Breaking News

Daily Archives: ನವೆಂಬರ್ 17, 2024

ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಶರಾವತಿನಗರ ಬಳಿ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಹಾಗೂ ಸಹಕರಿಸಿದ ಮೂವರನ್ನು ಹಳೇಹುಬ್ಬಳ್ಳಿ ಪೊಲೀಸರು ಶನಿವಾರ (ನ.16) ಬಂಧಿಸಿ, ಸ್ಕೂಟಿ ಮತ್ತು ಐದು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಹಳೇಹುಬ್ಬಳ್ಳಿಯ ಅಯೋಧ್ಯಾನಗರ ನಿವಾಸಿಗಳಾದ ಶುಭಂ ತಡಸ, ಮೆಹಬೂಬ ಹಿತ್ತಲಮನಿ ಹಾಗೂ ಇವರಿಗೆ ಸಹಕರಿಸಿದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ ನರೇಂದ್ರ ಬಂಧಿತರಾಧವರು.   ಎರಡು ದಿನಗಳ ಹಿಂದೆ ಬಾಲಕಿಯು ಶಾಲೆಯಿಂದ ಮನೆಗೆ ತೆರಳುವಾಗ ಸ್ಕೂಟಿಯಲ್ಲಿ ಹಿಂಬಾಲಿಸುತ್ತಾ ಬಂದ ಯುವಕರಿಬ್ಬರು ಚುಡಾಯಿಸಿದ್ದರು. …

Read More »

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

ದಾವಣಗೆರೆ: ‘ವಕ್ಫ್ ಆಸ್ತಿ ವಿಚಾರವಾಗಿ ಪ್ರತ್ಯೇಕವಾಗಿ ಪಾದಯಾತ್ರೆ ಹೊರಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಪಕ್ಷದ ರಾಷ್ಟ್ರೀಯ ವರಿಷ್ಠರು ತಡೆಯಬೇಕು. ಇಲ್ಲದಿದ್ದರೆ ಅನಿವಾರ್ಯವಾಗಿ ನಾವೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಚರ್ಚಿಸಿ ಪ್ರತ್ಯೇಕ ಪಾದಯಾತ್ರೆ ನಡೆಸಬೇಕಾಗುತ್ತದೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.   ಶನಿವಾರ (ನ16)ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇಣುಕಾಚಾರ್ಯ ‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ರಾಜಕೀಯ ಏಳಿಗೆ ಸಹಿಸದ ಕೆಲವರು ತಮ್ಮ …

Read More »

‘ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

ವಿಜಯಪುರ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ವಿವಿಧ ಮಠಾಧೀಶರು ಶನಿವಾರ ಹೊಸದಾಗಿ “ಕ್ರಾಂತಿವೀರ ಬ್ರಿಗೇಡ್” ಘೋಷಿಸಿದರು. ವಿಜಯಪುರ ತಾಲೂಕಿನ ಮಖಣಾಪುರ ಸೋಮನಾಥ ಸ್ವಾಮೀಜಿ ಅವರನ್ನು ಬ್ರಿಗೇಡ್‌ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಹಿಂದುಳಿದ ಮತ್ತು ದಲಿತರು ಸೇರಿ ಸಕಲ ಹಿಂದೂ ಧರ್ಮ ಸಮಾಜದ ಸಂಘಟನೆ ಮಾಡಬೇಕು ಎಂಬುವುದು ಎಲ್ಲ ಸ್ವಾಮೀಜಿಗಳ ಉದ್ದೇಶವಾಗಿದೆ. ಈ ಬ್ರಿಗೇಡ್ ಸ್ಥಾಪನೆಯು ಕಾಂತ್ರಿಕಾರಿ ನಿರ್ಧಾರ. ಬಸವನ ಬಾಗೇವಾಡಿಯಲ್ಲಿ ಫೆಬ್ರವರಿ 4ರ ರಥಸಪ್ತಮಿ ದಿನದಂದು ಇದರ ಉದ್ಘಾಟನೆ ನಡೆಯಲಿದೆ ಎಂದು …

Read More »

ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ಕಿಚ್ಚ ಸುದೀಪ್‌ (Kiccha Suddep) ಈ ವಾರ ತಮ್ಮದೇ ಮಾತಿನ ಶೈಲಿಯಲ್ಲಿ ಸ್ಪರ್ಧಿಗಳಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಈ ವಾರ ನಡೆದ ಟಾಸ್ಕ್‌ ಹಾಗೂ ಇತರೆ ವಿಚಾರಗಳ ಕಿಚ್ಚ ಮಾತನಾಡಿದ್ದಾರೆ. ತಲೆ ತಿರುಗಿ ಬಿದ್ದಿದ್ದ ಚೈತ್ರಾ ಅವರು ಚಿಕಿತ್ಸೆ ಪಡೆದು ದೊಡ್ಮನೆಗೆ ಬಂದಿದ್ದಾರೆ. ಮನೆಗೆ ಬಂದ ಕೂಡಲೇ ಚೈತ್ರಾ ಅವರು ಹೊರಗಿನ ಕೆಲ ವಿಚಾರಗಳನ್ನು ಮಂಜು ಅವರ ಬಳಿ ಪಿಸು ದನಿಯಲ್ಲಿ ಹೇಳಿದ್ದಾರೆ. ವಿಕ್ಕಿ ಅಣ್ಣ ನಿಮಗೆ …

Read More »

ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕವಾಗಿ‌ ದಿವಾಳಿಯಾಗಿದ್ದರಿಂದ ಪಡಿತರ ಚೀಟಿಗಳನ್ನು ಕಡಿತ ಮಾಡುತ್ತಿದ್ದೆ. ದಿಢೀರ್ ಆಗಿ ಯಾಕೆ ಬಿಪಿಎಲ್ ಕಾರ್ಡ್ ಕಡಿತ‌ ಯಾಕೆ ಎಂಬುದು‌ ತಿಳಿಯುತ್ತಿಲ್ಲ‌ ಎಂದು‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬೇಸರ‌ ವ್ಯಕ್ತಪಡಿಸಿದರು. ರಾಜ್ಯದ ಆಹಾರ ಮತ್ತು‌ ನಾಗರಿಕ‌ ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ ಸರ್ಕಾರ ಪ್ರತಿಯೊಬ್ಬ ಅರ್ಹ ಪಡಿತರದಾರನಿಗೆ 5 ಕೆ.ಜಿ.ಯಷ್ಟು …

Read More »

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು ಮಾಡಲಾಗುವುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ ರವಿವಾರ (ನ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ …

Read More »

ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್ (Daali Dhananjay) ವಿವಾಹ ಸಂಭ್ರಮದ ಶಾಸ್ತ್ರಗಳು ಆರಂಭಗೊಂಡಿದೆ. ವೈದ್ಯೆ ಧನ್ಯತಾ (Dhanyata) ಜತೆ ನಿಶ್ಚಿತಾರ್ಥ ಕಾರ್ಯಕ್ರಮ ಭಾನುವಾರ (ನ.17ರಂದು) ನೆರವೇರಿದೆ. ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ. ಧನ್ಯತಾ ಅವರಿಗೆ ಉಂಗುರ ತೊಡಿಸಿದ್ದಾರೆ. ಈ ವೇಳೆ ಎರಡೂ ಕುಟುಂಬದ ಆಪ್ತರು ಉಪಸ್ಥಿತಿಯಲ್ಲಿದ್ದರು. ಲಗ್ನ ಪತ್ರಿಕೆ ಬರೆಸುವ ಶಾಸ್ತ್ರ ಹಿರಿಯರು, ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದೆ. ಇದೇ ವೇಳೆ ಮದುವೆಯ ದಿನಾಂಕವನ್ನು …

Read More »

ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

ಬೆಳಗಾವಿ: ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಆರೋಪದಡಿ ತಾಯಿ-ಮಗಳನ್ನು ರಸ್ತೆಗೆ ಎಳೆದು ತಂದು ಬಟ್ಟೆ ಹರಿದು ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ನಗರದ ವಡ್ಡರವಾಡಿ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿದೆ. ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ಹರಿದಾಡಿದ ಅನಂತರ ಘಟನೆ ಬೆಳಕಿಗೆ ಬಂದಿದ್ದು, ಇಂದ್ರಾ ಅಷ್ಟೇಕರ, ಹೂವಪ್ಪ ಅಷ್ಟೇಕರ ಹಾಗೂ ಮಣಿಕಂಠ ಅಷ್ಟೇಕರ ಅವರ ವಿರುದ್ಧ ಮಾಳಮಾರುತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ವಡ್ಡರವಾಡಿಯ ಮಹಿಳೆಯೊಬ್ಬಳನ್ನು ಮಹಾರಾಷ್ಟ್ರದ ಹುಡುಗನಿಗೆ ಮದುವೆ ಮಾಡಿಕೊಡಲಾಗಿತ್ತು. …

Read More »

ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ಬೆಳಗಾವಿ: ರಾಜ್ಯ ಮದ್ಯ ಮಾರಾಟಗಾರರು ನ.20 ರಂದು ಕರೆ ನೀಡಿರುವ ರಾಜ್ಯ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಉಮೇಶ್ ಬಾಳಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ಪ್ರವಾಸೋದ್ಯಮ ಹೋಟೆಲ್ ಬೇರೆ ಅವರ ಸಂಘಟನೆಯೇ ಬೇರೆ. ಹೀಗಾಗಿ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದರು. ಪ್ರವಾಸೋದ್ಯಮ ಹೋಟೆಲ್ ನವರು ಬ್ಯಾಂಕ್ ನಿಂದ ಸಾಲ ಪಡೆದು ಹೆಚ್ಚಿನ …

Read More »

ಬೆಳಗಾವಿ-ಧಾರವಾಡ ವಯಾ ಕಿತ್ತೂರು ನೇರ ರೈಲು ಮಾರ್ಗ ಯಾಕಿಷ್ಟು ವಿಳಂಬ?

ಬೆಳಗಾವಿ, ನವೆಂಬರ್ 17: ಬೆಳಗಾವಿ-ಧಾರವಾಡ ವಯಾ ಕಿತ್ತೂರು ನೇರ ರೈಲು ಮಾರ್ಗ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರ ಕನಸಿನ ಯೋಜನೆ ಇದು. ಯೋಜನೆಯ ಕಾಮಗಾರಿಗೆ ಭೂ ಸ್ವಾಧೀನ ಕಾರ್ಯವೇ ಅಡ್ಡಿಯಾಗಿದೆ. ಈಗಾಗಲೇ ಈ ಯೋಜನೆ ನಕ್ಷೆಯನ್ನು ಯಾವುದೇ ಕಾರಣಕ್ಕೂ ಬದಲಿಸಲಾಗದು. ವಿಶೇಷ ಭೂಸ್ವಾಧೀನ ಅಧಿಕಾರಿಗಳು ತಮ್ಮ ಕೆಲಸ ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಭೆ ನಡೆಸಿದ …

Read More »