Breaking News

Daily Archives: ಅಕ್ಟೋಬರ್ 8, 2024

KSRTC New Volvo 9600 Bus: ರಸ್ತೆಗಳಿಯಲಿವೇ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್‌: ರಾಮಲಿಂಗಾ ರೆಡ್ಡಿ

ಬೆಂಗಳೂರು, ಅಕ್ಟೋಬರ್ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೊಸ ಬಸ್ ಖರೀದಿ ಪ್ರಕ್ರಿಯೆ ಮುಂದುವರೆಸಿದೆ. ಜನ ಸಾಮಾನ್ಯರಿಗೆ ಉತ್ತಮ ಅನುಭವ ನೀಡುವ ಉದ್ದೇಶದಿಂದ ಹೊಸ 9600 ವೋಲ್ವೊ ಮಲ್ಟಿಎಕ್ಸೆಲ್ ಮಾದರಿಯ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್‌ಗಳನ್ನು ಖರೀದಿಸುತ್ತಿದೆ. ಈಗಾಗಲೇ ಒಂದನ್ನು ಪ್ರಾಯೋಗಿಕವಾಗಿ ಪರಿಶೀಲಿಸಿರುವ ಸಾರಿಗೆ ಸಚಿವರು ಇಂದು ಖುದ್ದು ತಯಾರಿಕಾ ಘಟಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ …

Read More »

ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಅನಾಯಾಸ ಗೆಲುವು ಸಾಧಿಸುತ್ತೆ : ಜಗದೀಶ್ ಶೆಟ್ಟರ್

ಬೆಳಗಾವಿ : ಅಕಸ್ಮಾತ್ ಈಗ ಏನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ, ಬಿಜೆಪಿ ಅನಾಯಾಸವಾಗಿ ಗೆಲ್ಲುತ್ತದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ, ಈ ಸರ್ಕಾರದಲ್ಲಿ ನಡೆದಷ್ಟು ದೊಡ್ಟ ಹಗರಣಗಳು ಬೇರೆ ಯಾವುದೇ ಸರ್ಕಾರದಲ್ಲಿ ನಡೆದಿಲ್ಲ, ಒಂದು ವೇಳೆ ಈಗೇನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ …

Read More »

ಅಗತ್ಯ ದಾಖಲೆ ನೀಡುವಂತೆ ಮುಡಾಕ್ಕೆ ಜಾರಿ ನಿರ್ದೇಶನಾಲಯ ಸೂಚನೆ?

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರಿಗೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯವು ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎನ್ನಲಾಗಿದೆ. ‘ಇ.ಡಿ. ಬೆಂಗಳೂರು ಕಚೇರಿಯಿಂದ ಮುಡಾ ಕಚೇರಿಗೆ ಪತ್ರ ರವಾನೆಯಾಗಿದ್ದು, ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ದಾಖಲಾದ ಎಫ್‌ಐರ್‌ಗೆ ಸಂಬಂಧಿಸಿ ಎಲ್ಲ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಒದಗಿಸುವಂತೆ ಕೇಳಿದೆ’ ಎಂದು ಮೂಲಗಳು ತಿಳಿಸಿವೆ. ಆದರೆ ಮುಡಾ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ. ಮುಡಾ ವ್ಯಾಪ್ತಿಯಲ್ಲಿ ‘ಸೆಟ್ಲ್‌ಮೆಂಟ್ …

Read More »

ಮೈಸೂರು ದಸರಾ | ಜಂಬೂಸವಾರಿಗೆ 50 ಸ್ತಬ್ಧಚಿತ್ರ

ಮೈಸೂರು: ‘ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ 50 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಕಲೆ, ವಾಸ್ತುಶಿಲ್ಪ, ಪ್ರವಾಸೋದ್ಯಮ, ಜಾನಪದ, ಸಮಾನತೆ, ಭ್ರಾತೃತ್ವ ಹಾಗೂ ಸಂವಿಧಾನದ ಮಹತ್ವ ಮೊದಲಾದ ವಿಷಯಗಳಿಗೆ ಆದ್ಯತೆ ನೀಡಲಾಗಿದೆ’ ಎಂದು ದಸರಾ ಸ್ತಬ್ಧಚಿತ್ರ ಉಪ ಸಮಿತಿ ಅಧ್ಯಕ್ಷ ಪ್ರಶಾಂತ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ನಲ್ಲಿ ಸ್ತಬ್ಧಚಿತ್ರ ನಿರ್ಮಾಣ ಭರದಿಂದ ಸಾಗಿದ್ದು, ಶೇ 80ರಷ್ಟು ಮುಗಿದಿದೆ. ಅ.11ರ ರಾತ್ರಿ ಅರಮನೆ ಆವರಣ ಪ್ರವೇಶಿಸಲಿವೆ. ಪ್ರದರ್ಶನದಲ್ಲಿ …

Read More »

ಹೆಬ್ಬಾವಿನ ಮರಿ ರಕ್ಷಣೆ

ಬಿಡದಿ: ಶ್ಯಾನಮಂಗಲ ಗ್ರಾಮದ ವೆಂಕಟೇಶ್ ಎಂಬುವವರ ಜಮೀನಿನಲ್ಲಿ ಹೆಬ್ಬಾವಿನ ಮರಿಯನ್ನು ಸೋಮವಾರ ಹಿಡಿದು ರಕ್ಷಿಸಲಾಗಿದೆ. ಕೆಲಸದ ನಿಯಮಿತ ವೆಂಕಟೇಶ್ ಜಮೀನಿಗೆ ತೆರಳುತ್ತಿದ್ದಾಗ ದೈತ್ಯ ಗಾತ್ರದ ಹೆಬ್ಬಾವಿನ ಮರಿಯನ್ನು ಕಂಡು ಗಾಬರಿಯಾಗಿದ್ದಾರೆ. ನಂತರ ಅರಣ್ಯ ಇಲಾಖೆಗೆ ಕರೆ ಮಾಡಿ ತಿಳಿಸಿದ್ದಾರೆ. ಉರಗ ರಕ್ಷಕರಾದ ಶಶಿಕುಮಾರ್ ಸ್ಥಳಕ್ಕೆ ಬಂದು, ಸುಮಾರು 10 ಅಡಿ ಉದ್ದ 14 ಕೆಜಿ ತೂಕದ ಹೆಬ್ಬಾವಿನ ಮರಿಯನ್ನು ರಕ್ಷಿಸಿ, ಹಂದಿಗುಂದಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.

Read More »

HC ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳಿಗೆ ಭೇಟಿ ನೀಡಿದ ಜಾರಕಿಹೊಳಿ

ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ನಗರದಲ್ಲಿ ಮಂಗಳವಾರ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳಿಗೆ ಭೇಟಿ ಕೊಟ್ಟು ಪ್ರತ್ಯೇಕವಾಗಿ ಚರ್ಚಿಸಿದರು. ಮುಖ್ಯಮಂತ್ರಿ ಬದಲಾವಣೆಯ ಊಹಾಪೋಹಗಳು ಹಾಗೂ ದಲಿತ ಮುಖ್ಯಮಂತ್ರಿ ಕೂಗಿನ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.   ಸೋಮವಾರ ಶ್ರೀರಂಗಪಟ್ಟಣ ದಸರಾದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು, ಮಂಗಳವಾರ ಬೆಳಿಗ್ಗೆ ಮೈಸೂರಿನಲ್ಲಿರುವ ಸಮಾಜಕಲ್ಯಾಣ ಸಚಿವ ಮಹದೇವಪ್ಪ ನಿವಾಸಕ್ಕೆ …

Read More »

ಯೋಜನೆ ತರಲು ಯೋಗ್ಯತೆ ಇಲ್ಲದವರು ಟೀಕೆ: ಪಿ.ಎಂ.ನರೇಂದ್ರಸ್ವಾಮಿ

ಮಳವಳ್ಳಿ: ‘ಶಾಸಕರಾಗಿದ್ದಾಗ ತಾಲ್ಲೂಕಿಗೆ ಒಂದೇ ಒಂದು ನೀರಾವರಿ ಯೋಜನೆ ತರಲು ಯೋಗ್ಯತೆ ಇಲ್ಲದವರು ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದರ ಬಗ್ಗೆ ನನಗೆ ಪಾಠ ಮಾಡಲು ಬರುತ್ತಾರೆ’ ಎಂದು ಮಾಜಿ ಶಾಸಕ ಕೆ.ಅನ್ನದಾನಿ ವಿರುದ್ಧ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕಿಡಿಕಾರಿದರು.   ‘ಶಾಸಕನಾಗಿದ್ದ ವೇಳೆ ಯಾವ ಯೋಜನೆಯನ್ನು ಕ್ಷೇತ್ರಕ್ಕೆ ತರಲು ಆಗದವರು ನನ್ನ ಅವಧಿಯ ಪಟ್ಟಣದ ಕುಡಿಯುವ ನೀರಿನ ಯೋಜನೆ, ಕಿರುಗಾವಲು ಬಹುಗ್ರಾಮ ಕುಡಿಯುವ ನೀರು ಯೋಜನೆ, ತಿಟ್ಟಮಾರನಹಳ್ಳಿ ಏತ ನೀರಾವರಿ ಯೋಜನೆ, …

Read More »

ನಂಗಲಿ ಆರ್‌ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮುಳಬಾಗಿಲು: ತಾಲ್ಲೂಕಿನ ನಂಗಲಿ ಆರ್‌ಟಿಒ ಕಚೇರಿ ಮೇಲೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರು ಲೋಕಾಯುಕ್ತ ಡಿವೈಎಸ್‌ಪಿ ಪ್ರದೀಪ್ ನೇತೃತ್ವದಲ್ಲಿ 13 ಅಧಿಕಾರಿಗಳ ತಂಡವು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು. ಒಟ್ಟು ₹10 ಸಾವಿರ ವಸೂಲಿಯಾಗಿದ್ದರೆ, ಲೆಕ್ಕವಿಲ್ಲದ ₹24,500 ಅನ್ನು ಅಧಿಕಾರಿಗಳು ವಶಕ್ಕೆ ಪಡೆದರು. ನಂಗಲಿ ಆರ್‌ಟಿಒ ಕಚೇರಿಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರಿಂದ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. ಈ …

Read More »

ಮುರುಡೇಶ್ವರ ಬೀಚ್‌ಗೆ ನಿರ್ಬಂಧ: ಪ್ರವಾಸಿಗರಿಗೆ ನಿರಾಶೆ

ಭಟ್ಕಳ: ಬೆಂಗಳೂರು ಮೂಲದ ವಿದ್ಯಾರ್ಥಿ ಭಾನುವಾರ ಮುರುಡೇಶ್ವರದ ಕಡಲಿನಲ್ಲಿ ಈಜಲು ತೆರಳಿ ಮೃತಪಟ್ಟ ಹಿನ್ನೆಲೆಯಲಿ ಭಟ್ಕಳ ಉಪವಿಭಾಗಾಧಿಕಾರಿ ಆದೇಶದಂತೆ ಸೋಮವಾರದಿಂದ ಪ್ರವಾಸಿಗರಿಗೆ ಮುರುಡೇಶ್ವರ ಬೀಚ್ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಕ್ಟೋಬರ್‌ ರಜೆ ಕಳೆಯಲು ಬರುವ ಪ್ರವಾಸಿಗರು ಬೀಚ್‌ಗೆ ತೆರಳದಂತಾಗಿದೆ. ಸಾಲು ಸಾಲು ರಜೆಯ ಸಂದರ್ಭದಲ್ಲಿ ಮುರುಡೇಶ್ವರಕ್ಕೆ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ. ಅವರ ಸುರಕ್ಷತೆಗಾಗಿ ಪ್ರವಾಸೋದ್ಯಮ ಇಲಾಖೆಯೂ ಅಗತ್ಯ ಜೀವ ರಕ್ಷಕ ಸಿಬ್ಬಂದಿ ಹಾಗೂ ಸಾಧನ ಪೂರೈಸುವ ತನಕ …

Read More »

ಕಾಂತಾರ’ ಕಂಪು: ರಾಷ್ಟ್ರಪತಿಯಿಂದ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ನವದೆಹಲಿ:ಕನ್ನಡ ಚಿತ್ರರಂಗದ ಹೆಮ್ಮೆಯ ಸಿನಿಮಾ, ಬ್ಲಾಕ್​ಬಸ್ಟರ್​ ‘ಕಾಂತಾರ’ ಚಿತ್ರದಲ್ಲಿನ ಅಮೋಘ ಅಭಿನಯಕ್ಕೆ ಅತ್ಯುತ್ತಮ ನಟ ಪ್ರಶಸ್ತಿ (Best Actor Award) ಪಡೆದ ನಟ ರಿಷಬ್ ಶೆಟ್ಟಿ (Rishab Shetty), ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಕನ್ನಡಿಗರಲ್ಲಿ ಭಾರೀ ಸಂತಸವನ್ನು ಉಂಟುಮಾಡಿದೆ.     70ನೇ ಅಂತಾರಾಷ್ಟ್ರೀಯ …

Read More »