ಚಿಂಚೋಳಿ: ಗ್ರಾಮದ ರೈತ ಪ್ರಭು ಮಸಾನೆ ಅವರು ಕೇವಲ ಒಂದು ಎಕರೆಯಲ್ಲಿ ಶುಂಠಿ ಹಾಗೂ ಪಪ್ಪಾಯಿ ಬೆಳೆದು ₹ 18 ಲಕ್ಷಕ್ಕೂ ಅಧಿಕ ಆದಾಯ ಗಳಿಸಿ ಯಶಸ್ಸು ಕಂಡಿದ್ದಾರೆ. ಕೇವಲ ಏಳನೇ ತರಗತಿಯವರೆಗೆ ಓದಿದ ಮಸಾನೆ ಅವರು ಕೃಷಿಯಲ್ಲಿ ಇಪ್ಪತ್ತೈದು ವರ್ಷಗಳಿಂದ ತೊಡಗಿಸಿಕೊಂಡಿದ್ದಾರೆ. ಅವರಿಗೆ ಒಟ್ಟು ಏಳು ಎಕರೆ ಭೂಮಿ ಇದೆ. ಅದರಲ್ಲಿ ಆರು ಎಕರೆಯಲ್ಲಿ ಸಾಂಪ್ರದಾಯಿಕ ಬೆಳೆ ಬೆಳೆದಿದ್ದಾರೆ. ಒಂದು ಎಕರೆಯ ಅರ್ಧಭಾಗಕ್ಕಿಂತಲೂ ಹೆಚ್ಚು ಜಾಗದಲ್ಲಿ ಬೆಳೆದ ಶುಂಠಿ ಖರ್ಚು …
Read More »Daily Archives: ಅಕ್ಟೋಬರ್ 20, 2024
‘ಪ್ರಕೃತಿ ಇಲ್ಲದೇ ಮಾನವನ ಬದುಕು ಅಸಾಧ್ಯ. ಪ್ರಕೃತಿಯನ್ನು ಪುಸ್ತಕದಲ್ಲಿ ನೋಡುವ ಬದಲು ಕಣ್ತೆರೆದು ನೋಡಿದರೆ ಅರ್ಥವಾಗುತ್ತದೆ’
ಗೋಕಾಕ: ‘ಪ್ರಕೃತಿ ಇಲ್ಲದೇ ಮಾನವನ ಬದುಕು ಅಸಾಧ್ಯ. ಪ್ರಕೃತಿಯನ್ನು ಪುಸ್ತಕದಲ್ಲಿ ನೋಡುವ ಬದಲು ಕಣ್ತೆರೆದು ನೋಡಿದರೆ ಅರ್ಥವಾಗುತ್ತದೆ’ ಎಂದು ಧಾರವಾಡದ ಪಕ್ಷಿ ತಜ್ಞ ಪ್ರಕಾಶ ಗೌಡರ ಹೇಳಿದರು. ಇಲ್ಲಿನ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ಸಭಾ ಭವನದಲ್ಲಿ ಘಟಪ್ರಭಾದ ಪ್ರಾದೇಶಿಕ ಅರಣ್ಯ ವಿಭಾಗ, ಪ್ರಾದೇಶಿಕ ಅರಣ್ಯ ವಲಯ ಹಾಗೂ ಲಕ್ಷ್ಮಣರಾವ ಜಾರಕಿಹೊಳಿ ಶಿಕ್ಷಣ ಮಹಾವಿದ್ಯಾಲಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ವಲಸೆ ಪಕ್ಷಿಗಳ ದಿನಾಚರಣೆ ನಿಮಿತ್ತ ಪಕ್ಷಿ ಹಾಗೂ ಕೀಟ ರಕ್ಷಿಸಿ ಅಭಿಯಾನ …
Read More »ಎಚ್‌ಐವಿ ತಡೆಗಟ್ಟುವಿಕೆ ಜಾಗೃತಿಗಾಗಿ ಮ್ಯಾರಥಾನ್
ಬೆಳಗಾವಿ: ಎಚ್‌ಐವಿ/ಏಡ್ಸ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ನಗರದಲ್ಲಿ ಶನಿವಾರ ‘ರೆಡ್ ರನ್’ ರಾಜ್ಯಮಟ್ಟದ 5 ಕಿ.ಮೀ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಓಟ ಕೃಷ್ಣದೇವರಾಯ ವೃತ್ತ, ರಾಣಿ ಚನ್ನಮ್ಮನ ವೃತ್ತದ ಮಾರ್ಗವಾಗಿ ಸಾಗಿ, ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹೆಚ್ಚುವರಿ ಯೋಜನಾ ನಿರ್ದೇಶಕಿ ಡಾ.ಉಮಾ ಬುಗ್ಗಿ ಸ್ಪರ್ಧೆಗೆ ಚಾಲನೆ ನೀಡಿದರು. …
Read More »ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ?
ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣವನ್ನು ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ ಸಂದೇಶ ಕಳಿಸಲಾಗಿದೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ. ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಚೈನ್ನೈನಿಂದ ಅಪರಿಚಿತರಿಂದ ಬೆದರಿಕೆ ಪತ್ರದ ಮೇಲ್ ಬಂದಿದೆ. ಶ್ವಾನದಳ, ಬಾಂಬ್ ಸ್ಕ್ವಾಡನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು. ಈ ಬಗ್ಗೆ ತ್ಯಾಗರಾಜ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Read More »ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ
ನೇಸರಗಿ(: ಸಮೀಪದ ಕೊಳದೂರ ಹಳ್ಳದಲ್ಲಿ ಬುಧವಾರ ತೇಲಿಹೋಗಿದ್ದ ಯುವಕನ ಮೃತದೇಹ ಭಾನುವಾರ ಪತ್ತೆಯಾಗಿದೆ. ಬೆಳಗಾವಿ ತಾಲ್ಲೂಕಿನ ಕರಡಿಗುದ್ದಿ ಗ್ರಾಮದ ನಿವಾಸಿ ಯಲ್ಲಪ್ಪ ಬೋರನ್ನವರ(34) ಮೃತರು. ಸತತ ಮಳೆಯಿಂದಾಗಿ ಬುಧವಾರ ಈ ಹಳ್ಳ ಉಕ್ಕಿ ಹರಿಯುತ್ತಿತ್ತು. ಆದರೆ, ನೀರಿನ ರಭಸವನ್ನೂ ಲೆಕ್ಕಸದೆ ಯಲ್ಲಪ್ಪ ದಾಟುತ್ತಿದ್ದಾಗ, ಬೈಕ್ ಸಮೇತವಾಗಿ ತೇಲಿಹೋಗಿದ್ದರು. ಅವರ ಮೃತದೇಹ ಪತ್ತೆಗಾಗಿ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ನೇಸರಗಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಗ್ರಾಮದ ಜೋಡಗುಡಿ ದೇವಸ್ಥಾನಕ್ಕೆ ಸಂಪರ್ಕ …
Read More »ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಮರುಪರಿಶೀಲಿಸಬೇಕು: ಮಹಾಂತೇಶ ಕವಟಗಿಮಠ
ಬೆಳಗಾವಿ: ‘ಎಚ್.ಕಾಂತರಾಜ ಆಯೋಗ ಕೈಗೊಂಡ 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ವರದಿ ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ಅದನ್ನು ಮರುಪರಿಶೀಲಿಸಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಒತ್ತಾಯಿಸಿದರು. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾತಿ ಗಣತಿ ಮಾಡಬೇಕಾದರೆ ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕು. ಆದರೆ, ಕಾಂತರಾಜ ಆಯೋಗವು ಮನೆ-ಮನೆಗೆ ತೆರಳದೆ, ಸಾಮೂಹಿಕವಾಗಿ ಕೆಲವೇ ಜನರ ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆ ಕೈಗೊಂಡಿದೆ. ಈ ವರದಿ …
Read More »ಕಾಗವಾಡ ಪಟ್ಟಣದ ಐಸಿಐಸಿಐ ಬ್ಯಾಂಕಿನಿಂದ ಕೃಷ್ಣ ನದಿಯವರೆಗೆ ಹೋಗುವ ರಸ್ತೆ ಹದಗೆಟ್ಟಿದ್ದರಿಂದ ತಹಶೀಲ್ದಾರರನ್ನು ಸ್ಥಳಕ್ಕೆ ಕರೆದು ಒಯದ ರೈತರು.
ಕಾಗವಾಡ ಪಟ್ಟಣದ ಐಸಿಐಸಿಐ ಬ್ಯಾಂಕಿನಿಂದ ಕೃಷ್ಣ ನದಿಯವರೆಗೆ ಹೋಗುವ ರಸ್ತೆ ಹದಗೆಟ್ಟಿದ್ದರಿಂದ ತಹಶೀಲ್ದಾರರನ್ನು ಸ್ಥಳಕ್ಕೆ ಕರೆದು ಒಯದ ರೈತರು. ನಿರಂತರವಾಗಿ ಸುರಿದ ಮಳೆಯಿಂದ ಆನೇಕ ರಸ್ತೆಗಳು ಹದಗೆಟ್ಟು ಹೋಗಿವೆ ಆದರೊಂದಿಗೆ ಕಾಗವಾಡ ಪಟ್ಟಣದ ಐಸಿಐಸಿಐ ಬ್ಯಾಂಕಿನಿಂದ ಹಿಡಿದು ಕಲಕೇರಿ ಕೆರಿ ಮುಖಾಂತರ ಕೃμÁ್ಣ ನದಿಯವರೆಗೆ ಸಂಪರ್ಕಿಸುವ ರಸ್ತೆ ಹದಿಗೆಟ್ಟು ಹೋಗಿದ್ದು, ಅನೇಕ ರೈತರಿಗೆ ಸಂಚಾರಿಸಲು ಸಾಧ್ಯವಾಗದೇ ಇದ್ದಿದ್ದರಿಂದ ರೈತರು ಒಂದುಗೂಡಿ ಕಾಗವಾಡ ತಹಸಿಲ್ದಾರ್ ರಾಜೇಶ್ ಬುರ್ಲಿ ಹಾಗೂ ಪಟ್ಟಣ ಪಂಚಾಯಿತಿಯ …
Read More »ಮುಡಾ ಕಚೇರಿಯಲ್ಲಿ ED ದಾಳಿ ಅಂತ್ಯ: ಸತತ 29 ಗಂಟೆಗಳ ಕಾಲ ಶೋಧ
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿನ ದಾಳಿ ಮುಕ್ತಾಯವಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮುಡಾ ಕಚೇರಿಯಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಸತತ 29 ಗಂಟೆಗಳ ಕಾಲ ಶೋಧ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದು, ದಾಳಿ ಅಂತ್ಯಗೊಳಿಸಿದ್ದಾರೆ. ಅ.18ರಂದು ಮೊದಲ ದಿನ 12 ಗಂಟೆಗಳ ಕಾಲ ಹಾಗೂ ಅ.19ರಂದು ಎರಡನೇ ದಿನ 17 ಗಂಟೆಗಳ ಕಾಲ ಶೋಧ ನಡೆಸಿದ …
Read More »ತೀವ್ರ ಬೆನ್ನು ನೋವಿನಿಂದ ನಟ ದರ್ಶನ್ ನರಳಾಟ
ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬೆನ್ನು ನೋವಿನಿಂದ ನರಳಾಡುತ್ತಿದ್ದು, ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿಲ್ಲುವುದಕ್ಕೂ ಆಗದೇ, ನಡೆಯುವುದಕ್ಕೂ ಆಗದೇ ನರಳಾಡುತ್ತಿದ್ದಾರೆ. ವಕೀಲ ರಾಮ್ ಸಿಂಗ್ ಜೈಲಿಗೆ ಬಂದಿದ್ದ ವೇಳೆ ದರ್ಶನ್ ನಡೆಯುವಾಗ ಪದೇ ಪದೇ ಬೆನ್ನು ಹಿಡಿದುಕೊಂಡು ನಡೆಯುತ್ತಿದ್ದು. ಕೆಲ ಸಲ …
Read More »DK ಶಿವಕುಮಾರ್ ರನ್ನು `CM’ ಮಾಡಿ ತೋರಿಸುತ್ತೇವೆ : ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿಕೆ!
ಗದಗ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಮಹತ್ವದ ಹೇಳಿಕೆ ನೀಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಡಸಿದ್ದೇಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ. ಮುಕ್ತಿಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ಇದೇ ಜಾಗಕ್ಕೆ ಕರೆತಂದು ಪೂಜೆ …
Read More »