ಬೆಂಗಳೂರು, ನವೆಂಬರ್ 02: ಕರ್ನಾಟಕ ಲೋಕಾಯುಕ್ತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 30/10/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/11/2024. ಗ್ರೂಪ್-ಸಿ ವೃಂದದ ಉಳಿಕೆ ಮೂಲ ವೃಂದದಲ್ಲಿ ಖಾಲಿಯಿರುವ 16 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು …
Read More »Daily Archives: ನವೆಂಬರ್ 2, 2024
ವಿದ್ಯಾರ್ಥಿನಿಯರಿಗಾಗಿ ಶೌಚಾಲಯ ನಿರ್ಮಿಸುವಲ್ಲಿ ದೇಶದಲ್ಲೇ ದೆಹಲಿ-ಗೋವಾ ಫಸ್ಟ್ : ಕರ್ನಾಟಕಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ವಿದ್ಯಾರ್ಥಿನಿಯರಿಗಾಗಿ ಶೌಚಾಲಯ ನಿರ್ಮಿಸುವಲ್ಲಿ ದೇಶದಲ್ಲೇ ದೆಹಲಿ-ಗೋವಾ ಫಸ್ಟ್ : ಕರ್ನಾಟಕಕ್ಕೆ ಎಷ್ಟನೇ ಸ್ಥಾನ ಗೊತ್ತಾ? ನವದೆಹಲಿ : ದೇಶದಾದ್ಯಂತ ಇರುವ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿ 12 ವರ್ಷಗಳು ಕಳೆದಿವೆ. ಇದರ ಹೊರತಾಗಿಯೂ ಗೋವಾ, ದೆಹಲಿ, ಚಂಡೀಗಢ ಮತ್ತು ಪುದುಚೇರಿ ಮಾತ್ರ ಈ ಆದೇಶವನ್ನು ಸಂಪೂರ್ಣವಾಗಿ ಅನುಸರಿಸುತ್ತಿವೆ. ಈಶಾನ್ಯ ರಾಜ್ಯಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಈ ಆದೇಶವನ್ನು ಜಾರಿಗೊಳಿಸುವ …
Read More »ಸಾಲಿಗ್ರಾಮ | ಸಾರಿಗೆ ಬಸ್‌ನಲ್ಲಿ ‘ಕನ್ನಡ ತೇರಿನ’ ಕಂಪು
ಸಾಲಿಗ್ರಾಮ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೆ.ಆರ್. ನಗರ ಬಸ್ ಡಿಪೊ ಚಾಲಕ ನಾಗೇಶ್ ಮತ್ತು ನಿರ್ವಾಹಕ ಶಿವನಂಜು ಅವರು ಕೆಎಸ್‌ಆರ್‌ಟಿಸಿ ಬಸ್‌ಗೆ ‘ಕನ್ನಡ ತೇರು’ ಎಂದು ನಾಮಕರಣ ಮಾಡಿ 9 ವರ್ಷಗಳಿಂದ ಭಾಷಾಭಿಮಾನ ಮೆರೆಯುತ್ತಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರದ ದಿಗ್ಗಜರ ಭಾವಚಿತ್ರವನ್ನು ಬಸ್ ಕಿಟಕಿ ಗಾಜುಗಳ ಮೇಲೆ ಅಂಟಿಸಿದ್ದಾರೆ. ರಾಷ್ಟ್ರಕವಿಗಳ ಭಾವಚಿತ್ರಗಳ ಜೊತೆಯಲ್ಲಿ ಯಾವ ಕೃತಿಗೆ ಪ್ರಶಸ್ತಿ ಬಂದಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ‘ಕನ್ನಡದ ತೇರು’ ಇಲ್ಲಿನ ಬಸ್ ನಿಲ್ದಾಣಕ್ಕೆ ಶುಕ್ರವಾರ …
Read More »Waqf Board ಆಸ್ತಿ ವಿಚಾರ ಸದ್ಯ ಮುಗಿದು ಹೋದ ಅಧ್ಯಾಯ: ಗೃಹಸಚಿವ
ಬೆಂಗಳೂರು: ವಕ್ಫ್ ಮಂಡಳಿ (Waqf Board) ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ (DR. G. Parameshwar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹಸಚಿವ ಪರಮೇಶ್ವರ (DR. G. Parameshwar), ವಕ್ಫ್ ಮಂಡಳಿ (waqf Board) ಆಸ್ತಿ ವಿಚಾರ ಸದ್ಯ ಮುಗಿದು ಹೋದ …
Read More »ಆರ್ಥಿಕ ಮುಗ್ಗಟ್ಟು ಮಧ್ಯೆಯೇ ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
ಬೆಳಗಾವಿ: ಆರ್ಥಿಕ ಮುಗ್ಗಟ್ಟಿನಲ್ಲಿ ಸಿಲುಕಿ ಒದ್ದಾಡುತ್ತಿರುವ ಮಹಾನಗರ ಪಾಲಿಕೆ ದುಂದು ವೆಚ್ಚ ಮಾಡುತ್ತಿದೆ. ಕಳೆದ ವರ್ಷ ಕರ್ನಾಟಕ ರಾಜ್ಯೋತ್ಸವ ವೇಳೆ ಪ್ರತಿಮೆಗಳಿಗೆ ಹೂವಿನ ಹಾರ ಹಾಕಿರುವ ಬಿಲ್ 37 ಸಾವಿರ ರೂ. ಪಾವತಿಸಿರುವುದು ಎಲ್ಲರೂ ಹೌಹಾರುವಂತೆ ಮಾಡಿದೆ. ನಗರದಲ್ಲಿ ಹಮ್ಮಿಕೊಳ್ಳುವ ಉತ್ಸವ, ಕಾರ್ಯಕ್ರಮ, ಜಯಂತಿಗಳಿಗೆ ಹಣ ಪೋಲು ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ದುಂದುವೆಚ್ಚ ಆಗಿರುವುದು ಕಂಡು ಬಂದಿದ್ದು, ಪಾಲಿಕೆ ಉತ್ತರಿಸಬೇಕಿದೆ. 2023ರ ಕರ್ನಾಟಕ ರಾಜ್ಯೋತ್ಸವದಲ್ಲಿ ಹೂವಿನ ಹಾರಕ್ಕೆ …
Read More »2024-29ನೇ ಸಾಲಿನ ಪ್ರವಾಸೋದ್ಯಮ ನೀತಿಗೆ ರಾಜ್ಯ ಸರ್ಕಾರ ಅನುಮೋದನೆ
ಉಡುಪಿ: ಪ್ರವಾಸೋದ್ಯಮ ನೀತಿ 2024-29ಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಅಂತರರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿಸಲು 1,349 ಕೋಟಿ ರೂ ಬಿಡುಗಡೆ ಮಾಡಿದೆ ಉಡುಪಿ ಜಿಲ್ಲಾ ಉಸ್ತುವಾರಿಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿ, ವರ್ಧಿತ ಸೇವೆಗಳು ಮತ್ತು ಸೌಲಭ್ಯಗಳ ಮೂಲಕ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ಕೇಂದ್ರವಾಗಿ ಪರಿವರ್ತಿಸುವ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು. ಕರ್ನಾಟಕದ ಹೂಡಿಕೆ …
Read More »2025 ರ ವೇಳೆಗೆ ಭಾರತದ ಸಾಲ 185.27 ಟ್ರಿಲಿಯನ್ ತಲುಪುತ್ತಿದೆ : ಸಿಎಂ
ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿ ಮೋದಿ ಟೀಕೆ ಮಾಡಿರುವ ವಿಚಾರವಾಗಿ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಬಿಜೆಪಿ ಅವಧಿಯಲ್ಲಿ ನಡೆದಿರುವಂತಹ 40% ಕಮಿಷನ್ ಭ್ರಷ್ಟಾಚಾರ ಪೀಡಿತದಿಂದ ಬಿಜೆಪಿ ಕರ್ನಾಟಕವನ್ನು ತೊರೆದಿದೆ ಎಂದು ತಿರುಗೇಟು ನೀಡಿದರು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಹಂಚಿಕೊಂಡಿರುವ ಅವರು ನಾವು ಭರವಸೆ ಕೊಟ್ಟಂತಹ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …
Read More »ರಾಜ್ಯದ 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾರ್ಥಿ ವೇತನ’ ಪಡೆಯಲು ‘ಇ-ಕೆವೈಸಿ’ ಕಡ್ಡಾಯ
ಬೆಂಗಳೂರು : ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷದೊಳಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (SSP portal) ಮೂಲಕ ಆನ್ಲೈನ್ ನಲ್ಲಿ …
Read More »ಆರು ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ಕರ್ನಾಟಕ ಕಳೆದ 50 ವರ್ಷಗಳಿಂದಲೂ ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಲೇ ಇದೆ.
ಆರು ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ಕರ್ನಾಟಕ ಕಳೆದ 50 ವರ್ಷಗಳಿಂದಲೂ ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಲೇ ಇದೆ. ಒಂದೆಡೆ ಬೆಳಗಾವಿಗಾಗಿ ಮಹಾರಾಷ್ಟ್ರದ ಕಿಡಿಗೇಡಿತನ ಇನ್ನೂ ನಿಂತಿಲ್ಲ. ಇನ್ನೊಂದೆಡೆ, ಗಡಿಭಾಗದ ಎಲ್ಲ ಗ್ರಾಮಗಳೂ ನಿರೀಕ್ಷಿತ ಅಭಿವೃದ್ಧಿ ಇಲ್ಲದೆ ಸೊರಗುತ್ತಿದೆ. ಗಡಿಭಾಗದ ಇಕ್ಕೆಡೆ ಗ್ರಾಮಗಳಲ್ಲೂ ಕನ್ನಡದ ಕಂಪನ್ನು ಸೂಸುವ ಕಾರ್ಯಗಳು ಆಗಬೇಕಿದೆ. ಬಹುಶಃ ಕರ್ನಾಟಕ ಎದುರಿಸುತ್ತಿರುವಷ್ಟು ಗಡಿಭಾಗದ ಸಮಸ್ಯೆಯನ್ನು ಇತರೆ ರಾಜ್ಯಗಳು ಅಷ್ಟೊಂದು ಎದುರಿಸುತ್ತಿಲ್ಲ. ಇದು ಹೊಸದೂ ಅಲ್ಲ. ಹಲವು ದಶಕಗಳಿಂದಲೂ …
Read More »ಹೊಸ `BPL, APL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆರಂಭ ಮಾಡಲಿದೆ. ಹೀಗಾಗಿ ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದರೇ ಈ ಕೆಳಗಿನ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ. ಕರ್ನಾಟಕ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು …
Read More »