಪನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳು ಆನ್‌ಲೈನ್‌ ಮೂಲಕವೇ ಬುಕ್ಕಿಂಗ್‌ ಮಾಡಿಕೊ ಳ್ಳುವುದು ಕಡ್ಡಾಯವಾಗಿದೆ. ಪ್ರತೀ ದಿನ 80,000 ಭಕ್ತರಿಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗು ತ್ತದೆ. ಭಕ್ತರು ಶಬರಿಮಲೆ ದೇಗು ಲದ ವೆಬ್‌ಸೈಟ್‌ನಲ್ಲಿ ವರ್ಚುವಲ್‌ ಬುಕಿಂಗ್‌ ಮಾಡ ಬೇಕಾಗುತ್ತದೆ. ಈ ವೇಳೆ ಯಾತ್ರಾರ್ಥಿ ಗಳು ಸಾಗುವ ಮಾರ್ಗವನ್ನೂ ಆಯ್ದು ಕೊ ಳ್ಳ ಬಹು ದಾಗಿದೆ. ಕಡಿಮೆ ಜನಸಂದಣಿ ಇರುವ ಮಾರ್ಗಗಳೂ ಲಭ್ಯವಿದೆ. ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ.

Read More »

ಮುಂದಿನ ಪೀಳಿಗೆಗಾಗಿ ವನ್ಯ ಸಂಪತ್ತನ್ನು ಸಂರಕ್ಷಿಸಿ ಇಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ

ಖಾನಾಪುರ: ‘ಮುಂದಿನ ಪೀಳಿಗೆಗಾಗಿ ವನ್ಯ ಸಂಪತ್ತನ್ನು ಸಂರಕ್ಷಿಸಿ ಇಡುವ ಗುರುತರ ಜವಾಬ್ದಾರಿ ನಮ್ಮೆಲ್ಲ ಮೇಲಿದೆ. ಪ್ರಪಂಚ ನಮ್ಮ ವನ್ಯಸಂಪತ್ತು ಮತ್ತು ವನ್ಯಜೀವಿಗಳ ಮೇಲೆ ಅವಲಂಬಿಸಿದೆ’ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು. ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ತಾಲ್ಲೂಕಿನ ಶಿರೋಲಿಯಿಂದ ಹೆಮ್ಮಡಗಾ ವರೆಗೆ ಭಾನುವಾರ ನಡೆದ 7 ಕಿ.ಮೀ. ಕಾಲ್ನಡಿಗೆ ಜಾಥಾ‌ದಲ್ಲಿ ಅವರು ಮಾತನಾಡಿದರು. ‘ಅರಣ್ಯಗಳು ಪ್ರಕೃತಿಯನ್ನು ಶ್ರೀಮಂತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವನ್ಯಜೀವಿಗಳು ಅರಣ್ಯದ …

Read More »

ಕುಂದಾನಗರಿಯಲ್ಲಿ ‘ದಾಂಡಿಯಾ’ ಸಂಭ್ರಮ

ಬೆಳಗಾವಿ: ಗಣೇಶೋತ್ಸವ ಮುಗಿದ ಬೆನ್ನಲ್ಲೆ, ನವರಾತ್ರಿ ಸಂಭ್ರಮದತ್ತ ಕುಂದಾನಗರಿ ಹೊರಳಿದೆ. ವಿದ್ಯುದ್ದೀಪಗಳ ಅಲಂಕಾರದಿಂದ ಝಗಮಗಿಸುತ್ತಿರುವ ವಿವಿಧ ಬಡಾವಣೆಗಳಲ್ಲಿ ಪ್ರತಿದಿನ ಸಂಜೆ ನಡೆಯುತ್ತಿರುವ ದಾಂಡಿಯಾ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆಯುತ್ತಿವೆ.   ಪರಿವರ್ತನ ಪರಿವಾರದ ನೇತೃತ್ವದಲ್ಲಿ ಇಲ್ಲಿನ ರಾಣಿ ಚನ್ನಮ್ಮ ನಗರದಲ್ಲಿ ಮತ್ತು ಸುರೇಶ ಯಾದವ ಫೌಂಡೇಷನ್‌ ನೇತೃತ್ವದಲ್ಲಿ ರಾಮತೀರ್ಥ ನಗರದಲ್ಲಿ ದಾಂಡಿಯಾ ಉತ್ಸವ ಆಯೋಜಿಸಲಾಗಿದೆ. ಇದರೊಂದಿಗೆ ಸದಾಶಿವ ನಗರ, ಟಿಳಕವಾಡಿಯ ಮಿಲೇನಿಯಂ ಉದ್ಯಾನ, ಕೋಟೆ ಕೆರೆ ಬಳಿ ಪ್ರೆಸಿಡೆನ್ಸಿಯಲ್‌ ಕ್ಲಬ್‌, …

Read More »

ಠೇವಣಿದಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ

ಬೈಲಹೊಂಗಲ: ‘ಕಿತ್ತೂರು ರಾಣಿ ಚನ್ನಮ್ಮ ಸಹಕಾರಿಯ ಗ್ರಾಹಕರು, ಠೇವಣಿದಾರರು ಆತಂಕಕ್ಕೆ ಒಳಗಾಗಬಾರದು. ಆರು ತಿಂಗಳು ಕೊಟ್ಟರೆ ರಾಜ್ಯ ಸಂಯುಕ್ತ ಸಹಕಾರಿ ಮಹಾಮಂಡಳದಿಂದ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು’ ಎಂದು ರಾಜ್ಯ ಸಹಕಾರಿ ಮಹಾಮಂಡಳದ ಉಪಾಧ್ಯಕ್ಷ ಜಗದೀಶ ಕವಟಗಿಮಠ ಹೇಳಿದರು.   ಪಟ್ಟಣದ ಹಳೇ ಪ್ರೇರಣಾ ಶಾಲೆ ಆವರಣದಲ್ಲಿ ಶನಿವಾರ ನಡೆದ ಸಹಕಾರಿಯ ಠೇವಣಿದಾರರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಭಾಕರ ಕೋರೆ ಅವರು ಚನ್ನಮ್ಮ ಸಹಕಾರಿಗೆ ಬೆನ್ನೆಲುಬು ಆಗಿ ನಿಂತಿದ್ದಾರೆ’ ಎಂದರು. ‘ಚನ್ನಮ್ಮ …

Read More »

ಮುಖ್ಯಮಂತ್ರಿಯಿಂದ ಕಾಮಗಾರಿಗಳ ಉದ್ಘಾಟನೆ 13ರಂದು

ಉಗರಗೋಳ: ‘ಯಲ್ಲಮ್ಮನಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡಿರುವ ₹21 ಕೋಟಿ ವೆಚ್ಚದ ಕಾಮಗಾರಿಗಳನ್ನು ಅ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು’ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಕೈಗೊಂಡ ಕಾಮಗಾರಿಗಳನ್ನು ಶನಿವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.   ಇಲಾಖೆ ನಿರ್ದೇಶಕ ಕೆ.ವಿ.ರಾಜೇಂದ್ರ, ‘ಸುಲಭ ಶೌಚಗೃಹ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲು ಮತ್ತು ನಿರ್ವಹಣೆಗಾಗಿ ಯಲ್ಲಮ್ಮ ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳು …

Read More »

ಊಟದಲ್ಲಿ ಹುಳು: ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ: ‘ತಾಲ್ಲೂಕಿನ ಮಚ್ಛೆ ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ನೀಡಿದ ಊಟದಲ್ಲಿ ಹುಳು ಕಂಡುಬಂದಿವೆ’ ಎಂದು ಆರೋಪಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು.   ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ‘ಇಲ್ಲಿ ಊಟದ ವಿಚಾರವಾಗಿ ಮಾತ್ರ ಅವ್ಯವಸ್ಥೆ ಇಲ್ಲ. ಮೂಲಸೌಕರ್ಯ ಕೊರತೆಯೂ ಇದೆ. ಅಶುಚಿತ್ವ ಹೆಚ್ಚಿದೆ’ ಎಂದು ದೂರಿದರು. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಸಮಸ್ಯೆ …

Read More »