ಸಿರುಗುಪ್ಪ: ಆಸ್ತಿಗಾಗಿ ತಂದೆಯೇ ಮಗಳನ್ನು ಕೊಲೆ ಮಾಡಲು ಮುಂದಾದ ಘಟನೆ ತಾಲೂಕಿನ ಅರಳಿಗನೂರು ಗ್ರಾಮದಲ್ಲಿ, ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.18ರ ಶುಕ್ರವಾರ ನಡೆದಿದೆ. ಅರಳಿಗನೂರು ಗ್ರಾಮದ ದೊಡ್ಡರಂಗಪ್ಪನಿಗೆ ಶಿವಲಿಂಗಮ್ಮ ಅವರು ಮೊದಲನೇ ಪತ್ನಿ ಹಾಗೂ ಜಯಮ್ಮ ಅರು ಎರಡನೇ ಪತ್ನಿಯಾಗಿದ್ದು, ಮೊದಲನೇ ಪತ್ನಿ ಶಿವಲಿಂಗಮ್ಮನಿಗೆ ಗೊತ್ತಿಲ್ಲದಂತೆ ದೊಡ್ಡ ರಂಗಪ್ಪ ತನ್ನ ಎರಡನೇ ಪತ್ನಿ ಜಯಮ್ಮಳ ಹೆಸರಿಗೆ ಆಸ್ತಿಯನ್ನು ಮಾಡಿಸಿದ್ದರಿಂದ ಶಿವಲಿಂಗಮ್ಮನ ಮಗಳು ಸೋಮಲಿಂಗಮ್ಮ ತನಗೆ ಅಸ್ತಿಯಲ್ಲಿ ಪಾಲು ಬರಬೇಕೆಂದು ಸಿರುಗುಪ್ಪದ …
Read More »Daily Archives: ಅಕ್ಟೋಬರ್ 19, 2024
ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.
ನವದೆಹಲಿ: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ಬಾಂಬ್ ಬೆದರಿಕೆ ಬರುತ್ತಿರುವುದು ಇದು ಹದಿನೈದನೇ ಪ್ರಕರಣವಾಗಿದ್ದು ಕೂಡಲೇ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ತಪಾಸಣೆ ನಡೆಸಿದ್ದಾರೆ ಆದರೆ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶುಕ್ರವಾರ(ಅ.19) …
Read More »ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು
ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ನ ಸ್ವಿಚ್ ಒತ್ತಿದಾಗ ವಿದ್ಯುತ್ ತಗುಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಅ.15ರ ಮಂಗಳವಾರ ನಡೆದಿದೆ. ರೇಖಾ ರುದ್ರಪ್ಪ ಹುಡೇದ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಪತಿ, ಮೂವರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
ಬೆಳಗಾವಿ: ಬೆಳಗಾವಿ ಮತ್ತು ಬೆಂಗಳೂರು ಮಧ್ಯೆ ದಿನನಿತ್ಯ ಸಂಚರಿಸುವ ಇಂಡಿಗೋ ವಿಮಾನವನ್ನು ದಿನಾಂಕ 27 ರಿಂದ ಸ್ಥಗಿತಗೊಳಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವರಾದ ಕೆ. ಆರ್ ನಾಯ್ಡು ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಳಗಾವಿ ಬೆಂಗಳೂರು ಬೆಳಗಾವಿ ಮಧ್ಯೆ ದಿನನಿತ್ಯ ಬೆಳಿಗ್ಗೆ ಸಂಚರಿಸುವ ಇಂಡಿಗೋ ಸಂಸ್ಥೆ ವಿಮಾನಯಾನ ಸೇವೆಯನ್ನು ರದ್ದು ಮಾಡಬಾರದು. ಇದರಿಂದ ಪ್ರಯಾಣಿಕರಿಗೆ ಬಹಳ ತೊಂದರೆಯಾಗಲಿದೆ ಎಂದರು. ಬೆಳಗಾವಿ …
Read More »ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಮುನ್ಬಾ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು. …
Read More »9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?
ಬೆಳಗಾವಿ: ಈ ಬಾರಿಯ ಚಳಿಗಾಲ ಅಧಿವೇಶನವನ್ನು ಡಿ. 9ರಿಂದ 20ರ ವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಸಚಿವ ಸಂಪುಟದಲ್ಲಿ ಅಂತಿಮ ದಿನಾಂಕ ಪ್ರಕಟವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾಂಕ ಘೋಷಿಸಲಿದ್ದಾರೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಚಳಿಗಾಲ ಅಧಿ ವೇಶನ ಹಿನ್ನೆಲೆಯಲ್ಲಿ ಶುಕ್ರವಾರ ಸುವರ್ಣ ವಿಧಾನಸೌಧ ಪರಿಶೀಲನೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು ದಿನಾಂಕದಂತೆ ಅಧಿಕಾರಿಗಳು …
Read More »ಯತ್ನಾಳ್ ವಿರುದ್ಧ ಕೇಸ್ ದಾಖಲು
ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಇತರರ ವಿರುದ್ಧ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾನಗರ ಪಾಲಿಕೆ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. …
Read More »