ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸೋಮವಾರ (ಅ.21) ತಡರಾತ್ರಿ ವರುಣನ ಅಬ್ಬರ ಜೋರಾಗಿದ್ದು ಠಾಣೆಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿ ನಾಯಕನಕಟ್ಟೆ ಪೊಲೀಸ್ ಠಾಣೆ ಕೆರೆಯಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಾದ್ಯಂತ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಪೊಲೀಸ್ ಠಾಣೆಯೊಳಗೆ ನೀರು ನುಗ್ಗಿದ ಪರಿಣಾಮ ಕೆಲವು ದಾಖಲೆಗಳು ನೀರುಪಾಲಾಗಿದೆ, ಅಲ್ಲದೆ ಠಾಣೆ ಒಳಗಿನ ಲಾಕಪ್, PSI ರೂಂ, ಕಂಪ್ಯೂಟರ್ ರೂಮ್ ಗಳಿಗೆ ನೀರು ನುಗ್ಗಿದೆ. ಬೆಳಿಗ್ಗೆಯಿಂದ ಮಳೆ ನೀರು ಹೊರ ಹಾಕಲು …
Read More »Daily Archives: ಅಕ್ಟೋಬರ್ 22, 2024
ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
ಗದಗ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ವ್ಯಾಪ್ತಿಯ ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕ ದಿನೇಶ್ ಮೃತದೇಹ ಮಂಗಳವಾರ(ಅ.22) ತೀರದಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್ ಮೇಲಿಂದ ತುಂಗಭದ್ರಾ ನದಿಗೆ ಹಾರಿ ದಿನೇಶ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿ ತಿಳಿಸಿದೆ. ಮುಂಡರಗಿ ತಾಲೂಕು ಮುರಡಿ ತಾಂಡಾದ ಯುವಕ ದಿನೇಶ ಸಾಲದ ಸುಳಿಗೆ ಸಿಲುಕಿದ್ದು, ಇದರಿಂದಾಗಿ ಅಕ್ಟೋಬರ್ 20 (ಭಾನುವಾರ)ದಂದು ನದಿಗೆ ಹಾರಿದ್ದ. ನೀರಿನ ಸೆಳೆತ ಹೆಚ್ಚಾಗಿದ್ದರಿಂದ …
Read More »ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 28ಕ್ಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Case) ಜೈಲು ಸೇರಿರುವ ನಟ ದರ್ಶನ್ (Darshan) ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮಂಗಳವಾರ (ಅ.22ರಂದು) ನಡೆದಿದೆ. ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಜಾಮೀನಿಗೆ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟಿನಲ್ಲಿ ವಾದವನ್ನು ಮಂಡಿಸಿದ್ದಾರೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲರು, ದರ್ಶನ್ ಅವರ ಆರೋಗ್ಯ ವಿಚಾರವನ್ನು ನ್ಯಾಯಧೀಶರ ಮುಂದೆ ಪ್ರಸ್ತಾಪಿಸಿದ್ದಾರೆ. …
Read More »ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ
ಹಾವೇರಿ: ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಲ್ಲಿ ಮಂಗಳವಾರ(ಅ.22) ರಂದು ಸಂಭವಿಸಿದೆ. ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು. ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ. …
Read More »ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ
ಬೆಂಗಳೂರು: ಆಟವಾಡುವಾಗ ಅಣ್ಣ-ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ಷ ಲೇಔಟ್‌ನ ಜಾನ್ಸನ್(13) ಮತ್ತು ಮಹಾಲಕ್ಷ್ಮೀ(11) ಕೆರೆಗೆ ಬಿದ್ದಿರುವ ಅಣ್ಣ-ತಂಗಿ. ಸೋಮವಾರ ಸಂಜೆ ಸುಮಾರು 5.30ಕ್ಕೆ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಯಲ್ಲಿ ಈ ಘಟನೆ ನಡೆದಿದೆ. ಜಯಮ್ಮ ಎಂಬುವವರ ಮಕ್ಕಳಾದ ಜಾನ್ಸನ್, ಮಹಾಲಕ್ಷ್ಮೀ ಕೆರೆಯ ವಾಕಿಂಗ್ ಪಾತ್ ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ …
Read More »ರಾಜ್ಯದ ಪೊಲೀಸರ ಮಕ್ಕಳಿಗೆ ಸಿಎಂ ಗುಡ್ ನ್ಯೂಸ್
ಬೆಂಗಳೂರು: ರಾಜ್ಯದ ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದಲ್ಲಿ ಸೋಮವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದ ಸಿಎಂ, ಪೊಲೀಸರು ಮುಕ್ತವಾಗಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸರ್ಕಾರ ಸಹಕಾರ ನೀಡಲಿದೆ ಎಂದು ಹೇಳಿದ್ದಾರೆ. ಪೊಲೀಸ್ ಸಿಬ್ಬಂದಿ ಹಿತರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025 ರಲ್ಲಿ 10,000 ಪೋಲಿಸ್ ವಸತಿಗೃಹಗಳ …
Read More »ಇದ್ದೂ ಇಲ್ಲದಂತಾದ ಕಲಾಭವನ:
ಧಾರವಾಡ: ಅವಳಿನಗರಗಳ ಬಹುತೇಕ ರಂಗಮಂದಿರಗಳು ದುಃಸ್ಥಿತಿಯಲ್ಲಿವೆ. ಇದು ನಾಟಕ ಪ್ರದರ್ಶನ, ರಂಗ ತಾಲೀಮು ಮೊದಲಾದ ಚಟುವಟಿಕೆಗಳಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಸಾಂಸ್ಕೃತಿಕ ನಗರವೆಂದು ಕರೆಯುವ ಧಾರವಾಡದಲ್ಲಿ ಈಗ ಕೆಲವೇ ರಂಗಮಂದಿರಗಳಲ್ಲಿ ರಂಗಭೂಮಿ ಚಟುವಟಿಕೆಗಳು ನಡೆಯುತ್ತವೆ. ಮೂಲಸೌಕರ್ಯಗಳ ಕೊರತೆ ಮತ್ತು ಅವ್ಯವಸ್ಥೆಗಳಿಂದ ನಲುಗಿರುವ ರಂಗತಾಣಗಳಿಗೆ ಕಾಯಕಲ್ಪಿಸಲು ಸಂಬಂಧಪಟ್ಟವರು ಕ್ರಮವಹಿಸಿಲ್ಲ. ಧಾರವಾಡದಲ್ಲಿ ರಂಗಾಯಣ ಇದ್ದರೂ ಅನುದಾನ ಕೊರತೆ, ಸವಲತ್ತುಗಳ ಕೊರತೆಯಿಂದಾಗಿ ರಂಗಚಟುವಟಿಕೆಗಳು ಸೊರಗಿವೆ. ಬಹುತೇಕ ರಂಗಮಂದಿರಗಳಲ್ಲಿ ಬೆಳಕು, ಧ್ವನಿ ವ್ಯವಸ್ಥೆ ಸಹಿತ ಸುಸಜ್ಜಿತ ಸಕಲ …
Read More »ಧಾರವಾಡದಲ್ಲಿ ಏರ್ಪಡಿಸಿದ್ದ ಪೊಲೀಸ್ ಹುತ್ಮಾತರ ದಿನಾಚರಣೆಯಲ್ಲಿ
ಧಾರವಾಡ: ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿನಿತ್ಯ ವ್ಯಾಯಾಮ ಮಾಡಬೇಕು. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಿ.ಜಿ.ರಮಾ ತಿಳಿಸಿದರು. ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದರು. ಪೊಲೀಸರಿಗೆ ಕಾರ್ಯದ ಒತ್ತಡ ಇರುತ್ತದೆ. ಪೊಲೀಸರು ತಮ್ಮ ಮತ್ತು ಕುಟುಂಬದ ಆರೋಗ್ಯ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದರು. ಪೊಲೀಸರು ಹಗಲಿರುಗಳು ಕಾರ್ಯನಿರ್ವಹಿಸುತ್ತಾರೆ. ಸಮಾಜದ ಆಂತರಿಕ ಭದ್ರತೆಗೆ ಶ್ರಮಿಸುತ್ತಾರೆ. ಪೊಲೀಸರು ಸಾರ್ವಜನಿಕರ …
Read More »ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.
ಬೆಳಗಾವಿ: ‘ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಖ್ಯಾತ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ. ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಮತ್ತು ಜೀ ಕನ್ನಡ …
Read More »