Breaking News

Daily Archives: ಡಿಸೆಂಬರ್ 20, 2024

ಬೆಳಗಾವಿಯ ಅಧಿವೇಶನಕ್ಕೆ ಇಂದು ತೆರೆ ಬಿತ್ತು. ಸುಮಾರು 64 ಗಂಟೆ ಕಲಾಪ ನಡೆಸಲಾಯಿತು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ಬೆಳಗಾವಿ: ಎಂಟು ದಿನಗಳ ಕಾಲ ನಡೆದ ಬೆಳಗಾವಿ ಅಧಿವೇಶನದಲ್ಲಿ ಸುಮಾರು 64 ಗಂಟೆಗಳ ಕಾಲ ಕಾರ್ಯಕಲಾಪ ನಡೆಸಲಾಯಿತು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವೂ ಸೇರಿದಂತೆ ಒಟ್ಟು 16 ವಿಧೇಯಕಗಳನ್ನು ಮಂಡಿಸಿ, ಪರ್ಯಾಲೋಚಿಸಿ ಅಂಗೀಕರಿಸಲಾಗಿದೆ. 2024ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ ಮತ್ತು 2024ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕಗಳನ್ನು ಹಿಂಪಡೆಯಲಾಗಿದೆ ಎಂದರು. ಭಾರತದ ಲೆಕ್ಕನಿಯಂತ್ರಕರು ಮತ್ತು …

Read More »

ಬಿಜೆಪಿ ಮತ್ತು ಅವರ ನಾಯಕರಿಗೆ ಮಾನ, ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ”

ಬೆಳಗಾವಿ: “ಬಿಜೆಪಿ ಮತ್ತು ಅವರ ನಾಯಕರಿಗೆ ಮಾನ, ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ ವಾಗ್ದಾಳಿ ನಡೆಸಿದರು. ಸುವರ್ಣ ವಿಧಾನಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಅವರು ಕಟುವಾದ ಪದಗಳಲ್ಲಿ ಟೀಕಿಸಿದರು. “ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲೂ ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ …

Read More »

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಕೆ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಗುರಿಯಾಗಿದ್ದಳೆನ್ನಲಾದ ಮಹಿಳೆಯ ಅಪಹರಣ ಆರೋಪ ಸಂಬಂಧ ಕೆ.ಆರ್​. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತುಗಳನ್ನು ಹೈಕೋರ್ಟ್​ ಸಡಿಲಿಸಿದೆ. ಮೈಸೂರು ಮತ್ತು ಹಾಸನ ಪ್ರವಾಸ ಮಾಡುವುದಕ್ಕಾಗಿ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಷರತ್ತುಗಳನ್ನು ಸಡಿಲ ಮಾಡಿ ಆದೇಶಿಸಿದೆ. ಭವಾನಿ …

Read More »

ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ” ಎಂದು ವಿಧಾನಪರಿಷತ್​ ಸದಸ್ಯ ಸಿ.ಟಿ.ರವಿ

ಬೆಳಗಾವಿ: ”ನಾನು ಕೊಟ್ಟ ದೂರನ್ನು ಸ್ವೀಕಾರ ಮಾಡದೇ, ನನ್ನನ್ನು ಬೇರೆ ಕಡೆ ಕರೆದೊಯ್ಯಲು ಯತ್ನಿಸಲಾಗುತ್ತಿದೆ. ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ” ಎಂದು ವಿಧಾನಪರಿಷತ್​ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್​ನಲ್ಲಿ ಅಶ್ಲೀಲ ಪದ ಬಳಸಿದ ಆರೋಪದಡಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಗುರುವಾರ ಸಂಜೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ಖಾನಾಪುರ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಸಿ.ಟಿ.ರವಿ ವಿಡಿಯೋ ಮೂಲಕ …

Read More »