Breaking News

Daily Archives: ಡಿಸೆಂಬರ್ 21, 2024

ಬಿಎನ್​ಎಸ್​ ಪಠ್ಯದಡಿ ಪರೀಕ್ಷೆ ಬರೆಯುವಂತೆ ರಾಜ್ಯ ಕಾನೂನು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಐಪಿಸಿ ಕಾಯ್ದೆ ಪಠ್ಯದಲ್ಲೇ ಪರೀಕ್ಷೆ ನಡೆಸುವಂತೆ ಸೂಚಿಸಿದೆ.

ಬೆಂಗಳೂರು: ಭಾರತೀಯ ದಂಡ ಸಂಹಿತೆ (ಐಪಿಸಿ) ಅಧ್ಯಯನ ಮಾಡಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ಕಾನೂನು ಪದವಿ ವಿದ್ಯಾರ್ಥಿಗಳಿಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಪಠ್ಯ ಕ್ರಮದಲ್ಲಿ ಪರೀಕ್ಷೆ ನಡೆಸಲು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಜೊತೆಗೆ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಐಪಿಸಿ ಪಠ್ಯಕ್ರಮದಡಿಯಲ್ಲಿ ಪರೀಕ್ಷೆ ನಡೆಸಲು ಸೂಚನೆ ನೀಡಿದೆ. ಐಪಿಸಿ (ಕ್ರಿಮಿನಲ್ ಲಾ-1) ಅಧ್ಯಯನ ಮಾಡಿ ಅನುತ್ತೀರ್ಣರಾದ ಕಾನೂನು ವಿದ್ಯಾರ್ಥಿಗಳಿಗೂ ಬಿಎನ್‌ಎಸ್ ಪಠ್ಯ ಕ್ರಮದಲ್ಲಿ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ …

Read More »

ನೆಲಮಂಗಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರದ ಜತ್ತ ತಾಲೂಕಿನ ಒಂದೇ ಕುಟುಂಬದ ಆರು ಜನರ ದುರಂತ ಅಂತ್ಯವಾಗಿದೆ.

ವಿಜಯಪುರ: ಸಾಮಾನ್ಯ ಕುಟುಂಬದ ಯುವಕ ಎಂಜಿನಿಯರಿಂಗ್​ ಪದವಿ ಪಡೆದು ಬೆಂಗಳೂರಿಗೆ ಬಂದು ಹಂತ ಹಂತವಾಗಿ ಮೇಲಕ್ಕೇರಿದ್ದರು. ಅಷ್ಟೇ ಅಲ್ಲ, ಸ್ವಂತ ಕಂಪನಿಯನ್ನೂ ಕಟ್ಟಿ ನೂರಾರು ಜನಕ್ಕೆ ಉದ್ಯೋಗವನ್ನೂ ನೀಡಿ ಯಶಸ್ವಿಯಾಗಿದ್ದರು. ಹಳ್ಳಿಯಲ್ಲಿದ್ದ ಪೋಷಕರು, ಸಂಬಂಧಿಕರಿಗೆ ಆಸರೆ ಆಗಿದ್ದರು. ಆದರೆ ವಿಧಿಯಾಟಕ್ಕೆ ಉದ್ಯಮಿ ಮತ್ತು ಇಡೀ ಕುಟುಂಬವೇ ಬಲಿಯಾಗಿದೆ. ನೆಲಮಂಗಲ ಬಳಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಬಲಿಯಾದ ಉದ್ಯಮಿ ಚಂದ್ರು ಯಾಗಪ್ಪಗೋಳ ಮತ್ತು ಇಡೀ ಕುಟುಂಬದ ಕರುಣಾಜನಕ ಕಥೆ ಇದು. ಚಂದ್ರು …

Read More »

ಮನುಷ್ಯನ ಬದುಕೇ ಹಲವು ತಿರುವುಗಳು, ಏರುಪೇರುಗಳ ಪ್ರಯಾಣ

ಕೊಪ್ಪಳ: ಮನುಷ್ಯನ ಬದುಕೇ ಹಲವು ತಿರುವುಗಳು, ಏರುಪೇರುಗಳ ಪ್ರಯಾಣ. ಕೆಲವೊಮ್ಮೆ ಆ ಏರುಪೇರುಗಳು, ತಿರುವುಗಳು ಜೀವನವನ್ನೇ ಬದಲಾಯಿಸಬಹುದು. ಹೀಗೆ ಜೀವನದಲ್ಲಿ ಎದುರಾದ ತಿರುವುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ ಬದುಕು ಕಟ್ಟಿಕೊಂಡವರು, ಮತ್ತೊಬ್ಬರಿಗೆ ಮಾದರಿಯಾಗುತ್ತಾರೆ, ಸ್ಫೂರ್ತಿಯಾಗುತ್ತಾರೆ ಅನ್ನೋದಕ್ಕೆ ಈ ದಿಟ್ಟ ಮಹಿಳೆ ಸಾಕ್ಷಿ ಆಗುತ್ತಾರೆ. ಹೌದು, ಜೀವನದಲ್ಲಿ ಎದುರಾದ ಸಂಕಷ್ಟಗಳಿಗೆ ಕುಗ್ಗದೆ ಧೈರ್ಯದಿಂದ ಮೆಟ್ಟಿನಿಂತು ಬದುಕು ಕಟ್ಟಿಕೊಂಡ ಸಾಹಸಿ ಮಹಿಳೆಯ ಕಥೆ ಇದು. ಈ ನೈಜ ಕಥೆಯ ನಾಯಕಿಯ ಹೆಸರು ಜಯಶ್ರೀ ಗುಳಗಣ್ಣವರ. ಕೊಪ್ಪಳ …

Read More »

ಸಿ. ಟಿ ರವಿ ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ‌ ಇಲ್ಲ”:ಸತೀಶ ಜಾರಕಿಹೊಳಿ

ಬೆಳಗಾವಿ: ವಿಧಾನಪರಿಷತ್ ಸದಸ್ಯ ಸಿ. ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, “ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ‌ ಇಲ್ಲ” ಎಂದು ಹೇಳಿದರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ. ಸಂಸತ್ತು ವಿಧಾನಸಭೆಯಲ್ಲಿ ನಡೆದಿವೆ. ಕ್ಷಮೆ ಕೇಳಿದ ಬಳಿಕ ಅವು ಮುಗಿದು ಹೋಗಿವೆ. ಈಗಲೂ ಈ ಪ್ರಕರಣ …

Read More »

ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 12 ನೇ ಘಟಿಕೋತ್ಸವದಲ್ಲಿ ಮಾಜಿ ಶಾಸಕರ ಸೋಮನಗೌಡ ಪಾಟೀಲ ಸಾಸನೂರ ಇಂದು ಭಾಗವಹಿಸಿದ್ದರು.

ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 12 ನೇ ಘಟಿಕೋತ್ಸವದಲ್ಲಿ ಮಾಜಿ ಶಾಸಕರ ಸೋಮನಗೌಡ ಪಾಟೀಲ ಸಾಸನೂರ ಇಂದು ಭಾಗವಹಿಸಿದ್ದರು. ಕಳೆದ 113 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದ ಶೈಕ್ಷಣಿಕ ವಲಯದಲ್ಲಿ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆ ನೀಡಿರುವ ಕೊಡುಗೆ ಅಪಾರವಾದದ್ದು. ವಚನ ಪಿತಾಮಹ ಶ್ರೀ ಫ.ಗು.ಹಳಕಟ್ಟಿ, ಪರಮಪೂಜ್ಯ ಭಂಟನಾಳ ಶ್ರೀಗಳು ಹಾಗೂ ಶ್ರೀ ಬಿ.ಎಂ.ಪಾಟೀಲ ಅವರ ಶ್ರಮಕ್ಕೆ ಇಂದು ವಿಜಯಪುರ ಭಾಗದಲ್ಲಿ ಶಿಕ್ಷಣ ಗುಣಮಟ್ಟ ಪ್ರಗತಿ ಕಂಡಿದೆ ಅಂದರೆ ಅತಿಶಯೋಕ್ತಿಯೆನ್ನಲ್ಲ. …

Read More »

ಬೆಳಗಾವಿಯಲ್ಲಿ 9ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ!*

ಬೆಳಗಾವಿಯಲ್ಲಿ 9ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ!* ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದ ಘಟನೆ‌ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹಾರೊಗೇರೆ ಆಸ್ಪತ್ರೆಗೆ ದಾಖಲು ಚಿಕಿತ್ಸೆ ಫಲಿಸದ ಗರ್ಭಿಣಿ ಸುವರ್ಣ ಮಾಂತಯ್ಯ ಮಠಪತಿ(33) ಸಾವು ಮನೆಯಲ್ಲಿ ಯಾರು ಇಲ್ಲ ಸಂದರ್ಭದಲ್ಲಿ ಬಂದು ದುಷ್ಕರ್ಮಿಗಳಿಂದ ಕೃತ್ಯ‌ ಬಿಮ್ಸ್ ಆಸ್ಪತ್ರೆಯಲ್ಲಿ ಮೃತ‌ ಮಹಿಳೆಯ ಮರಣೋತ್ತರ ಪರೀಕ್ಷೆ ಮೃತ ಮಹಿಳೆಗೆ ನಾಲ್ಕು ಜನ ಹೆಣ್ಣುಮಕ್ಕಳು ಐದನೇ ಮಗುವಿನ ನಿರೀಕ್ಷೆಯಲ್ಲಿ ತುಂಬು ಗರ್ಭಿಣಿ ಮುಂದಿನ …

Read More »

ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರ ಚುನಾವಣೆ

ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರ ಚುನಾವಣೆ ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿ ಪೂಜಾ ಅಶೋಕ ಹುಕ್ಕೇರಿಯವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿ ಪೂಜಾ ಅಶೋಕ ಹುಕ್ಕೇರಿಯವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರಾಗಿ ತಂದೆಯವರಾದ ದಿವಂಗತ ಅಶೋಕ ಹುಕ್ಕೇರಿ ಅವರು …

Read More »

ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಮಕ್ಕಳಿಗೆ 3-ಎಚ್ ಸೂತ್ರವನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಭಾಷೆಗಳಲ್ಲಿ ಕನ್ನಡವೂ ಒಂದೆಂದು ವಿದ್ವಾಂಸರು ಹೇಳುತ್ತಾರೆ. ಇದಕ್ಕೆ ಕಾರಣಗಳೇನು ಎಂಬುದನ್ನು ಕಂಡುಕೊಳ್ಳಬೇಕಾಗಿದೆ. ನನಗೆ ತಿಳಿದ ಮಟ್ಟಿಗೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಸಮಸ್ಯೆಗಳಿವೆ. ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಮಕ್ಕಳಿಗೆ 3-ಎಚ್ ಸೂತ್ರವನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದ್ದಾರೆ. ಮಂಡ್ಯದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು. …

Read More »

ಅಂಬೇಡ್ಕರರನ್ನು ಅವಮಾನಿಸಿದ ಶಾಹ ವಿರುದ್ಧ ಕ್ರಮ ಕೈಗೊಳ್ಳಿ ಖಾನಾಪುರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

  ಖಾನಾಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆ ತಾಲೂಕ ಘಟಕ ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಸಹಯೋಗದೊಂದಿಗೆ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಂಸತ್ತಿನಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾಹ್ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾಹ ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಡಾ. …

Read More »

ಕೇದನೂರ ಗ್ರಾಮದಲ್ಲಿ ಸಿಸಿ ರಸ್ತೆ 35 ಲಕ್ಷ ಗುಂಜೆನಟ್ಟಿ ಗ್ರಾಮದಿಂದ ಹಂದಿಗನೂರು ಗ್ರಾಮದವರೆಗೆ 5 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ.

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಅಂದಾಜು 7 ಕೋಟಿ 32 ಲಕ್ಷ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗ್ರಾಮದ ಮುಖಂಡರು ಮತ್ತು ಹಿರಿಯರ ಜೊತೆಗೆ ಇಂದು ಉದ್ಘಾಟಿಸಲಾಯಿತು. ಕಾಮಗಾರಿಗಳ ವಿವರ. 1)ಕಡೋಲಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ 90 ಲಕ್ಷ, ಎರಡು ಅಂಗನವಾಡಿ ನೂತನ ಕೊಠಡಿಗಳಿಗೆ 20 ಲಕ್ಷ, ಗ್ರಾಮದ ಸ್ಮಶಾನಕ್ಕೆ 5 ಲಕ್ಷ, ಗ್ರಾಮದಲ್ಲಿ ಕೆರೆ ನಿರ್ಮಾಣಕ್ಕೆ 50 ಲಕ್ಷ. 2) ಕೇದನೂರ ಗ್ರಾಮದಲ್ಲಿ …

Read More »