Breaking News

Daily Archives: ಅಕ್ಟೋಬರ್ 8, 2024

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಎಷ್ಟು ವರ್ಷ ಇರುತ್ತಾರೆ ಗೊತ್ತಿಲ್ಲ! ಸತೀಶ್ ಜಾರಕಿಹೊಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಐದು ವರ್ಷ ಇರುತ್ತಾರೋ ಅಥವಾ ಮೂರು ವರ್ಷ ಇರುತ್ತಾರೋ ಅದು ನನಗೆ ಗೊತ್ತಿಲ್ಲ. ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಹಲವು ದಿನಗಳಿಂದ ಉಂಟಾಗಿದ್ದ ಸಿಎಂ ಬದಲಾವಣೆ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಆದರೂ ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರುತ್ತಾರೆ ಗೊತ್ತಿಲ್ಲ ಎನ್ನುವ ಮೂಲಕ ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆಯ ಸುಳಿವು ಕೊಟ್ರಾ ಎನ್ನುವ ಕುತೂಹಲ …

Read More »

ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ :ಸಚಿವ ಜಮೀರ್ ಅಹ್ಮದ್ ಗೆ ಶಾಸಕ ಯತ್ನಾಳ್ ತಿರುಗೇಟು

ಬೆಂಗಳೂರು : ವಕ್ಫ್ ಯತ್ನಾಳ್ ಅಪ್ಪನ ಆಸ್ತಿ ಅಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಟ್ವೀಟರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.   ಟ್ವೀಟ್ ನಲ್ಲಿ ಜಮೀರ್ ಅಹ್ಮಡ್ ವಿರುದ್ಧ ಕಿಡಿ ಕಾರಿರುವ ಅವರು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ …

Read More »

ವಿವಿಧ ಕಾಮಗಾರಿಗಳಿಗೆ ಕೃಷ್ಣ ಬೈರೇಗೌಡ ಶಂಕುಸ್ಥಾಪನೆ

ಕಿತ್ತೂರು: ‘ಕಿತ್ತೂರು ಕೋಟೆಯನ್ನು ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಯೋಜನೆ ರೂಪಿಸಲಾಗಿದೆ. ₹30 ಕೋಟಿ ಅನುದಾನದಲ್ಲಿ ಹೊಸ ತಂತ್ರಜ್ಞಾನ ಬಳಕೆಯ ಮೂಲಕ ವಿದ್ಯುನ್ಮಾನ ಮಾದರಿಯ ಉದ್ಯಾನ (ಥೀಮ್ ಪಾರ್ಕ್) ನಿರ್ಮಾಣ ಮಾಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ, ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಗಳ ಭೂಮಿಪೂಜೆ …

Read More »

ಸಿ.ಎಂ ಕುರ್ಚಿಗೆ ಯತ್ನ ನಡೆಸಿದ್ದರೆ ತಪ್ಪೇನಿಲ್ಲ: ಸಚಿವ ಕೃಷ್ಣ ಬೈರೇಗೌಡ

ಸಿ.ಎಂ ಕುರ್ಚಿಗೆ ಯತ್ನ ನಡೆಸಿದ್ದರೆ ತಪ್ಪೇನಿಲ್ಲ: ಸಚಿವ ಕೃಷ್ಣ ಬೈರೇಗೌಡ ಕಿತ್ತೂರು: ‘ಕಾಂಗ್ರೆಸ್‌ನಲ್ಲಿ ಬೇರೆ ಯಾರಾದರೂ ಮುಖ್ಯಮಂತ್ರಿ ಆಗುವ ಪ್ರಯತ್ನ ನಡೆಸಿದ್ದರೆ ನಡೆಸಲಿ. ಆದರೆ, ಎಲ್ಲ ಶಾಸಕರು ಹಾಗೂ ಹೈಕಮಾಂಡ್‌ ನಾಯಕರು ಸಿದ್ದರಾಮಯ್ಯ ಅವರ ಜತೆಗಿದ್ದೇವೆ. ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಚರ್ಚೆ ಆಗಿಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.   ‘ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಕೆ.ಸಿ.ವೇಣುಗೋಪಾಲ ಅವರೆಲ್ಲ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಹಾಗಾಗಿ, …

Read More »

ಡಿಸಿಸಿ ಬ್ಯಾಂಕಿನತ್ತ ಹೆಬ್ಬಾಳಕರ ಚಿತ್ತ

ಬೆಳಗಾವಿ: ‘ಮುಂದಿನ ವರ್ಷ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ನಡೆಯಲಿದೆ. ಎಲ್ಲರೂ ಸಿದ್ದತೆ ನಡೆಸಿದ್ದಾರೆ. ನಾವೂ ಸಿದ್ಧತೆ ಮಾಡಿಕೊಂಡಿದ್ದೇವೆ…’ ಮಹಿಳಾ ಮತ್ತು ಮತ್ತು ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಈ ಮಾತು ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಹೊಸ ಗಾಳಿ ಬೀಸುವಂತೆ ಮಾಡಿದೆ.   ತಮ್ಮ ಎರಡು ದಶಕಗಳ ರಾಜಕಾರಣದಲ್ಲಿ ಲಕ್ಷ್ಮಿ ಹೆಬ್ಬಾಳಕರ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮಾತ್ರ ಕ್ರಿಯಾಶೀಲವಾಗಿದ್ದಾರೆ. ಒಂದು ಬಾರಿ ವಿಧಾನಸಭೆಯಲ್ಲಿ ಸೋಲುಂಡ ಅವರು, ಎರಡನೇ ಬಾರಿಗೆ …

Read More »

ಜಿಲ್ಲಾ ಕಮಾಂಡೆಂಟ್ ಕಿರಣ ನಾಯ್ಕ ಮೇಲಿನ ಆರೋಪ ಸುಳ್ಳು ಎಂದ ಹೈಕೋರ್ಟ್

ಬೆಳಗಾವಿ: ಗೃಹ ರಕ್ಷಕ ಇಲಾಖೆಯ ಬೆಳಗಾವಿ ಜಿಲ್ಲಾ ಕಮಾಂಡೆಂಟ್ ಆಗಿದ್ದ ಕಿರಣ ಆರ್. ನಾಯ್ಕ ಅವರ ಮೇಲಿನ ಆರೋಪಗಳು ಸುಳ್ಳು ಎಂದು ಹೈಕೋರ್ಟ್‌ ಧಾರವಾಡ ‍ಪೀಠ ತೀರ್ಪು ನೀಡಿದೆ. ಅಲ್ಲದೇ, ಅಮಾನತು ಆದೇಶ ರದ್ದು ಮಾಡಿ ಅವರಿಗೆ ಮತ್ತೆ ಜಿಲ್ಲಾ ಕಮಾಂಡೆಂಟ್‌ ಹುದ್ದೆ ನೀಡಬೇಕು ಎಂದೂ ಗೃಹ ಇಲಾಖೆಯ ಕಾರ್ಯದರ್ಶಿ ಹಾಗೂ ಗೃಹ ರಕ್ಷಕ ದಳದ ಡಿಜಿಪಿ ಅವರಿಗೆ ನಿರ್ದೇಶನ ನೀಡಿದೆ.   ಕಿರಣ ಅವರು 2023ರ ಡಿಸೆಂಬರ್‌ನಲ್ಲಿ ಗೃಹ ರಕ್ಷಕ …

Read More »

ಬೆಳಗಾವಿ: ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ತೀರ್ಮಾನ

ಬೆಳಗಾವಿ: ನಗರದಲ್ಲಿ ನವೆಂಬರ್‌ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ತೀರ್ಮಾನವನ್ನು ಇಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾಯಿತು. ‘ಈ ಬಾರಿ ದೀಪಾವಳಿ ಹಬ್ಬವೂ ನ.1ರಂದೇ ಇದೆ. ಅಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ, ನ.3ರಂದು ಮೆರವಣಿಗೆ ಆಯೋಜಿಸಬೇಕು’ ಎಂದು ಯುವಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.   ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ರಮೇಶ ಸೊಂಟಕ್ಕಿ ಮತ್ತಿತರರು, ‘ಯಾವ ಕಾರಣಕ್ಕೂ ರಾಜ್ಯೋತ್ಸವದ ಮೆರವಣಿಗೆ ದಿನಾಂಕ ಮುಂದೂಡುವಂತಿಲ್ಲ. …

Read More »

ಡಿ.ಕೆ. ಶಿವಕುಮಾರ್ ಸಿಎಂ ಆದರೆ ಅಭ್ಯಂತರವಿಲ್ಲ : ಸತೀಶ್ ಜಾರಕಿಹೊಳಿ

ಮೈಸೂರು, ಅ.8- ಮುಂದಿನ ಐದು ವರ್ಷ ತಾವು ಸಚಿವರಾಗಿರಲಿದ್ದು, ಒಳ್ಳೆಯ ಕೆಲಸ ಮಾಡುವತ್ತ ಗಮನ ನೀಡುತ್ತೇವೆ. ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ . ಹಾಗಾಗಿ ಹುದ್ದೆಗಾಗಿ ರೇಸ್ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.   ದಸರಾ ಮಹೋತ್ಸವ ವೀಕ್ಷಣೆಗೆ ಮೈಸೂರಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರೆಯುತ್ತಾರೆ. ಹುದ್ದೆ ಖಾಲಿಯಿಲ್ಲ ಎಂದು ಸ್ಪಷ್ಟಪಡಿಸಿದರು. ಸತೀಶ್ …

Read More »

ಚೊಚ್ಚಲ ಚುನಾವಣಾ ಅಖಾಡದಲ್ಲಿ ಗೆದ್ದ ವಿನೇಶ್ ಫೋಗಟ್‌

ಚಂಡೀಗಢ: ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ವಿನೇಶ್ ಫೋಗಟ್‌ ಅವರು ತಮ್ಮ ಚೊಚ್ಚಲ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹರಿಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಫೋಗಟ್, ಬಿಜೆಪಿ ಅಭ್ಯರ್ಥಿ ಯೋಗೀಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದಾರೆ.   ಮತ ಎಣಿಕೆ ಉದ್ದಕ್ಕೂ ಯೋಗೀಶ್ ಮತ್ತು ಫೋಗಟ್‌ ಅವರ ನಡುವೆ ನಿಕಟ ಪೈಪೋಟಿ ಏರ್ಪಟ್ಟಿದ್ದು, ಆರಂಭದಲ್ಲಿ ಫೋಗಟ್ ಅವರು ಅಲ್ಪ ಹಿನ್ನಡೆ ಅನುಭವಿಸಿದ್ದರು. ಪ್ಯಾರಿಸ್‌ ಒಲಿಂಪಿಕ್ಸ್‌ ಮಹಿಳೆಯರ 50 ಕೆ.ಜಿ …

Read More »

ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ್

ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ನಮ್ಮ ಸರಕಾರವು ಇರುತ್ತೆ ಸಿಎಂ ಆಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.   ಇಂದು ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಯಾವ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರವು ಇರುತ್ತೆ. ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಹಾಗಾಗಿ ರಾಜ್ಯದಲ್ಲಿ …

Read More »