Breaking News

Daily Archives: ನವೆಂಬರ್ 19, 2024

ಇಂದಿನಿಂದ ಮೂರು ದಿನ ‘ಬೆಂಗಳೂರು ಟೆಕ್ ಶೃಂಗಸಭೆ’ ಆಯೋಜನೆ |Bangalore Tech Summit

ಬೆಂಗಳೂರು : ಬೆಂಗಳೂರು ಟೆಕ್ ಶೃಂಗಸಭೆ ಇಂದು ನವೆಂಬರ್ 19 ರಿಂದ 21ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ.   ಆಸ್ಟ್ರೇಲಿಯಾ, ಬ್ರಿಟನ್, ಫ್ರಾನ್ಸ್, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್, ಇಸ್ರೇಲ್, …

Read More »

ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

ನಮ್ಮ ದೇಶದ ವಾಣಿಜ್ಯ ರಾಜಧಾನಿ ಮುಂಬಯಿಯನ್ನು ಹೊಂದಿರುವ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ನ.20ರಂದು ಒಂದೇ ಹಂತದಲ್ಲಿ ನಡೆಯಲಿದೆ. 2019ಕ್ಕೆ ಹೋಲಿಕೆ ಮಾಡಿದರೆ 2024ರಲ್ಲಿ ನಡೆಯಲಿರುವ ಚುನಾವಣೆ ಒಂದು ರೀತಿ “ಮಾಡು ಇಲ್ಲವೇ ಮಡಿ’ ಎಂಬ ನಾಣ್ಣುಡಿಯನ್ನು ಪ್ರತಿನಿಧಿಸುತ್ತದೆ ಎಂದರೆ ತಪ್ಪಾಗಲಾರದು. ಅದಕ್ಕೆ ಕಾರಣಗಳೂ ಇಲ್ಲದಿಲ್ಲ. 288 ಸದಸ್ಯ ಬಲದ ವಿಧಾನಸಭೆಗೆ 2019ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಗೆ 105, ಶಿವಸೇನೆಗೆ 56, ಎನ್‌ಸಿಪಿಗೆ 54, ಕಾಂಗ್ರೆಸ್‌ಗೆ 44, ಪಕ್ಷೇತರರು ಮತ್ತು ಇತರರು …

Read More »

ಕನ್ನಡ ಪುಸ್ತಕಗಳಿಗೆ ಶೇಕಡ 50ರಷ್ಟು ಭಾರಿ ರಿಯಾಯಿತಿ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಅಕಾಡೆಮಿಗಳು, ಪ್ರಾಧಿಕಾರದಿಂದ ಪ್ರಕಟಿಸುವ ಪುಸ್ತಕಗಳನ್ನು ಶೇಕಡ 50 ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಕನಕದಾಸರು ನೆಲೆಸಿದ್ದ ಸ್ಥಳ ಅಭಿವೃದ್ಧಿ ಪಡಿಸಬೇಕು. ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡುವುದಕ್ಕೆ ಒಪ್ಪಿಗೆ ನೀಡುವಂತೆ …

Read More »

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

ಮುಂಬೈ/ ರಾಂಚಿ: ಮಹಾರಾಷ್ಟ್ರದ ಎಲ್ಲಾ 288 ಕ್ಷೇತ್ರಗಳಿಗೆ ಹಾಗೂ ಜಾರ್ಖಂಡ್‌ನ‌ 38 ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯಲಿದ್ದು, ಸೋಮವಾರ ಉಭಯ ರಾಜ್ಯಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಉಭಯ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಂತಹ ಘಟಾನುಘಟಿಗಳು ಪ್ರಚಾರ ನಡೆಸಿದ್ದು, ಫ‌ಲಿತಾಂಶ ಭಾರಿ ಕುತೂಹಲ ಮೂಡಿಸಿದೆ.   ಮಹಾರಾಷ್ಟ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್‌ ಪವಾರ್‌ ಬಣದ …

Read More »

ಸಿದ್ದರಾಮಯ್ಯಗೆ ಮುಡಾ ಸಂಕಷ್ಟ! ಮಾಜಿ ಆಯುಕ್ತರಿಗೆ ಲೋಕಾಯುಕ್ತ ನೋಟಿಸ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಾಗಿನಿಂದ ಮುಡಾ ಹಗರಣ (MUDA Scam) ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದು ರಾಜ್ಯದ ಮುಖ್ಯಮಂತ್ರಿಗಳ ಸುತ್ತ ಗಿರಕಿಹೊಡೆಯುತ್ತಿದ್ದು, ಇದೀಗ ಮತ್ತೆ ಸಿದ್ದರಾಮಯ್ಯ (Siddaramaiah) ಅವರಿಗೆ ಸಂಕಷ್ಟು ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರಿಗೆ ಲೋಕಯುಕ್ತ ನೋಟಿಸ್ …

Read More »

ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

ಬೆಂಗಳೂರು: ವಕ್ಫ್ ವಿಷಯ‌ದ ಜತೆಗೆ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತಿರುವ ವಿಷಯವನ್ನೂ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ನಡೆಸುವ ಹೋರಾಟಕ್ಕೆ ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದ್ದು, ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲೂ ಈ ವಿಚಾರವನ್ನು ಮುನ್ನೆಲೆಗೆ ತರಲಿದೆ.   ವಕ್ಫ್ ವಿಷಯಕ್ಕೆ ಸಂಬಂಧಪಟ್ಟಂತೆ ನ. 21, 22ರಂದು ಎಲ್ಲ ಜಿಲ್ಲೆಗಳಲ್ಲಿ ಹೋರಾಟ ನಡೆಸುವ ಸಂದರ್ಭದಲ್ಲೇ ಬಿಪಿಎಲ್‌ ಕಾರ್ಡ್‌ ವಿಷಯವೂ ಪ್ರಸ್ತಾವವಾಗಲಿದೆ. ಆದರೆ ಅಧಿವೇಶನದಲ್ಲಿ ಈ ಅಂಶವನ್ನು ಪ್ರಬಲವಾಗಿ ಪ್ರಯೋಗಿಸುವುದಕ್ಕೆ ಬಿಜೆಪಿ ನಿರ್ಧರಿಸಿದೆ. ಈ …

Read More »