Breaking News

Monthly Archives: ಅಕ್ಟೋಬರ್ 2024

ನೇತ್ರ ತಪಾಸಣಾ ಶಿಬಿರ

ರಾಮದುರ್ಗ: ರಾಮದುರ್ಗದ ಅಂಧತ್ವ ನಿವಾರಣ ಸಂಸ್ಥೆ, ಗುರು ಮಹಿಪತಿರಾವ್‌ ನೇತ್ರ ಸೇವಾ ಸಂಸ್ಥೆ, ಹುಬ್ಬಳ್ಳಿಯ ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ರಾಮದುರ್ಗದ ಸಾರ್ವಜನಿಕ ಆಸ್ಪತ್ರೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಅ.19 ರಂದು ಬೆಳಿಗ್ಗೆ ನೇತ್ರ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರವನ್ನು ಇಲ್ಲಿನ ಪ್ಯಾರಿಬಾಯಿ ಪಾಲರೇಶಾ ಕಣ್ಣಿನ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.   ಅಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2ರ ತನಕ ತಪಾಸಣೆ ನಡೆಸಿ, ಅಗತ್ಯ …

Read More »

ಮಹಾರಾಷ್ಟ್ರ ಚುನಾವಣೆ: ಬೆಳಗಾವಿಯಲ್ಲಿ ದಾಖಲೆ ಇಲ್ಲದ ₹2.73 ಕೋಟಿ ಹಣ ವಶ

ಬೆಳಗಾವಿ: ದಾಖಲೆಗಳಿಲ್ಲದೇ ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ₹2.73 ಕೋಟಿ ಹಣವನ್ನು ಬೆಳಗಾವಿ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್‌ ವಾಹನದಲ್ಲಿ ಈ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ನಗರ ಪೊಲೀಸ್‌ ಆಯುಕ್ತಾಲಯಕ್ಕೆ ದೊರೆತಿತ್ತು. ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಮಾರ್ಗದರ್ಶನದಲ್ಲಿ, ಸಿಸಿಬಿ ಇನ್‌ಸ್ಪೆಕ್ಟರ್‌ ನಂದೀಶ್ವರ ಕುಂಬಾರ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಪದಮಂಡಿ ಗ್ರಾಮದ ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

ಕುಂದಾಪುರ/ಉಡುಪಿ/ಪುತ್ತೂರು: ವೆಚ್ಚ ಕಡಿತಕ್ಕೆ ಮುಂದಾಗಿರುವ ರಾಜ್ಯ ಸರಕಾರವು ಬಿಪಿಎಲ್‌ ಕಾರ್ಡ್‌ಗಳ ಪರಿ ಷ್ಕರಣೆಗೆ ಹೊರಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 54,093 ಮತ್ತು ಉಡುಪಿ ಜಿಲ್ಲೆಯಲ್ಲಿ 39,627 ಕಾರ್ಡ್‌ಗಳ ಪರಿ ಶೀಲನೆಗೆ ಸೂಚನೆ ಬಂದಿದ್ದು, ಈ ಪೈಕಿ ಶೇ. 2ರಷ್ಟು ಕಾರ್ಡ್‌ ರದ್ದಾಗುವ ಸಾಧ್ಯತೆ ಇದೆ. ಆದರೆ ಪೂರ್ಣ ಪ್ರಮಾಣದಲ್ಲಿ ಪರಿಶೀಲಿಸದೆ ರದ್ದು ಮಾಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಡ್‌ ಪರಿಷ್ಕರಣೆಗೆ ಮುಂದಾಗಿರು ವುದರಿಂದ ಪೂರಕ ದಾಖಲೆಯನ್ನು ನೀಡು ವುದಕ್ಕಾಗಿ ಪಡಿತರದಾರರು ಪರದಾಡಬೇಕಾದ ಸ್ಥಿತಿ ನಿರ್ಮಾಣ ವಾಗಿದ್ದು, ಅನ್ನಭಾಗ್ಯ ಅಕ್ಕಿ …

Read More »

5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್‌ ಪರೀಕ್ಷೆ ಇಲ್ಲ!

ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇನ್ನೂ ಇತ್ಯರ್ಥವಾಗದೆ ಇರುವ ಹಿನ್ನೆಲೆಯಲ್ಲಿ 5, 8, 9 ಹಾಗೂ 11ನೇ ತರಗತಿಗೆ ಈ ವರ್ಷ ಬೋರ್ಡ್‌ ಪರೀಕ್ಷೆ ನಡೆಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೋರ್ಡ್‌ ಪರೀಕ್ಷೆ ಬದಲು ಸಂಕಲಾತ್ಮಕ ಮೌಲ್ಯಮಾಪನ (ಎಸ್‌ಎ-2)ವನ್ನು 5, 8 ಹಾಗೂ 9ನೇ ತರಗತಿ ಮಾಡ ಲಾಗುವುದು. 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು …

Read More »

ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

ಸಿರುಗುಪ್ಪ: ಆಸ್ತಿಗಾಗಿ ತಂದೆಯೇ ಮಗಳನ್ನು ಕೊಲೆ ಮಾಡಲು ಮುಂದಾದ ಘಟನೆ ತಾಲೂಕಿನ ಅರಳಿಗನೂರು ಗ್ರಾಮದಲ್ಲಿ, ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.18ರ ಶುಕ್ರವಾರ ನಡೆದಿದೆ. ಅರಳಿಗನೂರು ಗ್ರಾಮದ ದೊಡ್ಡರಂಗಪ್ಪನಿಗೆ ಶಿವಲಿಂಗಮ್ಮ ಅವರು ಮೊದಲನೇ ಪತ್ನಿ ಹಾಗೂ ಜಯಮ್ಮ ಅರು ಎರಡನೇ ಪತ್ನಿಯಾಗಿದ್ದು, ಮೊದಲನೇ ಪತ್ನಿ ಶಿವಲಿಂಗಮ್ಮನಿಗೆ ಗೊತ್ತಿಲ್ಲದಂತೆ ದೊಡ್ಡ ರಂಗಪ್ಪ ತನ್ನ ಎರಡನೇ ಪತ್ನಿ ಜಯಮ್ಮಳ ಹೆಸರಿಗೆ ಆಸ್ತಿಯನ್ನು ಮಾಡಿಸಿದ್ದರಿಂದ ಶಿವಲಿಂಗಮ್ಮನ ಮಗಳು ಸೋಮಲಿಂಗಮ್ಮ ತನಗೆ ಅಸ್ತಿಯಲ್ಲಿ ಪಾಲು ಬರಬೇಕೆಂದು ಸಿರುಗುಪ್ಪದ …

Read More »

ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.

ನವದೆಹಲಿ: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಫ್ರಾಂಕ್‌ಫರ್ಟ್‌ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ಬಾಂಬ್ ಬೆದರಿಕೆ ಬರುತ್ತಿರುವುದು ಇದು ಹದಿನೈದನೇ ಪ್ರಕರಣವಾಗಿದ್ದು ಕೂಡಲೇ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ತಪಾಸಣೆ ನಡೆಸಿದ್ದಾರೆ ಆದರೆ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ಶುಕ್ರವಾರ(ಅ.19) …

Read More »

ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ನ ಸ್ವಿಚ್‌ ಒತ್ತಿದಾಗ ವಿದ್ಯುತ್ ತಗುಲಿ ಮಹಿಳೆಯೊಬ್ಬರು‌ ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಅ.15ರ ಮಂಗಳವಾರ ನಡೆದಿದೆ. ರೇಖಾ ರುದ್ರಪ್ಪ ಹುಡೇದ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಪತಿ, ಮೂವರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.   ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

ಬೆಳಗಾವಿ: ಬೆಳಗಾವಿ ಮತ್ತು ಬೆಂಗಳೂರು ಮಧ್ಯೆ ದಿನನಿತ್ಯ ಸಂಚರಿಸುವ ಇಂಡಿಗೋ ವಿಮಾನವನ್ನು ದಿನಾಂಕ 27 ರಿಂದ ಸ್ಥಗಿತಗೊಳಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವರಾದ ಕೆ. ಆರ್ ನಾಯ್ಡು ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.   ಬೆಳಗಾವಿ ಬೆಂಗಳೂರು ಬೆಳಗಾವಿ ಮಧ್ಯೆ ದಿನನಿತ್ಯ ಬೆಳಿಗ್ಗೆ ಸಂಚರಿಸುವ ಇಂಡಿಗೋ ಸಂಸ್ಥೆ ವಿಮಾನಯಾನ ಸೇವೆಯನ್ನು ರದ್ದು ಮಾಡಬಾರದು‌. ಇದರಿಂದ ಪ್ರಯಾಣಿಕರಿಗೆ ಬಹಳ ತೊಂದರೆಯಾಗಲಿದೆ ಎಂದರು. ಬೆಳಗಾವಿ …

Read More »

ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ‌ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.   ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಮುನ್ಬಾ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು. …

Read More »