Breaking News

Daily Archives: ಡಿಸೆಂಬರ್ 16, 2024

ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿ

ಡಿಸೆಂಬರ್​ 16: ದೇಶದಾದ್ಯಂತ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಹೆಂಡತಿ, ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್​ ಕಾನ್‌ಸ್ಟೇಬಲ್ ತಿಪ್ಪಣ್ಣ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಇದೀಗ ಹೆಂಡತಿಯ ಕಿರುಕುಳ ಆರೋಪದಲ್ಲಿ ಬೆಂಗಳೂರಿನಲ್ಲಿ ಮತ್ತೊಂದು ಸಾವಾಗಿದೆ. ಹೌದು. ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ …

Read More »

ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆಕುಮಾರಸ್ವಾಮಿ ಅವರಿಗೆ ಮುಖಭಂಗ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಂದು ಮುಖಭಂಗ ಉಂಟಾಗಿದೆ. ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅವರು 21 ಮತಗಳೊಂದಿಗೆ ಗೆದ್ದಿದ್ದಾರೆ. ಕುಮಾರಸ್ವಾಮಿ ಬಣದ ಡಾ. ಆಂಜಿನಪ್ಪ ಅವರು 14 ಮತಗಳನ್ನು ಪಡೆದುಕೊಂಡಿದ್ದಾರೆ.ವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್​ಡಿ ಕುಮಾರಸ್ವಾಮಿಗೆ (HD Kumaraswamy) ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. …

Read More »

ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ

ಡಿಸೆಂಬರ್​ 16: ಕೃಷಿ ಹೊಂಡಕ್ಕೆ ಸೋಡಿಯಂ (Sodium) ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ (Drone Pratap) ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್​ ಪ್ರತಾಪ್​ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು. ತುಮಕೂರು ‌ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ಡ್ರೋನ್​ …

Read More »

ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಯುವಕ;

ಹಾವುಗಳೆಂದರೆ ಯಾರಿಗೆ ತಾನೇ ಭಯವಿರಲ್ಲ ಹೇಳಿ. ಅದರಲ್ಲೂ ಹೆಬ್ಬಾವು, ಕಾಳಿಂಗ ಸರ್ಪದಂತಹ ದೈತ್ಯ ಹಾವುಗಳನ್ನು ಕಂಡರೆ ಸಾಕು ಜನ ಮಾರು ದೂರ ಓಡಿ ಹೋಗ್ತಾರೆ. ಇವರುಗಳ ನಡುವೆ ಒಂದಿಷ್ಟು ಧೈರ್ಯವಂತ ಉರಗ ಪ್ರೇಮಿಗಳೂ ಇದ್ದಾರೆ. ಎಲ್ಲೇ ಎಷ್ಟು ದೊಡ್ಡ ಹಾವುಗಳಿದ್ದರೂ, ವಿಷಪೂರಿತ ಹಾವುಗಳಿದ್ದರೂ ಕೂಡಾ ಅದನ್ನು ಸಲೀಸಾಗಿ ಹಿಡಿದು ಅದರೊಂದಿಗೆ ಸರಸವಾಡುತ್ತಾರೆ. ಹೀಗೆ ಹಾವಿನ ಜೊತೆ ಸರಸವಾಡಲು ಹೋಗಿ ಪಜೀತಿಗೆ ಸಿಲುಕಿದವರ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಲ್ಲೊಂದು …

Read More »

 ಮೂರು ತಿಂಗಳಿಂದ ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿದ ಕಾರ್ಮಿಕ

ಡಿಸೆಂಬರ್​ 16: ಮೂರು ತಿಂಗಳಿಂದ ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿ ಕಾರ್ಮಿಕ (labor) ಪ್ರತಿಭಟನೆ ಮಾಡಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಮಂಜುನಾಥ ‌ಬಸಪ್ಪ ಮಡೊಳ್ಳಿ (48) ಪ್ರತಿಭಟನೆ ಮಾಡಿದ ಕಾರ್ಮಿಕ. ಸಂಗಮ್ ಹೋಟೆಲ್​​ನಲ್ಲಿ ಮಂಜುನಾಥ ಕೆಲಸ ಮಾಡುತ್ತಿದ್ದರು. ಸಂಬಳ ಕೇಳಿದ್ದಕ್ಕೆ ಕಾರ್ಮಿಕನ ಮೇಲೆ ಮಾಲೀಕ ಚಂದ್ರಶೇಖರ್ ಶೆಟ್ಟಿ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ. ಇದರಿಂದ ಮನನೊಂದು ಹೋಟೆಲ್ ಎದುರಿನ ಬ್ಯಾನರ್ ಕಂಬ ಏರಿ ಕುಳಿತಿದ್ದಾರೆ. ಕೂಡಲೇ ಕಂಬ ಏರಿದ ಆಟೋ …

Read More »

ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು ; ಜಯಮೃತ್ಯುಂಜಯ ಶ್ರೀ

ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ತೀವ್ರಗೊಳಿಸಿರುವ ಪಂಚಮಸಾಲಿ ಸಮುದಾಯ ಸೋಮವಾರ ಡಿಸಿ ಕಚೇರಿ ಬಳಿ ಹೋರಾಟಕ್ಕೆ ಮುಂದಾಗಿತ್ತು. ಲಾಠಿಜಾರ್ಜ್ ಖಂಡಿಸಿ ಹೋರಾಟ ನಡೆಸಲು ಬಸವ ಜಯಮೃತ್ಯುಂಜಯ ಶ್ರೀಗಳು ಕರೆ ನೀಡಿದ್ದರು. ಆದರೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌, ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಅವಕಾಶ ನೀಡದ್ದಕ್ಕೆ ಪಂಚಮಸಾಲಿ ಸಮುದಾಯ ಆಕ್ರೋಶ ಹೊರಹಾಕಿದೆ.ಹೋರಾಟಕ್ಕೆ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ …

Read More »

ಯಶಸ್ವಿಯಾಗಿ 47ನೇ ವರ್ಷದಲ್ಲಿ ಪಾದಯಾತ್ರೆಯಲ್ಲಿ ಆಗಮಿಸಿದ ಅಶೋಕ ನಿಂಗಯ್ಯ ಸ್ವಾಮಿ ಪೂಜಾರಿ

ಹಿರಿಯ ರಾಜಕೀಯ ಧುರೀಣ ಮತ್ತು ಕಾಂಗ್ರೆಸ್ ಮುಖಂಡ ಶ್ರೀ ಅಶೋಕ ನಿಂಗಯ್ಯ ಸ್ವಾಮಿ ಪೂಜಾರಿ ಅವರು ಇಂದು ಚಿಕ್ಕೋಡಿ ತಾಲೂಕಿನ ಯಡೂರ ಶ್ರೀ ಯಡೂರ ವೀರುಪಾಕ್ಷಲಿಂಗ ದೇವಸ್ಥಾನಕ್ಕೆ ಗೋಕಾಕ ನಗರದ ಯಡೂರು ಪಾದಯಾತ್ರ ಭಕ್ತ ಮಂಡಳಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ 47ನೇ ವರ್ಷದಲ್ಲಿ ಪಾದಯಾತ್ರೆಯಲ್ಲಿ ಆಗಮಿಸಿದ ಭಕ್ತ ಮಂಡಳಿಯವರು ನಡೆಸಿದ ಗುಗ್ಗಳೋತ್ಸವ, ದೇವರಿಗೆ ಮಂಗಳಾರತಿ ಹಾಗೂ ನೈವೇದ್ಯ ಅರ್ಪಣೆ ಹಾಗೂ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು ವರರಿಗೆ ಶುಭ …

Read More »

ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಸಿದ್ದತೆ ವಿವಿಧ ವೃತ್ತಗಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲನೆ.

ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಸಿದ್ದತೆ ಪರಿಶೀಲಿಸಿದ ಸಚಿವ. ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸಿಟಿ ರೌಂಡ್ಸ್ ಮೂಲಕ ಪರಿಶೀಲನೆ. ಬೆಳಗಾವಿ ಚೆನ್ನಮ್ಮ ವೃತ್ತ ಸೇರಿದಂತೆ ವಿವಿಧ ವೃತ್ತಗಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲನೆ. ಮಹಾತ್ಮಾ ಗಾಂಧೀಜಿ ಕಾಂಗ್ರೇಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಹಿನ್ನಲೆ ಅದ್ದೂರಿ ಆಚರಣೆಗೆ ಸಿದ್ದತೆ. 1924 ರಲ್ಲಿ ನಡೆದ ಕಾಂಗ್ರೇಸ್ ಅಧಿವೇಶನ ಹಿನ್ನಲೆ 100 ನೇ ವರ್ಷಾಚರಣೆಗೆ ಸಿದ್ದತೆ. ಡಿ.26,27,28,ರಂದು ನಡೆಯಲಿರುವ ಕಾಂಗ್ರೆಸ್ ಅಧಿವೇಶನದ …

Read More »

ನಾನಿನ್ನೂ ಜೀವಂತವಾಗಿದ್ದೇನೆ – ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ತಂದೆ ಸ್ಪಷ್ಟನೆ

ಚಿಕ್ಕೋಡಿ: ಬಿಗ್ ಬಾಸ್ ಸೀಸನ್ 11ರ (Bigg Boss Kannada 11) ಸ್ಪರ್ಧಿ ಗೋಲ್ಡ್ ಸುರೇಶ್ (Gold Suresh) ದಿಢೀರ್ ಬಿಗ್ ಬಾಸ್ ಮನೆಯಿಂದ ಹೊರ ಬಂದ ವಿಚಾರದಿಂದ ಹಬ್ಬಿದ್ದ ವದಂತಿಗಳಿಗೆ ತೆರೆಬಿದ್ದಿದೆ .ಬೆಳಗಾವಿಯ ಅಥಣಿ ತಾಲೂಕಿನ ಪಾರ್ಥನಹಳ್ಳಿಯ ನಿವಾಸಿ ಗೋಲ್ಡ್ ಸುರೇಶ್ ಬಿಗ್ ಬಾಸ್‍ನಲ್ಲಿ ಅತ್ಯಂತ ಪ್ರಬಲ ಸ್ಪರ್ಧಿಯಾಗಿದ್ದರು. ಈ ವಾರ ಕ್ಯಾಪ್ಟನ್ ಸಹ ಆಗಿದ್ದರು. ಆದರೆ ಗೋಲ್ಡ್ ಸುರೇಶ್ ಇದ್ದಕ್ಕಿದ್ದಂತೆ ಮನೆಯಿಂದ ಆಚೆ ಬಂದಿದ್ದಾರೆ. ಗೋಲ್ಡ್ ಸುರೇಶ್ ಕುಟುಂಬದಲ್ಲಿ …

Read More »

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾ

ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ನಿಡಗುಂದಿ (Nidagundi) ಗ್ರಾಮದಲ್ಲಿ ನಡೆದಿದೆ. ರಮ್ಯಾಶ್ರೀ ಬಸವರಾಜ ಹಂಪನ್ನವರ (25) ಮೃತ ಮಹಿಳೆ. ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು. ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ …

Read More »