Breaking News

Daily Archives: ನವೆಂಬರ್ 13, 2024

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಸಹಜಾನಂದ ಅವಧೂತರು

ಚಿಕ್ಕೋಡಿ: ‘ಭಾರತ ದೇಶವನ್ನು ಧಾರ್ಮಿಕ, ಸಂಸ್ಕೃತಿಯ ನೆಲೆಗಟ್ಟಿನ ಮೇಲೆ ಕಟ್ಟಲಾಗಿದೆ. ಯುವಕರು ಸಂಸ್ಕಾರವಂತರಾಗಿ ದೇಶದ ಪರಂಪರೆ ಮುಂದುವರಿಸಬೇಕು’ ಎಂದು ಜಮಖಂಡಿಯ ಸಹಜಾನಂದ ಅವಧೂತರು ಹೇಳಿದರು. ತಾಲ್ಲೂಕಿನ ಅಂಕಲಿ ಗ್ರಾಮದ ರುದ್ರಾವಧೂತ ಮಠದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಂಸ್ಕಾರದ ಕೊರತೆಯಿಂದ ಯುವಕರು ದಾರಿ ತಪ್ಪಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇವುಗಳಿಂದ ಮುಕ್ತರಾಗಬೇಕು. ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಧಾರ್ಮಿಕ ಚಿಂತನೆಗಳು ಯುವಕರನ್ನು ಸನ್ಮಾರ್ಗದತ್ತ ಕರೆದುಕೊಂಡು ಹೋಗಲು ಸಾಧ್ಯ’ ಎಂದು …

Read More »

ಪವಿತ್ರ ಕ್ಷೇತ್ರಗಳಲ್ಲಿ ರಾಜಕೀಯ ಬೆರೆಸದಿರಿ: ಮಲ್ಲಿಕಾರ್ಜುನ ಸ್ವಾಮೀಜಿ

ಬೈಲಹೊಂಗಲ: ‘ಸಮಾಜ ತಿದ್ದುವಲ್ಲಿ ಮಠಗಳು ಅವಿರತವಾಗಿ ಪ್ರಯತ್ನಿಸುತ್ತಿದ್ದು, ಇಂಥಹ ಪವಿತ್ರ ಕ್ಷೇತ್ರಗಳಲ್ಲಿ ರಾಜಕೀಯ ಬೆರಸದೇ, ಭಕ್ತರಾಗಿ ಬಂದು ಇವುಗಳ ಉದ್ಧಾರಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.   ತಾಲ್ಲೂಕಿನ ಬೈಲವಾಡ ಗ್ರಾಮದ ವರ್ತಿ ಸಿದ್ಧಬಸವೇಶ್ವರ ದೇವಸ್ಥಾನ ಆವರಣದಲ್ಲಿ ನಿರ್ಮಿಸಿದ ಕಲ್ಯಾಣ ಮಂಟಪ ಉದ್ಘಾಟನೆ ಹಾಗೂ ಗುರುಭವನ ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯು ಐತಿಹಾಸಿಕ, ಧಾರ್ಮಿಕ ಕ್ಷೇತ್ರ ಸೇರಿದಂತೆ ಹಲವಾರು ರಂಗದಲ್ಲಿ ಮುಂಚೂಣಿಯಲ್ಲಿದೆ. ಸಾಧಕರು ತಮ್ಮ …

Read More »

ಚಿಕ್ಕೋಡಿ: ಕೆಎಲ್‌ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನ ಆಚರಣೆ

ಚಿಕ್ಕೋಡಿ: ‘ಲಿಂಗಾಯತ ಸಮಾಜ ಉಚಿತವಾಗಿ ಅನ್ನದಾಸೋಹ ಮಾಡುವ ಮೂಲಕ ಹೆಸರಾಗಿದ್ದು, ಕೆಎಲ್‌ಇ ಸಂಸ್ಥೆ 300ಕ್ಕೂ ಹೆಚ್ಚು ಅಂಗ ಸಂಸ್ಥೆಗಳ ಮೂಲಕ ನಾಡಿಗೆ ಜ್ಞಾನ ದಾಸೋಹ ಮಾಡುತ್ತಿದೆ’ ಎಂದು ಸಾಹಿತಿ ರಾಮಕೃಷ್ಣ ಮರಾಠೆ ಹೇಳಿದರು. ಪಟ್ಟಣದ ಬಿ.ಕೆ ಕಾಲೇಜಿನಲ್ಲಿ ಹಮ್ಮಿಕೊಂಡ 109ನೇ ಕೆಎಲ್‌ಇ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ‘ಶಿಕ್ಷಣ, ವೈದ್ಯಕೀಯ, ಸಮಾಜ ಸೇವೆಯಲ್ಲಿ ಕೆಎಲ್‌ಇ ಸಂಸ್ಥೆ ತನ್ನದೇ ಆದ ಕೊಡುಗೆಯನ್ನು ದೇಶ ವಿದೇಶಗಳಲ್ಲಿ ನೀಡುತ್ತಿದೆ’ ಎಂದರು. …

Read More »

ಅರಭಾವಿ ತೋಟಗಾರಿಕೆ ಕಾಲೇಜಿಗೆ ರನ್ನರ್‌ ಅಪ್‌ ಪ್ರಶಸ್ತಿ

ಮೂಡಲಗಿ: ಬೀದರ್‌ನಲ್ಲಿ ಇತ್ತೀಚೆಗೆ ಜರುಗಿದ 15ನೇ ತೋಟಗಾರಿಕೆ ಮಹಾವಿದ್ಯಾಲಯದ ಯುವಜನೋತ್ಸವ-2024ರಲ್ಲಿ ತಾಲ್ಲೂಕಿನ ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯವು ರನ್ನರ್‌ ಅಪ್ ಪ್ರಶಸ್ತಿ ಪಡೆದುಕೊಂಡಿದೆ. ಮಹಾವಿದ್ಯಾಯದ ವಿದ್ಯಾರ್ಥಿಗಳು ಏಕಪಾತ್ರಾಭಿನಯ, ಮೈಮ್‌, ಸ್ಕಿಟ್‌, ಕಾರ್ಟೂನ್‌ ಬಿಡಿಸುವುದು, ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ, ಲಘು ಗಾಯನ, ಸ್ಥಳದಲ್ಲಿ ಚಿತ್ರ ಬಿಡಿಸುವುದು, ತೇಪೆ ಚಿತ್ರಗಾರಿಕೆ ದ್ವಿತೀಯ ಸ್ಥಾನ ಹಾಗೂ ಜಾನಪದ ಹಾಡು, ಏಕಾಂಕ ನಾಟಕ, ಪೋಸ್ಟರ್ ತಯಾರಿಕೆ, ಎಕ್ಸ್ಟೊಂಬರ್ ತೃತೀಯ ಸ್ಥಾನ ಹಾಗೂ ಭಾಷಣ ಸ್ಪರ್ಧೆಯಲ್ಲಿ …

Read More »

ನಿಸ್ವಾರ್ಥ ಸೇವೆಯಿಂದ ಕೆಎಲ್‌ಇ ಸಂಸ್ಥೆಯ ಬೆಳವಣಿಗೆ: ಡಾ. ಎಸ್.ಸಿ. ಧಾರವಾಡ

ಬೆಳಗಾವಿ: ‘ನಿಸ್ವಾರ್ಥ ಸೇವಾ ಮನೋಭಾವದಿಂದ ಯಾವುದೇ ಸಂಸ್ಥೆ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಇದಕ್ಕೆ ಕೆಎಲ್‌ಇ ಸಂಸ್ಥೆಯೇ ಸಾಕ್ಷಿ’ ಎಂದು ನಿರ್ದೇಶಕ ಡಾ. ಎಸ್.ಸಿ. ಧಾರವಾಡ ಹೇಳಿದರು. ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೆಎಲ್‌ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಕೆಎಲ್‌ಇ ಹೊಮಿಯೋಪಥಿಕ್‌ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಎ.ಉಡಚನಕರ ‘ಶಿಕ್ಷಣ ದಾಸೋಹದ ಉದ್ದೇಶದಿಂದ ಆರಂಭಗೊಂಡ ಕೆಎಲ್‌ಇ ಸಂಸ್ಥೆ ಇಂದು ಶಿಕ್ಷಣ, ವೈದ್ಯಕೀಯ ಶಿಕ್ಷಣ, ತಾಂತ್ರಿಕ …

Read More »

₹37 ಲಕ್ಷ ಮೌಲ್ಯದ ಸ್ವತ್ತು ಜಪ್ತಿ: 7 ಜನ ಆರೋಪಿಗಳ ಬಂಧನ

ಚಿಕ್ಕೋಡಿ: ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್ ಸಮೇತ 8 ಟೈರ್ ಸೇರಿದಂತೆ ₹ 37.40 ಲಕ್ಷ ಮೌಲ್ಯದ ಸ್ವತ್ತುಗಳನ್ನು ಚಿಕ್ಕೋಡಿ ಪೊಲೀಸರು ವಶಪಡಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.   ಘಟನೆ ನಡೆದ ಒಂದು ತಿಂಗಳೊಳಗೆ ಆರೋಪಿಗಳನ್ನು ಬಂಧಿಸಿ, ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಚಿಕ್ಕೋಡಿ ಠಾಣೆ ಪಿಎಸ್‍ಐ ಬಸಗೌಡ ನೇರ್ಲಿ ಹಾಗೂ ಸಿಬ್ಬಂದಿಗೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ, ಹೆಚ್ಚುವರಿ ಎಸ್ಪಿ ರಾಮಗೊಂಡ …

Read More »

“ಲೇ ಜಮೀರ್” ಎಂದ ಪುನೀತ್‌ ಕೆರೆಹಳ್ಳಿ ರಾತ್ರೋರಾತ್ರಿ ಬಂಧನ!

ಸಚಿವ ಜಮೀರ್‌ ಅಹಮದ್‌ ಬಗ್ಗೆ ಬೇಕಾಬಿಟ್ಟಿ ಮಾತನಾಡಿದ್ದ ಹಿಂದೂ ಮುಖಂಡ ಪುನೀತ್‌ ಕೆರೆಹಳ್ಳಿಗೆ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಗುನ್ನಾ ಕೊಟ್ಟಿದ್ದಾರೆ. ಜಮೀರ್‌ ಅಹಮದ್‌ ಖಾನ್‌ ಅವರು ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ರಿಯಾಕ್ಟ್‌ ಮಾಡಿದ್ದ ಪುನೀತ್‌ ಕೆರೆಹಳ್ಳಿ ಅವರು ಬೇಕಾಬಿಟ್ಟಿ ಮಾತನಾಡಿದ್ದರು. ಈ ಸಂಬಂಧ ವಿಡಿಯೋವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪುನೀತ್‌. ಜಮೀರ್‌ ಅವರ ಬಗ್ಗೆ ಏ ಜಮೀರ್ ಎಂದು …

Read More »

ಬಿಡಿಸಿಸಿ ಬ್ಯಾಂಕ್ ಒಳ್ಳೆಯ ರೀತಿ ಆಡಳಿತ ನೀಡಲಿದೆ: ಸಚಿವ ಸತೀಶ್‌ ಜಾರಕಿಹೊಳಿ…!!

ಬೆಳಗಾವಿ : ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಬಿಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಎಲ್ಲರ ಅಭಿಪ್ರಾಯ ಪಡೆದುಕೊಂಡು ಒಳ್ಳೆಯ ರೀತಿ ಆಡಳಿತ ನಡೆಸಬೇಕೆಂಬ ತಿರ್ಮಾಣ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ರಾಯಬಾಗ ತಾಲೂಕಿನ ಅಪ್ಪಾಸಾಹೇಬ ಕುಲಗೋಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಅವರೇ …

Read More »

ಕಾಗವಾಡ ನ್ಯಾಯವಾದಿ ಸಂಘದ ಮುಷ್ಕರಕ್ಕೆ ಮಾಜಿ ಸಚಿವ ಶ್ರೀಮಂತ ಪಾಟೀಲ್ ಭೇಟಿ ನೀಡಿ ಬೆಂಬಲ ಸೂಚಿಸಿದರು. ಸ್ಥಳ ಕಾಗವಾಡ

ಕಾಗವಾಡ: ಪಟ್ಟಣದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಿಸಲು  ಆಗಿನ ಎಪಿಎಂಸಿ ಸಚಿವ ಬಂಡೆಪ್ಪಾ ಕಾಶಪ್ಪನ್ನವರ ಅನುಮತಿ ನೀಡಿದ್ದರು. ಆದರೇ ಕೆರೆ ಪಕ್ಕದ ಜಾಗ ಬಫರ್ ಝೋನ್ ಎಂದು ಪರಿಗಣಿಸಿ ನ್ಯಾಯಾಲಯ ನಿರ್ಮಾಣಕ್ಕಾಗಿ ಅಡ್ಡಿ ಉಂಟಾಗಿ ಅದು ನೆನೆಗುದಿಗೆ ಬಿದ್ದಿದ್ದು,  ದಿ. 12 ರಂದು ಪಟ್ಟಣದಲ್ಲಿ ತಾಲೂಕಾ ವಕೀಲರ ಸಂಘದ ಸದಸ್ಯರು ಹಮ್ಮಿಕೊಂಡಿರುವ ಅನಿರ್ಧಿಷ್ಠಾವಧಿ ಮುಷ್ಕರ  ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು ಉಗ್ರವಾಗಿ ಹೋರಾಟ ಪ್ರಾರಂಭಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕಾಗವಾಡ …

Read More »

ಮರಕುಂಬಿ ಅಸ್ಪೃಶ್ಯತೆ ಪ್ರಕರಣ. 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ: ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಅಸ್ಪೃಶ್ಯತೆಯ ಪ್ರಕರಣದ 99 ಜನರಿಗೆ ಧಾರವಾಡ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಅಸ್ಪೃಶ್ಯತೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ವರ್ಷದ ಹಿಂದೆ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.   ಆಗ 117 ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು‌. ಈ ಪ್ರಕರಣ ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆಯಿತು. ಕಳೆದ ಅಕ್ಟೋಬರ್ 24 ರಂದು …

Read More »