ಮುಧೋಳ: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯದಿಂದ ಹೆಚ್ಚಿನ ಪ್ರಮಾಣ ನೀರು ಘಟಪ್ರಭಾ ನದಿಗೆ ಹರಿದುಬರುತ್ತಿರುವ ಕಾರಣ ತಾಲೂಕಿನ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಮುಳುಗಿ ಜನಸಂಚಾರ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿವೆ. ಮಿರ್ಜಿ-ಮಹಾಲಿಂಗಪುರ ಸಂಪರ್ಕ ರಸ್ತೆಯಲ್ಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿದ್ದು ಸದ್ಯ ವಾಹನ ಸಂಚಾರಕ್ಕೆ ಅಡಚಣೆಯಾಗಿಲ್ಲ. ಪರಿಸ್ಥಿತಿ ಇದೇರೀತಿ ಮುಂದುವರಿದರೆ ಸಂಜೆ ಅಥವಾ ನಾಳೆ ವೇಳೆಗೆ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಜೀರಗಾಳ ಸಮೀಪದ ಬ್ರಿಡ್ಜ …
Read More »Monthly Archives: ಅಕ್ಟೋಬರ್ 2024
ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು
ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ (Kalaburagi Central Jail) ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳು ಅಮಾನತ್ತುಗೊಂಡಿದ್ದಾರೆ. ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಜೈಲರ್ ಗಳಾದ ಸೈನಾಜ್ ನೀಗೆವಾನ್ ಮತ್ತು ಪಾಂಡುರಂಗ ಹರವಾಳ ಎನ್ನುವರು ಅಮಾನತ್ತುಗೊಂಡಿದ್ದಾರೆ. ಕರ್ತವ್ಯ ಲೋಪದಡಿ ಅಮಾನತು ಮಾಡಿ ಶನಿವಾರ (ಅ.19) ಆದೇಶ ಹೊರಡಿಸಲಾಗಿದೆ. ಅಮಾನತ್ತು ಮಾಹಿತಿಯನ್ನು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧಿಕ್ಷಕಿ ಡಾ.ಅನಿತಾ ಆರ್. ನೀಡಿದ್ದಾರೆ. …
Read More »2ಕೋಟಿ ರೂ. ಇಸಿದುಕೊಂಡು ವಂಚಿಸಿದ ಪ್ರಕರಣ, ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 2ಕೋಟಿ ರೂ. ಇಸಿದುಕೊಂಡು ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಅವರನ್ನು ಬೆಂಗಳೂರು ಪೊಲೀಸರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ಹುಬ್ಬಳ್ಳಿಗೆ ಕರೆತಂದಿದ್ದು, ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪಂಚನಾಮೇ ನಂತರದ ಪ್ರಕ್ರಿಯೆ ನಡೆಸುತ್ತಿದ್ದಾರೆ. ಎಸಿಪಿ ಚಂದನ್ ನೇತೃತ್ವದ ಬೆಂಗಳೂರು ಬಸವೇಶ್ವರ ನಗರ ಠಾಣೆ ಪೊಲೀಸರ ತಂಡ ಕೊಲ್ಹಾಪುರದಲ್ಲಿ ವಶಕ್ಕೆ ಪಡೆದ ನಂತರ ಹುಬ್ಬಳ್ಳಿಯ ಇಂದಿರಾ ಕಾಲೋನಿಯ …
Read More »ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರನ್ನು ಶನಿವಾರ(ಅ19) ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಮೂಲಗಳು 92 ರ ಹರೆಯದ ಕೃಷ್ಣ ಅವರ ದಾಖಲಾತಿಯನ್ನು ಖಚಿತಪಡಿಸಿದ್ದು, ಆದರೆ ಅವರುಯಾವ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. ಆಗಸ್ಟ್‌ನಲ್ಲಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 2009 ರಿಂದ 2012 ರವರೆಗೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ವಿದೇಶಾಂಗ ಸಚಿವರಾಗಿಯೂ ಕೃಷ್ಣ ಸೇವೆ ಸಲ್ಲಿಸಿದ್ದರು.
Read More »ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ
ಬೆಂಗಳೂರು: ಬಿಗ್‌ಬಾಸ್ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ. ಜಗದೀಶ್ ಹಾಗೂ ರಂಜಿತ್ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ. ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ …
Read More »E.D. ದಾಳಿಗೂ ಸಿಎಂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ
ಬೆಳಗಾವಿ: ಇಡಿ ದಾಳಿಗೂ ಸಿಎಂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಶನಿವಾರ (ಅ.19) ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಡಿ ದಾಳಿ ಮಾಡಿಲ್ಲ. ಮುಡಾ ಮೇಲೆ ಇಡಿ ದಾಳಿಯಾಗಿದೆ. ಮುಡಾ ಮೇಲಿನ ತನಿಖೆ ಆಗಬೇಕು ಎನ್ನುವದು ನಮ್ಮ ವಾದವಿದೆ. ಇಡಿ ಅವರು ವಿಚಾರಣೆ ಮಾಡುತ್ತಿದ್ದಾರೆ. ಅವರಿಗೆ ಏನು ಬೇಕೋ ಅದನ್ನು ತನಿಖೆ ಮಾಡುತ್ತಾರೆ. ಎಲ್ಲಾ ದಾಖಲೆಗಳು …
Read More »ಎಣ್ಣೆ ಒಳಗೆ ಹೋದ್ಮೇಲೆ ಬಾಡಿ ಶೇಕ್ ಆಗೋದ್ಯಾಕೆ?
ಮದ್ಯ (Alcohol) ಸೇವಿಸಿದ ನಂತರ ವ್ಯಕ್ತಿಯ ಒಟ್ಟಾರೆ ವರ್ತನೆಯಲ್ಲಿ ಬದಲಾವಣೆಯಾಗುವುದನ್ನು ನೀವು ಹೆಚ್ಚಾಗಿ ನೋಡಿದ್ದೀರಿ. ಅದರಲ್ಲೂ ಮದ್ಯಪಾನ ಮಾಡುವವರಿಗೆ ಇದರ ಬಗ್ಗೆ ಹೆಚ್ಚು ತಿಳಿಯುತ್ತದೆ. ಮದ್ಯ ಸೇವಿಸಿದ ಸ್ವಲ್ಪ ಸಮಯದ ನಂತರ ಕುಡಿಯುವವರ ಧ್ವನಿ (Voice) ಬದಲಾಗಲು ಪ್ರಾರಂಭಿಸುತ್ತದೆ. ವ್ಯಕ್ತಿಯು ನಡೆಯಲು ಕಷ್ಟಪಡುತ್ತಾನೆ ಮತ್ತು ಕ್ರಮೇಣ ದೇಹದ ನಿಯಂತ್ರಣವನ್ನು ಕಳೆದುಕೊಳ್ಳುತ್ತಾನೆ. ಇದು ಏಕೆ ಸಂಭವಿಸುತ್ತದೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಸ್ವಲ್ಪ ಸಮಯದ (Time) ನಂತರ ಆಲ್ಕೋಹಾಲ್ ಏಕೆ ಪರಿಣಾಮ …
Read More »ಎರಡನೇ ವಿಮಾನ ನಿಲ್ದಾಣಕ್ಕೆ ಈ ಸ್ಥಳವೇ ಅಂತಿಮ?
ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆ ವೇಗ ಪಡೆದುಕೊಂಡಿದೆ. ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ಮಾಡಲು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ, ಡಿಸಿಎಂ ಡಿ.ಕೆ. ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಮುಂದಿನ ವಾರದೊಳಗೆ ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಡಾಬಸ್‌ಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ …
Read More »ಮತ್ತೆ ನಾನೇ ಈ ರಾಜ್ಯದ ಸಿಎಂ ಆಗುತ್ತೇನೆ: H.D.K.
ಮತ್ತೆ ನಾನೇ ಈ ರಾಜ್ಯದ ಸಿಎಂ ಆಗುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ಮಂಡ್ಯ: 2028ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಜನರೇ ಸರ್ಕಾರವನ್ನು ತೆಗೆಯುತ್ತಾರೆ. ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಜನರು ಬಯಸಿದ್ರೆ ಮತ್ತೆ ಯಾಕೆ ನಾನು ಸಿಎಂ ಆಗಬಾರದು? ಜನ ಮತ್ತೆ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು …
Read More »ಅಕ್ಟೋಬರ್ 21ರಿಂದ ನವೆಂಬರ್ 20ರ ವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಕಾರ್ಯಕ್ರಮ
ಬೆಳಗಾವಿ: ಜಿಲ್ಲೆಯಲ್ಲಿ ಅಕ್ಟೋಬರ್ 21ರಿಂದ ನವೆಂಬರ್ 20ರ ವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ರಾಜೀವ ಕೂಲೇರ ತಿಳಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧ್ಯಕ್ಷತೆಯಲ್ಲಿ ನಡೆದ ಲಸಿಕಾಕರಣದ ಜಿಲ್ಲಾ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ‘ಜಿಲ್ಲೆಯಾದ್ಯಂತ ಲಸಿಕೆದಾರರು ಮಾಲೀಕರ ಮನೆ- ಮನೆಗಳಿಗೆ ತೆರಳಿ ಜಾನುವಾರಗಳಿಗೆ ಲಸಿಕೆಯನ್ನು ಉಚಿತವಾಗಿ ಹಾಕಲಿದ್ದಾರೆ. 20ನೇ …
Read More »