Breaking News

Monthly Archives: ಅಕ್ಟೋಬರ್ 2024

ಕೆಪಿಟಿಸಿಎಲ್‌ನ 2,975 ಹುದ್ದೆ ಭರ್ತಿಗೆ ಅಧಿಸೂಚನೆ: ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 2,542 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಸೇರಿ ಒಟ್ಟು 2,975 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 215 ಕಲ್ಯಾಣ ಕರ್ನಾಟಕ ಜಿಲ್ಲೆಗಳ ಹುದ್ದೆಗಳು ಮತ್ತು 2,760 ಉಳಿದ ಜಿಲ್ಲೆಗಳ ಅಭ್ಯರ್ಥಿಗಳದ್ದಾಗಿದೆ. ಅರ್ಹ ಅಭ್ಯರ್ಥಿಗಳು ಅ.21ರಿಂದ ನ.20ರವರೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೆಪಿಟಿಸಿಎಲ್, ಬೆಸ್ಕಾಂ, ಚೆಸ್ಕಾಂ, ಹೆಸ್ಕಾಂ …

Read More »

ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಕಮಿಷನರ್ ನೇತೃತ್ವದಲ್ಲಿ ರೇಡ್

ಕಲಬುರ್ಗಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು.ಈ ವೇಳೆ ಅವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲೂ ಕೂಡ ಕೈದಿಗಳು ಮೊಬೈಲ್ ಗುಟ್ಕಾ ಸೇರಿದಂತೆ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಕಮಿಷನರ್ ಡಾ. ಶರಣಪ್ಪ …

Read More »

ಪರಮಾನಂದವಾಡಿ | ನವರಾತ್ರಿ: ಗಮನಸೆಳೆದ ಮೆರವಣಿಗೆ

ಪರಮಾನಂದವಾಡಿ: ‘ದುರ್ಗಾದೇವಿ ಮಹಿಮೆಯನ್ನು ಜನರಿಗೆ ತಿಳಿಸುವುದೇ ದೇವಿ ಪುರಾಣದ ಉದ್ದೇಶ’ ಎಂದು ಸುಟ್ಟಟ್ಟಿಯ ಜ್ಞಾನಯೋಗ ವನಶ್ರೀ ಆಶ್ರಮದ ಕಲ್ಮೇಶ್ವರ ಮಹಾರಾಜರು ಹೇಳಿದರು. ಸಮೀಪದ ನಿಲಜಿಯ ದುರ್ಗಾದೇವಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ದೇವಿ ಪಾರಾಯಣ ಮತ್ತು ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.   ದುರ್ಗಾದೇವಿ ಮೂರ್ತಿ ಮೆರವಣಿಗೆ ಗಮನಸೆಳೆಯಿತು. ದೇವಿ ಅವತಾರದಲ್ಲಿದ್ದ 108 ಮಹಿಳೆಯರ ಪಾದಪೂಜೆ ಮಾಡಿ, ಉಡಿ ತುಂಬಲಾಯಿತು. ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಶ್ರೀಮಂತ ಬಿರಡಿ, ತಮ್ಮಣ್ಣ ದೇವಮಾನೆ, ನೀಲಪ್ಪ ಕಾಂಬಳೆ, …

Read More »

ವರಾತ್ರಿ ಅಂಗವಾಗಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡಿದ ಭಕ್ತರು, 22 ಸಾವಿರ ಕೆ.ಜಿಗೂ ಹೆಚ್ಚಿನ ಪ್ರಮಾಣದ ಎಣ್ಣೆಯನ್ನು ದೀಪಕ್ಕೆ ಹಾಕಿ, ಭಕ್ತಿ ಸಮರ್ಪಿಸಿದ್ದಾರೆ.

ಬೆಳಗಾವಿ: ಈ ವರ್ಷ ಗಾಣದ ಎಣ್ಣೆ ದರ ದುಬಾರಿಯಾದರೂ ಭಕ್ತರ ಭಕ್ತಿ ಕುಂದಿಲ್ಲ. ನವರಾತ್ರಿ ಅಂಗವಾಗಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡಿದ ಭಕ್ತರು, 22 ಸಾವಿರ ಕೆ.ಜಿಗೂ ಹೆಚ್ಚಿನ ಪ್ರಮಾಣದ ಎಣ್ಣೆಯನ್ನು ದೀಪಕ್ಕೆ ಹಾಕಿ, ಭಕ್ತಿ ಸಮರ್ಪಿಸಿದ್ದಾರೆ.   ನವರಾತ್ರಿ ವೇಳೆ ಎರಡೂ ದೇವಾಲಯಗಳಲ್ಲಿ ದೀಪಗಳಿಗೆ ಎಣ್ಣೆ ಹಾಕುವ ಸಂಪ್ರದಾಯವಿದೆ. ಕಳೆದ ವರ್ಷ ಎಣ್ಣೆ ದರ ಕೆ.ಜಿಗೆ ₹ 105 ರಿಂದ …

Read More »

ಹೆಸರಿಗಷ್ಟೇ ಹೆದ್ದಾರಿ: ಸವಾರರಿಗೆ ಕಿರಿಕಿರಿ

ಕಾಗವಾಡ: ಇಲ್ಲಿಂದ ಅಥಣಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಮುರಗುಂಡಿಯವರೆಗಿನ 40 ಕಿ.ಮೀ. ರಸ್ತೆ ಸಂಪೂರ್ಣ ಹದಗಟ್ಟಿದೆ. ರಾಷ್ಟ್ರೀಯ ಹೆದ್ದಾರಿಯಾಗಿ ಇದು ಮೇಲ್ದರ್ಜೆಗೆ ಏರಿದ್ದರೂ, ಕಿರಿದಾಗಿರುವ ಕಾರಣ ವಾಹನ ಸವಾರರು ಅಂಗೈಯಲ್ಲಿ ಜೀವ ಹಿಡಿದುಕೊಂಡು ಸಂಚರಿಸುವಂತಾಗಿದೆ. ವಿಜಯಪುರದಿಂದ ಬೆಳಗಾವಿ, ಮಹಾರಾಷ್ಟ್ರದ ಮೀರಜ್‌, ಸಾಂಗ್ಲಿ, ಕೊಲ್ಹಾಪುರಕ್ಕೆ ಜನರು ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ವಿಶೇಷವಾಗಿ ಆಸ್ಪತ್ರೆಗೆ ತೆರಳಲು ಮತ್ತು ವ್ಯಾಪಾರಕ್ಕೆ ಹೋಗಲು ಈ ರಸ್ತೆಯೇ ಆಸರೆ. ಆದರೆ, ಹಾಳಾದ ರಸ್ತೆ ಸುಧಾರಣೆಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು …

Read More »

‘2ಎ’ ಮೀಸಲಾತಿ ಅ.18ರಂದು ಬೆಂಗಳೂರಿನಲ್ಲಿ ಧರಣಿ

ಬೆಳಗಾವಿ: ‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ನಮ್ಮ ಸಮುದಾಯಕ್ಕೆ ‘2ಎ’ ಮೀಸಲಾತಿ ನೀಡುವ ವಿಚಾರವಾಗಿ ಯಾವ ಪ್ರಗತಿಯಾಗಲಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗಾಗಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮುದಾಯದ ಎಲ್ಲ ಪದಾಧಿಕಾರಿಗಳು ಅ.18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.   ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ …

Read More »

ರೈತರು ಸುಖವಾಗಿದ್ದರೆ ಇಡೀ ದೇಶವೇ ಸುಖದಿಂದ ಇರುತ್ತದೆ :ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ದೇವರ ದಯೆಯಿಂದ ಈ ಬಾರಿ ಉತ್ತಮವಾಗಿ ಮಳೆಯಾಗುತ್ತಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಸುಖವಾಗಿದ್ದರೆ ಇಡೀ ದೇಶವೇ ಸುಖದಿಂದ ಇರುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ರವಿವಾರ ಸಂಜೆ ತಾಲ್ಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮಿ ದೇವರ ದರ್ಶನ ಪಡೆದು ಮಾತನಾಡಿದ ಅವರು, ದಸರಾ ಮುಗಿದು ದೀಪಾವಳಿ ಹಬ್ಬಕ್ಕೆ ಅಣಿಯಾಗುತ್ತಿರುವ ಈ ಸಂದರ್ಭದಲ್ಲಿ ದೇವರು ಎಲ್ಲರಿಗೂ ಒಳ್ಳೇಯದು ಮಾಡುತ್ತಾನೆ ಎಂದವರು …

Read More »

ಗೃಹಲಕ್ಷ್ಮೀ ಯೋಜನೆಯ ಹಣದಿಂದ ಗ್ರಂಥಾಲಯ ನಿರ್ಮಿಸಿದ ಮಲ್ಲವ್ವ

ಬೆಂಗಳೂರು: ದೇಶದ ಜಿಡಿಪಿಯ ಪಾಲಿನಲ್ಲಿ ಕರ್ನಾಟಕವು ಅಗ್ರ ಸ್ಥಾನ ಹೊಂದುವ ಮೂಲಕ ನಮ್ಮ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಹೊರ ಹೊಮ್ಮಿವೆ. ಗ್ಯಾರಂಟಿ ಯೋಜನೆಗಳು ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ತರುತ್ತಿರುವುದಕ್ಕೆ ಹಲವು ಉದಾಹರಣೆಗಳು ನಮ್ಮ ಮುಂದಿವೆ ಎಂದು ರಾಜ್ಯ ಕಾಂಗ್ರೆಸ್ ತಿಳಿಸಿದೆ. ಮಲ್ಲವ್ವ ಮೇಟಿ ಎಂಬ ಮಹಾತಾಯಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಯುವ ಪೀಳಿಗೆಯ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಾಗಿ ಗ್ರಂಥಾಲಯವನ್ನು ಸ್ಥಾಪಿಸಿ ನಾಡಿಗೆ ಮಾದರಿಯಾಗಿದ್ದಾರೆ. ಮಲ್ಲವ್ವ ಮೇಟಿಯವರ …

Read More »

ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

ಹುಬ್ಬಳ್ಳಿ: ಬಿಜೆಪಿ ಅನಾವಶ್ಯಕ ರಾಜಕಾರಣ ಮಾಡುತ್ತಿರುವುದು ಸೂಕ್ತವಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇಹುಬ್ಬಳ್ಳಿ ಗಲಭೆ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ. ಈ ಹಿನ್ನೆಲೆ ಸರ್ಕಾರ ಪರಮಾರ್ಶೆ ಮಾಡಿತು. ಈ ವಿಚಾರ ಸಚಿವ ಸಂಪುಟದ ಉಪ ಸಮಿತಿ, ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಹಾಗೂ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳುವಂತದಾಗಿದೆ ಎಂದು ಹೇಳಿದರು. ನಾವು ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿಲ್ಲ. ಬಿಜೆಪಿ ಆ ರೀತಿ ಬಿಂಬಿಸುವ …

Read More »

ಮಾಜಿ ಸಿಎಂ ‘ಉದ್ಧವ್ ಠಾಕ್ರೆ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಮುಖಂಡ ಉದ್ಧವ್ ಠಾಕ್ರೆ ಅವರನ್ನು ಅನಾರೋಗ್ಯದ ಹಿನ್ನೆಲೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಸೇನೆ ನಾಯಕ (ಯುಬಿಟಿ) ಉದ್ಧವ್ ಠಾಕ್ರೆ 2016 ರಲ್ಲಿ ಆಂಜಿಯೋಗ್ರಫಿಗೆ ಒಳಗಾದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು, ಇದೀಗ ಮತ್ತೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.   ಠಾಕ್ರೆ ಅವರ ಹೃದಯದ ಪರಿಧಮನಿಗಳಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ವೈದ್ಯಕೀಯ …

Read More »