Breaking News

Daily Archives: ಅಕ್ಟೋಬರ್ 19, 2024

ಕೋಟೆಮಲ್ಲೂರಿನಿಂದ ಕೋಣನತಲೆವರೆಗಿನ ರಸ್ತೆ ಸರಿಪಡಿಸಲು ಮನವಿ

ಹೊನ್ನಾಳಿ: ತಾಲ್ಲೂಕಿನ ಕೋಟೆಮಲ್ಲೂರು ಗ್ರಾಮದಿಂದ ಹೊನ್ನೂರು ವಡ್ಡರಹಟ್ಟಿ, ಚಿಕ್ಕಗೋಣಿಗೆರೆ, ಹಿರೇಗೋಣಿಗೆರೆ, ಹರಗನಹಳ್ಳಿ ಹಾಗೂ ಕೋಣನತಲೆ ಗ್ರಾಮದವರೆಗಿನ 9 ಕಿ.ಮೀ ಉದ್ದದ ರಸ್ತೆ ಹಾಳಾಗಿದ್ದು, ಕೂಡಲೇ ದುರಸ್ತಿಪಡಿಸಬೇಕು ಎಂದು ಈ ಭಾಗದ ಗ್ರಾಮಸ್ಥರು ದೂರಿದ್ದಾರೆ. ‘ಕೋಟೆಮಲ್ಲೂರು ದಾಟಿದ ನಂತರ ರಸ್ತೆಯಲ್ಲಿ ವಾಹನಗಳನ್ನು ಚಲಾಯಿಸುವುದು ಕಷ್ಟವಾಗುತ್ತಿದೆ’ ಎಂದು ಬೇಲಿಮಲ್ಲೂರು ಗ್ರಾಮದ ಉಮೇಶ್, ಹಿರೇಗೋಣಿಗೆರೆ ಜಿ.ಎಚ್. ವೀರೇಶ್ ದೂರಿದ್ದಾರೆ. ‘ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಸ್ತೆಯಲ್ಲಿ ಗುಂಡಿ ಬಿದ್ದು ನೀರು ಸಂಗ್ರಹವಾಗಿದ್ದು, ಕೆಲವರು ಬೈಕ್‌ಗಳಿಂದ ಇಳಿದು …

Read More »

ದಾವಣಗೆರೆ: ವಾಲ್ಮೀಕಿ ಜಯಂತಿಗೆ ಬೈಕ್‌ ರ‍್ಯಾಲಿ

ದಾವಣಗೆರೆ: ಜಿಲ್ಲಾ ವಾಲ್ಮೀಕಿ ಯುವಕರ ಸಂಘವು ವಾಲ್ಮೀಕಿ ಜಯಂತಿಯ ಮುನ್ನಾ ದಿನವಾದ ಬುಧವಾರ ನಗರದಲ್ಲಿ ಬೈಕ್‌ ರ‍್ಯಾಲಿ ನಡೆಸಿತು. ಪ್ರಮುಖ ರಸ್ತೆಯಲ್ಲಿ ಸಂಚರಿಸಿ ವಾಲ್ಮೀಕಿ ಸಂದೇಶ ರವಾನಿಸುವ ಪ್ರಯತ್ನ ಮಾಡಿತು. ಸೋನೆ ಮಳೆಯ ನಡುವೆಯೂ ಹೊಂಡದ ವೃತ್ತದಲ್ಲಿ ಜಮಾಯಿಸಿದ ಯುವಕರು ತಲೆಗೆ ಪೇಟ ಧರಿಸಿ, ಬಾವುಟ ಹಿಡಿದ್ದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು ವೀರ ಮದಕರಿ ನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ …

Read More »

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳಿಗಿಲ್ಲ ಉದ್ಘಾಟನೆ ‘ಭಾಗ್ಯ’

ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕೂಡಿಬಂದಿಲ್ಲ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಅಂದಾಜು ₹ 35 ಕೋಟಿ ವೆಚ್ಚದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿ 2021ರಲ್ಲಿ ಆರಂಭವಾಗಿತ್ತು. ಕಾಮಗಾರಿ ಪೂರ್ಣಗೊಂಡು ಆರು ತಿಂಗಳು ಕಳೆದಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ …

Read More »

ವೈಭವಯುತ ‘ಕಿತ್ತೂರು ಉತ್ಸವ’ಕ್ಕೆ ಭರದ ಸಿದ್ಧತೆ: ಶಾಸಕ ಬಾಬಾಸಾಹೇಬ ಪಾಟೀಲ

ಬೆಳಗಾವಿ: ‘ಚನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ‘ದ್ವಿಶತಮಾನೋತ್ಸವದ ಕಾರಣಕ್ಕಾಗಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಅನುದಾನ ಘೋಷಿಸಿದೆ. ಒಂದೆರಡು ದಿನಗಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ’ ಎಂದು ಅವರು ನಗರದಲ್ಲಿ ಶನಿವಾರ …

Read More »

ಮಹಾ’ ಸೀಟು ಹಂಚಿಕೆ ಬಗ್ಗೆ ಸಿಎಂ ಶಿಂಧೆ ಮಹತ್ವದ ಮಾಹಿತಿ

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಉಭಯ ಪಕ್ಷಗಳ ತಯಾರಿ ಗರಿಗೆದರಿದೆ. ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರು ನಿನ್ನೆ ದೆಹಲಿಗೆ ತೆರಳಿ ಸೀಟು ಹಂಚಿಕೆ ಸಂಬಂಧ ಬಿಜೆಪಿ ಜೊತೆಗೆ ಮಹತ್ವದ ಚರ್ಚೆ ನಡೆಸಿ ಬಂದಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದ ಜನತೆಗೆ ಒಳ್ಳೆಯ ಸುದ್ದಿಯನ್ನೇ ಕೊಡುತ್ತೇವೆ ಎಂದು ಸುಳಿವು ನೀಡಿದ್ದಾರೆ.   ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಿದೆವು. ನಮ್ಮ ಮಹಾಯುತಿಯ …

Read More »

ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು. ಮುಳುಗಿದ ಬ್ಯಾರೇಜ್

ಮುಧೋಳ: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್‌ ಜಲಾಶಯದಿಂದ ಹೆಚ್ಚಿನ‌ ಪ್ರಮಾಣ ನೀರು ಘಟಪ್ರಭಾ ನದಿಗೆ ಹರಿದುಬರುತ್ತಿರುವ ಕಾರಣ ತಾಲೂಕಿನ ಬ್ರಿಡ್ಜ್ ಕಂ ಬ್ಯಾರೇಜ್ ಗಳು‌ ಮುಳುಗಿ ಜನಸಂಚಾರ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿವೆ. ಮಿರ್ಜಿ-ಮಹಾಲಿಂಗಪುರ ಸಂಪರ್ಕ ರಸ್ತೆಯಲ್ಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ‌ ನೀರು ಹರಿಯುತ್ತಿದ್ದು ಸದ್ಯ ವಾಹನ ಸಂಚಾರಕ್ಕೆ ಅಡಚಣೆಯಾಗಿಲ್ಲ. ಪರಿಸ್ಥಿತಿ ಇದೇರೀತಿ ಮುಂದುವರಿದರೆ ಸಂಜೆ ಅಥವಾ ನಾಳೆ ವೇಳೆಗೆ ಸಂಚಾರ ಸ್ಥಗಿತಗೊಳ್ಳುವ ಭೀತಿ‌ ಎದುರಾಗಿದೆ. ಜೀರಗಾಳ ಸಮೀಪದ ಬ್ರಿಡ್ಜ …

Read More »

ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ (Kalaburagi Central Jail) ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್‌ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳು ಅಮಾನತ್ತುಗೊಂಡಿದ್ದಾರೆ. ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಜೈಲರ್ ಗಳಾದ ಸೈನಾಜ್ ನೀಗೆವಾನ್ ಮತ್ತು ಪಾಂಡುರಂಗ ಹರವಾಳ ಎನ್ನುವರು ಅಮಾನತ್ತುಗೊಂಡಿದ್ದಾರೆ. ಕರ್ತವ್ಯ ಲೋಪದಡಿ ಅಮಾನತು ಮಾಡಿ ಶನಿವಾರ (ಅ.19) ಆದೇಶ ಹೊರಡಿಸಲಾಗಿದೆ.‌ ಅಮಾನತ್ತು ಮಾಹಿತಿಯನ್ನು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧಿಕ್ಷಕಿ ಡಾ.ಅನಿತಾ ಆರ್. ನೀಡಿದ್ದಾರೆ. …

Read More »

2ಕೋಟಿ ರೂ. ಇಸಿದುಕೊಂಡು ವಂಚಿಸಿದ ಪ್ರಕರಣ, ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 2ಕೋಟಿ ರೂ. ಇಸಿದುಕೊಂಡು ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಅವರನ್ನು ಬೆಂಗಳೂರು ಪೊಲೀಸರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ಹುಬ್ಬಳ್ಳಿಗೆ ಕರೆತಂದಿದ್ದು, ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪಂಚನಾಮೇ ನಂತರದ ಪ್ರಕ್ರಿಯೆ ನಡೆಸುತ್ತಿದ್ದಾರೆ.   ಎಸಿಪಿ ಚಂದನ್ ನೇತೃತ್ವದ ಬೆಂಗಳೂರು ಬಸವೇಶ್ವರ ನಗರ ಠಾಣೆ ಪೊಲೀಸರ ತಂಡ ಕೊಲ್ಹಾಪುರದಲ್ಲಿ ವಶಕ್ಕೆ ಪಡೆದ ನಂತರ ಹುಬ್ಬಳ್ಳಿಯ ಇಂದಿರಾ ಕಾಲೋನಿಯ …

Read More »

ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರನ್ನು ಶನಿವಾರ(ಅ19) ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಮೂಲಗಳು 92 ರ ಹರೆಯದ ಕೃಷ್ಣ ಅವರ ದಾಖಲಾತಿಯನ್ನು ಖಚಿತಪಡಿಸಿದ್ದು, ಆದರೆ ಅವರುಯಾವ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. ಆಗಸ್ಟ್‌ನಲ್ಲಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 2009 ರಿಂದ 2012 ರವರೆಗೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ವಿದೇಶಾಂಗ ಸಚಿವರಾಗಿಯೂ ಕೃಷ್ಣ ಸೇವೆ ಸಲ್ಲಿಸಿದ್ದರು.

Read More »

ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

ಬೆಂಗಳೂರು: ಬಿಗ್‌ಬಾಸ್‌ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ. ಜಗದೀಶ್‌ ಹಾಗೂ ರಂಜಿತ್‌ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ. ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ …

Read More »