ಬೈಲಹೊಂಗಲ (ದೊಡ್ಡಬಾವೆಪ್ಪ ವೇದಿಕೆ): ‘ಪ್ರತಿ ವರ್ಷ ಬೈಲಹೊಂಗಲದಲ್ಲಿ ಉತ್ಸವ ನಡೆಯಬೇಕು. ಚನ್ನಮ್ಮನ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕ ಮಾಡಲು ಸರ್ಕಾರಗಳು ಶ್ರಮಿಸಬೇಕು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ಸಮಾಧಿ ಸ್ಥಳದಲ್ಲಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಸೋಮವಾರ ನಡೆದ ಬೈಲಹೊಂಗಲ ಉತ್ಸವ-2024ರ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಸಮಾರಂಭ ಉದ್ಘಾಟಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, …
Read More »Daily Archives: ಅಕ್ಟೋಬರ್ 29, 2024
ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿಎಲ್ಬಡಿ ಬ್ಯಾಂಕು ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿಎಲ್ಬಡಿ ಬ್ಯಾಂಕು ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಮಂಗಳವಾರದಂದು ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ದಿ. ಗೋಕಾಕ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ಪಿ.ಎಲ್.ಡಿ.) ನಿಂದ ಪ್ರಸ್ತುತ ಸಾಲಿನ ಲಾಭಾಂಶದಲ್ಲಿ …
Read More »ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ: ಕೇಸ್ ದಾಖಲಿಸಲು ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ
ಬೆಂಗಳೂರು: ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. ಇಂದು ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು,ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ …
Read More »ನಿಖಿಲ್ ಪರ ಎಚ್.ಡಿ.ಕುಮಾರಸ್ವಾಮಿ ಬಿರುಸಿನ ಪ್ರಚಾರ
ಬೆಂಗಳೂರು,ಅ.29- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮೂರನೇ ದಿನವಾದ ಇಂದು ತಮ್ಮ ಚುನಾವಣಾ ಪ್ರಚಾರವನ್ನು ಇಂದು ಮುಂದುವರೆಸಿದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಸಹ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ತಮ್ಮ ಪುತ್ರನ ಪರವಾಗಿ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು. ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನಿಂದ ಇಂದು ಬೆಳಿಗ್ಗೆ ಚುನಾವಣಾ ಪ್ರಚಾರ ಆರಂಭಿಸಿ ಮತಯಾಚನೆ ಕೈಗೊಂಡರು. ಬೆಳಿಗ್ಗೆ ಕೋಟೆಮಾರನಹಳ್ಳಿ, ಬೈರಾಪಟ್ಟಣ, ದೇವರಹಳ್ಳಿ, ವಳಗೆರೆದೊಡ್ಡಿ ಹಾಗೂ ಹೊಸೂರುದೊಡ್ಡಿ ಗ್ರಾಮಗಳಲ್ಲಿ ಮತಯಾಚನೆ …
Read More »ನಾವು ಗೆಲುವಿನ ಅಂತರ ನೋಡುತ್ತಿಲ್ಲ, ಗೆಲುವು ಮಾತ್ರ ನೋಡುತ್ತಿದ್ದೇವೆ : ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ
ಹಾವೇರಿ : ಮುಂದಿನ ತಿಂಗಳು ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.ಇಂದು ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ ಅವರು ಮಾತನಾಡಿ, ನಾವು ಗೆಲುವಿನ ಅಂತರ ನೋಡುತ್ತಿಲ್ಲ. ಗೆಲುವು ಮಾತ್ರ ನೋಡುತ್ತಿದ್ದೇವೆ ಎಂದು ತಿಳಿಸಿದರು. ಈ ಬಾರಿ ಶಿಗ್ಗಾವಿಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ಹಾವೇರಿ ಜಿಲ್ಲೆಯ …
Read More »ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಅ.30ಕ್ಕೆ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು, ಅಕ್ಟೋಬರ್ 29: ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಂಗಳವಾರರ (ಅಕ್ಟೋಬರ್ 29) ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ವಾದ ವಿವಾದ ಆಲಿಸಿದ ನ್ಯಾಯಾಧೀಶರು, ಅರ್ಜಿ ವಿಚಾರಣೆ ನಡೆಸಿ ತೀರ್ಪನ್ನು ನಾಳೆ ಬುಧವಾರ ಅಕ್ಟೋಬರ್ 30ಕ್ಕೆ ಕಾಯ್ದಿರಿಸಿದ್ದಾರೆ. ಅರ್ಜಿ ವಿಚಾರಣೆ ವೇಳೆ ನಟ ದರ್ಶನ್ ತೂಗುದೀಪ ಅವರ ಆರೋಗ್ಯ ಸಮಸ್ಯೆಯನ್ನು, ಅವರಿಗೆ ಚಿಕಿತ್ಸೆ ಅಗತ್ಯತೆ ಕುರಿತು …
Read More »30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್ ಅರ್ಜುನ್ʼ
ಮುಂಬಯಿ: ರೀ- ರಿಲೀಸ್ ಟ್ರೆಂಡ್‌ಗೆ ಬಾಲಿವುಡ್‌ನ (Bollywood) ಎವರ್ ಗ್ರೀನ್ ಸೂಪರ್ ಹಿಟ್ ಸಿನಿಮಾ ʼಕರಣ್ ಅರ್ಜುನ್ʼ (Karan Arjun) ಸೇರಿದೆ. ಸಲ್ಮಾನ್ ಖಾನ್ (Salman Khan), ಶಾರುಖ್ ಖಾನ್ (Shah Rukh Khan) ಜತೆಯಾಗಿ ನಟಿಸಿದ್ದ, ರಾಕೇಶ್ ರೋಷನ್ ನಿರ್ದೇಶನ (Rakesh Roshan) ಮಾಡಿದ್ದ ʼಕರಣ್ ಅರ್ಜುನ್ʼ ಸಿನಿಮಾ ಮತ್ತೆ ಥಿಯೇಟರ್‌ನಲ್ಲಿ ತೆರೆ ಕಾಣಲಿದೆ. 1995ರ ಜನವರಿಯಲ್ಲಿ ತೆರೆಗೆ ಬಂದಿದ್ದ ʼಕರಣ್ ಅರ್ಜುನ್ʼ ಆ ಕಾಲದಲ್ಲಿ ಬಾಕ್ಸಾಫೀಸ್‌ನಲ್ಲಿ ದೊಡ್ಡ …
Read More »ವಿಜಯಪುರದ ಬಳಿಕ ಯಾದಗಿರಿಗೂ ಕಾಲಿಟ್ಟ ವಕ್ಫ್ ವಿವಾದ: 1440 ರೈತರ ಕೃಷಿ ಭೂಮಿ ವಕ್ಫ್ ಬೋರ್ಡ್ ಗೆ ವರ್ಗಾವಣೆ
ಯಾದಗಿರಿ: ವಿಜಯಪುರದ ಬಳಿಕ ಯಾದಗಿರಿ ಜಿಲ್ಲೆಯಲ್ಲಿಯೂ ವಕ್ಫ್ ಬೋರ್ಡ್ ರೈತರ ಕೃಷಿ ಜಮೀನು ವಶಕ್ಕೆ ಪಡೆದಿದೆ ಎಂಬ ಆರೋಪ ಕೇಳಿಬಂದಿದೆ. ರೈತರ ಭೂಮಿ ಪಹಣಿ ಕಾಲಂ ನಂಬರ್ 11ರ ಮೇಲೆ ವಕ್ಫ್ ಎಂದು ನಮೂದಿಸಲಾಗಿದ್ದು, ಸಾವಿರಾರು ಎಕರೆ ಕೃಷಿ ಭೂಮಿ ವಕ್ಫ್ ಹೆಸರಿಗೆ ವರ್ಗಾವಣೆಯಾಗಿದೆ. ಇದರಿಂದ ರೈತರು ಬೀದಿಗೆ ಬಂದಿದ್ದು, ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ 1440 ರೈತರ ಕೃಷಿ ಭೂಮಿ ವಕ್ಫ್ ಬೋರ್ಡ್ ಗೆ ವರ್ಗಾಯಿಸಲಾಗಿದೆ. ಈ …
Read More »ಸಚಿವ ಪ್ರಲ್ಹಾದ ಜೋಶಿ ಸಹೋದರ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು,ಅಕ್ಟೋಬರ್ 29: ಲೋಕಸಭೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಮತ್ತಿತರರ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಅದೇ ರೀತಿ ಎಫ್‌ಐಆರ್ ರದ್ದುಗೊಳಿಸುವಂತೆ ಪೊಲೀಸರಿಗೆ ಸೂಚಿಸಿದೆ. ಬಿಜೆಪಿಯಿಂದ ಟಿಕೆಟ್ ಕೊಡಿಸುವ ಆರೋಪಕ್ಕಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಅವರ ಪುತ್ರ ಅಜಯ್ ಜೋಶಿ ಮತ್ತು ಎಸ್. …
Read More »ಬನಹಟ್ಟಿ- ಮುಧೋಳ ರಸ್ತೆ: ಸಂಚಾರ ದುಸ್ತರ
ರಬಕವಿ ಬನಹಟ್ಟಿ: ಬನಹಟ್ಟಿಯಿಂದ ಜಗದಾಳ, ನಾವಲಗಿ, ಕುಳಲಿ ಮಾರ್ಗವಾಗಿ ಮುಧೋಳ ನಗರಕ್ಕೆ ತೆರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರಿಂದ ಪ್ರಯಾಣಿಕರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ತರಕಾರಿ ಮಾರಲು ಬರುವ ಜನರಿಗೆ ತೊಂದರೆಯಾಗಿದೆ. ಬಹಳಷ್ಟು ಗುಂಡಿಗಳು ನಿರ್ಮಾಣವಾದ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕೆಂಪು ಬಟ್ಟೆಯನ್ನು ಸುತ್ತಿದ ಧ್ವಜಗಳನ್ನು ನಿಲ್ಲಿಸುತ್ತಿದ್ದಾರೆ. ಅದರಲ್ಲೂ ಜಗದಾಳದಿಂದ ಕುಳಲಿ ಗ್ರಾಮದ ಮಧ್ಯದ ರಸ್ತೆ ಹೆಚ್ಚು ಕೆಟ್ಟಿದೆ. ರಸ್ತೆಯಲ್ಲಿ ಅಪಾರ ಪ್ರಮಾಣದ ತಗ್ಗುಗಳು ನಿರ್ಮಾಣವಾಗಿವೆ. ರಾತ್ರಿ …
Read More »