Breaking News

Monthly Archives: ನವೆಂಬರ್ 2024

ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

ವಾಷಿಂಗ್ಟನ್:‌ ಇಡೀ ಜಗತ್ತಿನ ಕುತೂಹಲಕ್ಕೆ ಕಾರಣವಾಗಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ನೇತೃತ್ವದ ರಿಪಬ್ಲಿಕನ್‌ ಪಕ್ಷ ಜಯಭೇರಿ ಬಾರಿಸಿರುವುದಾಗಿ ಬುಧವಾರ (ನ.06) ಘೋಷಿಸುವ ಮೂಲಕ ಟ್ರಂಪ್‌ 2ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.   ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ 270ಕ್ಕೂ ಅಧಿಕ ಎಲೆಕ್ಟ್ರೊರಲ್‌ ಮತ ಪಡೆದು ಜಯಭೇರಿ ಬಾರಿಸಿದ್ದು, ಕಮಲಾ ಹ್ಯಾರಿಸ್‌ 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ …

Read More »

ಲೈಂಗಿಕ ದೌರ್ಜನ್ಯ ಪ್ರಕರಣ; ʼಪ್ರೇಮಂʼ ನಟ ನಿವಿನ್‌ ಪೌಲಿಗೆ ಕ್ಲೀನ್‌ ಚಿಟ್

ತಿರುವನಂತಪುರ: ಜಸ್ಟೀಸ್‌ ಕೆ. ಹೇಮಾ ಸಮಿತಿ ವರದಿ (Hema Committee Report) ಬೆನ್ನಲ್ಲೇ ಮಲಯಾಳಂ ಚಿತ್ರರಂಗದ ಹಲವು ಕಲಾವಿದರ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಈ ಪಟ್ಟಿಯಲ್ಲಿ ಮಾಲಿವುಡ್‌ ನಟ “ಪ್ರೇಮಂ’ ಖ್ಯಾತಿಯ ನಿವಿನ್‌ ಪೌಲಿ (Malayalam actor Nivin Pauly) ವಿರುದ್ಧವೂ ದೂರು ದಾಖಲಾಗಿತ್ತು.   ಕೇರಳದ ನೆರಿಯಮಂಗಲಂ ನಿವಾಸಿಯಾಗಿರುವ ದೂರುದಾರೆ ನವೆಂಬರ್ 2023ರಲ್ಲಿ ಸಿನಿಮಾದಲ್ಲಿ ಅವಕಾಶ ನೀಡುತ್ತೇನೆ ಎಂದು ನಿವಿನ್‌ ಪೌಲಿ ತಮ್ಮ ಮೇಲೆ ದುಬೈಯ ಹೊಟೇಲ್‌ …

Read More »

ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

ಹುಬ್ಬಳ್ಳಿ: ಸಂಸತ್ತಿನ ಜಂಟಿ ಸಂಸದೀಯ ಸಮಿತಿ ರಚನೆಯಾಗಿರುವುದು ವಕ್ಫ್ ತಿದ್ದುಪಡಿ ಮಸೂದೆ ಕುರಿತು. ಆದರೆ ಇವರು ವಿಜಯಪುರಕ್ಕೆ ಬರುತ್ತಿರುವುದು ಅನಧಿಕೃತ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿ ರಚನೆ ಮಾಡುವ ಅಧಿಕಾರ ಕೇಂದ್ರ ಸರಕಾರಕ್ಕಿದೆ. ಆದರೆ ಜೆಪಿಸಿ ರಚಿಸಿರುವುದು ತಿದ್ದುಪಡಿ ಮಸೂದೆಗಾಗಿ ವಿನಃ ಇಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ಅಲ್ಲ. ಇದರಲ್ಲಿ ಯಾವುದೇ ಗೊಂದಲ ಇರಲಿಲ್ಲ. ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ. ಇದಕ್ಕೆ …

Read More »

ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, :ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ: ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.   ನಗರದಲ್ಲಿ ಬುಧವಾರ(ನ6) ಮಾಧ್ಯಮಗಳೊಂದಿಗೆ ಮಾತನಾಡಿ, ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು …

Read More »

ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

ಕಲಬುರಗಿ: ರಾಷ್ಟ್ರೀಯ ಹೆದ್ದಾರಿ ಕಲಬುರಗಿ- ಜೇವರ್ಗಿ ನಡುವಿನ ಫರಹತಾಬಾದ್ ನ ಖಣಿ ಬಳಿ ನ.5ರ ಮಂಗಳವಾರ ರಾತ್ರಿ ಕಾರು ಹಾಗೂ ಪಿಕಪ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು ಹಾಗೂ ಪಿಕಪ್ ನಲ್ಲಿದ್ದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಕಲಬುರಗಿ ನಗರದ ಜನತಾ ಲೇಔಟ್‌ ನ ನಿವಾಸಿ ಮುರುಗೇಶ ಚಂದ್ರಶೇಖರ ಉಪ್ಪಿನ (42) ಹಾಗೂ ಶಹಾಬಾದ್ ನ ನಿವಾಸಿ ಧೂಳಮ್ಮ ಯಮನಪ್ಪ ಪೂಜಾರಿ …

Read More »

ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

ಹಾವೇರಿ: ಮುಡಾ ಭೂ ಹಗರಣದ ತನಿಖೆಯನ್ನು ಲೋಕಾಯುಕ್ತದವರು ಒತ್ತಡದಲ್ಲಿ ಮಾಡುತ್ತಿದ್ದಾರೆ. ಯಾವ ಪ್ರಶ್ನೆಗೆ ಏನು ಉತ್ತರ ಕೊಡಬೇಕು ಎನ್ನುವುದು ಮೊದಲೇ ಸಿದ್ದವಾಗಿದೆ. ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿದ್ದರಾಮಯ್ಯ ಗಂಡಾಂತರದಿಂದ ಪಾರಾಗಲು ಸಾಧ್ಯವಿಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.   ಬಂಕಾಪುರದಲ್ಲಿ ಬುಧವಾರ(ನ) ಸುದ್ದಿಗಾರರೊಂದಿಗೆ ಮಾತನಾಡಿ ‘ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಆರೋಪಿ ನಂಬರ್ 1. ಅವರ ಅಕ್ಕಪಕ್ಕದಲ್ಲಿ ಜಮೀರ್ ಇರಬೇಕು ಇಲ್ಲದಿದ್ದರೆ ಭ್ರಷ್ಟರು ಇರಬೇಕು. ಚುನಾವಣೆ ಸಂದರ್ಭದಲ್ಲಿ …

Read More »

ಸಾಲಬಾಧೆ; ರೈತ ಮಹಿಳೆ ಸಾವು

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದ ರೈತ ಮಹಿಳೆ ಮೋಹಿನಿ (65) ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕಾಲಿಕ ಮಳೆಯಿಂದಾಗಿ ಭತ್ತ, ಶುಂಠಿ ಬೆಳೆ ಹಾನಿಯಾಗಿತ್ತು. ಸಹಕಾರ ಸಂಘದಲ್ಲಿ ಮಾಡಿದ ಸಾಲ ತಿರುವಳಿ ಮಾಡುವ ಕುರಿತು ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಮನೆಯಲ್ಲಿ ವಿಷ ಸೇವಿಸಿದ್ದ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಮೃತಪಟ್ಟಿದ್ದಾರೆ. ತಳಲೆ ಸಹಕಾರ ಬ್ಯಾಂಕ್‌ ಮತ್ತು ಜಿಲ್ಲಾ ಸಹಕಾರ ಸಂಘದ ಸ್ವಸಹಾಯ ಸಂಘ …

Read More »

S.D.A. ಆತ್ಮಹತ್ಯೆ ನನ್ನ ಪಿ.ಎ ಭಾಗಿಯಾದ ವಿಚಾರ ಗೊತ್ತಿಲ್ಲ: ಹೆಬ್ಬಾಳಕರ

ಬೆಳಗಾವಿ: ‘ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರುದ್ರಣ್ಣ ಯಡವಣ್ಣವರ ಅವರ ಪ್ರಕರಣದಲ್ಲಿ ನನ್ನ ಆಪ್ತ ಸಹಾಯಕ ಸೋಮು ಬಾಗಿಯಾದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಈ ವಿಚಾರದಲ್ಲಿ ನಿಷ್ಪಕ್ಷಪಾತ ತನಿಖೆಯಾಗಬೇಕು. ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪ್ರತಿಕ್ರಿಯಿಸಿದರು.   ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಮ್ಮ ಕೆಲಸಕ್ಕೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಪಿ.ಎ.ಗಳನ್ನು ನೇಮಕ ಮಾಡಿಕೊಂಡಿರುತ್ತೇವೆ. ಸಚಿವರಿಗೆ ಹತ್ತು …

Read More »

ವಿದೇಶದಲ್ಲಿ 15 ದಿನ ಅಧ್ಯಯನ ಕೈಗೊಳ್ಳಲಿರುವ ರಾಣಿ ಚನ್ನಮ್ಮ ವಿವಿಯ ವಿದ್ಯಾರ್ಥಿಗಳು

ಬೆಳಗಾವಿ: ‘ಬ್ರಿಟಿಷ್‌ ಕೌನ್ಸಿಲ್‌ನವರು ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಸಹಯೋಗದಲ್ಲಿ ಇಂಗ್ಲೆಂಡ್‌ನ ಯೂನಿವರ್ಸಿಟಿ ಆಫ್‌ ಈಸ್ಟ್‌ ಲಂಡನ್‌ಗೆ ನ.9ರಿಂದ 23ರವರೆಗೆ ಹಮ್ಮಿಕೊಂಡಿರುವ ಅಧ್ಯಯನ ಪ್ರವಾಸಕ್ಕೆ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ಐದು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ’ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.   ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಧ್ಯಯನ ‍ಪ್ರವಾಸಕ್ಕೆ ವಿದ್ಯಾರ್ಥಿಗಳ ಆಯ್ಕೆಗಾಗಿ ಸರ್ಕಾರದ ನಿರ್ದೇಶನದಂತೆ ಪರೀಕ್ಷೆ ಸಂಘಟಿಸಿದ್ದೆವು. ಇದರಲ್ಲಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜಿನ …

Read More »

ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ಮಾಹಿತಿ ಸಂಗ್ರಹಿಸಿ: ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬೆಮ್ಯುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಕಳೆದ ಸೋಮವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ ೨೧ ನೇ ರಾಷ್ಟೀಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, …

Read More »