ಮುಂಬಯಿ: ಮಹಿಳೆಯೊಬ್ಬಳು ಪುರುಷನೊಂದಿಗೆ ಹೊಟೇಲ್ ರೂಂ ಕಾಯ್ದಿರಿಸಿ, ಆತನೊಂದಿಗೆ ಹೋದರೆ ಅದು ಲೈಂಗಿಕ ಕ್ರಿಯೆಗೆ ಸಮ್ಮತಿ ಸೂಚಿಸಿದಂತೆ ಅರ್ಥವಲ್ಲ ಎಂದು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಹೇಳಿದೆ. ಹೊಟೇಲ್ ರೂಮನ್ನು ಮಹಿಳೆ, ಪುರುಷರಿಬ್ಬರೂ ಸೇರಿಯೇ ಕಾಯ್ದಿರಿಸಿದ ಬಗ್ಗೆ ದಾಖಲೆಗಳಿದ್ದರೂ, ಅದರರ್ಥ ಲೈಂಗಿಕ ಕ್ರಿಯೆ ಬಗ್ಗೆ ಮಹಿಳೆಯ ಸಮ್ಮತಿಯಿದೆ ಎಂದಲ್ಲ ಎಂದು ನ್ಯಾಯಪೀಠ ಹೇಳಿದೆ. 2021ರಲ್ಲಿ ಮಡ್ಗಾಂವ್‌ನ ಕೋರ್ಟ್ ಅತ್ಯಾಚಾರ ಆರೋಪಿ ಗುಲ್ಶರ್ ಅಹ್ಮದ್ ಎಂಬಾತನ ಬಿಡುಗಡೆಗೆ ಆದೇಶಿಸಿತ್ತು. ರೂಂ ಕಾಯ್ದಿರಿಸುವಾಗ ಮಹಿಳೆಯೂ …
Read More »Monthly Archives: ನವೆಂಬರ್ 2024
ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ
ರಾಮನಗರ: ಎಚ್.ಡಿ. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಇದೀಗ ನಾನು 2 ಬಾರಿ ಮುಖ್ಯಮಂತ್ರಿಯಾದೆ ಎಂದು ಅವರಿಗೆ ಹೊಟ್ಟೆಹುರಿ. ನನಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಸರಕಾರವನ್ನು ಕಿತ್ತೂಗೆಯುತ್ತೇನೆ ಎನ್ನುತ್ತಿದ್ದಾರೆ. ದೇವೇಗೌಡರೇ ಇದು ನಿಮ್ಮ ಪಾಳೆಗಾರಿಕೆಯಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ಸೋಮವಾರ ಚನ್ನಪಟ್ಟಣ ಉಪಚುನಾವಣೆಯ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ನಾನು ಮತ್ತು ಜಾಲಪ್ಪ ಇಲ್ಲದೇ ಹೋಗಿದ್ದರೆ 1994ರಲ್ಲಿ ನೀವು ಮುಖ್ಯಮಂತ್ರಿ …
Read More »ಮಹಿಳೆಯಾಗಿ ಬದಲಾದ ಟೀಂ ಇಂಡಿಯಾ ಮಾಜಿ ಕೋಚ್ ಪುತ್ರ!
ಹೊಸದಿಲ್ಲಿ: ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್, ಮಾಜಿ ಕೋಚ್ ಸಂಜಯ್ ಬಂಗಾರ್ ಅವರ ಪುತ್ರ ಇದೀಗ ಹೆಣ್ಣಾಗಿ ಬದಲಾಗಿದ್ದಾರೆ. ಸಂಜಯ್ ಬಂಗಾರ್ (Sanjay Bangar) ಮಗ ಆರ್ಯನ್ ಈಗ ಹಾರ್ಮೋನ್ ರಿಪ್ಲೇಸ್ಮೆಂಟ್ ಥೆರಪಿ ಮಾಡಿಸಿಕೊಂಡು ‘ಟ್ರಾನ್ಸ್ ವುಮನ್’ ಅಗಿದ್ದು, ಫೋಟೊಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಆರ್ಯನ್ ಬಂಗಾರ್ ಇದೀಗ ಹೆಸರು ಕೂಡಾ ಬದಲಾಯಿಸಿಕೊಂಡಿದ್ದಾರೆ. ಆರ್ಯನ್ ಇದ್ದವರು ಇದೀಗ ಅನಾಯಾ ಆಗಿದ್ದಾರೆ. ಅವರು ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ …
Read More »ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
ರಾಯಚೂರು: ಹುಲಿಯಂತಿದ್ದ ಸಿಎಂ ಸಿದ್ದರಾಮಯ್ಯ ಈಗ ಕಾಂಗ್ರೆಸ್ ನಲ್ಲಿ ಇಲಿಯಂತಾಗಿದ್ದಾರೆ. ಅವರ ಸ್ಥಿತಿ ಕಂಡರೆ ಅಯ್ಯೊ ಎನಿಸುತ್ತಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ (Ramesh Jarakiholi) ಲೇವಡಿ ಮಾಡಿದರು. ನಗರದಲ್ಲಿ ಮಾಜಿ ಸಂಸದ ಬಿ.ವಿ.ನಾಯಕರ ಗೃಹಕಚೇರಿಯಲ್ಲಿ ಸೋಮವಾರ (ನ.11) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಲ್ಲಾ ಸಮುದಾಯಗಳ ಪರ ಕಾಳಜಿ ಹೊಂದಿದ್ದ ಸಿದ್ದರಾಮಯ್ಯನವರು ಈಗ ಒಂದು ಸಮುದಾಯದ ಪರ ನಿಂತಿರುವುದು ವಿಪರ್ಯಾಸ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ …
Read More »ಚೋದನಕಾರಿ ಭಾಷಣ: ಮಾಶ್ಯಾಳ ಶ್ರೀ ಗಳ ವಿರುದ್ಧ ಎಫ್‌ಐಆರ್
ಕಲಬುರಗಿ: ಸಮಾಜದಲ್ಲಿಂದು ಅನ್ಯಾಯ, ಶೋಷಣೆ ಹೆಚ್ಚಳವಾಗುತ್ತಿದೆ. ಹೀಗಾಗಿ ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು ತಲ್ವಾರ್ ಕೊಡಿ ಎಂಬುದಾಗಿ ಪ್ರಚೋದನಾಕಾರಿ ಭಾಷಣ ಮಾಡಿರುವ ಆರೋಪದ ಮೇರೆಗೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶ್ಯಾಳ ಸ್ವಾಮೀಜಿ ವಿರುದ್ದ ಎಫ್‌ಐಆರ್ ದಾಖಲಾಗಿದೆ. ಮಾಶ್ಯಾಳದ ಶ್ರೀ ಮರುಳಾರಾಧ್ಯ ಶಿವಾಚಾರ್ಯರ ವಿರುದ್ದ ಎಫ್‌ಐಆರ್ ದಾಖಲಾಗಿದ್ದು, ಪ್ರಚೋದನಕಾರಿ ಭಾಷಣ ಹಿನ್ನೆಲೆ ಅಫಜಲಪುರ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಪ್ರಚೋದನಕಾರಿ ಮಾತು, ಕಾನೂನು ಸುವ್ಯವಸ್ಥೆಗೆ ಭಂಗ ತರುವ …
Read More »ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ-63ರ ಯಲ್ಲಾಪುರ ತಾಲೂಕಿನ ಇಡಗುಂದಿಯ ಬಳಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ಧ ಘಟನೆ ಸೋಮವಾರ(ನ.11)ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬಲಬದಿಗೆ ಹೋಗಿ ಸುರಕ್ಷತೆಗೆ ಅಳವಡಿಸಿದ ತಡೆಬೇಲಿ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗದ್ದೆಗೆ ಉರುಳಿ ಬಿದ್ದಿದೆ. ಲಾರಿ ಸಂಪೂರ್ಣ ಜಖಂ ಆಗಿದ್ದು,ಚಾಲಕ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read More »ಸೀಟಿಗಾಗಿ ರೈಲಿನಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು
ಬೆಳಗಾವಿ: ರೈಲಿನಲ್ಲಿ ಪ್ರಯಾಣಿಕರು ಸೀಟಿಗಾಗಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳಗಾವಿ ರೈಲ್ವೆ ನಿಲ್ದಾಣದ ರೈಲಿನಲ್ಲಿ ನಡೆದಿದೆ. ಬೆಳಗಾವಿಯಿಂದ ಕೆಎಸ್‌ಆರ್ ಬೆಂಗಳೂರಿಗೆ ಹೊರಟಿದ್ದ ಸೂಪರ್ ಫಾಸ್ಟ್ ರೈಲಿನಲ್ಲಿ ಸೀಟಿಗಾಗಿ ಇಬ್ಬರು ಪ್ರಯಾಣಿಕರ ನಡುವೆ ವಾಗ್ವಾದ ನಡೆದು ನಂತರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಅವಾಚ್ಯ ಶಬ್ದಗಳಿಂದ ನಿಂದನೆ ಮೂಲಕ ಇಬ್ಬರೂ ಹೊಡೆದಾಡಿಕೊಂಡರು. ಪ್ರಯಾಣಿಕರು ಬಡಿದಾಡಿಕೊಳ್ಳುವ ಮತ್ತೊಬ್ಬ ಪ್ರಯಾಣಿಕ ಮೊಬೈಲ್ ನಲ್ಲಿ ಇದನ್ನು ಸೆರೆ ಹಿಡಿದಿದ್ದಾರೆ. ರೈಲ್ವೆ ಪೋಲಿಸರು ಬಂದು …
Read More »ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಗ್ರೀನ್ ಸಿಗ್ನಲ್
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ದರ್ಶನ್ ಗೆ ಚಿಕಿತ್ಸೆಗೆಂದು ಮಧ್ಯಂತರ ಜಾಮೀನು ನೀಡಿದೆ. ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ದರ್ಶನ್ ಗೆ ಫಿಜಿಯೋಥೆರಪಿ ಜೊತೆ ಸರ್ಜರಿ …
Read More »ಏ ಕುಮಾರಸ್ವಾಮಿ ನಿನ್ ರೇಟ್ ಹೇಳು, ಮುಸಲ್ಮಾನರಿಂದ ಚಂದಾ ಎತ್ತಿ ಇಡೀ ನಿನ್ನ ಕುಟುಂಬ ಖರೀದಿ ಮಾಡ್ತೇನೆ: ಸಚಿವರ ಶಾಕಿಂಗ್ ಹೇಳಿಕೆ!
ರಾಮನಗರ: ಚನ್ನಪಟ್ಟಣ ಉಪ ಚುನಾವಣೆ (Channapatna By-Election) ಕಣ ದಿನದಿಂದ ದಿನಕ್ಕೆ ರಂಗೇರಿದ್ದು ಕಾಂಗ್ರೆಸ್ (Congress) ಅಭ್ಯರ್ಥಿ ಸಿ ಪಿ ಯೋಗೇಶ್ವರ್ (CP Yogeshwar) ಮತ್ತು ಎನ್ಡಿಎ (NDA) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪರ ಪ್ರಮುಖ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಜನರ ಮತವನ್ನು ಸೆಳೆಯಲು ಕಸರತ್ತು ನಡೆಸುತ್ತಿರುವ ನಾಯಕರು, ಪರಸ್ಪರ ಆರೋಪ ಮತ್ತು ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಭಾನುವಾರ ರಾತ್ರಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ …
Read More »ಪ್ರಜ್ವಲ್ ರೇವಣ್ಣಗೆ ‘ಕಂಬಿ’ ಎಣಿಕೆ ಫಿಕ್ಸ್
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಇಡೀ ರಾಜ್ಯ ಅಷ್ಟೇ ಅಲ್ಲದೆ, ದೇಶಾದ್ಯಂತ ಸದ್ದು ಮಾಡಿತ್ತು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ನವೆಂಬರ್ 11) ಸುಪ್ರೀಂಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಅವರಿಗೆ ಇನ್ಮುಂದೆ ಜೈಲೂಟ ಫಿಕ್ಸ್ ಆದಂತಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇನ್ನು …
Read More »