ಚಿಕ್ಕೋಡಿ: ಪಟ್ಟಣದ ಬಹುತೇಕ ರಸ್ತೆ, ಗಲ್ಲಿ, ಹೆದ್ದಾರಿ, ಮಾರುಕಟ್ಟೆಗಳಲ್ಲಿ ಬಿಡಾಡಿ ದನಗಳ ಹಾವಳಿ ವಿಪರೀತವಾಗಿದೆ. ಸಂಕೇಶ್ವರ- ಜೇವರ್ಗಿ, ನಿಪ್ಪಾಣಿ- ಮುಧೋಳ ಎರಡು ರಾಜ್ಯ ಹೆದ್ದಾರಿಗಳು ಪಟ್ಟಣದಲ್ಲಿ ಹಾದು ಹೋಗುವುದರಿಂದ ವಾಹನ ದಟ್ಟನೆ ಹೆಚ್ಚಾಗಿದೆ. ನಿತ್ಯ ಓಡಾಡುವ ವಾಹನ ಸವಾರರು ಬಿಡಾಡಿ ದನಗಳ ಹಾವಳಿಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಶೈಕ್ಷಣಿಕ ಜಿಲ್ಲಾ ಕೇಂದ್ರವೂ, ಉಪ ವಿಭಾಗ ಕೇಂದ್ರವನ್ನು ಹೊಂದಿರುವ ಚಿಕ್ಕೋಡಿ ಪಟ್ಟಣಕ್ಕೆ ಪ್ರತಿದಿನ ಸಹಸ್ರಾರು ಜನರು ತಮ್ಮ ಕೆಲಸಕ್ಕೆ ಆಗಮಿಸುತ್ತಾರೆ. ಹಗಲಿರುಳು 50- …
Read More »Daily Archives: ನವೆಂಬರ್ 14, 2024
CM ಸಿದ್ದರಾಮಯ್ಯರನ್ನು ಯಾರಾದರೂ ಮುಟ್ಟಲು ಆಗುವುದೇ?: ಸಚಿವ ವಿ.ಸೋಮಣ್ಣ ವ್ಯಂಗ್ಯ
ಬೆಳಗಾವಿ: ‘ನನ್ನನ್ನು ಮುಟ್ಟಿದರೆ ಜನ ಸುಮ್ಮನೇ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಸಿ.ಎಂ ಅವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? ಅವರ ಮಾತಿನ ಮರ್ಮವನ್ನು ಅವರೇ ಅರ್ಥ ಮಾಡಿಕೊಳ್ಳಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯ ಮಾಡಿದರು. ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಸಿ.ಎಂ ಆದವರನ್ನು ಯಾರಾದರೂ ಮುಟ್ಟಿದರೆ ಪೊಲೀಸರು ಕೇಸ್ ಮಾಡಿ ಒಳಗೆ ಹಾಕುತ್ತಾರೆ. ಮುಟ್ಟಲು ಆಗುವುದಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ …
Read More »ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋಗೆ ನಿರ್ಧಾರ
ಹೊಸಪೇಟೆ (ವಿಜಯನಗರ): ಕಬ್ಬು ಬೆಳೆಗಾರರಿಗೆ ಶೇ 9.50 ಸಕ್ಕರೆ ಇಳುವರಿ ಆಧಾರದಲ್ಲಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು, ತೂಕದಲ್ಲಿ ಆಗುತ್ತಿರುವ ಮೋಸ ತಡೆಗಟ್ಟಬೇಕು ಮೊದಲಾದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋ ನಡೆಸಲು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿದೆ. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಲ್.ಎನ್.ಭರತ್‌ರಾಜ್ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಪ್ರತಿ ಟನ್‌ಗೆ ₹500 ಎಸ್‌ಎಪಿ ನಿಗದಿಪಡಿಸಬೇಕು, …
Read More »ಕೆಎಲ್‌ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನಾಚರಣೆ
ಬೆಳಗಾವಿ: ‘ಪ್ರಭಾಕರ ಕೋರೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ನಾಲ್ಕು ದಶಕಗಳಾಗಿವೆ. ಅವರ ನಿಷ್ಕಲ್ಮಶ ಸೇವೆ ದಕ್ಷಿಣ ಕರ್ನಾಟಕ ಭಾಗಕ್ಕೂ ಗೊತ್ತಾಗಬೇಕು. ಎಲ್ಲ ಶಾಸಕರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮಾರಂಭ ಮಾಡಲಾಗುವುದು’ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಗುರುವಾರ ಕೆಎಲ್‌ಇ ಸಂಸ್ಥೆಯ 109ನೇ ಸಂಸ್ಥಾಪಣಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಬಡವರಿಗಾಗಿ ಸರ್ಕಾರಗಳು ಎಷ್ಟು ಕಾಳಜಿ ತೋರುತ್ತವೆಯೋ, ಅಷ್ಟೇ ಕಾಳಜಿ ಕೆಎಲ್‌ಇ …
Read More »ಎಸ್‌ಡಿಎ ಆತ್ಮಹತ್ಯೆ; ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಬೆಳಗಾವಿ: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಎಸ್‌ಡಿಎ ರುದ್ರಣ್ಣ ಯಡವನ್ಣವರ ಆತ್ಮಹತ್ಯೆ ಪ್ರಕರಣದಲ್ಲಿ, ತಹಶೀಲ್ದಾರ್ ಸೇರಿದಂತೆ ಮೂವರೂ ಆರೋಪಿಗಳಿಗೆ ಗುರುವಾರ ನಿರೀಕ್ಷಣಾ ಜಾಮೀನು ಸಿಕ್ಕಿದೆ. ತಹಶೀಲ್ದಾರ್ ಬಸವರಾಜ ನಾಗರಾಳ, ಎಫ್‌ಡಿಎ ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಅವರಿಗೆ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರುದ್ರಣ್ಣ ನವೆಂಬರ್ 5ರಂದು ತಹಶೀಲ್ದಾರ್ ಕೋಠಡಿಯಲ್ಲೇ ನೇಣಿಗೆ ಶರಣಾಗಿದ್ದರು. ತಮ್ಮ …
Read More »ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧ ತನಿಖೆಗೆ ಸರ್ಕಾರ ಮುಂದಾಗಿದೆ.
ಬೆಂಗಳೂರು: ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧ ತನಿಖೆಗೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಲೋಕಾಯುಕ್ತ ಎಸ್‌ಐಟಿ ತಂಡದಿಂದ ತನಿಖೆ ನಡೆಸಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಸಚಿವ ಹೆಚ್.ಕೆ ಪಾಟೀಲ್ ಅವರು, 10 ಗಣಿ ಕಂಪನಿಗಳವಿರುದ್ಧ ತನಿಖೆಗೆ ನಿರ್ಣಯ ಕೈಗೊಳ್ಳಲಾಗಿದೆ. ಲೋಕಾಯುಕ್ತ ಎಸ್ ಐಟಿ ತನಿಖೆಗೆ ವಹಿಸಲು ನಿರ್ಧಾರ …
Read More »ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠಕ್ಕೆ ಕುಸಿದ ರೂಪಾಯಿ ಮೌಲ್ಯ
ಮುಂಬೈ, ನ.14- ಇಂದು ಬೆಳಿಗ್ಗೆ ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ 1 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 84.40 ಕ್ಕೆ ತಲುಪಿತು. ನಿರಂತರವಾಗಿ ವಿದೇಶಿ ನಿಧಿಯ ಹೊರ ಹರಿವು ಮತ್ತು ಹೂಡಿಕೆದಾರರಿಂದ ಬಲವಾದ ಡಾಲರ್ ಬೇಡಿಕೆಯಿಂದ ರೂಪಾಯಿ ತೂಗಿದೆ ಎಂದು ವಿಶ್ಲೇಷಿಸಲಾಗಿದೆ. ಇಂಟರ್‌ಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ರೂಪಾಯಿಯು ಗ್ರೀನ್‌ಬ್ಯಾಕ್ ವಿರುದ್ಧ 84.40 ಕ್ಕೆ ಪ್ರಾರಂಭವಾಯಿತು, ಅದರ ಹಿಂದಿನ ಮುಕ್ತಾಯಕ್ಕಿಂತ 1 ಪೈಸೆಯ ಕುಸಿತವನ್ನು ದಾಖಲಿಸಿದೆ. ಬುಧವಾರ, …
Read More »ಶಾಸಕರಿಗೆ 50 ಕೋಟಿ ಆಫರ್ : ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್
ಬೆಂಗಳೂರು,ನ.14- ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಯೊಬ್ಬ ಶಾಸಕರಿಗೂ 50 ಕೋಟಿ ರೂ.ಗಳ ಆಮಿಷ ಒಡ್ಡುತ್ತಿರುವುದಾಗಿ ಮುಖ್ಯಮಂತ್ರಿಯವರು ಹೇಳಿರುವುದರಲ್ಲಿ ಅರ್ಥ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿ ಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಎಲ್ಲಾ ಪ್ರಯತ್ನಗಳನ್ನೂ ಸತತವಾಗಿ ನಡೆಸುತ್ತಿವೆ. ಮುಡಾ ಪ್ರಕರಣದ ಆರೋಪ ಸೇರಿದಂತೆ ಎಲ್ಲಾ ಯತ್ನಗಳೂ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿಯೇ ನಡೆಯುತ್ತಿವೆ ಎಂದರು. ಈಗ ಶಾಸಕರಿಗೆ ಆಮಿಷವೊಡ್ಡಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿದ್ದಾರೆ. …
Read More »ಇಂದು ಚಿನ್ನ, ಬೆಳ್ಳಿ ಬೆಲೆ ಭಾರೀ ಇಳಿಕೆ: ಬಂಗಾರ ಖರೀದಿ ಮಾಡುವವರಿಗೆ ಇವತ್ತೇ ಒಳ್ಳೇ ಟೈಮ್
ಬೆಂಗಳೂರು, ನವೆಂಬರ್ 14: ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಕಡಿಮೆಯಾಗಿದ್ದು, ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಬಂಗಾರದ ದರ ಇಂದು ಭಾರೀ ಇಳಿಕೆ ಕಂಡಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಬಂಗಾರದ ದರ ರೂಪಾಯಿ 69,350 ಆಗಿದ್ದು, ರೂ.1,100 ಇಳಿಕೆಯಾಗಿದೆ. ಚಿನ್ನದ ಬೆಲೆ ಇಂದು (ಗುರುವಾರ) ಗ್ರಾಮ್ಗೆ 110 ರೂನಷ್ಟು ಕುಸಿತ ಕಂಡಿದೆ. ಅಪರಂಜಿ ಚಿನ್ನದ ಬೆಲೆ 120 ರೂನಷ್ಟು …
Read More »ಆಕಸ್ಮಿಕ ಗುಂಡಿನ ದಾಳಿಯಿಂದ ಯುವಕನ ಸಾವು: ಎಸ್‌ಪಿ
ಬೆಳಗಾವಿ: ‘ಖಾನಾಪುರ ತಾಲ್ಲೂಕಿನ ಹಲಸಿ ಬಳಿ ವ್ಯಕ್ತಿಯೊಬ್ಬರು ಆಕಸ್ಮಿಕ ಗುಂಡಿನ ದಾಳಿಯಿಂದ ಮೃತಪಟ್ಟಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಐವರನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಕಸ್ಮಿಕ ಗುಂಡಿನ ದಾಳಿಗೆ ಕಾರಣವಾದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಹೊಂದಿರುವ ಪ್ರಕರಣವೂ ಕೊಲೆಗೆ ಸಮಾನವಾಗಿದೆ. ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದಕ್ಕಾಗಿ ಮತ್ತು ಆರೋಪಿಗಳು ನವಿಲುಗಳ ಬೇಟೆಯಾಡಿದ ಕಾರಣ ವನ್ಯಜೀವಿ ಸಂರಕ್ಷಣಾ …
Read More »