Breaking News

Monthly Archives: ನವೆಂಬರ್ 2024

ಎಂಇಎಸ್‌ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕರ್ನಾಟಕ ಆಚರಣೆ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮತ್ತೆ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಕರಾಳ ದಿನಾಚರಣೆ ಮಾಡಿದೆ. ಜಿಲ್ಲಾಡಳಿತ ಇದಕ್ಕೆ ಅನುಮತಿ ನೀಡದಿದ್ದರೂ ಎಂಇಎಸ್ ನಾಯಕರು ಕರಾಳ ದಿನಾಚರಣೆ ಮಾಡಿದ್ದಾರೆ. ಕರಾಳ ದಿನಾಚರಣೆ ಮಾಡಿರುವ ಎಂಇಎಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.   ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸುವ ಅಗತ್ಯ ಇಲ್ಲ. ಅದು ಹೆಸರಿಗಷ್ಟೇ ಇದೆ. ವರ್ಷದಲ್ಲೊಮ್ಮೆ ಅದಕ್ಕೆ …

Read More »

ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ದುಡ್ಡು ಹೊಡೆದಿದ್ದಾರೆ : ಯತ್ನಾಳ್ ಸ್ಪೋಟಕ ಆರೋಪ!

ವಿಜಯಪುರ : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.ಇದೀಗ ಅವರ ವಿರುದ್ಧ ಮತ್ತೊಂದು ಆರೋಪ ಮಾಡಿದ್ದು, ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ರೂಪಾಯಿ ದುಡ್ಡು ತಿಂದಿದ್ದಾರೆ ಎಂದು ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ.   ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ಸಿಎಂ ಇದ್ದಾಗ ಮಂತ್ರಿಯಾಗು ಎಂದಿದ್ದರು ಆದರೆ ನಾನು ಆಗಿರಲಿಲ್ಲ. ಅವರು ಸಿಎಂ …

Read More »

B.G.S. ಆಸ್ಪತ್ರೆಗೆ ದಾಖಲಾದ ನಟ ದರ್ಶನ್

ಬೆಂಗಳೂರು: ಚಿಕಿತ್ಸೆಗಾಗಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಕೊಲೆ ಆರೋಪಿ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿದ್ದ ಎ2 ಆರೋಪಿ ನಟ ದರ್ಶನ್, ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ ಅ.30ರಂದು ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ನಿಟ್ಟಿನಲ್ಲಿ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್, ಇಂದು …

Read More »

ಳಕಿನ ಹಬ್ಬ ದೀಪಾವಳಿ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ

ಬೆಳಗಾವಿ: ಬೆಳಕಿನ ಹಬ್ಬ ‘ದೀಪಾವಳಿ’ ಪ್ರಯುಕ್ತ ಇಲ್ಲಿನ ಮಾರುಕಟ್ಟೆ ಪ್ರದೇಶದಲ್ಲಿ ಗುರುವಾರ ಖರೀದಿ ಭರಾಟೆ ಜೋರಾಗಿತ್ತು. ಗಣಪತ ಗಲ್ಲಿ, ಮಾರುತಿ ಗಲ್ಲಿ, ರವಿವಾರ ಪೇಟೆ, ಖಡೇಬಜಾರ್‌, ಪಾಂಗುಳ ಗಲ್ಲಿ ಮತ್ತಿತರ ಮಾರುಕಟ್ಟೆ ಪ್ರದೇಶಗಳು ಜನರಿಂದ ಕಿಕ್ಕಿರಿದು ತುಂಬಿದ್ದವು. ಬೆಳಗಾವಿ ನಗರವಷ್ಟೇ ಅಲ್ಲದೆ, ಗ್ರಾಮೀಣ ಭಾಗದಿಂದಲೂ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಜನರು, ಆಲಂಕಾರಿಕ ವಸ್ತುಗಳು, ಹಣತೆಗಳು, ಬಣ್ಣ-ಬಣ್ಣದ ರಂಗೋಲಿ ಪುಡಿ, ಶಿವಾಜಿ ಮೂರ್ತಿಗಳು, ಪೂಜಾ ಸಾಮಗ್ರಿಗಳನ್ನು ಖರೀದಿಸಿದರು. ವೈವಿಧ್ಯಮಯ ವಿನ್ಯಾಸಗಳ ಆಕಾಶಬುಟ್ಟಿಗಳ …

Read More »

ಶಿಕ್ಷಣ ಕ್ಷೇತ್ರಕ್ಕೆ ಒತ್ತು: ಐಹೊಳೆ

ರಾಯಬಾಗ: ‘ಮತಕ್ಷೇತ್ರದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕ ಒತ್ತು ನೀಡಿ, ಸರ್ಕಾರಿ ಶಾಲೆಯಲ್ಲಿ ಕಲಿಯುವ ಎಲ್ಲ ಮಕ್ಕಳಿಗೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಶಾಸಕ ಡಿ.ಎಂ ಐಹೊಳೆ ಹೇಳಿದರು. ತಾಲ್ಲೂಕಿನ ಮೇಖಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಬುಧವಾರ ₹68 ಲಕ್ಷ ಅನುದಾನದಲ್ಲಿ ಮಂಜೂರಾದ ನಾಲ್ಕು ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಹಾಗೂ ದಿಗ್ಗೇವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ₹18 ಲಕ್ಷ ಅನುದಾನದಲ್ಲಿ ಒಂದು ಹೆಚ್ಚುವರಿ ಕೊಠಡಿ …

Read More »

ಅದ್ಧೂರಿ ರಾಜ್ಯೋತ್ಸವಕ್ಕೆ ಚಾಲನೆ

ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿ ಕೂಡ ಕರ್ನಾಟಕ ರಾಜ್ಯೋತ್ಸವಕ್ಕೆ, ಇಲ್ಲಿ‌ನ ರಾಣಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಮಧ್ಯರಾತ್ರಿಯೇ ಚಾಲನೆ ನೀಡಲಾಯಿತು. ಕಿಕ್ಕಿರಿದು ಸೇರಿದ ಕನ್ನಡ ಮನಸ್ಸುಗಳು ಇನ್ನಿಲ್ಲದಂತೆ ಸಂಭ್ರಮಿಸಿದವು. ರಾತ್ರಿ 12 ಗಂಟೆ ಆಗುತ್ತಿದ್ದಂತೆಯೇ ಜೈಕಾರ, ಜಯಘೋಷಗಳು, ಸಂಭ್ರಮ ಮುಗಿಲುಮುಟ್ಟಿತು.   ನಡುರಾತ್ರಿಯೇ ಅಪಾರ ಸಂಖ್ಯೆಯ ಯುವಕ, ಯಿವತಿಯರು ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡರು. ಎಲ್ಲರ ಕೈಯಲ್ಲಿ ಹಳದಿ- ಕೆಂಪು ಬಣ್ಣದ ಕನ್ನಡ ಬಾವುಟಗಳು. ಹಳದಿ ಕೆಂಪು ಬಣ್ಣದ ಬಲೂನುಗಳ ಹಾರಾಟ. …

Read More »