ಸಿರವಾರ: ಸ್ಥಳೀಯ ಪಟ್ಟಣ ಪಂಚಾಯತ್ ನಲ್ಲಿ ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೃದಯಾಘಾತದಿಂದ ಮೃತಪಟ್ಟ ಘಟನೆ ನ.9ರ ಶನಿವಾರ ಬೆಳಗಿನ ಜಾವ ನಡೆದಿದೆ. ಪಟ್ಟಣ ಪಂಚಾಯತ್ ನ ಪೌರಕಾರ್ಮಿಕ ತಿಮ್ಮಪ್ಪ ಅಸ್ಕಿಹಾಲ್ (36) ಮೃತಪಟ್ಟವರು. ತಿಮ್ಮಪ್ಪ ಅಸ್ಕಿಹಾಲ್ ಅವರು ಪಟ್ಟಣದ ಬಸವ ವೃತ್ತದಲ್ಲಿ ಬೆಳಗಿನ ಜಾವ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಕುಳಿತಿದ್ದ ಸ್ಥಳದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ ರವಿ ಎಸ್. ಅಂಗಡಿ, ಪ.ಪಂ. ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಅದೆಪ್ಪ …
Read More »Monthly Archives: ನವೆಂಬರ್ 2024
ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ. ಲಕ್ಷ್ಮಣ ಸವದಿ
ಹುಬ್ಬಳ್ಳಿ: ಪಕ್ಷದಲ್ಲಿನ ಆಂತರಿಕ ಕಲಹ, ವೈಮನಸ್ಸಿನ ಕಾರಣದಿಂದ ತಮಗೆ ಮುಂದೆ ರಾಜಕೀಯದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕ ಯತ್ನಾಳ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈ ಮೂರು ತಂಡಗಳ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ ತೀವ್ರಗೊಂಡಿದೆ. ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮದ ಶ್ರೀ ಜಡಿಸಿದ್ದೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
ವಿಜಯಪುರ: ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯಾಗಿ ಉಪಯೋಗಿಸಲು ಹೊರಟಿದೆ. ನಾವೂ ಹಿಂದೂಗಳೇ. ಆದರೆ, ಬಿಜೆಪಿಯವರು ನಕಲಿ ಮನುವಾದವನ್ನು ಪ್ರತಿಪಾದಿಸುವ ನಕಲಿ ಹಿಂದೂಗಳು. ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ ವಿಜಯಪುರಕ್ಕೆ ಭೇಟಿ ನೀಡಿದ್ದು ಕಾನೂನು ಬಾಹಿರ. ಅದು ಹಕ್ಕುಚ್ಯುತಿ ಆಗಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ವಕ್ಫ್ ಬೋರ್ಡ್ ತನ್ನ ಆಸ್ತಿಗಳನ್ನು ಈ ಹಿಂದೆಯೇ ಇಂದೀಕರಣ ಮಾಡಿಕೊಳ್ಳದ ಪರಿಣಾಮ ಇನಾಂ ಹಾಗೂ ಭೂ ಸುಧಾರಣಾ ಕಾಯ್ದೆಯಡಿ …
Read More »ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
ಮಂಗಳೂರು: ತುಳು ನಾಡಿನ ಜಾನಪದ ಕ್ರೀಡೆ ಕಂಬಳದ ಅಭಿಮಾನ ಕರಾವಳಿಯಲ್ಲಿ ಇತ್ತೀಚಿನ ಕಾಲಘಟ್ಟದಲ್ಲಿ ಮತ್ತೆ ಹೆಚ್ಚಾಗುತ್ತಿದೆ. ಪುಟಾಣಿಗಳಿಂದ ತೊಡಗಿ ಹಿರಿಯರ ವರೆಗೆ ಎಲ್ಲರಲ್ಲೂ ಕಂಬಳದ ಆಸಕ್ತಿ ಕಾಣಿಸುತ್ತಿದೆ; ಇದಕ್ಕೆ ಬಲ ನೀಡುವಂತೆ ಇತ್ತೀಚಿನ ದಿನಗಳಲ್ಲಿ ಕಂಬಲದ ಕೋಣಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆ ಕಂಡಿದೆ! ಅದರಲ್ಲಿಯೂ ಸೀನಿಯರ್ (6 ವರ್ಷ ಮೀರಿದ) ಹಾಗೂ ಜೂನಿಯರ್(ಮೂರರಿಂದ 6 ವರ್ಷ) ಹೊರತುಪಡಿಸಿ ಸಬ್ ಜೂನಿಯರ್ (3 ವರ್ಷದ ಒಳಗಿನ) ಸಣ್ಣ ಕೋಣಗಳನ್ನು ಸಾಕುವವರ …
Read More »ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
ಮೈಸೂರು: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಿದ್ದ “ಮೈಸೂರು ಸಂಗೀತ ಸುಗಂಧ’ ಕರ್ನಾಟಕ ಶಾಸ್ತ್ರೀಯ ಸಂಗೀತದ ದಾಸ ಪರಂಪರೆಯ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಯುವಕನೋರ್ವ, ಮಹಾರಾಷ್ಟ್ರ ಚುನಾವಣೆಯಲ್ಲಿ ನೀವು ಗ್ಯಾರಂಟಿ ಘೋಷಿಸ ಬೇಡಿ ಎಂದು ಘೋಷಣೆ ಕೂಗಿದ್ದು ವೇದಿಕೆಯಲ್ಲಿದ್ದವರು ಒಂದು ಕ್ಷಣ ತಬ್ಬಿಬ್ಬಾದ ಪ್ರಸಂಗ ಜರುಗಿತು. ಕಾರ್ಯಕ್ರಮ ಮುಗಿಯುವ ಹಂತದಲ್ಲಿ ವಂದನಾನರ್ಪಣೆ ನಡೆಯುತ್ತಿದ್ದ ವೇಳೆ ಹೋಟೆಲೊಂದರಲ್ಲಿ ಕೆಲಸ ಮಾಡುವ ರವಿ ಎಂಬಾತ ವೇದಿಕೆ ಮುಂಭಾಗ ಬಂದು, ನಾನೊಬ್ಬ ಸಾಮಾನ್ಯ ನಾಗರಿಕ, …
Read More »ಮಾರಿಹಳ ಪಿಕೆಪಿಎಸ್ ಕಡೆಯಿಂದ ರೈತ ಹಾಗೂ ಕಾರ್ಮಿಕರ ಕಲ್ಯಾಣದ ಕಾರ್ಯಕ್ರಮ.. ರೈತರಿಗೆ ಶೇ 3ರಷ್ಟು ಬಡ್ಡಿ ದರದಲ್ಲಿ ಟ್ಯಾಕ್ಟರಗಳ ವಿತರಣೆ..
ಬೆಳಗಾವಿ : ತಾಲೂಕಿನ ಮಾರಿಹಾಳ ಗ್ರಾಮದ “ವಿವಿಧೋದ್ದೇಶಗಳ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ” ಇವರ ವತಿಯಿಂದ ಸಂಘದ ವ್ಯಾಪ್ತಿಯಲ್ಲಿ ಒಳಪಡುವ ರೈತರಿಗೆ ಅವರ ಕೃಷಿ ಕಾರ್ಯಕ್ಕೆ ಅನಕೂಲ ಆಗುವ ದೃಷ್ಟಿಯಿಂದ ನಬಾರ್ಡ್ ಯೋಜನೆಯ ಅಡಿಯಲ್ಲಿ ಪ್ರತಿಶತ 3% ಬಡ್ಡಿ ದರದಲ್ಲಿ ಟ್ರ್ಯಾಕ್ಟರಗಳನ್ನು ವಿತರಿಸಲಾಯಿತು. ಇದೇ ವೇಳೆ ಗ್ರಾಮೀಣ ಪ್ರದೇಶದಿಂದ ನಗರಗಳಿಗೆ ಹೋಗಿ ಕರ ಕುಶಲ ಉದ್ಯೋಗ ಮಾಡುವ ಕಾರ್ಮಿಕರಿಗೆ ಅನುಕೂಲವಾಗಲು ದೃಷ್ಟಿಯಿಂದ ದ್ವಿಚಕ್ರ ವಾಹನಗಳನ್ನು (ಸೈಕಲ್ಮೋಟಾರಗಳನ್ನು) ಸಂಘದ ನಿರ್ಧರಿತ …
Read More »ಈ ಸರ್ಕಾರ ತೆಗೆಯುವವರೆಗೂ ನಾನು ನಿದ್ದೆ ಮಾಡಲ್ಲ:ಹೆಚ್ ಡಿ ದೇವೇಗೌಡ
ಬೆಂಗಳೂರು, ನವೆಂಬರ್ 09: ನಾನು ನನ್ನ ಕಡೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರ್ತಿನಿ. ಮೊಮ್ಮಗನಿಗಾಗಿ ಈಗ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ಪ್ರಾದೇಶಿಕ ಪಕ್ಷ ಉಳಿಸಲು ನಾನು ಬಂದಿದ್ದೀನಿ. ಈ ಸರ್ಕಾರ ತೆಗೆಯುವವರೆಗೂ ನಾನು ನಿದ್ದೆ ಮಾಡಲ್ಲ. ಮೊಮ್ಮಗ ನಿಖಿಲ್ ಗೆದ್ದ ಮೇಲೆಯೂ ನಾನು ಮನೆಯಲ್ಲಿ ಮಲಗಲ್ಲ. ಆಮೇಲೆ ಕೂಡ ಹೋರಾಟ ಪಕ್ಷ ಕಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದರು. ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ …
Read More »ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
ಚನ್ನಪಟ್ಟಣದ ಉಪಚುನಾವಣ ರಣಕಣ ಇಡೀ ದೇಶದ ಗಮನ ಸೆಳೆದಿದೆ. ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಬೊಂಬೆ ನಾಡು ಮಾತ್ರ ಎಲ್ಲಕ್ಕಿಂತಲೂ ಹೈ ವೋಲ್ಟೇಜ್ ಕಣವಾಗಿ ಪರಿಣಮಿಸಿದೆ. ಇಲ್ಲಿ ನೀರಾವರಿ ವಿಚಾರದ ಜತೆಗೆ ಕಣ್ಣೀರಿನ ವಿಚಾರವೂ ಚರ್ಚೆಗೆ ಬರುತ್ತಿದೆ. ರೈತರ ವಿಚಾರದ ಜತೆ ರೌಡಿಸಂ ವಿಚಾರವೂ ಟೀಕೆಗೆ ಅಸ್ತ್ರವಾಗುತ್ತಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು, ಹಲವು ಪ್ರಬಲ ನಾಯಕರ ಭರ್ಜರಿ ಪ್ರಚಾರದ ನಡುವೆ ಮತದಾನದ ಕೊನೆಯ ಕ್ಷಣದಲ್ಲಿ ಈ ಬಾರಿ …
Read More »ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
ಬೆಳಗಾವಿ: ಉಪಚುನಾವಣೆಯಲ್ಲಿ ನಾಟಕ ಮಾಡಲು ವಕ್ಫ್ ಬೋರ್ಡ್ ಆಸ್ತಿ ತನಿಖೆ ವಿಷಯದಲ್ಲಿ ಕೇಂದ್ರದ ಜೆಪಿಸಿ ಸಮಿತಿ ರಾಜ್ಯಕ್ಕೆ ಅನಧಿಕೃತವಾಗಿ ಬಂದಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಆರೋಪ ಮಾಡಿದರು. ಬೆಳಗಾವಿಯಲ್ಲಿ ಶುಕ್ರವಾರ (ನ.08) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಕೇಂದ್ರ ಸರಕಾರ ತನಿಖಾ ಸಂಸ್ಥೆಯನ್ನು ದುರುಪಯೋಗ ಪಡೆಸಿಕೊಂಡರು. ಈಗ ಜೆಪಿಸಿ ಸಮಿತಿಯನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ. ಹಾಗಾದರೆ ನಿಮ್ಮ ನೀತಿ ಏನು ಎಂಬುದಕ್ಕೆ ಪ್ರಧಾನಿ ಉತ್ತರಿಸಬೇಕು. ಜೆಪಿಸಿ …
Read More »