Breaking News

Monthly Archives: ನವೆಂಬರ್ 2024

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ

ಹಾವೇರಿ: ಶಿಗ್ಗಾವಿಯಲ್ಲಿ ಅಜ್ಜಂಪೀರ್ ಖಾದ್ರಿ ಪ್ರಬಲ ಆಕಾಂಕ್ಷಿಯಾಗಿದ್ದರು. ಮೊದಲನೆ ಹೆಸರಾಗಿ ಖಾದ್ರಿಯವರನ್ನು ಕೇಂದ್ರಕ್ಕೆ ಕಳುಹಿಸಿದ್ದೆವು. ಖಾದ್ರಿಯವರು ನಾಲ್ಕು ಸಲ ಕಡಿಮೆ ಅಂತರದಲ್ಲಿ ಸೋತರು. ಖಾದ್ರಿ ಅಭ್ಯರ್ಥಿ ಮಾಡಲು ಹಲವರು ನಾಮಪತ್ರ ಹಾಕಿಸಿದ್ದರು. ಖಾದ್ರಿ ನನ್ನ ಮಾತಿಗೆ ಕಟ್ಟು ಬಿದ್ದು ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಹುಲಗೂರು ಗ್ರಾಮದಲ್ಲಿ ಸೋಮವಾರ (ನ.04) ಚುನಾವಣಾ ಪ್ರಚಾರದಲ್ಲಿ ಖಾದ್ರಿ ಹೆಗಲ ಮೇಲೆ ಕೈ ಹಾಕಿಕೊಂಡೆ ಸಿದ್ದರಾಮಯ್ಯ ಭಾಷಣ ಮಾಡಿದರು. …

Read More »

ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

ಹುಬ್ಬಳ್ಳಿ: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ‌ ಮೇರೆಗೆ ಮುಖ್ಯ ಪೇದೆಯೊಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೇಶ್ವಾಪುರ ಠಾಣೆ ವ್ಯಾಪ್ತಿಯ ಶಬರಿ ನಗರದ ಎಂ.ಎ. ಖಾದಿರನವರ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈತನು ರವಿವಾರ ಮಧ್ಯಾಹ್ನ 9 ವರ್ಷದ ಬಾಲಕಿ ಪುಸಲಾಯಿಸಿ ಮನೆಗೆ ಕರೆಯಿಸಿ ಅನುಚಿತ ವರ್ತನೆ ತೋರಿದ್ದಾನೆ.   ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿರುವ ಈತನು ಮೂರು ಮಕ್ಕಳ ತಂದೆಯಾಗಿದ್ದರೂ ಇಂತಹ …

Read More »

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಯಾದಗಿರಿ: ಈ ಹಿಂದಿನ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸರಕಾರದಲ್ಲಿ ವಕ್ಫ್ ವಿಚಾರವಾಗಿ ರೈತರಿಗೆ ನೋಟಿಸ್ ಕೊಟ್ಟಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು. ಯಾದಗಿರಿಯಲ್ಲಿ ಸೋಮವಾರ (ನ.04) ಮಾತನಾಡಿದ ಅವರು, ನಿಜವಾಗಿ ರೈತರಿಗೆ ಭೂಮಿ ಕೊಟ್ಟಿದ್ದು ಕಾಂಗ್ರೆಸ್, ಉಳುವವನೇ ಭೂಮಿಯ ಒಡೆಯ ಕಾಯ್ದೆ ಜಾರಿಗೆ ತಂದು ರೈತರಿಗೆ ಭೂಮಿ ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದೆ. ಈಗ ಕಾಂಗ್ರೆಸ್ ಸರಕಾರ ರೈತರ ಭೂಮಿ ವಾಪಸ್ ಪಡೆಯುವ ಕೆಲಸ ಮಾಡಲ್ಲ ಎಂದು ಸ್ಪಷ್ಟನೆ …

Read More »

ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ. ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

ದಾಂಡೇಲಿ: ಧಾರವಾಡದಿಂದ ದಾಂಡೇಲಿ ಗೆ ಬರುತ್ತಿದ್ದೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಕರೋರ್ವರಿಗೆ ಹೃದಯಾಘಾತವಾದ ಘಟನೆ ಸೋಮವಾರ(ನ.4) ಬೆಳಿಗ್ಗೆ ನಡೆದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ಕಲ್ಲೋಳಿಯವರ ಓಣಿ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಪುಂಡಲಿಕ್ ಚಂದರಗಿ ಎಂಬವರೇ ಹೃದಯಘಾತಕ್ಕೊಳಗಾದ ಪ್ರಯಾಣಿಕರಾಗಿದ್ದಾರೆ.   ಚಂದರಗಿ ಅವರು ಧಾರವಾಡದಿಂದ ಸಾರಿಗೆ ಬಸ್ಸಿನಲ್ಲಿ ದಾಂಡೇಲಿಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿದೆ. ದಾಂಡೇಲಿಗೆ ಬಸ್ ಬರುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ಇನ್ನಿತರ ಪ್ರಯಾಣಿಕರು ನಿರ್ವಾಹಕರಿಗೆ ಮಾಹಿತಿಯನ್ನು ನೀಡಿದ್ದಾರೆ. ಕುಳಿತಲ್ಲೇ …

Read More »

ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

ವಿಜಯಪುರ: ವಕ್ಫ್ ನಿಂದ ಭೂ ಕಬಳಿಕೆ ವಿರೋಧಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ವಿಜಯಪುರ ಜಿಲ್ಲೆಯ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹೋರಾಟ ಮಾಡಲಾಗುತ್ತಿದೆ. ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಶ್ರೀ …

Read More »

ಲಾಲ್‌ಬಾಗ್‌ಗೆ ಹೋಗುವ ಮುನ್ನ ತಿಳಿಯಿರಿ, ಪ್ರವೇಶ ಶುಲ್ಕ ಏರಿಕೆ

ಬೆಂಗಳೂರು, ನವೆಂಬರ್ 04: ಉದ್ಯಾನ ನಗರಿ ಬೆಂಗಳೂರಿನ ಲಾಲ್‌ಬಾಗ್‌ಗೆ ಹೋಗುವ ಮುನ್ನ ಇದನ್ನು ಓದಿ. ತೋಟಗಾರಿಕಾ ಇಲಾಖೆಯಿಂದ ನಿರ್ವಹಣೆ ಮಾಡಲಾಗುತ್ತಿರುವ ಲಾಲ್‌ಬಾಗ್‌ನ ಪ್ರವೇಶ ಶುಲ್ಕವನ್ನು ಭಾರೀ ಏರಿಕೆ ಮಾಡಲಾಗಿದೆ. ದಿನನಿತ್ಯ ಸಾವಿರಾರು ಜನರು ನಗರದ ಜಂಟಾಟದಿಂದ ತಪ್ಪಿಸಿಕೊಳ್ಳಲು ಲಾಲ್‌ಬಾಗ್‌ಗೆ ಭೇಟಿ ನೀಡುತ್ತಾರೆ. ಈಗ ಅವರು ಹೊಸ ದರವನ್ನು ಕಟ್ಟಿ ಪವೇಶ ಪಡೆಯಬೇಕಿದೆ. ತೋಟಗಾರಿಕಾ ಇಲಾಖೆ ಲಾಲ್‌ಬಾಗ್ ಪ್ರವೇಶ ಶುಲ್ಕವನ್ನು ಏರಿಕೆ ಮಾಡುವ ಮೂಲಕ ಪ್ರವಾಸಗರ ಜೇಬಿಗೆ ಕತ್ತರಿ ಹಾಕಿದೆ. ಸಾಮಾನ್ಯ …

Read More »

ಗ್ಯಾರಂಟಿ ಕಣ್ಣೊರೆಸುವ ತಂತ್ರ: ಸಚಿವ ಜಮೀರ್‌ ಆಯೋಗ್ಯ; ವಿಜಯೇಂದ್ರ ಟೀಕೆ

ಬಳ್ಳಾರಿ: ‘ರಾಜ್ಯದ ಅಭಿವೃದ್ಧಿ ಕುಸಿದಿದೆ. ಗ್ಯಾರಂಟಿಗಳು ಕಣ್ಣೊರೆಸುವ ತಂತ್ರಗಳಂತಾಗಿವೆ. ಇಂಥ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಹಭಾಸ್‌ಗಿರಿ ಹೇಳಬೇಕಿತ್ತಂತೆ. ಮೋದಿ ಅವರ ಪಾದ ದೂಳಿಗೂ ಸಿದ್ದರಾಮಯ್ಯ ಸಮವಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.   ಸಂಡೂರಿನಲ್ಲಿ ಭಾನುವಾರ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರೇ ಗ್ಯಾರಂಟಿಗಳ ಬಗ್ಗೆ ಛೀಮಾರಿ ಹಾಕಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ …

Read More »

ನ.25ರಿಂದ ಚಳಿಗಾಲದ ಅಧಿವೇಶನ: ವಕ್ಫ್ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 20 ರವರೆಗೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ. ಅಧಿವೇಶನದಲ್ಲಿ ಸರ್ಕಾರವು ವಿವಾದಾತ್ಮಕ ಒನ್ ನೇಷನ್ ಒನ್ ಎಲೆಕ್ಷನ್ ಮತ್ತು ವಕ್ಫ್ ಮಸೂದೆಗಳನ್ನು ಪರಿಚಯಿಸಲಿದೆ. ನವೆಂಬರ್ 23 ರಂದು ನಡೆಯಲಿರುವ ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಅಧಿವೇಶನದ ಮೇಲೆ ಗಮನಾರ್ಹ ಪರಿಣಾಮ ಬೀರಲಿವೆ. ಹರಿಯಾಣ ಸೋಲಿನಿಂದ ಚೇತರಿಸಿಕೊಂಡಿರುವ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) …

Read More »

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು. ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಶಹಾಪುರ: ಶನಿವಾರ(ನ.2) ಸಂಜೆ ತಾಲೂಕಿನ ದೋರನಹಳ್ಳಿ ಗ್ರಾಮ ಬಳಿ ಶಹಾಪುರ – ಯಾದಗಿರಿ ಹೆದ್ದಾರಿಯಲ್ಲಿ ವ್ಯಕ್ತಿಯೋರ್ವನ ಕಗ್ಗೊಲೆ ನಡೆದಿದ್ದು, ಕೊಲೆಯಾದ ವ್ಯಕ್ತಿ ತಾಲೂಕಿನ ಕನ್ಯಾಕೋಳೂರ ವ್ಯಾಪ್ತಿಯ ಜಾಪಾ ನಾಯಕ ತಾಂಡಾದ ನಿವಾಸಿ ತಿಪ್ಪಣ್ಣ ರಾಠೋಡ್(35) ಎಂದು ಗುರುತಿಸಲಾಗಿದೆ. ಆರೋಪಿಗಳು ಅದೇ ಜಾಪಾ ನಾಯಕ ತಾಂಡಾದ ನಿವಾಸಿಗಳಾಗಿದ್ದು, ಕುಮಾರ (36) ಹೇಮ್ಯಾ ಚವ್ಹಾಣ (36) ಹಾಗೂ ಲಕ್ಷ್ಮಣ ಚವ್ಹಾಣ (38) ಇವರೇ ಆರೋಪಿಗಳೆಂದು ಹೇಳಲಾಗಿದೆ. ಹತ್ಯೆಯಾದ ತಿಪ್ಪಣ್ಣ ಅವರ ಪತ್ನಿ ಮಂಜುಳಾ ನಗರ …

Read More »

ನವೆಂಬರ್ 4, 5 ರಂದುಸಿಎಂ, ಡಿಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರದಿಂದ ಪ್ರಚಾರ ಕೈಗೊಂಡಿದ್ದಾರೆ. ನವೆಂಬರ್ 4, 5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಗ್ಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನಿಂದ ಸೋಮವಾರ ಬೆಳಗ್ಗೆ 9 ಗಂಟೆಗೆ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 10 50ಕ್ಕೆ ಶಿಗ್ಗಾವಿ ತಲುಪಲಿದ್ದಾರೆ. ಹುಲಗೂರಿನಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ …

Read More »