Daily Archives: ನವೆಂಬರ್ 8, 2024

ವಕ್ಫ್ ಬೋರ್ಡ್ ರದ್ದುಪಡಿಸಿ; ಬಿಜೆಪಿ ಮಂಡಲದ ವತಿಯಿಂದ ತಹಶೀಲ್ದಾರ್‌ಗೆ ಮನವಿ

ಹುಕ್ಕೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವಕ್ಫ್ ಬೋರ್ಡ್ ಮೂಲಕ ಕಬಳಿಸುತ್ತಿರುವ ಜಮೀನು ಸೇರಿದಂತೆ ವಿವಿಧ ಆಸ್ತಿಗಳ ಕಬಳಿಕೆ ಯತ್ನ ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದ ಕೋರ್ಟ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಂಜುಳಾ ನಾಯಿಕ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.‌ ಪ್ರತಿಭಟನೆ ಉದ್ದೇಶಿಸಿ ಬಿಜಿಪಿ ಮಂಡಲ ಅಧ್ಯಕ್ಷ ರಾಚಯ್ಯ ಹಿರೇಮಠ ಮಾತನಾಡಿ, ‘ಕರ್ನಾಟಕದಲ್ಲಿ ವಕ್ಫ್ ಕಾಯ್ದೆಯ ದುರ್ಬಳಕೆಯಿಂದ ಎಲ್ಲರೂ ಆತಂಕದಲ್ಲಿದ್ದಾರೆ. ಹಿಂದೆ ಕಾಂಗ್ರೆಸ್‌ನವರು ಮುಸ್ಲಿಂ ತುಷ್ಠಿಕರಣಕ್ಕಾಗಿ …

Read More »

ಅಮೆರಿಕ ಸಂಸತ್ತಿಗೆ ಬೆಳಗಾವಿಯ ಶ್ರೀನಿವಾಸ ಆಯ್ಕೆ:ಡೆಮಾಕ್ರೆಟಿಕ್ ಪಕ್ಷದಿಂದ ಗೆಲುವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಶ್ರೀನಿವಾಸ ಥಾಣೇದಾರ (69) ಎಂಬುವರು ಅಮೆರಿಕ ಸಂಸತ್ತಿನ ಪ್ರತಿನಿಧಿಯಾಗಿ ಚುನಾಯಿತರಾಗಿದ್ದಾರೆ. ಕಮಲಾ ಹ್ಯಾರಿಸ್‌ ನೇತೃತ್ವದ ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿಯಾಗಿ ಮಿಷಿಗನ್ ರಾಜ್ಯದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದಾರೆ.   ಹಲವು ವರ್ಷಗಳಿಂದ ಅಮೆರಿಕದಲ್ಲಿ ಇರುವ ಶ್ರೀನಿವಾಸ ಥಾಣೇದಾರ ಅವರು ಬೆಳಗಾವಿಯ ಚಿಂತಾಮಣರಾವ್ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾರೆ. ಅಲ್ಲಿ ವಿಜ್ಞಾನಿ, ಉದ್ಯಮಿ ಮತ್ತು ಇಂಗ್ಲಿಷ್‌ ಸಾಹಿತಿ ಆಗಿದ್ದಾರೆ. ಶ್ರೀನಿವಾಸ ಅವರು ಮಿಷಿಗನ್ ರಾಜ್ಯದಿಂದ …

Read More »

ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

ಮುಂಬಯಿ: ರಾಜ್ಯದ ಮಹಿಳೆಯರಿಗೆ ಮಾಸಿಕ 3,000ರೂ. ಸಹಾಯ ಧನ, ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ, 3 ಲಕ್ಷ ರೂ.ಗಳವರೆಗಿನ ರೈತರ ಸಾಲ ಮನ್ನಾ, ನಿರುದ್ಯೋಗಿ ಯುವಜನತೆಗೆ ಮಾಸಿಕ 4,000 ರೂ. ನೆರವು. ಇವು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ(ಎಂವಿಎ) ಘೋಷಿಸಿರುವ ಗ್ಯಾರಂಟಿಗಳು. ಉದ್ಧವ್‌ ಶಿವಸೇನೆ, ಶರದ್‌ ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಮೈತ್ರಿಕೂಟವಾದ ಎಂವಿಎ ಪ್ರಣಾಳಿಕೆ ಬಿಡುಗಡೆಗೊಳಿಸಿ, ಭರ್ಜರಿ ಘೋಷಣೆಗಳನ್ನು ಮಾಡಿದೆ. ಮಹಾಯುತಿ ಸರಕಾರ‌ದ “ಲಡ್ಕಿ ಬಹೀನ್‌’ ಯೋಜನೆಯಡಿ ನೀಡುತ್ತಿರುವ …

Read More »

ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

ಬೆಂಗಳೂರು: ರಾಜ್ಯಾದ್ಯಂತ ಸಮೃದ್ಧ ಮಳೆಯಾಗಿ ಎಲ್ಲ ಜಲಾಶಯಗಳೂ ಭರ್ತಿಯಾಗಿವೆ. ಮುಂದಿನ ಮುಂಗಾರು ವರೆಗೂ ಜಲವಿದ್ಯುತ್‌ ಉತ್ಪಾದನೆಗೆ ಸಮಸ್ಯೆ ಇಲ್ಲವೆನ್ನಲಾಗುತ್ತಿದೆ. ಆದಾಗ್ಯೂ ಈ ಬಾರಿಯೂ ಗ್ರಾಹಕರ ಮೇಲೆ “ವಿದ್ಯುತ್‌ ದರ ಏರಿಕೆ ಬರೆ’ ಮಾತ್ರ ತಪ್ಪದು!   ಈಗಾಗಲೇ ಬೆಸ್ಕಾಂ ಸೇರಿದಂತೆ ಎಲ್ಲ ವಿದ್ಯುತ್‌ ಸರಬರಾಜು ಕಂಪೆನಿಗಳು ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದ್ದು, ಮಾಸಾಂತ್ಯಕ್ಕೆ ಈ ಪ್ರಸ್ತಾವನೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಸಲ್ಲಿಕೆಯಾಗಲಿದೆ. ರಾಜ್ಯದಲ್ಲಿ ಜಲ ವಿದ್ಯುದಾಗಾರಗಳ ಪೈಕಿ ಗರಿಷ್ಠ …

Read More »

8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಗುರುವಾರ(ನ.7) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2021ರಲ್ಲಿ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿ ಬಳಿ ಎಂಟು ವರ್ಷದ ಬಾಲಕಿಯನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಮೂವರು ಆರೋಪಿಗಳು ಅತ್ಯಾಚಾರವೆಸಗಿ ಹತ್ಯೆಗೈದಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಪ್ರಕರಣದಡಿ ಮೂವರನ್ನು ಬಂಧಿಸಲಾಗಿತ್ತು.   ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕರಾದ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ!

ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿ ಕಾರ್ಯಕ್ರಮಕ್ಕೆ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಈ ಭಾಗದ ರೈತರ ಸಾರ್ವಜನಿಕರ ಕಾರ್ಮಿಕರ ಜೀವನಾಡಿಯಾಗಿದೆ.ಗೋಕಾಕ್ ತಾಲೂಕಿನ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಪ್ರಸಕ್ತ ಸಾಲಿನ 2024-25 ರ 13 ನೇ ವರ್ಷ ಕಬ್ಬು ನೂರಿಸುವ ಹಂಗಾಮ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರೈತರು, …

Read More »