ಶಹಾಪುರ: ಶನಿವಾರ(ನ.2) ಸಂಜೆ ತಾಲೂಕಿನ ದೋರನಹಳ್ಳಿ ಗ್ರಾಮ ಬಳಿ ಶಹಾಪುರ – ಯಾದಗಿರಿ ಹೆದ್ದಾರಿಯಲ್ಲಿ ವ್ಯಕ್ತಿಯೋರ್ವನ ಕಗ್ಗೊಲೆ ನಡೆದಿದ್ದು, ಕೊಲೆಯಾದ ವ್ಯಕ್ತಿ ತಾಲೂಕಿನ ಕನ್ಯಾಕೋಳೂರ ವ್ಯಾಪ್ತಿಯ ಜಾಪಾ ನಾಯಕ ತಾಂಡಾದ ನಿವಾಸಿ ತಿಪ್ಪಣ್ಣ ರಾಠೋಡ್(35) ಎಂದು ಗುರುತಿಸಲಾಗಿದೆ. ಆರೋಪಿಗಳು ಅದೇ ಜಾಪಾ ನಾಯಕ ತಾಂಡಾದ ನಿವಾಸಿಗಳಾಗಿದ್ದು, ಕುಮಾರ (36) ಹೇಮ್ಯಾ ಚವ್ಹಾಣ (36) ಹಾಗೂ ಲಕ್ಷ್ಮಣ ಚವ್ಹಾಣ (38) ಇವರೇ ಆರೋಪಿಗಳೆಂದು ಹೇಳಲಾಗಿದೆ. ಹತ್ಯೆಯಾದ ತಿಪ್ಪಣ್ಣ ಅವರ ಪತ್ನಿ ಮಂಜುಳಾ ನಗರ …
Read More »Daily Archives: ನವೆಂಬರ್ 4, 2024
ನವೆಂಬರ್ 4, 5 ರಂದುಸಿಎಂ, ಡಿಸಿಎಂ ಭರ್ಜರಿ ಪ್ರಚಾರ
ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರದಿಂದ ಪ್ರಚಾರ ಕೈಗೊಂಡಿದ್ದಾರೆ. ನವೆಂಬರ್ 4, 5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಗ್ಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನಿಂದ ಸೋಮವಾರ ಬೆಳಗ್ಗೆ 9 ಗಂಟೆಗೆ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 10 50ಕ್ಕೆ ಶಿಗ್ಗಾವಿ ತಲುಪಲಿದ್ದಾರೆ. ಹುಲಗೂರಿನಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ …
Read More »ಕುಡುಗೋಲು, ಬಿಯರ್ ಬಾಟಲಿಯಿಂದ ಹೊಡೆದು ಯುವಕನ ಬರ್ಬರ ಹತ್ಯೆ
ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ತಿಮ್ಮನ್ನವರ(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕುಡುಗೋಲು, ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. 13ಕ್ಕೂ ಹೆಚ್ಚು ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆಸಿ ರವಿ ತಿಮ್ಮನ್ನವರ ಕೊಲೆ ಮಾಡಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »ಸವಣೂರ ವಿಧಾನಸಭಾ ಕ್ಷೇತ್ರ ಪ್ರಚಾರದಲ್ಲಿ ಭಾಗವಹಿಸಿದ ಸತೀಶ್ ಜಾರಕಿಹೊಳಿ
ಶಿಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹ್ಮದ್ ಖಾನ್ ಪಠಾಣ ಪರ ಪ್ರಚಾರ ನಡೆಸುತ್ತಿರುವ ಮುಖಂಡರು, ‘ಜನಪರವಾದ ಐದು ಗ್ಯಾರಂಟಿ ಯೋಜನೆ ನೋಡಿ ಕಾಂಗ್ರೆಸ್‌ಗೆ ಮತ ನೀಡಿ’ ಎಂದು ಕೋರುತ್ತಿದ್ದಾರೆ. ಶಿಗ್ಗಾವಿ ಕ್ಷೇತ್ರದ ಚಾಕಾಪುರದಲ್ಲಿ ಭಾನುವಾರ ಪ್ರಚಾರ ನಡೆಸಿದ ಸಚಿವ ಸತೀಶ ಜಾರಕಿಹೊಳಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ …
Read More »ಎಂಇಎಸ್‌ನಿಂದ ಕರಾಳ ದಿನ: 46 ಮಂದಿ ವಿರುದ್ಧ ದೂರು
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ನಗರದಲ್ಲಿ ನ.1ರಂದು ಕರಾಳ ದಿನ ಆಚರಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯ 46 ನಾಯಕರು ಸೇರಿ ಹಲವರ ವಿರುದ್ಧ ಇಲ್ಲಿನ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯೋತ್ಸವ ದಿನದಂದೇ ಎಂಇಎಸ್‌ನವರು ಪ್ರತಿವರ್ಷ ಕರಾಳ ದಿನ ಆಚರಿಸುತ್ತಾರೆ. ಈ ಬಾರಿ ಅದಕ್ಕೆ ಅನುಮತಿ ಕೋರಿ ಬಂದಿದ್ದ ಎಂಇಎಸ್ ನಿಯೋಗಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ‘ಯಾವ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ಕೊಡುವುದಿಲ್ಲ’ ಎಂದು ತಿಳಿಸಿದ್ದರು. ನಗರ ಪೊಲೀಸ್ …
Read More »ರಾಜ್ಯೋತ್ಸವ ಮೆರವಣಿಗೆ ಯಶಸ್ವಿ: ಪೊಲೀಸರ ಕಾರ್ಯಕ್ಕೆ ಪ್ರಶಂಸೆ
ಬೆಳಗಾವಿ: ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ವೈಭವದಿಂದ ನಡೆದ ರೂಪಕ ವಾಹನಗಳ ಮೆರವಣಿಗೆ ಶುಕ್ರವಾರ ತಡರಾತ್ರಿ ಮುಕ್ತಾಯವಾಯಿತು. ಸತತ 24 ತಾಸಿಗೂ ಅಧಿಕ ಹೊತ್ತು ಪೊಲೀಸರು ಸಮರ್ಥವಾಗಿ ಕೆಲಸ ಮಾಡಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿದರು. ರಾಜ್ಯೋತ್ಸವದ ಮುನ್ನಾದಿನವಾದ ಗುರುವಾರ ಮಧ್ಯರಾತ್ರಿಯೇ ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ‘ಕನ್ನಡ ಹಬ್ಬ’ದ ಆಚರಣೆಗೆ ಚಾಲನೆ ಸಿಕ್ಕಿತು. ಶುಕ್ರವಾರ ಬೆಳಿಗ್ಗೆಯಿಂದ ತಡರಾತ್ರಿಯವರೆಗೆ ಅದ್ದೂರಿ ಮೆರವಣಿಗೆ ನಡೆಯಿತು. ಬೆಳಗಾವಿ ಮಾತ್ರವಲ್ಲದೆ; ರಾಜ್ಯದ ವಿವಿಧ ಜಿಲ್ಲೆಗಳಿಂದ …
Read More »ಮಂಗನ ದಾಳಿಯಿಂದ 20ಕ್ಕೂ ಹೆಚ್ಚು ಜನ ಗಾಯಗೊಂಡು ಆಸ್ಪತ್ರೆಗೆ ದಾಖಲ
ರಾಮದುರ್ಗ: ಮಂಗನ ದಾಳಿಯಿಂದ 20ಕ್ಕೂ ಹೆಚ್ಚು ಜನ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಶನಿವಾರ ಮತ್ತು ಭಾನುವಾರ ಪಟ್ಟಣದ ನೇಕಾರ ಪೇಟೆ, ಸಾಯಿ ನಗರದಲ್ಲಿ ಮಂಗನ ಹಾವಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಒಂಟಿಯಾಗಿ ಸುತ್ತಾಡುವ ಜನರನ್ನು ಗುರಿಯಾಗಿಸಿಕೊಂಡು ಮಂಗ ದಾಳಿ ಮಾಡುತ್ತಿದೆ. ಮಂಗನಿಂದ ಕಚ್ಚಿಸಿಕೊಂಡವರು ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ರಾಮದುರ್ಗ ಪೊಲೀಸರು ಕಾರ್ಯಾಚರಣೆ ನಡೆಸಿದರೂ ಮಂಗ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ …
Read More »ಗೃಹಲಕ್ಷ್ಮಿ’ ಹಣದಿಂದ ಖಾರ ಕುಟ್ಟುವ ಯಂತ್ರ ಖರೀದಿಸಿದ ಮಹಿಳೆ
ಎಂ.ಕೆ.ಹುಬ್ಬಳ್ಳಿ: ಗೃಹಲಕ್ಷ್ಮಿ ಯೋಜನೆಯಡಿ ಬಂದ 11 ಕಂತು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪಡೆದ ಸಾಲ ಸೇರಿದಂತೆ ₹45 ಸಾವಿರ ಹಣದಲ್ಲಿ ಬೆಳಗಾವಿ ತಾಲ್ಲೂಕಿನ ಕುಕಡೊಳ್ಳಿಯಲ್ಲಿ ತಾಯವ್ವ ಲಕಮೋಜಿ ಅವರು, ಖಾರ ಕುಟ್ಟುವ ಯಂತ್ರ ಖರೀದಿಸಿದ್ದಾರೆ. ಈ ಮೂಲಕ ಸ್ವಾವಲಂಬಿ ಬದುಕಿಗೆ ಹೆಜ್ಜೆ ಇರಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು, ಭಾನುವಾರ ಕುಕಡೊಳ್ಳಿಗೆ ಈ ಯಂತ್ರ ಉದ್ಘಾಟಿಸಿದರು. ‘ಗೃಹಲಕ್ಷ್ಮಿ ಯೋಜನೆ ಬಡ ಕುಟುಂಬಗಳ ಆರ್ಥಿಕ ಸ್ಥಿತಿ …
Read More »ಹೊಂಡದಲ್ಲಿ ಬಿದ್ದು ತಾಯಿ, ಮಗ ಸಾವು
ಬೆಳಗಾವಿ: ಇಲ್ಲಿನ ಹಿಂಡಲಗಾದ ಗಣೇಶ ದೇವಸ್ಥಾನ ಬಳಿಯ ಹೊಂಡದಲ್ಲಿ ತಾಯಿ, ಮಗ ಬಿದ್ದು ಮೃತಪಟ್ಟಿದ್ದಾರೆ. ಭಾನುವಾರ ಅವರ ಮೃತದೇಹ ಪತ್ತೆಯಾಗಿವೆ. ತಾಲ್ಲೂಕಿನ ಕಲಕಾಂಬ ಗ್ರಾಮದ ನಿವಾಸಿ ಕವಿತಾ ಬಸವಂತ ಜುನೇಬೆಳಗಾಂವಕರ(35), ಅವರ ಪುತ್ರ ಸಮರ್ಥ(12) ಮೃತರು. ‘ಕವಿತಾ ಮತ್ತು ಸಮರ್ಥ ಅ.30ರಂದು ಮನೆಯಿಂದ ಕಾಣೆಯಾಗಿದ್ದರು. ಅವರು ಯಾವಾಗ ಕೆರೆಗೆ ಬಿದ್ದಿದ್ದಾರೆ ಎಂದು ಗೊತ್ತಾಗಿಲ್ಲ. ಕೌಟುಂಬಿಕ ಸಮಸ್ಯೆಯೇ ಘಟನೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ತನಿಖೆ ನಡೆಸುತ್ತಿದ್ದೇವೆ’ ಎಂದು ಪೊಲೀಸರು …
Read More »