Breaking News

Monthly Archives: ಅಕ್ಟೋಬರ್ 2024

ಕರ್ನಾಟಕದಲ್ಲಿ ಹೊಸ 11 ವೈದ್ಯಕೀಯ ಕಾಲೇಜು ನಿರ್ಮಾಣ

ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದೆ. ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ.   ಸದ್ಯ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 11 ಜಿಲ್ಲೆಗಳಲ್ಲಿ ಕಾಲೇಜುಗಳಿಲ್ಲ. ಆದ್ದರಿಂದ ಸರ್ಕಾರ …

Read More »

ನಕಲಿ ವೈದ್ಯರಿಗೆ ಕಡಿವಾಣ ಹಾಕಿ’

ರಾಮದುರ್ಗ: ‘ಪಟ್ಟಣವೂ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಿದೆ. ಇದರಿಂದ ಜನರಿಗೆ ಸ್ವಲ್ಪ ಪ್ರಮಾಣದ ಸಹಾಯವಾಗಿದ್ದರೂ ಪ್ರಾಣದ ಜೊತೆಗೆ ಆಟವಾಡುವ ನಕಲಿ ವೈದ್ಯರಿಗೆ ಕಡಿವಾಣ ಹಾಕಲಾಗುವುದು’ ಎಂದು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.   ರಾಮದುರ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ₹55 ಲಕ್ಷದ ವೆಚ್ಚದಲ್ಲಿ ನಿರ್ಮಿಸಿದ ಹೈಟೆಕ್‌ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿ, ‘ತರಬೇತಿ ಇಲ್ಲದೆ ನಕಲಿ ವೈದ್ಯರು ನೀಡುವ ಚಿಕಿತ್ಸೆ ಮತ್ತು ಔಷಧದಿಂದ ರೋಗಿಗಳಿಗೆ ತಾತ್ಕಾಲಿಕವಾಗಿ …

Read More »

ಕೃಷ್ಣೆ ಮಡಿಲ ಕುವರನಿಗೆ ‘ರಾಜ್ಯೋತ್ಸವ’ ಗರಿ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಶಿರಹಟ್ಟಿ ಮೂಲದವರಾದ, ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. 1955ರ ಆಗಸ್ಟ್‌ 1ರಂದು ತವನಪ್ಪ ಹಾಗೂ ಸಂಕವ್ವ ದಂಪತಿ ಪುತ್ರರಾಗಿ ಬಾಳಾಸಾಹೇಬ ಜನಿಸಿದರು. ಬಾಗಲಕೋಟೆಯ ಎಸ್‌.ಸಕ್ರಿ ಪದವಿಪೂರ್ವ ಕಾಲೇಜಿನಲ್ಲಿ ಭೂಗೋಳ ವಿಜ್ಞಾನ ವಿಷಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.   8 ಕಥಾ ಸಂಕಲನಗಳು, 10 ಕಾದಂಬರಿಗಳು, 6 ವಿಮರ್ಶಾ ಕೃತಿಗಳು, ಎರಡು ಸಂಶೋಧನಾ ಗ್ರಂಥ, ಎರಡು …

Read More »

ಚಿಕ್ಕೋಡಿ | ಯಮನವ್ವಗೆ ಸುವರ್ಣ ಕರ್ನಾಟಕ ಪ್ರಶಸ್ತಿ

ಚಿಕ್ಕೋಡಿ: ತಾಲ್ಲೂಕಿನ ಧುಳಗನವಾಡಿ ಗ್ರಾಮದ ಹಿರಿಯ ಬಯಲಾಟ ಕಲಾವಿದೆ ಯಮನವ್ವಾ ಕಲಾಚಂದ್ರ(86) ಅವರ ಕಲೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ಸುವರ್ಣ ಕರ್ನಾಟಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಯಮನವ್ವಾ ಅವರು ವಿವಿಧ ಕಲಾ ಪ್ರಕಾರಗಳಲ್ಲಿ 6 ದಶಕಗಳಿಂದ ಕಲಾಸೇವೆ ಸಲ್ಲಿಸಿದ್ದಾರೆ. 2015-16ನೇ ಸಾಲಿನಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಪ್ರಶಸ್ತಿ ಪಡೆದುಕೊಂಡ ಅವರಿಗೆ ಸುವರ್ಣ ಕರ್ನಾಟಕದ ಸಂಭ್ರಮದಲ್ಲಿ ಸುವರ್ಣ ಕರ್ನಾಟಕ ಪ್ರಶಸ್ತಿ ಲಭಿಸಿದ್ದು ಚಿಕ್ಕೋಡಿ ಭಾಗದ ಕಲಾವಿದರಿಗೆ …

Read More »

ಅಳ್ನಾವರ: ಧಾರಾಕಾರ ಮಳೆ

ಅಳ್ನಾವರ: ಬುಧವಾರ ಸಂಜೆ ಏಕಾಎಕಿ ಸುರಿದ ಮಳೆಯಿಂದ ರಕ್ಷಿಸಿಕೊಳ್ಳಲು ಹೊರ ವಲಯದ ಹೊಲ ಗದ್ದೆಗಳಲ್ಲಿ ಹಾಗೂ ರಾಶಿ ಹಾಕಿದ್ದ ಫಸಲನ್ನು ರಕ್ಷಿಲು ರೈತರು ಪರದಾಡಿದರು. ಸುಮಾರು ಒಂದು ತಾಸು ಧಾರಾಕಾರ ಮಳೆ ಸುರಿಯಿತು. ಪಟ್ಟಣದ ತೆಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿದ್ದವು. ಇಂದಿರಾ ನಗರ ಹಾಗೂ ನೆಹರೂ ನಗರ ಬಡಾವಣೆ ಹಾಗೂ ಮಿಲ್ಲತ್ ಶಾಲೆಯ ಹತ್ತಿರದ ರಸ್ತೆಗಳಲ್ಲಿ ನೀರು ನಿಂತಿತ್ತು. ಚರಂಡಿಗಳು ತುಂಬಿ ಹರಿದವು. ‌ಎಪಿಎಂಸಿ ಆವರಣದಲ್ಲಿ ಗೋವಿನ ಜೋಳ ಒಣಗಿಸಲು …

Read More »

ವಕ್ಫ್‌ ಆಸ್ತಿ ಗೊಂದಲ ನಿವಾರಿಸದಿದ್ದರೆ ಹೋರಾಟ: ರಾಜೂಗೌಡ

ಹುಣಸಗಿ: ಸುರಪುರ ಮತಕ್ಷೇತ್ರದ ಸೇರಿ ಯಾದಗಿರಿ ಜಿಲ್ಲೆಯಲ್ಲಿ ಸ್ವಂತ ಮಾಲಿಕತ್ವ ಹೊಂದಿದ ರೈತನ ಜಮೀನನ್ನು ವಕ್ಫ್‌ ಎಂದು ಪಹಣಿ ನಮೂದಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಇದನ್ನು ತಕ್ಷಣವೇ ಸರಿಪಡಿಸದಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೂಗೌಡ ಹೇಳಿದ್ದಾರೆ.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಹಲವೆಡೆ ರೈತರ ಪಹಣಿಯ ಕಾಲಂ ನಂ 11 ರಲ್ಲಿ ವಕ್ಫ್‌ ಎಂದು ನಮೂದಾಗಿರುವ ಸಂದರ್ಭದಲ್ಲಿ …

Read More »

‘ಬೈ ಎಲೆಕ್ಷನ್’ ನಂತರ ರಾಜ್ಯದಲ್ಲಿ ‘ರಾಜ್ಯಪಾಲರ ಆಳ್ವಿಕೆ’ ಜಾರಿ : HD K

ರಾಮನಗರ : ಕೆಲವು ದಿನಗಳ ಹಿಂದೆ 2028 ರ ವರೆಗೆ ಕಾಂಗ್ರೆಸ್ ಸರ್ಕಾರ ಇರಲ್ಲ, ಬಳಿಕ ನಾನೇ ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು, ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು ಬಳಿಕ ರಾಜ್ಯಪಾಲರ ಆಳ್ವಿಕೆ ಜಾರಿಯಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದರು. …

Read More »

ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

ಮುದ್ದೇಬಿಹಾಳ: ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಭಾಗ್ಯಾ ಮಹೇಶ ಮುರಾಳ ಎನ್ನುವವರ ಮನೆಯ ಮುಂದೆ ಇದ್ದ ಭಾರಿ ಎತ್ತರದ ತೆಂಗಿನ ಮರ ಏರಿ ತೆಂಗಿನ ಕಾಯಿ ಮತ್ತು ಒಣಗಿದ ಗರಿ ಕೆಳಗೆ ಇಳಿಸುವಾಗ ಮೇಲಿಂದ ಜಾರಿ ನೆಲಕ್ಕೆ ಬಿದ್ದು 21 ವರ್ಷದ ಅವಿವಾಹಿತ ಯುವಕ ಸಂತೋಷ ಶರಣಪ್ಪ ವಾಲಿಕಾರ ಸಾವನ್ನಪ್ಪಿರುವ ಘಟನೆ ಬುಧವಾರ(ಅ.30) ನಡೆದಿದೆ.   ಸಂತೋಷ ನೆರಬೆಂಚಿ ಗ್ರಾಮದವನಾಗಿದ್ದು ತನ್ನೂರಲ್ಲೇ ಕುರಿ ಕಾಯುತ್ತಿದ್ದ. ತೆಂಗಿನ ಮರ ಸ್ವಚ್ಛಗೊಳಿಸಿದರೆ ಕೂಲಿ ಸಿಗುತ್ತದೆ ಎನ್ನುವ …

Read More »

ದೇವೇಗೌಡರ ಆರೋಗ್ಯದ ಬಗ್ಗೆ ಅಪಹಾಸ್ಯ; ಡಿ.ಕೆ.ಸುರೇಶ್ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಂಬುಲೆನ್ಸ್‌ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. Contentsಜೆಡಿಎಸ್ ತಿರುಗೇಟುಆತ್ಮಸಾಕ್ಷಿ ಪ್ರಶ್ನೆ ಮಾಡಿಕೊಳ್ಳಿ ದೇವೇಗೌಡರ ಆರೋಗ್ಯದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ದೇವೇಗೌಡರು ಬರುತ್ತಿರುವುದು ಮೊಮ್ಮಗನ ಪಟ್ಟಾಭಿಷೇಕಕ್ಕೆ ಎನ್ನುತ್ತಿದ್ದಾರೆ. ಈ ರೀತಿಯ ಸಣ್ಣತನದ ಮಾತಿಗೆ ಕಾಲವೇ ಉತ್ತರ ಕೊಡುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಜೆಡಿಎಸ್ ತಿರುಗೇಟು ದೇವೇಗೌಡರು ಆಂಬ್ಯುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡುತ್ತಾರೆ …

Read More »

ವಕ್ಫ್ ಆಸ್ತಿ ವಿಚಾರ ಬಿಜೆಪಿ ಬೇಕೆಂದೇ ರಾಜಕೀಯ ಮಾಡಿ, ಇದನ್ನು ವಿವಾದ ಮಾಡುತ್ತಿದೆ:

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ಕಾಯ್ದೆಯಿಂದ ತೊಂದರೆಗೆ ಒಳಗಾದ ರೈತರ ಅಹವಾಲು ಆಲಿಸಲು ಬಿಜೆಪಿ ತಂಡ ಭೇಟಿ ನೀಡುತ್ತಿರುವ ಬೆನ್ನಲ್ಲೇ ಸರ್ಕಾರ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದೆ. ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿಲ್ಲ:ಕಾಫಿ-ಟೀ ಜತೆ ಮಾಹಿತಿ ಕೊಡಲು ಸೂಚನೆ:ನಮಗೆ ಯಾವ ರೈತರ ಜಮೀನು ಬೇಡ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೊಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ …

Read More »