Breaking News

Daily Archives: ನವೆಂಬರ್ 9, 2024

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಡಿ.ವೈ. ಚಂದ್ರಚೂಡ್(Dhananjaya Yeshwant Chandrachud) ಅವರು ಶುಕ್ರವಾರ(ನ8) ಸುಪ್ರೀಂ ಕೋರ್ಟ್‌ಗೆ ಭಾವನಾತ್ಮಕ ವಿದಾಯ ಹೇಳಿದರು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ, ಡಿ.ವೈ. ಚಂದ್ರಚೂಡ್ ಅವರು ತಮ್ಮ ನ್ಯಾಯಾಂಗ ಪ್ರಯಾಣದ ವೈಯಕ್ತಿಕ ಘಟನೆಗಳನ್ನು ಹಂಚಿಕೊಂಡರು. ನ್ಯಾಯಾಂಗ ಸುಧಾರಣೆ ಪಾರದರ್ಶಕತೆ ಮತ್ತು ನ್ಯಾಯಕ್ಕೆ ಅಚಲವಾದ ಬದ್ಧತೆಯೊಂದಿಗೆ ಸಂಯೋಜಿಸಿದ್ದೇನೆ ಎಂದು ತಮ್ಮ ಎರಡು ವರ್ಷಗಳ ಸಿಜೆಐ ಅಧಿಕಾರಾವಧಿಯ ಬಗ್ಗೆ ಹೇಳಿಕೊಂಡರು. 64 ರ ಹರೆಯದ ಸಿಜೆಐ …

Read More »

ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

ಹೊಸದಿಲ್ಲಿ: 5 ಲಕ್ಷ ರೂ. ಲಂಚ ಸ್ವೀಕಾರದ ಆರೋಪ ಎದುರಿಸುತ್ತಿರುವ ದಿಲ್ಲಿ ನಗರ ವಸತಿ ಸುಧಾರಣ ಮಂಡಳಿಯ ಕಾನೂನು ಅಧಿಕಾರಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 3.79 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾಗಿ ಹೇಳಿದ್ದಾರೆ. ಆರೋಪಿಯನ್ನು ವಿಜಯ್‌ ಮಗ್ಗೊà ಎಂದು ಗುರುತಿಸಲಾಗಿದೆ. ನಿರ್ಬಂಧ ತೆಗೆಯಲು ವಿಜಯ್‌ ಮತ್ತು ಅವರ ಸಹವರ್ತಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಉದ್ಯಮಿ ನ.4ರಂದು ದೂರು ನೀಡಿದ್ದರು. 5 …

Read More »

ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

ಹೊಸದಿಲ್ಲಿ: ಉಪಮುಖ್ಯಮಂತ್ರಿ ವಿರುದ್ದದ ಆದಾಯ ಮೀರಿದ ಆಸ್ತಿ (Disproportionate assets) ಪ್ರಕರಣದ ಸಿಬಿಐ ತನಿಖೆಗೆ ಒಪ್ಪಿಗೆ ಹಿಂತೆಗೆದುಕೊಳ್ಳುವ ರಾಜ್ಯ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ನ8) ಕರ್ನಾಟಕ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದೆ.   ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ಉತ್ತರ ಕೋರಿದೆ. 2023 ನವೆಂಬರ್ 23 …

Read More »

ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಉದ್ಯಮಿಯೊಬ್ಬರ ಕುಟುಂಬವೊಂದು ತಮ್ಮ ಬದುಕಿನಲ್ಲಿ ಅದೃಷ್ಟ ತಂದು ಕೊಟ್ಟ ಕಾರಿಗೆ ಅದ್ಧೂರಿ ಸಮಾಧಿ ಕಾರ್ಯಕ್ರಮವನ್ನು ನಡೆಸಿದ್ದು ಸದ್ಯ ಭಾರೀ ಸುದ್ದಿಯಾಗುತ್ತಿದೆ. ಲಾಠಿ ತಾಲೂಕಿನ ಪಾದರಶಿಂಗ ಗ್ರಾಮದಲ್ಲಿ ಗುರುವಾರ ಸಂಜಯ ಪೋಲಾರ್ ಮತ್ತು ಕುಟುಂಬ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧರ್ಮಗುರುಗಳು, ಆಧ್ಯಾತ್ಮಿಕ ಮುಖಂಡರು ಸೇರಿದಂತೆ ಸುಮಾರು 1,500 ಜನರು ಭಾಗವಹಿಸಿದ್ದರು ಎನ್ನುವುದು ಗಮನಾರ್ಹ ಸಂಗತಿ.   ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಚಿತ್ರವೂ , ವಿಶೇಷವೂ ಎನಿಸುವ ಸಮಾಧಿ …

Read More »

ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

ಮಲ್ಪೆ: ಪ್ರವಾಸಿಗರ ಆಕರ್ಷಣೆಯಲ್ಲೊಂದಾಗಿ ರಾಜ್ಯದಲ್ಲೇ ಪ್ರಥಮ ಎಂಬಂತೆ ತೇಲುವ ಸೇತುವೆ (ಫ್ಲೋಟಿಂಗ್‌ ಬ್ರಿಡ್ಜ್) 2021ರಲ್ಲಿ ಮಲ್ಪೆ ಬೀಚ್‌ನಲ್ಲಿ ಪ್ರಾರಂಭಗೊಂಡಿದ್ದು, ಈ ಬಾರಿ ನ. 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದೆ. ಇದಕ್ಕೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆಕುತ್ತಿದೆ.   ಸಂಜೆ ಹೊತ್ತಿಗೆ ತಣ್ಣಗಿನ ಗಾಳಿಯನ್ನು ಆಸ್ವಾದಿಸಲು ಸಮುದ್ರ ತೀರದತ್ತ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನ 4ರಿಂದ 5 ಸಾವಿರ ಪ್ರವಾಸಿಗರು ಮಲ್ಪೆ ಬೀಚ್‌ಗೆ ಬರುತ್ತಿದ್ದು, ವಾರಾಂತ್ಯದಲ್ಲಿ ಈ ಸಂಖ್ಯೆ 10 ಸಾವಿರವನ್ನು ದಾಟುತ್ತಿದೆ. ಸುಮಾರು …

Read More »

ಬಳ್ಳಾರಿಯಲ್ಲಿ ನಿಮ್ಮ ಅಟ್ಟಹಾಸ ಮುರಿದದ್ದು ಸಿದ್ದರಾಮಯ್ಯ ಅನ್ನೋದು ಮರೀಬೇಡಿ: ಸಿಎಂ

ಬಳ್ಳಾರಿ: ಶಾಸಕ ಜಿ.ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ, ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾ ಜನತೆಯ ಭಯಮುಕ್ತಗೊಳಿಸಿದ್ದು ಇದೇ ಸಿದ್ದರಾಮಯ್ಯ ಅನ್ನೋದು ಮರೀಬೇಡಿ ಎಂದು ಸಿಎಂ ಸಿದ್ದರಾಮಯ್ಯ ಶಾಸಕ ಜನಾರ್ದನರೆಡ್ಡಿಗೆ ಬಹಿರಂಗವಾಗಿಯೇ ನೇರಾ ನೇರ ಎಚ್ಚರಿಕೆ ನೀಡಿದರು.   ಜಿಲ್ಲೆಯ ಸಂಡೂರಿನ ವಿಠಲಾಪುರದಲ್ಲಿ ಶನಿವಾರ ನಡೆದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪರ ಮತಯಾಚಿಸಿ ಮಾತನಾಡಿ ಪ್ರಚಾರ ಸಭೆಯಲ್ಲಿ, ತಮ್ಮ ವಿರುದ್ಧ …

Read More »

ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ: ದೇವಸ್ಥಾನದಲ್ಲಿ ಪ್ರಾರ್ಥನೆ

ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಶನಿವಾರ(ನ.9) ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯಾವುದೇ ಆಣೆ-ಪ್ರಮಾಣ ನಡೆದಿಲ್ಲ. ಮಾಜಿ ಶಾಸಕ ಕೆ. ರಘುಪತಿ ‌ಭಟ್ ಮೊದಲಾದವರು ಇದ್ದರು.

Read More »

ಶ್ರೀರಾಮಸೇನೆಯಿಂದ 21ನೇ ವರ್ಷದ ದತ್ತಮಾಲಾ ಅಭಿಯಾನ

ಚಿಕ್ಕಮಗಳೂರು: ಶ್ರೀರಾಮಸೇನೆಯಿಂದ ಹಮ್ಮಿಕೊಂಡಿರುವ 21ನೇ ವರ್ಷದ ದತ್ತಮಾಲಾ ಅಭಿಯಾನ ಭಾನುವಾರ(ನ10) ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಆಗಮಿಸುವ ದತ್ತಭಕ್ತರು ದತ್ತಪಾದುಕೆ ದರ್ಶನ ಪಡೆದುಕೊಳ್ಳಲಿದ್ದಾರೆ. ದತ್ತಮಾಲಾ ಅಭಿಯಾನದ ಹಿನ್ನಲೆಯಲ್ಲಿ ದತ್ತದೀಪೋತ್ಸವ, ಪಡಿ ಸಂಗ್ರಹ ಕಾರ್ಯಗಳು ನಡೆದಿದ್ದು, ಭಾನುವಾರ ಬೆಳಗ್ಗೆ ನಗರದ ಶಂಕರಮಠ ಸಮೀಪದ ವೇದಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿದಂತೆ ಸ್ವಾಮೀಜಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಸಭೆಯ ನಂತರ ಶಂಕರಮಠ ಸಮೀಪದಿಂದ ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ …

Read More »

ಸಲ್ಮಾನ್ ಖಾನ್ ಚಿತ್ರದ ಚಿತ್ರೀಕರಣ ಸ್ಥಳದಲ್ಲಿ ವ್ಯಾಪಕ ಕಟ್ಟೆಚ್ಚರ

ಹೈದರಾಬಾದ್ : ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಹೈದರಾಬಾದ್‌ನ ಸ್ಟಾರ್ ಹೋಟೆಲ್‌ನಲ್ಲಿ ನಡೆಯುತ್ತಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಟಾಪ್ ಹೀರೋಗೆ ಬಂದಿರುವ ನಿರಂತರ ಬೆದರಿಕೆಗಳ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯ ನಡುವೆ ನಡೆಸಲಾಗುತ್ತಿದೆ.   ಸಲ್ಮಾನ್ ಖಾನ್ ಅವರು ‘ವೈ ಪ್ಲಸ್’ ವರ್ಗದ ಭದ್ರತೆ ಹೊಂದಿರುವುದರಿಂದ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ಶನಿವಾರ(ನ9) ತಿಳಿಸಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿವೆ.’ಸಿಕಂದರ್’ ಚಿತ್ರದಲ್ಲಿ ‘ರಶ್ಮಿಕಾ …

Read More »

30 ವರ್ಷ ಮೈತ್ರಿಯಿದ್ದರೂ ಶಿವಸೇನೆ ಬಿಜೆಪಿಯಾಗಲಿಲ್ಲ,ಕಾಂಗ್ರೆಸ್ ಹೇಗಾಗುತ್ತದೆ?

ಛತ್ರಪತಿ ಸಂಭಾಜಿನಗರ: ಬಿಜೆಪಿಯೊಂದಿಗೆ ಮೂರು ದಶಕಗಳ ಮೈತ್ರಿ ಮಾಡಿಕೊಂಡರೂ ಶಿವಸೇನೆ ತನ್ನ ಗುರುತನ್ನು ಕಳೆದುಕೊಂಡಿಲ್ಲ ಮತ್ತು ಈಗ ಅದು ಕಾಂಗ್ರೆಸ್‌ ಆಗಿ ಬದಲಾಗುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ(ನ9)ಹೇಳಿದ್ದಾರೆ.   ನವೆಂಬರ್ 20 ರ ಮಹಾರಾಷ್ಟ್ರ ಚುನಾವಣೆಗೆ ಮುಂಚಿತವಾಗಿ ಕಲಂನೂರಿ, ಹಿಂಗೋಲಿ ಮತ್ತು ವಸ್ಮತ್ ವಿಧಾನಸಭಾ ಕ್ಷೇತ್ರಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಅಭ್ಯರ್ಥಿಗಳ ಪರ ಹಿಂಗೋಲಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಸೇನಾ (ಯುಬಿಟಿ) …

Read More »