ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗುರು ಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್ ಅಭಿನಯದ ಮಠ ಸಿನಿಮಾ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು. ಹಲವಾರು ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಗುರುಪ್ರಸಾದ್, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುರುಪ್ರಸಾದ್ ಇತ್ತೀಚೆಗೆ ಎರಡನೇ ವಿವಾಹವಾಗಿದ್ದರು. …
Read More »Daily Archives: ನವೆಂಬರ್ 3, 2024
ರಾಷ್ಟ್ರಕ್ಕೆ ಅನ್ನ ನೀಡುವ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲು ಸಂಚು:ಮುನೇನಕೊಪ್ಪ
ಹುಬ್ಬಳ್ಳಿ: ತುಷ್ಟೀಕರಣ ನೀತಿ ಮುಂದುವರಿದರೆ ಮತ್ತೊಂದು ರೈತರ ದಂಗೆ ನಡೆಯುವ ಸಾಧ್ಯೆತೆಯಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನವಲಗುಂದದ ರೈತರು ತಮ್ಮ ಜಮೀನು, ಮನೆ ಮತ್ತು ಖಾಲಿ ಆಸ್ತಿ ಸಂಬಂಧ ಅಧಿಕೃತ ದಾಖಲೆಗಳನ್ನು ಪಡೆಯುವಂತೆ ಅವರು ಒತ್ತಾಯಿಸಿದರು. ರಾಷ್ಟ್ರಕ್ಕೆ ಅನ್ನ ನೀಡುವ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲು ಸಂಚು ಮಾಡುತ್ತಿದ್ದಾರೆ. ಸರಕಾರದ ಸುಗ್ರೀವಾಜ್ಞೆ ವಿರುದ್ಧ ನವಲಗುಂದದ ರೈತರು ಈ ಹಿಂದೆ ನಡೆಸಿದ …
Read More »ಸ್ಕೂಟರ್’ನಲ್ಲಿ ಸಾಗುತ್ತಾ ಪಟಾಕಿ ಹಚ್ಚಿ ಪುಂಡಾಟ: ಇಬ್ಬರ ಬಂಧನ
ಬೆಂಗಳೂರು: ಸ್ಕೂಟರ್ ನಲ್ಲಿ ಸಾಗುತ್ತಾ ಪಟಾಕಿ ಸಿಡಿಸಿ ಪುಂಡಾಟ ಪ್ರದರ್ಶಿಸಿದ ಇಬ್ಬರು ವ್ಯಕ್ತಿಗಳನ್ನು ಹೆಣ್ಣೂರು ಸಂಚಾರಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಸವಾರನನ್ನು ಕಾಡುಗೊಂಡನಹಳ್ಳಿ ನಿವಾಸಿ ಎಸ್ ಆದಿತ್ಯ ಮತ್ತು ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಿವಾಸಿ ವಿ ಅಕ್ಷಯ್ ಕುಮಾರ್ (18) ಎಂದು ಗುರುತಿಸಲಾಗಿದೆ. ಆದಿತ್ಯ ಪಿಯು ವಿದ್ಯಾರ್ಥಿಯಾಗಿದ್ದರೆ, ಅಕ್ಷಯ್ ಎಂಜಿನಿಯರಿಂಗ್ ವಿದ್ಯಾರ್ಥಿ. ಆದಿತ್ಯ ಸ್ಕೂಟರ್ ಓಡಿಸುತ್ತಿದ್ದು, ಈ ವೇಳೆ ಹಿಂಬದಿಯಲ್ಲಿ ಕುಳಿತಿದ್ದ ಅಕ್ಷಯ್ ಪಟಾಕಿಗಳನ್ನು ಸಿಡಿಸಿ ರಸ್ತೆಗೆ ಎಸೆದು ಪುಂಡಾಟ …
Read More »ವಕ್ಫ್ ವಿವಾದ: ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆದು, ಪಹಣಿ ತಿದ್ದುಪಡಿ ರದ್ದು ಮಾಡಿ- ಸಿಎಂ ಖಡಕ್ ಸೂಚನೆ!
ಬೆಂಗಳೂರು: ವಕ್ಫ್ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು. ಈ ವೇಳೆ ವಕ್ಫ್ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು …
Read More »ಹುಬ್ಬಳ್ಳಿಯಿಂದ ಬೆಂಗಳೂರಿಗೆ ಏಕಮುಖ ವಿಶೇಷ ರೈಲು ಸಂಚಾರ
ಹುಬ್ಬಳ್ಳಿ: ದೀಪಾವಳಿ ಹಬ್ಬದ ನಂತರದ ಅವಧಿ ಮತ್ತು ವಾರಾಂತ್ಯದಲ್ಲಿ ಹೆಚ್ಚಿದ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು ನವೆಂಬರ್ 3 ರಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಿಂದ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ. ರೈಲು ಸಂಖ್ಯೆ 07357 ಎಸ್‌ಎಸ್‌ಎಸ್ ಹುಬ್ಬಳ್ಳಿ-ಎಸ್‌ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ಏಕಮುಖ ವಿಶೇಷ ರೈಲು ಆಗಿದೆ. ನ.3ರಂದು ಮಧ್ಯಾಹ್ನ 12ಗಂಟೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು, ಹಾವೇರಿ (1.10/1.12pm), ಹರಿಹರ …
Read More »ಪದಚ್ಯುತಿಗೆ ಕಾಯ್ತಿದ್ದಾರೆ, ಕುರ್ಚಿ ಭದ್ರಪಡಿಸಿಕೊಳ್ಳಿ: ವಿಜಯೇಂದ್ರಗೆ ಗುಮ್ಮಿದ ಟಗರು
ಬೆಂಗಳೂರು, ನವೆಂಬರ್ 02: ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಮುಂದುವರಿದ ಭಾಗವಾಗಿ ಉಭಯ ಪಕ್ಷಗಳ ನಾಯಕರ ಚರ್ಚೆಗೆ ಆಹ್ವಾನ ನೀಡುತ್ತಿದ್ದಾರೆ. ಭ್ರಷ್ಟಾಚಾರ, ಹೇಳಿಕೆಗಳು, ಸುಳ್ಳು ಆರೋಪ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ನಮ್ಮ ಚಿಂತೆ ಬಿಡಿ, ಬಿಜೆಪಿ ನಾಯಕರ ಬಹಿರಂಗ ಹೇಳಿಕೆಗಳಿಗೆ ಮೊದಲು ಪ್ರತಿಕ್ರಿಯಿಸಿ ಎಂದಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿವೈ …
Read More »ಬಿಜೆಪಿ ಅಧೋಗತಿಗೆ ತಳ್ಳಿದ್ದ ಸಾರಿಗೆ ನಿಗಮಗಳಿಗೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ
ಬೆಂಗಳೂರು, ನವೆಂಬರ್ 02: ಶಕ್ತಿ ಯೋಜನೆ ಮರು ಪರಿಶೀಲಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುತ್ತಿದ್ದಂತೆ ರಾಜ್ಯಾದ್ಯಂತೆ ಶಕ್ತಿ ಯೋಜನೆ ಕಿಡಿ ಹೊತ್ತಿಕೊಂಡಿದೆ. ಆರೋಪ, ಪ್ರತ್ಯಾರೋಪಗಳ ಮಧ್ಯೆ ಸವಾಲೆಸೆಯುವುದು, ಬಹಿರಂಗ ಚರ್ಚೆಗೆ ಆಹ್ವಾನ ನಡೆದಿದೆ. ಈ ಮಧ್ಯೆ ಶಕ್ತಿ ಯೋಜನೆಗಳ ಬಗ್ಗೆ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ. ಟ್ವೀಟ್ ಮೂಲಕ ಕಿರಿ ಕಾರಿರುವ ಸಚಿವ ರಾಮಲಿಂಗಾ ರೆಡ್ಡಿ ಅವರು, ಆರ್.ಅಶೋಕ್ ಅವರೆ …
Read More »ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ವಿಮಾ ರಕ್ಷಣೆ
ಕೊಟ್ಟಾಯಂ: ಈ ತಿಂಗಳಾಂತ್ಯದಲ್ಲಿ ಆರಂಭವಾಗಲಿರುವ ಶಬರಿಮಲೆ (ಮಂಡಲಂ-ಮಕರವಿಳಕ್ಕು) ಯಾತ್ರೆಯ ಅವಧಿಯಲ್ಲಿ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳು ಐದು ಲಕ್ಷ ರೂಪಾಯಿಗಳ ಉಚಿತ ವಿಮಾ ರಕ್ಷಣೆಯನ್ನು ಪಡೆಯಲಿದ್ದಾರೆ. ಈ ವರ್ಷ ಶಬರಿಮಲೆಗೆ ಬರುವ ಎಲ್ಲಾ ಯಾತ್ರಾರ್ಥಿಗಳಿಗೆ ದೇಗುಲವನ್ನು ನಿರ್ವಹಿಸುವ ಅಪೆಕ್ಸ್ ದೇವಸ್ಥಾನದ ಸಂಸ್ಥೆಯಾದ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ವಿಮಾ ಸೌಲಭ್ಯವನ್ನು ಒದಗಿಸಲಿದೆ ಎಂದು ರಾಜ್ಯ ದೇವಸ್ವಂ ಸಚಿವ ವಿ.ಎನ್. ವಾಸವನ್ ಹೇಳಿದ್ದಾರೆ. ಎಲ್ಲಾ ಯಾತ್ರಾರ್ಥಿಗಳಿಗೆ ಸುಗಮ ದರ್ಶನವಾಗಲು ಬೆಟ್ಟದ ದೇಗುಲದಲ್ಲಿ …
Read More »ಹಾಸನಾಂಬೆ ದೇಗುಲಕ್ಕೆ ಹರಿದು ಬಂತು ದಾಖಲೆಯ 9 ಕೋಟಿಗೂ ಅಧಿಕ ಆದಾಯ
ಹಾಸನ : ಹಾಸನದ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನ ಇಂದು ಅಂತ್ಯವಾಗಲಿದೆ. ಈ ವೇಳೆ ಕಳೆದ 11 ದಿನಗಳಲ್ಲಿ ದಾಖಲೆ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನವನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಹಾಸನಾಂಬೆ ದೇಗುಲಕ್ಕೆ 9 ಕೋಟಿಗೂ ಅಧಿಕ ಆದಾಯ ಬಂದಿದೆ. ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಲು, ಕ್ಷಣಗಣನೆ ಶುರುವಾಗಿದೆ.ಈಗಾಗಲೇ ಭಕ್ತರಿಂದ ದೇವಾಲಯ ಆವರಣ ತುಂಬಿ ತುಳುಕುತ್ತಿದೆ.ಬೆಳಿಗ್ಗೆ 11.50ರ ನಂತರ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ. ವಿಶ್ವರೂಪದ ದರ್ಶನ ಬಳಿಕ …
Read More »