Breaking News

Daily Archives: ಅಕ್ಟೋಬರ್ 20, 2024

ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಕಾವೇರಿದ್ದು, ಆರೋಪ ಪ್ರತ್ಯಾರೋಪಗಳು ತೀವ್ರವಾಗಿದೆ. ವಿಪಕ್ಷ ಮೈತ್ರಿಕೂಟವಾದ ಮಹಾ ವಿಕಾಸ್ ಆಘಾಡಿ ಆಡಳಿತಾರೂಢ ಮಾಹಾಯುತಿ ಮೈತ್ರಿಕೂಟದ ವಿರುದ್ಧ ಗಂಭೀರ ಆರೋಪ ಮಾಡಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ 10 ಸಾವಿರ ಬೋಗಸ್ ಮತದಾರನ್ನು ನೋಂದಣಿ ಮಾಡಲಾಗಿದೆ ಎಂದು ಚುನಾವಣ ಆಯೋಗಕ್ಕೆ ದೂರು ನೀಡಿದೆ.   ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮಾತನಾಡಿ “ಲಫಂಗಿ ಎಂದು ನಾವು ಕರೆಯುವ ಮಹಾಯುವತಿ(NDA) ಸಂವಿಧಾನವು ನೀಡಿರುವ ವಿಶೇಷ ಹಕ್ಕುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. …

Read More »

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಅಭ್ಯರ್ಥಿಯನ್ನಾಗಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಶನಿವಾರ(ಅ19) ಘೋಷಿಸಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸ್ಪರ್ಧಿಸಲಿದ್ದಾರೆ. ವಯನಾಡ್ ಮತ್ತು ರಾಯಬರೇಲಿ ಎರಡರಿಂದಲೂ ಚುನಾಯಿತರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರ ಬಿಟ್ಟ ಕಾರಣ ಚುನಾವಣೆ ಎದುರಾಗಿದೆ.   39 ರ ಹರೆಯದ ನವ್ಯಾ ಹರಿದಾಸ್ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕೋಝಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಎರಡು …

Read More »

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬಂದ ಹನುಮಂತ

ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಮನೆಗೆ ಹೊಸ ಸದಸ್ಯ ಆಗಮನವಾಗಿದ್ದಾರೆ. ಈ ಸೀಸನ್ ನಲ್ಲಿ ಮೊದಲ ವೈಲ್ಡ್ ಕಾರ್ಡ್ ಎಂಟ್ರಿಯಾಗಿದೆ. ಜಗದೀಶ್ ಹಾಗೂ ರಂಜಿತ್ ಅವರನ್ನು ಬಿಗ್ ಬಾಸ್ ನಿಯಮದ ಉಲ್ಲಂಘನೆ ಮಾಡಿದ್ದಕ್ಕಾಗಿ ದೊಡ್ಮನೆಯಿಂದ ಆಚೆ ಕಳುಹಿಸಿದ್ದಾರೆ. ಈ ಶಾಕ್ ನಲ್ಲಿದ್ದ ಮನೆಮಂದಿಗೆ ಹೊಸ ಸದಸ್ಯರ ಆಗಮನದಿಂದ ಸರ್ಪ್ರೈಸ್ ನೀಡಿದ್ದಾರೆ. ಸರಿಗಮಪ ರಿಯಾಲಿಟಿ ಶೋ ಮೂಲಕ ಜನಮನ್ನಣೆ ಗಳಿಸಿದ ಕುರಿಗಾಹಿ ಹನುಮಂತ ಬಿಗ್ ಬಾಸ್ ಮನೆಗೆ …

Read More »

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

ಹುಬ್ಬಳ್ಳಿ: ಶಿಗ್ಗಾವಿ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪಕ್ಷದ ನಿರ್ಧಾರವಾಗಿದೆ. ಇದಕ್ಕೂ ಪೂರ್ವ ಅಲ್ಲಿನ ನಾಯಕರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ. ರಾಜ್ಯದಿಂದ ಕಳುಹಿಸಿದ ಪಟ್ಟಿಯನ್ನು ಹೈಕಮಾಂಡ್ ಪರಿಗಣಿಸಿರಬಹುದು ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ತಿಳಿಸಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ನಾನಿಲ್ಲದ ಕಾರಣ ಅಲ್ಲಿ ಏನು ಚರ್ಚೆಯಾಗಿದೆ, ಪಟ್ಟಿಯಲ್ಲಿ ಯಾರ ಹೆಸರಿತ್ತು ಎಂಬುವುದು ಗೊತ್ತಿಲ್ಲ. ಆದರೆ ರಾಜ್ಯ ನಾಯಕರು ಕಳುಹಿಸಿರುವ …

Read More »

ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಹಾವೇರಿ: ಉಪ ಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮವಾಗುತ್ತದೆ. ಶಿಗ್ಗಾವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಹೈಕಮಾಂಡ್ ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಸೋಮವಾರ (ಅ.21) ಸಂಜೆಯೊಳಗೆ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಸಚಿವ ಎಚ್. ಕೆ.ಪಾಟೀಲ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ತತ್ವ ಸಿದ್ಧಾಂತಗಳನ್ನ ಬಿಡುವುದಿಲ್ಲ. ಮುಸ್ಲಿಂ ಸಮುದಾಯದ ಇಬ್ಬರು ಆಕಾಂಕ್ಷಿಗಳ ಬಳಿ ಮಾತಾಡಿ ಅಂತಿಮ ಮಾಡುತ್ತೇವೆ. ಕಾರ್ಯಕರ್ತರ ಅಭಿಪ್ರಾಯ, ನಾಯಕರ …

Read More »

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

ಮುಂಬೈ: ಈಗಾಗಲೇ ಘೋಷಣೆಯಾಗಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ (Maharashtra Assembly Election) ಭಾರತೀಯ ಜನತಾ ಪಕ್ಷವು (BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ರವಿವಾರ (ಅ.20) ಮಧ್ಯಾಹ್ನ ಪ್ರಕಟಿಸಲಾದ ಪಟ್ಟಿಯಲ್ಲಿ 99 ಹೆಸರುಗಳಿವೆ. ಮಹಾರಾಷ್ಟ್ರ ವಿಧಾನಸಭೆ 288 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 151 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಮೊದಲ ಪಟ್ಟಿಯಲ್ಲಿ ಡಿಸಿಎಂ ದೇವೇಂದ್ರ ಫಡ್ನವೀಸ್‌ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಫಡ್ನವೀಸ್‌ ಅವರಿಗೆ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಟಿಕೆಟ್‌ ದೊರೆತರೆ, …

Read More »

ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾವು

ಧಾರವಾಡ : ಲಾರಿ ಮತ್ತು ಆಟೋ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಏಳು ವರ್ಷದ ಬಾಲಕ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಇಲ್ಲಿಯ ಕೆಲಗೇರಿ ರಸ್ತೆಯ ಸಂಪಿಗೆ ನಗರದಲ್ಲಿ ರವಿವಾರ(ಅ 20) ನಡೆದಿದೆ. ಬೆಳಗಿನ ಇಂಟರ್‌ಸಿಟಿ ರೈಲು ಮೂಲಕ ಬ್ಯಾಡಗಿಗೆ ಆಟೋ ಮೂಲಕ ರೈಲು ನಿಲ್ದಾಣಕ್ಕೆ ಹೊರಟಿದ್ದ ಕೆಲಗೇರಿಯ ಹಂಚಿನಮನಿ ಕುಟುಂಬದ ಇಬ್ಬರು ಮಕ್ಕಳು ಸೇರಿ ಐವರ ಪೈಕಿ ಆಟೋ ಚಾಲಕ ರಮೇಶ ಹಂಚಿನಮನಿ (35), ಹತ್ತಿರದ ಸಂಬಂಧಿ ಮರೆವ್ವ …

Read More »

New Zealand ವಿರುದ್ಧ ಟೆಸ್ಟ್‌ : ಟೀಮ್ ಇಂಡಿಯಾಕ್ಕೆ ವಾಷಿಂಗ್ಟನ್ ಸುಂದರ್ ಸೇರ್ಪಡೆ

ಬೆಂಗಳೂರು: ನ್ಯೂಜಿಲ್ಯಾಂಡ್ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡಕ್ಕೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ರವಿವಾರ(ಅ 20) ಸೇರ್ಪಡೆಯಾಗಿದ್ದಾರೆ. ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಎಂಟು ವಿಕೆಟ್‌ಗಳಿಂದ ಹೀನಾಯವಾಗಿ ಸೋತ ಕೂಡಲೇ ಆಯ್ಕೆಗಾರರು ವಾಷಿಂಗ್ಟನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.   ವಾಷಿಂಗ್ಟನ್ ಸುಂದರ್ ಅವರು ಎರಡನೇ ಟೆಸ್ಟ್‌ಗೆ ಮುಂಚಿತವಾಗಿ ಪುಣೆಯಲ್ಲಿ ತಂಡದೊಂದಿಗೆ ಸೇರಿಕೊಳ್ಳುತ್ತಾರೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ. ರಣಜಿ ಟ್ರೋಫಿ ಪಂದ್ಯದಲ್ಲಿ ದೆಹಲಿ ವಿರುದ್ಧ …

Read More »

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಒದಗಿಸಿದ ಆರೋಪಿ ಬಂಧನ

ಮುಂಬಯಿ: ಬಾಬಾ ಸಿದ್ದಿಕಿ ಹ*ತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರ ಅಪರಾಧ ವಿಭಾಗವು ಭಾನುವಾರ ನವಿ ಮುಂಬೈನಿಂದ ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಒದಗಿಸಿದ ಆರೋಪದ ಮೇಲೆ ಸ್ಕ್ರ್ಯಾಪ್ ಡೀಲರ್‌ನನ್ನು ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೇರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಬಂಧಿತ ಆರೋಪಿ ರಾಜಸ್ಥಾನದ ಉದಯಪುರ ಮೂಲದ ಭಗವತ್ ಸಿಂಗ್ ಓಂ ಸಿಂಗ್ (32) ಎಂದು ಗುರುತಿಸಲಾಗಿದ್ದು, ಪ್ರಸ್ತುತ ನವಿ ಮುಂಬೈನಲ್ಲಿ ನೆಲೆಸಿದ್ದ. ಓಂ ಸಿಂಗ್ ನ ನ್ನು …

Read More »

ಬೆಳಗಾವಿ,ಸೇರಿದಂತೆ 19 ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 19 ಜಿಲ್ಲೆಗಳಲ್ಲಿ ಸೋಮವಾರ(ಅ.21ರಂದು) ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಿದೆ. ಇನ್ನು ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚುವರಿಯಾಗಿ ಶೇ.44ರಷ್ಟು ಮಳೆ ಸುರಿದಿದೆ.   ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಕರಾವಳಿ ತೀರದಲ್ಲಿ ಸರ್ಕ್ನೂಲೇಶನ್‌ 5.8 ಕಿ.ಮೀ. ಎತ್ತರದವರೆಗೆ ಇವೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅ.23ರ ವರೆಗೆ …

Read More »