ಗದಗ: ಗದಗ ನಗರದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಜೀರ್ ಸಾಬ್ ಬೈಲಹುಲಿ(44) ಮೃತಪಟ್ಟ ಕಾರ್ಮಿಕ. ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಪಲ್ಲೇದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಂಜುನಾಥ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ನಗರದ ಟಿಪ್ಪುಸುಲ್ತಾನ್ ಸರ್ಕಲ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಗ್ಯಾಸ್ ಪೈಪ್ ಲೈನ್ ಕಂಪನಿಯ ಜೆಸಿಬಿ ಸಿಬ್ಬಂದಿ ಎಡವಟ್ಟು ಮಾಡಿದ್ದರಿಂದ ಮಣ್ಣು ಕುಸಿದಿದೆ ಎಂದು ಆರೋಪಿಸಲಾಗಿದೆ. ನನ್ನ ಗಂಡನ …
Read More »Monthly Archives: ಅಕ್ಟೋಬರ್ 2024
2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ GSDP ಶೇ.10.2 ದಾಖಲು!
ಬೆಂಗಳೂರು: 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ ಜಿಎಸ್ ಡಿಪಿ ಶೇ.10.2 ರಷ್ಟು ಪ್ರಗತಿ ದಾಖಲಿಸಿದೆ ಎಂದು ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ನ್ಯಾಷನಲ್ ಸ್ಟಾಟಿಸ್ಟಿಕಲ್ ಎಸ್ಟಿಮೇಟ್ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ …
Read More »ನೇರ ನಗದು ಹಣದ ಬದಲಿಗೆ ಆಹಾರ ಕಿಟ್ ನೀಡಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ
ಬೆಂಗಳೂರು: ಡಿಬಿಟಿ ಪ್ರಾರಂಭವಾದ 2023ರ ಜುಲೈಯಿಂದ 2024ರ ಜುಲೈವರೆಗೆ 8433.11 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದೆ. ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ. ಪ್ರಸ್ತುತ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ DBT ನೀಡುತ್ತಿರುವುದನ್ನು ಮುಂದುವರೆಸಲಾಗುತ್ತದೆ. ಪಡಿತರ ಚೀಟಿ ಪರಿಷ್ಕರಣೆ …
Read More »ದೇಸಿ ಬೀಜ ಸಂರಕ್ಷಣೆಗೆ ಶ್ರಮಿಸುತ್ತಿರುವ ಉತ್ತರ ಕರ್ನಾಟಕ ಭಾಗದ ರೈತರ ಗುಂಪೊಂದು ಹುಬ್ಬಳ್ಳಿಯಲ್ಲಿ ಸಭೆ ನಡೆಸಿದ್ದು, ಅಕಾಡೆಮಿ ಅಥವಾ ಸಂಸ್ಥೆಗಳಿಗೆ ಜವಾಬ್ದಾರಿ ನೀಡುವ ಬದಲು ಸಮುದಾಯ ಬೀಜ ಬ್ಯಾಂಕ್ ಗಳ ಸ್ಥಾಪನೆಗೆ ರೈತರಿಗೆ ಅವಕಾಶ ಮಾಡಿಕೊಡುವಂತೆ ಸರ್ಕಾರಕ್ಕೆ ಮನವಿ
ಹುಬ್ಬಳ್ಳಿ: ದೇಸಿ ಬೀಜ ಸಂರಕ್ಷಣೆಗೆ ಶ್ರಮಿಸುತ್ತಿರುವ ಉತ್ತರ ಕರ್ನಾಟಕ ಭಾಗದ ರೈತರ ಗುಂಪೊಂದು ಹುಬ್ಬಳ್ಳಿಯಲ್ಲಿ ಸಭೆ ನಡೆಸಿದ್ದು, ಅಕಾಡೆಮಿ ಅಥವಾ ಸಂಸ್ಥೆಗಳಿಗೆ ಜವಾಬ್ದಾರಿ ನೀಡುವ ಬದಲು ಸಮುದಾಯ ಬೀಜ ಬ್ಯಾಂಕ್ ಗಳ ಸ್ಥಾಪನೆಗೆ ರೈತರಿಗೆ ಅವಕಾಶ ಮಾಡಿಕೊಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ರಾಜ್ಯ ಸರ್ಕಾರ ತನ್ನ 2024 ರ ಬಜೆಟ್‌ನಲ್ಲಿ ಮೊದಲ ಬಾರಿಗೆ ದೇಸಿ ಬೀಜ ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ಹಣ ಮೀಸಲಿಡುವ ವಾಗ್ದಾನ ಮಾಡಿತ್ತು. ಈ …
Read More »ಸಂಡೂರಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣರಿಗೆ `ಕೈ’ ಟಿಕೆಟ್; ಸಿಎಂ
ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ (By-Election) ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿವೆ. ಆದರೆ ಈವರೆಗೂ ಕಾಂಗ್ರೆಸ್ (Congress) ಯಾವುದೇ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ತುಕಾರಾಂ ಪತ್ನಿಗೆ …
Read More »ವರುಣನ ಅಬ್ಬರ. ಕೆರೆಯಂತಾದ ಪೊಲೀಸ್ ಠಾಣೆ
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸೋಮವಾರ (ಅ.21) ತಡರಾತ್ರಿ ವರುಣನ ಅಬ್ಬರ ಜೋರಾಗಿದ್ದು ಠಾಣೆಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿ ನಾಯಕನಕಟ್ಟೆ ಪೊಲೀಸ್ ಠಾಣೆ ಕೆರೆಯಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಾದ್ಯಂತ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಪೊಲೀಸ್ ಠಾಣೆಯೊಳಗೆ ನೀರು ನುಗ್ಗಿದ ಪರಿಣಾಮ ಕೆಲವು ದಾಖಲೆಗಳು ನೀರುಪಾಲಾಗಿದೆ, ಅಲ್ಲದೆ ಠಾಣೆ ಒಳಗಿನ ಲಾಕಪ್, PSI ರೂಂ, ಕಂಪ್ಯೂಟರ್ ರೂಮ್ ಗಳಿಗೆ ನೀರು ನುಗ್ಗಿದೆ. ಬೆಳಿಗ್ಗೆಯಿಂದ ಮಳೆ ನೀರು ಹೊರ ಹಾಕಲು …
Read More »ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
ಗದಗ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ವ್ಯಾಪ್ತಿಯ ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕ ದಿನೇಶ್ ಮೃತದೇಹ ಮಂಗಳವಾರ(ಅ.22) ತೀರದಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್ ಮೇಲಿಂದ ತುಂಗಭದ್ರಾ ನದಿಗೆ ಹಾರಿ ದಿನೇಶ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿ ತಿಳಿಸಿದೆ. ಮುಂಡರಗಿ ತಾಲೂಕು ಮುರಡಿ ತಾಂಡಾದ ಯುವಕ ದಿನೇಶ ಸಾಲದ ಸುಳಿಗೆ ಸಿಲುಕಿದ್ದು, ಇದರಿಂದಾಗಿ ಅಕ್ಟೋಬರ್ 20 (ಭಾನುವಾರ)ದಂದು ನದಿಗೆ ಹಾರಿದ್ದ. ನೀರಿನ ಸೆಳೆತ ಹೆಚ್ಚಾಗಿದ್ದರಿಂದ …
Read More »ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 28ಕ್ಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Case) ಜೈಲು ಸೇರಿರುವ ನಟ ದರ್ಶನ್ (Darshan) ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮಂಗಳವಾರ (ಅ.22ರಂದು) ನಡೆದಿದೆ. ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಜಾಮೀನಿಗೆ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟಿನಲ್ಲಿ ವಾದವನ್ನು ಮಂಡಿಸಿದ್ದಾರೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲರು, ದರ್ಶನ್ ಅವರ ಆರೋಗ್ಯ ವಿಚಾರವನ್ನು ನ್ಯಾಯಧೀಶರ ಮುಂದೆ ಪ್ರಸ್ತಾಪಿಸಿದ್ದಾರೆ. …
Read More »ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ
ಹಾವೇರಿ: ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಲ್ಲಿ ಮಂಗಳವಾರ(ಅ.22) ರಂದು ಸಂಭವಿಸಿದೆ. ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು. ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ. …
Read More »ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ
ಬೆಂಗಳೂರು: ಆಟವಾಡುವಾಗ ಅಣ್ಣ-ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ಷ ಲೇಔಟ್‌ನ ಜಾನ್ಸನ್(13) ಮತ್ತು ಮಹಾಲಕ್ಷ್ಮೀ(11) ಕೆರೆಗೆ ಬಿದ್ದಿರುವ ಅಣ್ಣ-ತಂಗಿ. ಸೋಮವಾರ ಸಂಜೆ ಸುಮಾರು 5.30ಕ್ಕೆ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಯಲ್ಲಿ ಈ ಘಟನೆ ನಡೆದಿದೆ. ಜಯಮ್ಮ ಎಂಬುವವರ ಮಕ್ಕಳಾದ ಜಾನ್ಸನ್, ಮಹಾಲಕ್ಷ್ಮೀ ಕೆರೆಯ ವಾಕಿಂಗ್ ಪಾತ್ ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ …
Read More »