ಕಾಗವಾಡ: ಪ್ರತಿಯೊಬ್ಬರು ಮಾತೃಭಾಷಾಭಿಮಾನ ಹೊಂದಿರಬೇಕು. ಆದರೆ ಇತರ ಭಾಷೆಗಳನ್ನು ದ್ವೇಷಿಸಬಾರದು. ಎಲ್ಲರೂ ಸೇರಿ ಕರ್ನಾಟಕ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸೋಣ. ಕರಾಳ ದಿನಕ್ಕೆ ಅವಕಾಶ ಇಲ್ಲ ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಹೇಳಿದರು. ಶುಕ್ರವಾರ ತಾಲ್ಲೂಕಿನ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಂಗಸೂಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸುವ ಕುರಿತು ನಡೆದ ಶಾಂತಿ ಪಾಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರಾಠಿ ಭಾಷಿಕರೇ ಹೆಚ್ಚಾಗಿರುವ ಮಂಗಸೂಳಿ ಗ್ರಾಮದಲ್ಲಿ ಕಳೆದ ಅನೇಕ ವರ್ಷಗಳಿಂದ ನ.1 …
Read More »Daily Archives: ಅಕ್ಟೋಬರ್ 27, 2024
ಮತ್ತೆ ಬನ್ನಿ ಕಿತ್ತೂರು ಉತ್ಸವಕ್ಕೆ…:D.C.
ಚನ್ನಮ್ಮನ ಕಿತ್ತೂರು: ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆಗೆ ಶುಕ್ರವಾರ ತಡರಾತ್ರಿ ವೈಭವದ ತೆರೆ ಬಿದ್ದಿತು. ಬಾಲಿವುಡ್ ಖ್ಯಾತ ಗಾಯಕ ಅರ್ಮಾನ್ ಮಲೀಕ್ ಅವರ ಗಾನಸುಧೆಯ ಮೂಲಕ ಸಾಂಸ್ಕೃತಿಕ ಲೋಕವೊಂದು ನಿರ್ಮಾಣವಾಯಿತು. ರಾಜ್ಯದ ಎಲ್ಲೆಡೆಯಿಂದ ಸೇರಿದ್ದ ಅಪಾರ ಜನ ಮೂರು ದಿನಗಳ ವೈಭೋಗವನ್ನು ಕಣ್ಣು- ಮನದಲ್ಲಿ ಹಿಡಿದಿಟ್ಟುಕೊಂಡು ಮರಳಿದರು. ದ್ವಿಶತಮಾನೋತ್ಸವಕ್ಕೆ ಜನ ನಿರೀಕ್ಷೆಗೆ ಮೀರಿ ಹರಿದುಬಂದರು. ರಾಣಿ ಚನ್ನಮ್ಮ ಮುಖ್ಯ ವೇದಿಕೆಯಲ್ಲಿ ಬೆಳಗಿನ ಅವಧಿಯಲ್ಲಿ ನಡೆದ ಸಾಹಿತ್ಯ ಗೋಷ್ಠಿಗಳು ಮತ್ತು ಮಧ್ಯಾಹ್ನದ …
Read More »ಬೈಲಹೊಂಗಲ ಉತ್ಸವಕ್ಕೆ ಭರದ ಸಿದ್ಧತೆ
ಬೈಲಹೊಂಗಲ: ವೀರರಾಣಿ ಕಿತ್ತೂರು ಚನ್ನಮ್ಮನ 200ನೇ ವಿಜಯೋತ್ಸವದ ವರ್ಷಾಚರಣೆ ಸವಿ ನೆನಪಿಗಾಗಿ ಅ.28ರಂದು ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ಪ್ರಥಮ ಬೈಲಹೊಂಗಲ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ಪಟ್ಟಣದ ಕಲ್ಮಠ ಗಲ್ಲಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮನ ಐತಿಹಾಸಿಕ ಸಮಾಧಿ ಸ್ಥಳದಲ್ಲಿ ಸರ್ಕಾರದಿಂದ ಉತ್ಸವ ನಡೆಸುವಂತೆ ವೀರರಾಣಿ ಕಿತ್ತೂರು ಚನ್ನಮ್ಮ ಸ್ಮರಣೋತ್ಸವ …
Read More »ಮನೆ ಗೋಡೆ ಕುಸಿತ: ತಪ್ಪಿದ ದುರಂತ
ಕಿತ್ತೂರು: ಇಲ್ಲಿಯ ಗುರುವಾರಪೇಟೆಯ ಶ್ರೀನಾಥ ಉಮರ್ಜಿ ಹಾಗೂ ಸಂಗೋಜಿ ಕುಟುಂಬಕ್ಕೆ ಸೇರಿದ ಮನೆಯ ಗೋಡೆ ಮಂಗಳವಾರ ಕುಸಿದು ಬಿದ್ದಿದೆ. ಮಲಗುವ ಕೋಣೆಯ ಗೋಡೆಯಾಗಿದ್ದರಿಂದ ಕುಟುಂಬಸ್ಥರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಉಮರ್ಜಿ ಮತ್ತು ಸಂಗೋಜಿ ಕುಟುಂಬದ ಎರಡೂ ಮನೆಗಳಿಗೂ ಇದೊಂದೇ ಗೋಡೆಯಾಗಿತ್ತು. ಸಂಗೋಜಿ ಅವರ ಮನೆಯಲ್ಲಿ ಸದ್ಯ ಯಾರೂ ವಾಸಿಸುತ್ತಿಲ್ಲ. ಆದರೆ ಮನೆ ಸೋರುವ ವಿಷಯ ಅವರಿಗೆ ತಿಳಿಸಲಾಗಿತ್ತು. ಬೇಗ ಗಮನ ಹರಿಸದ್ದರಿಂದ ಉಮರ್ಜಿ ಅವರ ಮನೆ ಕಡೆಗೆ ಗೋಡೆ ಬಾಗಿ ಬಿದ್ದಿದೆ …
Read More »ಮುಡಾ ಹಗರಣ : `CM ಸಿದ್ದರಾಮಯ್ಯ’ ವಿಚಾರಣೆಗೆ ಲೋಕಾಯುಕ್ತ ಸಿದ್ಧತೆ!
ಮುಡಾ ಹಗರಣ : `CM ಸಿದ್ದರಾಮಯ್ಯ’ ವಿಚಾರಣೆಗೆ ಲೋಕಾಯುಕ್ತ ಸಿದ್ಧತೆ! ಮೈಸೂರು : ಮುಡಾ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಈಗಾಗಲೇ ವಿಚಾರಣೆ ನಡೆಸುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯಲು ಸಿದ್ಧತೆ ನಡೆಸಲಾಗಿದೆ. ಮುಡಾ ಹಗರಣ ಸಂಬಂಧ ಪ್ರಕರಣದ 3 ನೇ ಆರೋಪಿ, ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ, 4 ನೇ ಆರೋಪಿ ಜಮೀನಿನ ಮಾಲೀಕ ದೇವರಾಜು ವಿಚಾರಣೆ ಮಾಡಲಾಗಿತ್ತು. ಶುಕ್ರವಾರ 2 ನೇ …
Read More »ದೀಪಾವಳಿ ಹಬ್ಬದ ಸಂದರ್ಭ14 ಪ್ರಮುಖ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿ
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ. ಈ ಹಿನ್ನೆಲೆ ಕರ್ನಾಟಕಕ್ಕೆ ಸಂಬಂಧಿಸಿದ 14 ಪ್ರಮುಖ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ ನೀಡಿದ್ದು, ” ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು 14 ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದೆ. * ಅಕ್ಟೋಬರ್ 25 ರಿಂದ ನವೆಂಬರ್ 24 ರವರೆಗೆ …
Read More »ಬೇಲೆಕೇರಿ ಅದಿರು ಅಕ್ರಮ ನಾಪತ್ತೆ ಕೇಸ್ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!
ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿದ್ದಂತ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿತ್ತು. ಇಂದು ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ …
Read More »