Breaking News

Daily Archives: ಅಕ್ಟೋಬರ್ 24, 2024

ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ: ಸಂಸತ್‌ ಆವರಣದಲ್ಲಿ ಚನ್ನಮ್ಮ ಸ್ಮರಣೆ

ನವದೆಹಲಿ: ವೀರ ವನಿತೆ ಕಿತ್ತೂರು ಚನ್ನಮ್ಮ ಜನ್ಮದಿನಾಚರಣೆ ಹಾಗೂ ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷಗಳು ಸಂದ ಸಂದರ್ಭದಲ್ಲಿ ಸಂಸತ್‌ ಆವರಣದಲ್ಲಿ ಚನ್ನಮ್ಮ ಅವರ ಸಾಧನೆಯನ್ನು ಸ್ಮರಿಸಲಾಯಿತು. ಚನ್ನಮ್ಮ ಪ್ರತಿಮೆಗೆ ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಕೂಡಲ ಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಶಾಸಕರಾದ ಬಸನಗೌಡ …

Read More »

ಅಧಿಕಾರಿಗಳ ಗೈರು; ಗ್ರಾಮಸಭೆ ಮುಂದೂಡಿಕೆ

ಯಮಕನಮರಡಿ: ಗ್ರಾಮಸಭೆಗೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಲಿಖಿತವಾಗಿ ಪತ್ರ ನೀಡಿದರೂ ಗ್ರಾಮಸಭೆಗೆ ಬರದೇ ಇರುವುದು ದುರಾದೃಷ್ಟದ ಸಂಗತಿ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವಂತಹ ಗ್ರಾಮಸಭೆಗೆ ನೋಡಲ್ ಅಧಿಕಾರಿಗಳು ಗೈರು ಇರುವುದರಿಂದ ಸಭೆ ಮುಂದೂಡಿ ಎಂದು ಯಮಕನಮರಡಿ ವಾರ್ಡ್‌ 1 ಗ್ರಾ. ಪಂ ಸದಸ್ಯ ರವಿ ಹಂಜಿ ಆಗ್ರಹಿಸಿದರು. ಯಮಕನಮರಡಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಮಾತನಾಡಿದ ಅವರು, ವಿವಿಧ ಇಲಾಖೆಯ ಅಧಿಕಾರಿಗಳು ಇಲ್ಲದೇ ಸಭೆ ಮಾಡುವುದು ತಪ್ಪು. ಸಮಸ್ಯೆಗಳಿಗೆ ಆಯಾ ಇಲಾಖೆಯ …

Read More »

ಕಿತ್ತೂರು ಉತ್ಸವ | ವಾಣಿಜ್ಯ ಮಳಿಗೆಗಳಲ್ಲಿ ಜನಜಂಗುಳಿ

ಕಿತ್ತೂರು: ಇಲ್ಲಿಯ ಕೋಟೆ ಆವರಣದಲ್ಲಿ ಆಯೋಜಿಸಿದ ‘ಚನ್ನಮ್ಮನ ಕಿತ್ತೂರು ಉತ್ಸವ’ದ ಮೊದಲ ದಿನವೇ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗೆ ಜನಸಾಗರವೇ ಹರಿದು ಬಂತು. ‘ಮೊದಲ ದಿನವಾಗಿದ್ದರಿಂದ ಕೊಳ್ಳುವವರಿಗಿಂತ ನೋಡುವವರೆ ಹೆಚ್ಚಾಗಿದ್ದಾರೆ. ಇನ್ನು ಮೇಲೆ ವ್ಯಾಪಾರ ಆಗಬೇಕಷ್ಟೆ’ ಎಂದು ವರ್ತಕರು ಹೇಳಿದರು.   ‘ಗ್ರಾಮೀಣ ಭಾಗದ ಉತ್ಪಾದಕರು ತಾವು ಸಿದ್ದಪಡಿಸಿದ್ದ ಆಹಾರ ಪದಾರ್ಥ, ಮತ್ತಿತರ ವಸ್ತುಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಮಳಿಗೆ ವ್ಯವಸ್ಥೆ ಮಾಡಿಕೊಡಲಾಗಿದೆ. ಇದನ್ನು ಜನರು ಉಪಯೋಗಿಸಿಕೊಳ್ಳಬೇಕು’ ಎಂಬುದು …

Read More »

ಕಿತ್ತೂರು ಹಿರಿಮೆ ಸಾರಿದ ಮೆರವಣಿಗೆ

ಕಿತ್ತೂರು : ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಪ್ರಯುಕ್ತ ಬುಧವಾರ ನಡೆದ ಜಾನಪದ ಕಲಾವಾಹಿನಿ ಮೆರವಣಿಗೆ, ಕ್ರಾಂತಿ ನೆಲದ ಹಿರಿಮೆ ಸಾದರಪಡಿಸಿತು. ರಾಜಬೀದಿಯಲ್ಲಿ ಜನಸಾಗರವಿದ್ದರೆ, ಸಂಭ್ರಮವು ಎಲ್ಲೆಡೆ ಆವರಿಸಿತ್ತು. ಎಲ್ಲರೂ ಜೊತೆಗೂಡಿ ಚೆಂದದ ಲೋಕವನ್ನೇ ಸೃಷ್ಟಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಬಂದ ‘ವಿಜಯ ಜ್ಯೋತಿ’ಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮೆರವಣಿಗೆಗೆ ಚಾಲನೆ ನೀಡಿದರು. ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ …

Read More »

ಜನಾಕರ್ಷಿಸಿದ ಚನ್ನಮ್ಮನ ಕಿತ್ತೂರು ದೋಣಿ ವಿಹಾರ

ಕಿತ್ತೂರು: ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಾಹಸ ಅಕಾಡೆಮಿ ಆಶ್ರಯದಲ್ಲಿ ತುಂಬುಗೆರೆಯಲ್ಲಿ ಬುಧವಾರ ನಡೆದ ದೋಣಿ ವಿಹಾರ ಜನಾಕರ್ಷಿಸಿತು. ಸುಡು ಬಿಸಿಲಿನ ನಡುವೆ ಕೆರೆಯತ್ತ ಬಂದ ಜನ ತುಂಬುಕೆರೆಯ ದೋಣಿ ವಿಹಾರದಲ್ಲಿ ಕೆಲಹೊತ್ತು ನಲಿದರು. ದಶಕಗಳಿಂದ ನೀರು ಕಾಣದ ಐತಿಹಾಸಿಕ ಕೆರೆ ಈ ವರ್ಷ ಸುರಿದ ಭಾರಿ ಮಳೆಯಿಂದ ಮೈ ತುಂಬಿ ಹರಿಯುತ್ತಿರುವುದನ್ನು ಕಂಡು ಸಂಭ್ರಮಿಸಿದರು. ಬ್ರಿಟಿಷರ ವಿರುದ್ಧ …

Read More »

ಕಿತ್ತೂರು ವಿಜಯೋತ್ಸವ: ಕಲಾವಿದರಿಗೆ ಮನಸೋತ ಜನಸಾಗರ

ಚನ್ನಮ್ಮನ ಕಿತ್ತೂರು: ಕಿತ್ತೂರ ನಾಡು ಹತ್ತೂರು ಕಲಾವಿದರನ್ನು ಬುಧವಾರ ಚುಂಬಕಶಕ್ತಿಯಂತೆ ಸೆಳೆಯಿತು. ಜನಪದರು, ಸಂಗೀತಗಾರರು, ನೃತ್ಯಪಟುಗಳು ಸೇರಿ ಕಲಾವಿದರ ದಂಡೇ ಕ್ರಾಂತಿಯ ನೆಲದತ್ತ ಹರಿದುಬಂದಿತ್ತು. ಬೆಳಿಗ್ಗೆ ಆರಂಭಗೊಂಡ ಜಾನಪದ ಕಲಾವಾಹಿನಿ ಮೆರವಣಿಗೆ ಮಧ್ಯಾಹ್ನದವರೆಗೂ ಸಾಗಿತು. ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದ ಈ ಮೆರವಣಿಗೆ ಮೇಲೂ ಕಾರ್ಮೋಡ ಕವಿದಿತ್ತು. ಆದರೆ, ವರುಣ ಬಿಡುವು ಕೊಟ್ಟಿದ್ದರಿಂದ ಮೆರವಣಿಗೆ ರಂಗೇರಿತು. ಉತ್ಸವದ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಗಾಗಿ ಶಾಲಾ …

Read More »

ಹೇಳಿಕೆ ಹಿಂಪಡೆಯಿರಿ ಇಲ್ಲವೇ ಮಾನನಷ್ಟ ಮೊಕದ್ದಮೆ ಎದುರಿಸಿ:ಬೈರತಿಗೆ BY ರಾಘವೇಂದ್ರ

ಶಿವಮೊಗ್ಗ: ‘ಮುಡಾ ಹಗರಣದಲ್ಲಿ ತಮ್ಮ ಭ್ರಷ್ಟ ನಾಯಕರನ್ನು ಉಳಿಸಿಕೊಳ್ಳಲು ಹಾಗೂ ಪ್ರಕರಣದ ದಿಕ್ಕನ್ನು ಬೇರೆ ಕಡೆ ತಿರುಗಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ನಮ್ಮ ತಾಯಿ ಅವರ ಸಹಜ ಸಾವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸಲ್ಲ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.   ‘ಆಚಾರವಿಲ್ಲದ ತಮ್ಮ ನಾಲಿಗೆಯನ್ನು ಬೈರತಿ ಸುರೇಶ್, ಕಾಂಗ್ರೆಸ್ ಪಕ್ಷದ ಮೂಲ ರಾಜಕೀಯ ಸಂಸ್ಕೃತಿಯಾದ ಲಜ್ಜೆಗೆಟ್ಟ ರಾಜಕಾರಣಕ್ಕೆ ಬಳಸಿಕೊಂಡಿರುವುದು ಆಕ್ಷೇಪಾರ್ಹ. ಇದು ಅವರ ಸ್ಮರಣೆಗೆ ಮಾತ್ರವಲ್ಲ, ಮಾನವೀಯತೆಯ ಮೌಲ್ಯಗಳಿಗೂ …

Read More »

ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

ಬಳ್ಳಾರಿ: ಸಂಡೂರು ಕಾಂಗ್ರೆಸ್ ಭದ್ರಕೋಟೆ. ಯಾರೇ ಬಂದರೂ ಕಾಂಗ್ರೆಸ್ ಗೆಲ್ಲುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ರಾಜಕೀಯ ಮಾಡಲು ಎಲ್ಲರೂ ಬರುತ್ತಾರೆ ಎಂದು ಸಚಿವ ಸಂತೋಷ ಲಾಡ್ ಅವರು ಪರೋಕ್ಷವಾಗಿ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದರು. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಕೆಲಸ ನಮಗೆ ಗೆಲ್ಲುವಂತೆ …

Read More »

ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ‘ಉಪ ಚುನಾವಣಾ ವೇಳಾಪಟ್ಟಿ’ ಪ್ರಕಟ

ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ‘ಉಪ ಚುನಾವಣಾ ವೇಳಾಪಟ್ಟಿ’ ಪ್ರಕಟ ಬಳ್ಳಾರಿ : ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ನ.12 ರಂದು ಕೊನೆಯ ದಿನವಾಗಿರುತ್ತದೆ. ನ.13 ರಂದು ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ನ.15 ಕೊನೆಯ ದಿನವಾಗಿರುತ್ತದೆ. ಮತದಾನವು ನ.23 …

Read More »

ರಾಜ್ಯದ ಬೀಚ್ ಗಳಲ್ಲೂ ಗೋವಾ ಮಾದರಿಯಲ್ಲಿ ‘ಮದ್ಯ’ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ!

ಬೆಂಗಳೂರು : ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯೊಂದು ನೀಡಿರುವ ಪ್ರವಾಸೋದ್ಯಮ ಇಲಾಖೆಯು ನೆರೆಯ ಗೋವಾ ಬೀಚ್ ಗಳಲ್ಲಿ ಯಾವ ರೀತಿ ಮದ್ಯ ಮಾರಾಟ ಮಾಡಲಾಗುತ್ತದೆಯೊ ಅದೇ ಒಂದು ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಸಹ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.   ಹೌದು ರಾಜ್ಯದ ಬೀಚ್​ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. …

Read More »