ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ಪ್ರಕಟವಾಗಿದ್ದು, ಈ ಬಾರಿ 69 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ಅ.30) ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 69 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 01 ರಂದು ವಿಧಾನಸೌಧ ಮುಂಭಾಗದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದವರಿಗೆ …
Read More »Monthly Archives: ಅಕ್ಟೋಬರ್ 2024
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ
ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅಜ್ಜಂಪೀರ್ ಖಾದ್ರಿ ಇಂದು ನಾಮಪತ್ರ ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಚಿವ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ನ.13ರಂದು ನಡೆಯಲಿರುವ ಉಪಚುನವಣೆ ಹಿನ್ನೆಲೆಯಲ್ಲಿ ನಾಮಪತ್ರ ವಾಪಾಸ್ ಪಡೆಯಲು …
Read More »ಸರ್ಕಾರಿ ನೌಕರರಿಗೆ ನವೆಂಬರ್ 1ರಿಂದ ಈ ನಿಯಮ ಕಡ್ಡಾಯ
ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳಬೇಕು ಎಂದು ಆದೇಶಿಸಿದೆ. ಈಗಾಗಲೇ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಕೊರಳುದಾರವನ್ನು (ಟ್ಯಾಗ್) ನೀಡಲಾಗುತ್ತಿದೆ. ಇದನ್ನು ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಬುಧವಾರ ಆದೇಶವನ್ನು ಹೊರಡಿಸಿದೆ. ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಕಡ್ಡಾಯವಾಗಿ …
Read More »ಕೊನೆಗೂ ನಟ ದರ್ಶನ್‌ಗೆ ಜಾಮೀನು ಮಂಜೂರು, ಜೈಲಿನಿಂದ ಇಂದೇ ಬಿಡುಗಡೆ
ಬೆಂಗಳೂರು,ಅ.30- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ನಟ ದರ್ಶನ್‌ಗೆ ಚಿಕಿತ್ಸೆ ಪಡೆಯಲು ಹೈಕೋರ್ಟ್ ಆರು ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜೂ.11ರಂದು ಮೈಸೂರಿನಲ್ಲಿ ಬಂಧನಕ್ಕೊಳಪಟ್ಟಿದ್ದ ದರ್ಶನ್ ಅಲ್ಲಿಂದ ಈವರೆಗೆ ಅಂದರೆ 131 ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿದ್ದರು. ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಬಹುತೇಕ ಸಂಜೆಯೊಳಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾದ-ವಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು …
Read More »ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ
ಮಂಗಳೂರು: ಕನ್ನಡದ ಮೊಟ್ಟ ಮೊದಲ ಶಿಲಾ ಶಾಸನವೆಂಬ ಹೆಗ್ಗಳಿಕೆಯ “ಹಲ್ಮಿಡಿ ಶಾಸನ’ದ ಮಹತ್ವವನ್ನು ರಾಜ್ಯಾದ್ಯಂತ ಪ್ರಚುರಪಡಿಸುವ ಆಶಯದಿಂದ ಎಲ್ಲ ಜಿಲ್ಲೆಗಳಲ್ಲಿಯೂ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿ ಸ್ಥಾಪನೆಗೆ ಸರಕಾರ ಮುಂದಾಗಿದೆ. “ಕರ್ನಾಟಕ ಸಂಭ್ರಮ-50’ರ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸುವ ಮೂಲಕ ಈ ಸವಿನೆನಪನ್ನು ಶಾಶ್ವತವಾಗಿಡುವುದು ಯೋಜನೆಯ ಉದ್ದೇಶ. ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿ ರಚಿಸಲಾಗಿದೆ. ಎಲ್ಲ ಜಿಲ್ಲೆಗಳ ಜಿಲ್ಲಾಡಳಿತದ ವತಿಯಿಂದ …
Read More »ಗಾಂಜಾ, ಡ್ರಗ್ಸ್ ಮಾರಾಟ ಜಾಲಕ್ಕೆ ಅಂಕುಶ: ಪರಮೇಶ್ವರ
ಶಿವಮೊಗ್ಗ: ‘ರಾಜ್ಯದಲ್ಲಿ ಗಾಂಜಾ, ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಜಾಲಕ್ಕೆ ಸಂಪೂರ್ಣ ಅಂಕುಶ ಹಾಕಿ ಅದನ್ನು ಬುಡಸಮೇತ ಕಿತ್ತು ಹಾಕುತ್ತೇವೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ‘ಬೆಂಗಳೂರಿನಲ್ಲಿ ಶುಕ್ರವಾರ ₹1.50 ಕೋಟಿ ಮೌಲ್ಯದ ಗಾಂಜಾ ವಶಪಡಿಸಿಕೊಂಡು ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ವಾರದ ಹಿಂದೆ ₹ 5 ಕೋಟಿ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದರೆ ಆಯಾ ಠಾಣಾ ವ್ಯಾಪ್ತಿಯ ಅಧಿಕಾರಿಗಳು, …
Read More »ಭಾಗ್ಯಲಕ್ಷ್ಮಿ ಬಾಂಡ್ ಹಣ ಕೊಡಿ: ಬಿಎಸ್‌ವೈ
ಶಿವಮೊಗ್ಗ: ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷದ ಫಲಾನುಭವಿಗಳಿಗೆ ನೆಪ ಹೇಳದೇ ಹಣ ಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ (ಬಿಎಸ್‌ವೈ) ಆಗ್ರಹಿಸಿದ್ದಾರೆ. ‘ರಾಜ್ಯದ ಬಡ ಹೆಣ್ಣುಮಕ್ಕಳ ಬಾಳಿಗೆ ಬೆಳಕಾಗುವ ಉದ್ದೇಶದಿಂದ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ವೇಳೆ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಿದ್ದೆ. ಈಗ ಅದರ ಅನುಷ್ಠಾನದ ವಿಚಾರದಲ್ಲಿ ಸರ್ಕಾರ ಮೀನ-ಮೇಷ ಎಣಿಸುತ್ತಿದೆ’ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ. ಸರ್ಕಾರ ತಂದೆ-ತಾಯಿ ಇಬ್ಬರೂ ಮೃತಪಟ್ಟ ಕುಟುಂಬಗಳ …
Read More »22 ಅವಿರೋಧ, 11 ಸ್ಥಾನಕ್ಕೆ ಚುನಾವಣೆ
ಸವದತ್ತಿ: ಇಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಸೋಮವಾರ ನಡೆದ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆಯಲ್ಲಿ 34 ಸ್ಥಾನಗಳ ಪೈಕಿ 22 ಸ್ಥಾನಗಳು ಅವಿರೋಧ ಆಯ್ಕೆಯಾಗಿವೆ. ಐದು ವರ್ಷದಿಂದ ಸದಸ್ಯತ್ವ ಶುಲ್ಕ ಪಾವತಿಸದೇ ಇರುವ ನೀರಾವರಿ ಇಲಾಖೆಯಿಂದ ಅರ್ಹ ನೌಕರರಿಲ್ಲದ ಕಾರಣ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿಲ್ಲ. ಆರೋಗ್ಯ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿಭಾಗದ ಉಳಿದ 11 ಸ್ಥಾನಗಳಿಗೆ ಚುನಾವಣೆ ಜರುಗಿತು. 1,135 ಮತಗಳಿರುವ ಪ್ರಾಥಮಿಕ ಶಾಲಾ …
Read More »ಪಹಣಿಯಲ್ಲಿ ವಕ್ಫ್ ಹೆಸರು: ನ.5ರಂದು ತಹಶೀಲ್ದಾರ್ ಬಳಿ ಹಾಜರಾಗಲು ರೈತರಿಗೆ ಸೂಚನೆ
ಧಾರವಾಡ: ತಾಲ್ಲೂಕಿನ ಉಪ್ಪಿನಬೆಟಗೇರಿಯ ಕೆಲವು ರೈತರ ಪಹಣಿಯಲ್ಲಿ ‘ಜಮೀನು ವಕ್ಫ್ ಆಸ್ತಿಗೆ ಒಳಪಟ್ಟಿರುತ್ತದೆ’ ಎಂದು ನಮೂದಾಗಿರುವ ಕುರಿತು ಚರ್ಚಿಸಲು ನವೆಂಬರ್ 5ರಂದು ತಹಶೀಲ್ದಾರ್ ಕಚೇರಿಗೆ ಹಾಜರಾಗುವಂತೆ ರೈತರಿಗೆ ಮೌಖಿಕವಾಗಿ ತಿಳಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿ (ವಿಎ) ಚೈತನ್ಯ ಮಳಿಯೆ ಅವರು ಮಂಗಳವಾರ ರೈತರ ಮನೆಗಳಿಗೆ ತೆರಳಿ ಮಾಹಿತಿ ನೀಡಿದ್ದಾರೆ. ಜಮೀನಿನ ದಾಖಲೆಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಹಾಜರಾಗಲು ತಿಳಿಸಿದ್ಧಾರೆ. ‘ನಮ್ಮದು ಪಿತ್ರಾರ್ಜಿತ ಆಸ್ತಿ. ನಮ್ಮ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಎಂದು ಯಾಕೆ ನಮೂದಾಗಿದೆ …
Read More »ವಕ್ಫ್ ಆಸ್ತಿ ವಿವಾದ: ರೈತರಿಂದ ಅಹೋರಾತ್ರಿ ಧರಣಿ
ವಿಜಯಪುರ: ಜಿಲ್ಲೆಯ ರೈತರ ಜಮೀನಿನ ಉತಾರೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ವಿರೋಧಿಸಿ ರೈತ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ರಾತ್ರಿ ದೀಪಗಳನ್ನು ಬೆಳಗಿಸಿ, ಪ್ರತಿಭಟನೆ ನಡೆಸುವ ಮೂಲಕ ಆಹೋರಾತ್ರಿ ಧರಣಿ ಕೈಗೊಂಡರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಜಿಲ್ಲಾಧಿಕಾರಿಗಳ ಕಚೇರಿಗೆ ಸಂಜೆ ಆಗಮಿಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮ್ಮದ್ ಅವರ …
Read More »