ಸೈಫ್ ಅಲಿ ಖಾನ್ ಮಗ ಇಬ್ರಾಹಿಂ ಅಲಿ ಖಾನ್ ಆಗಾಗ ಸುದ್ದಿ ಆಗುತ್ತಾರೆ. ಸ್ಟಾರ್ ಹೀರೋನ ಮಗ ಎನ್ನುವ ಕಾರಣಕ್ಕೆ ಅವರ ಹೆಸರು ಆಗಾಗ ಚರ್ಚೆಗೆ ಬರುತ್ತದೆ. ಅವರು ಕಂಡಾಗ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಈಗ ಅವರ ವೈಯಕ್ತಿಕ ವಿಚಾರಕ್ಕೆ ಸುದ್ದಿ ಆಗುತ್ತಿದ್ದಾರೆ. ನಟಿಯೊಬ್ಬರ ಜೊತೆ ಸುತ್ತಾಟ ನಡೆಸುತ್ತಾ ಇದ್ದಾರೆ. ಇವರು ಈ ವಿಚಾರವನ್ನು ಮುಚ್ಚಿಡುತ್ತಿಲ್ಲ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ. ಇಬ್ರಾಹಿಂ …
Read More »Monthly Archives: ನವೆಂಬರ್ 2024
ವಿಜಯೋತ್ಸವ ಸಂದರ್ಭದಲ್ಲಿ ಬೆಂಕಿ ಅವಘಡ.
ವಿಜಯೋತ್ಸವ ಸಂದರ್ಭದಲ್ಲಿ ಬೆಂಕಿ ಅವಘಡ. ಆರತಿ ಮಾಡುವ ಸಂದರ್ಭದಲ್ಲಿ ಹೊತ್ತಿಕೊಂಡ ಬೆಂಕಿ ಹಲವರಿಗೆ ತೀವ್ರ ಗಾಯ. ಚಂದಗಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ವಿಜಯೋತ್ಸವ ಸಂದರ್ಭದಲ್ಲಿ ಅವಘಡ. ಕೊಲ್ಲಾಪುರ ಜಿಲ್ಲೆಯ ಚಂದಗಡ ಮತಕ್ಷೇತ್ರದ ಮಹಗಾಂವ ಗ್ರಾಮದಲ್ಲಿ ಘಟನೆ. ನೂತನ ಶಾಸಕ ಶಿವಾಜಿ ಪಾಟೀಲ ವಿಜಯೋತ್ಸವದಲ್ಲಿ ತಪ್ಪಿದ ಭಾರಿ ಅನಾಹುತ. ಆರತಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಲಾಲ ಹಾಕುವಾಗ ಘಟನೆ. ಆರತಿ ಮೇಲೆ ಗುಲಾಲ ಬೀಳ್ತಿದ್ದಂತೆ ಏಕಾಏಕಿ ಹೊತ್ತಿದ …
Read More »ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು:
ದೇವನಹಳ್ಳಿ, ನವೆಂಬರ್ 23: ಆಕೆ ಎರಡು ವರ್ಷಗಳಿಂದಷ್ಟೇ ಪ್ರೀತಿಸಿದವನ ಜೊತೆ ಬಾಳಬೇಕು ಅಂತ ಮನೆಯವರನ್ನ ಒಪ್ಪಿಸಿ ಮದುಯಾಗಿದ್ದರು. ಜೊತೆಗೆ ಆರು ತಿಂಗಳಿಂದೆ ಗರ್ಭಿಣಿಯಾಗಿದ್ದು (pregnant), ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ಅಷ್ಟರಲ್ಲೇ ಗಂಡನ ಮನೆಯವರು ನೀಡಿದ ಕಿರುಕುಳಕ್ಕೆ ಬೇಸತ್ತು ಸಾವಿನ ಮನೆ ಸೇರಿದ್ದು, ಮಗಳ ಚೊಚ್ಚಲ ಬಾಣಂತನದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿ ನಿವಾಸಿ ಸುರೇಶ್ ಜೊತೆ ಕಳೆದ 2 ವರ್ಷದಿಂದಷ್ಟೆ ಹಸೆಮಣೆ ಏರಿದ್ದ …
Read More »ಚನ್ನಪಟ್ಟಣ ಫಲಿತಾಂಶ: ನಿಖಿಲ್ ಸೋಲಿನ ಬೆನ್ನಲ್ಲೇ ಜೆಡಿಎಸ್ಗೆ ಶುರುವಾಯ್ತು ಹೊಸ ಆತಂಕ!
ಬೆಂಗಳೂರು, ನವೆಂಬರ್ 24: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ದೊಡ್ಡ ಆಘಾತವೇ ಎದುರಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಲೆಕ್ಕಾಚಾರ ಸಂಪೂರ್ಣ ಉಲ್ಟಾಪಲ್ಟಾ ಆಗಿದೆ. ಇದರಿಂದಾಗಿ ದಳಪತಿಗಳಿಗೆ ಆತಂಕವೂ ಹೆಚ್ಚಾಗಿದೆ. ನಿಖಿಲ್ ಸೋಲಿನಿಂದಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್ಗೆ ಹೊಸ ಟೆನ್ಷನ್ ಕೂಡ ಆರಂಭವಾಗಿದೆ .ಸದ್ಯ ಉಪಚುನಾವಣೆ ಗೆಲುವಿನ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಡಿಕೆ ಸಹೋದರರು ಲಗ್ಗೆ ಇಟ್ಟಿದ್ದಾರೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಸಹೋದರರ ಪ್ರವೇಶದಿಂದಾಗಿ ಒಕ್ಕಲಿಗ ಜೆಡಿಎಸ್ ನಾಯಕರನ್ನು …
Read More »ರಾಜ್ಯದಲ್ಲಿ ಕಿಂಗ್ ಮೇಕರ್ ಆಗಿ ಹೊರಹೊಮ್ಮಿದ ಸತೀಶ ಜಾರಕಿಹೊಳಿ – ಶಾನೂಲ ತಾಶೀಲ್ದಾರ್
ಹುಕ್ಕೇರಿ : ರಾಜ್ಯದಲ್ಲಿ ಕಿಂಗ್ ಮೇಕರ್ ಆಗಿ ಹೊರಹೊಮ್ಮಿದ ಸತೀಶ ಜಾರಕಿಹೊಳಿ – ಶಾನೂಲ ತಾಶೀಲ್ದಾರ್ ರಾಜ್ಯದಲ್ಲಿಯ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯ ಭೇರಿ ಗಳಿಸಲು ಅಹಿಂದ ಮತಗಳನ್ನು ಹಿಡಿದಿಟ್ಟಕೊಂಡ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಕಿಂಗ್ ಮೇಕರ ಆಗಿ ಹೋರ ಹೋಮ್ಮಿದ್ದಾರೆ ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಅಧ್ಯಕ್ಷ ಶಾನೂಲ ತಹಸಿಲ್ದಾರ ಹೇಳಿದರು. ಅವರು ಇಂದು ರಾಜ್ಯದಲ್ಲಿಯ ಸೊಂಡೂರು , ಶಿಗ್ಗಾವಿ ಮತ್ತು …
Read More »ಯಮಕನಮರ್ಡಿ ಪೊಲೀಸರ ಕಾರ್ಯಕ್ಕೆ ಶ್ಲಾಘನೆ
ಯಮಕನಮರ್ಡಿ ಪೊಲೀಸರ ಕಾರ್ಯಕ್ಕೆ ಶ್ಲಾಘನೆ ಚಿನ್ನಾಭರಣ ಕದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸುವಲ್ಲಿ ಯಮನಕನಮರ್ಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಬರುವ ಇಸ್ಲಾಂಪುರದ ಅಡಿವೆಪ್ಪ ಲಗಮಪ್ಪ ಬಾಗರಾಯಿ ಅವರ 30 ಗ್ರಾಮ ಚಿನ್ನ ಕಳುವಾಗಿತ್ತು. ಇನ್ನು ಯಮಕನಮರ್ಡಿಯ ಸವಿತಾ ಬಸವರಾಜ್ ನಗಾರಿ ಅವರ 25 ಗ್ರಾಮ ಚಿನ್ನವನ್ನು ಕದಿಯಲಾಗಿತ್ತು. ಯಮಕನಮರ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ಬೇಡರಹಟ್ಟಿ ಮೂಲದ ಸದ್ಯ …
Read More »ರಾಜ್ಯದ ಮೂರು ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವುದು ನಿರಾಸೆ ತಂದಿದೆ : ಬಿ ವೈ ವಿಜಯೇಂದ್ರ
ರಾಜ್ಯದ ಮೂರು ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವುದು ನಿರಾಸೆ ತಂದಿದೆ : ಬಿ ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ರಾಜ್ಯದ ಮೂರು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವ ಕುರಿತು ಮಾತನಾಡಿದ್ದಾರೆ.ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಮಿತ್ರಪಕ್ಷ ಜೆಡಿಎಸ್ ಹಾಗೂ ಸಂಡೂರು ಹಾಗೂ ಶಿಗ್ಗಾಂವಿಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿತ್ತು. ಆದರೆ, ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ …
Read More »ಚಳಿಗಾಲ ಅಧಿವೇಶನ: ವಿವಿಧ ಸಮಿತಿಗಳ ಸಭೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ
ಬೆಳಗಾವಿ, ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಪ್ರತಿವರ್ಷದಂತೆ ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಥತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವಸತಿ, ಸಾರಿಗೆ ಮತ್ತು ಊಟೋಪಹಾರ ಸೇರಿದಂತೆ ಯಾವುದೇ ಅನಾನುಕೂಲ ಆಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ವಿಧಾನಮಂಡಳ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ(ನ.23) ಜರುಗಿದ ವಿವಿಧ ಉಪ ಸಮಿತಿಗಳ ಅಧ್ಯಕ್ಷರುಗಳು ಹಾಗೂ …
Read More »ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ರಲ್ಲಿ ನಡೆದ ಬೆಳಗಾವಿ ಜಿಲ್ಲಾ ಪೊಲೀಸದಿಂದ ಮಾಯಾ
ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ರಲ್ಲಿ ನಡೆದ ಬೆಳಗಾವಿ ಜಿಲ್ಲಾ ಪೊಲೀಸದಿಂದ ಮಾಯಾ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ ಇಲಾಖೆಯ ಸ್ಪೋಟಕ ಪತ್ತೆ ವಿಭಾಗದ ಶ್ವಾನ ಮಾಯಾ ಪ್ರಥಮ ಸ್ಥಾನ ಪಡೆದಿದೆ. ಸಿಬ್ಬಂದಿಗಳಾದ ಎಮ್ ಯಮಗರ್ ಮತ್ತು ಮಂಜು ಕಸವನ್ನವರ ಮಾಯಾ ಶ್ವಾನವನ್ನು ಹ್ಯಾಂಡಲಿಂಗ್ ಮಾಡುತ್ತಾರೆ. ಇನ್ನು ಬೆಳಗಾವಿ ನಗರ ಪೊಲೀಸ್ ಇಲಾಖೆಯ …
Read More »ಪೊಲೀಸರ ಮೇಲೆ ಹಲ್ಲೆ ಮಾಡಿದ್ದವನ ಕಾಲಿಗೆ ಗುಂಡೇಟು
ಗದಗ, ನವೆಂಬರ್ 23: ಪೊಲೀಸರ್ ಮೇಲೆ ಹಲ್ಲೆ ಮಾಡಿ ಪರಾರಿ ಆಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡಿನ (Shot) ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ. ಆರೋಪಿ ಬಗರ್ ಅಲಿ ಇರಾನಿ ಮೇಲೆ ಫೈರಿಂಗ್ ಮಾಡಲಾಗಿದೆ. ಗಂಗಾವತಿ ಪೊಲೀಸರ ಮೇಲೆ ಹಲ್ಲೆ ಕೇಸ್ನಲ್ಲಿ ಬೆಟಗೇರಿ ಬಡಾವಣೆ ಪೊಲೀಸರಿಂದ ಬಂಧಿಸಲಾಗಿತ್ತು. ಹೊಳೆಆಲೂರಗೆ ಪಂಚನಾಮೆ ಹೋಗಿ ವಾಪಸ ಬರುವಾಗ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ …
Read More »