Daily Archives: ನವೆಂಬರ್ 3, 2024

ವಿಧಾನಸೌಧ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ:ಸಿಎಂ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆಯನ್ನು ಸದ್ಯದಲ್ಲಿ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ‘ಕನ್ನಡ ರಾಜ್ಯೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದರು.   1983ರಲ್ಲಿ ಕನ್ನಡ ಕಾವಲು ಸಮಿತಿ ಅಧ್ಯನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೆಸರಿನಲ್ಲಿ ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಭಾಷೆ, ಸಂಸತಿ ಬಗ್ಗೆ ಅಭಿಮಾನ ಇರಬೇಕು. ಬೇರೆ ಭಾಷೆ ಕಲಿತರೂ …

Read More »

ದಾರಿ ಮಧ್ಯೆಯೇ ಕೆಟ್ಟು ನಿಂತ ನಟ ಗುರುಪ್ರಸಾದ್ ಶವ ಸಾಗಿಸುತ್ತಿದ್ದ ಆಂಬುಲೆನ್ಸ್

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ದಾರಿಯ ಮಧ್ಯೆಯೇ ಆಂಬುಲೆನ್ಸ್ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ಗುರುಪ್ರಸಾದ್ ಅವರು ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿದ್ದಂತ ಬಾಡಿಗೆ ಫ್ಲ್ಯಾಟ್ ನಲ್ಲಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು, ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ನಟ ಗುರುಪ್ರಸಾದ್ ಶವವನ್ನು ಸಾಗಿಸುತ್ತಿದ್ದಂತ …

Read More »

ಸ್ಪೇನ್ ದೇಶದಲ್ಲಿ ಕನ್ನಡ ತರಗತಿಗಳು ಆರಂಭ

ಬೆಂಗಳೂರು, ನವೆಂಬರ್ 03: 69ನೇ ಕರ್ನಾಟಕ ರಾಜ್ಯೋತ್ಸವವನ್ನು ಈ ಬಾರಿ ಕನ್ನಡ ಸಾಹಿತ್ಯ ಪರಿಷತ್ ‘ಸ್ಪೇನ್’ (Spain) ದೇಶದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಲ್ಲಿನ ರಚನಾತ್ಮಕ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಸ್ಪೇನ್ ದೇಶದ ರಾಯಭಾರಿ ಅವರು ಕನ್ನಡ ಚಟವಟಿಕೆಗಳಿಗೆ ಬೇಕಾದ ಸ್ಥಳಾವಕಾಶ ಒದಗಿಸುವುದಾಗಿ ತಿಳಿಸಿದ್ದಾರೆ ಎಂದು ಪರಿಷತ್ ಮಾಹಿತಿ ನೀಡಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ವಿದೇಶದಲ್ಲಿ ಕನ್ನಡ ಕಲರವವನ್ನು ಹಂಚುವ ತಮ್ಮ ಯೋಜನೆಯ ಅಂಗವಾಗಿ ಯುರೋಪ್ …

Read More »

ವಕ್ಫ್‌ ಬೋರ್ಡ್‌ ವಿವಾದ: ಕಾಂಗ್ರೆಸ್‌ ಪ್ರಭಾವಿ ಸಚಿವರಿಂದ ಸ್ಫೋಟಕ ಹೇಳಿಕೆ!

 ವಕ್ಫ್‌ ಬೋರ್ಡ್‌ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಈ ನಡುವೆ ಕಾಂಗ್ರೆಸ್‌ ಹಾಗೂ ಬಿಜೆಪಿಯ ನಡುವೆ ವಾಕ್ಸಮರ ತೀವ್ರವಾಗುತ್ತಿದೆ. ಇದರ ಬೆನ್ನಲ್ಲೇ ವಕ್ಫ್‌ ಬೋರ್ಡ್‌ ಹಾಗೂ ವಿವಾದದ ಬಗ್ಗೆ ಪ್ರಭಾವಿ ಸಚಿವರೊಬ್ಬರು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುವ ಸಂದರ್ಭದಲ್ಲೇ ವಕ್ಫ್‌ ಆಸ್ತಿ ವಿವಾದ ತೀವ್ರವಾಗಿದೆ. ಇದೀಗ ಕಾಂಗ್ರೆಸ್‌ ನಾಯಕರು ವಕ್ಫ್‌ ಬೋರ್ಡ್‌ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಡೆಯೇ ಬೊಟ್ಟು ಮಾಡಿದ್ದಾರೆ. …

Read More »

ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವರವಾದ ‘ಗೃಹಲಕ್ಷ್ಮಿ’ ಯೋಜನೆ

ಬೆಳಗಾವಿ, ನವೆಂಬರ್ 03: ಕರ್ನಾಟಕದ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ‘ಗೃಹಲಕ್ಷ್ಮಿ’ ಯೋಜನೆಯೂ ಒಂದು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದು ಲಕ್ಷಾಂತರ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿದೆ. ಯೋಜನೆಯ ನೆರವಿನೊಂದಿಗೆ ಹಲವು ಮಹಿಳೆಯರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಈಗ ಇಂತಹ ಯಶಸ್ಸಿನ ಸುದ್ದಿಯೊಂದು ಬೆಳಗಾವಿ ಜಿಲ್ಲೆಯಿಂದ ಬಂದಿದೆ. ಬೆಳಗಾವಿ ಜಿಲ್ಲೆಯ ಕುಕಡೊಳ್ಳಿ ಗ್ರಾಮದ ತಾಯವ್ವ ಕ ಲಕಮೋಜಿ ಎಂಬ ಮಹಿಳೆ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು, ಮಿರ್ಚಿ ಮಿಕ್ಸರ್ ಮೆಷಿನ್ …

Read More »

ಮಠ ಗುರುಪ್ರಸಾದ್‌ “ನಿಗೂಢ ಸಾವು”: ಇರುವ ಅನುಮಾನಗಳೇನು ?

ಕನ್ನಡ ಚಿತ್ರರಂಗದಲ್ಲಿ ಹೊಸ ಮಾದರಿಯ, ಹಾಸ್ಯ ಹಾಗೂ ಭಿನ್ನ ಸಿನಿಮಾಗಳನ್ನು ಕೊಟ್ಟಿದ್ದ ಗುರುಪ್ರಸಾದ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಿನಿಮಾರಂಗದಲ್ಲಿ ಸೋಲು – ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿದವರಲ್ಲಿ ಗುರುಪ್ರಸಾದ್‌ ಅವರು ಸಹ ಒಬ್ಬರು.   ಗುರುಪ್ರಸಾದ್‌ ಕನ್ನಡದಲ್ಲಿ ಐದು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಗುರುಪ್ರಸಾದ್ ಕೇವಲ ನಿರ್ದೇಶಕ ಮಾತ್ರವಲ್ಲ. ಅವರು ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿದ್ದರು. ನಟ ಹಾಗೂ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಬಾಲಚಂದ್ರ ಜಾರಕಿಹೊಳಿ ತೀರ್ಥ ಕ್ಷೇತ್ರಗಳ ದರ್ಶನ

ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಬಾಲಚಂದ್ರ ಜಾರಕಿಹೊಳಿ ತೀರ್ಥ ಕ್ಷೇತ್ರಗಳ ದರ್ಶನ ಜೋಗುಳ ಭಾವಿ ಮತ್ತು ರೇಣುಕಾ ಯಲ್ಲಮ್ಮ ದೇಸ್ಥಾನಕ್ಕೆ ಭೇಟಿ ನೀಡಿ‌ ದೇವರ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ   ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ನಿಮಿತ್ತ ಅರಭಾವಿ ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉತ್ತರ ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮಗುಡ್ಡಕ್ಕೆ ತೆರಳಿ ಶ್ರೀ ಕ್ಷೇತ್ರದ …

Read More »

ಮುಡಾದ ಮತ್ತೊಂದು ಹಗರಣ ಬಯಲಿಗೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದ ಮತ್ತೊಂದು ಹಗರಣ ಬಯಲಾಗಿದೆ. ಅಧಿಕಾರಿಗಳೇ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಪ್ರಾಧಿಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ವಂಚನೆ ಪ್ರಕರಣದಲ್ಲಿ ಪ್ರಾಧಿಕಾರದ ಹೊರಗುತ್ತಿಗೆ ನೌಕರರು, ಅಧಿಕರಿಗಳು, ಬ್ಯಾಂಕ್ ಸಿಬ್ಬಂದಿಗಳು ಶಾಮೀಲಾಗಿದ್ದಾರೆ ಎಂದು ಮೈಸೂರು ಉಳಿಸಿ ಹೋರಾಟಗಾರರ ವೇದಿಕೆ ಆರೋಪಿಸಿದೆ.   ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಶಾಖೆಯ ಕೆಲ ಸಿಬ್ಬಂದಿಗಳು ಹಾಗೂ ಕೆಲ ಅಧಿಕಾರಿಗಳು ಮುಡಾ ಕಂದಾಯ ಇಲಾಖೆಯ ವಿವಿಧ ಸೇವೆಗಳಿಗಾಗಿ 93 ಗ್ರಾಹಕರಿಂದ …

Read More »

ಜಮೀರ್ ಅಹ್ಮದ್ ಗಡಿಪಾರು ಮಾಡುವಂತೆ ಬಿ.ವೈ. ವಿಜಯೇಂದ್ರ ಆಗ್ರಹ

ಚಿತ್ರದುರ್ಗ: ಶಾಂತಿಯುತವಾದ ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ರಿಂದ ಬೆಂಕಿ ಹಚ್ಚುವ ಕೆಲಸಗಳು ನಡೆಯುತ್ತಿವೆ. ಮೊದಲು ಜಮೀರ್ ಅಹ್ಮದ್ ರನ್ನು ಗಡಿಪಾರು ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಮೊದ್ಸಳೆ ಕಣ್ಣೀರು ಹಾಕುತ್ತಿದ್ದಾರೆ. ರೈತರಿಗೆ ನೀಡಿರುವ ವಕ್ಫ್ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ …

Read More »

ಭಕ್ತರಿಗೆ ತಿಳಿಸದೇ ಮಠದ ಜಮೀನು ಮಾರಾಟ ಮಾಡಿದ ಆರೋಪ : ಸ್ವಾಮೀಜಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು!

ತುಮಕೂರು : ಭಕ್ತರಿಗೆ ತಿಳಿಸದೆ ಮಠದ ಜಮೀನನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ತಾಲೂಕಿನ ಹೆಬ್ಬೂರು ಬಳಿಯಿರುವ ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಹೌದು ಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಶಿವ ಪಂಚಾಕ್ಷರಿ ಸ್ವಾಮೀಜಿ. ಮಠದಲ್ಲಿ ಏನೇ ನಿರ್ಧಾರ ಮಾಡಬೇಕೆಂದರೂ ಮಠದ ಭಕ್ತರು , ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು. ಆದರೆ ಸ್ವಾಮೀಜಿ ಗ್ರಾಮಸ್ಥರಿಗೆ ತಿಳಿಯದಂತೆ ಮಠಕ್ಕೆ ಸೇರಿದ ಹತ್ತಾರು ಎಕರೆ ಜಮೀನು ಮಾರಾಟ ಮಾಡಿರುವ ಆರೋಪ …

Read More »