ಹುಬ್ಬಳ್ಳಿ: ಕ್ರಿಸ್ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಪೂರೈಸಲು ನೈಋತ್ಯ ರೈಲ್ವೆ, ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತೀ ದಿಕ್ಕಿನಲ್ಲಿ 3 ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 07367/07368 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ವಿಶೇಷ (3 ಟ್ರಿಪ್ಗಳು) ರೈಲು ಸಂಖ್ಯೆ 07367 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ಎಕ್ಸ್ಪ್ರೆಸ್ ವಿಶೇಷ ರೈಲು ಡಿಸೆಂಬರ್ 30, ಜನವರಿ 6 ಮತ್ತು 13, 2025ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ …
Read More »Daily Archives: ಡಿಸೆಂಬರ್ 27, 2024
ವಕ್ಫ್ ಇಲಾಖೆಯಲ್ಲಿ ವ್ಯಾಪಕ ಪೆಟ್ರೋಲ್ ದುರ್ಬಳಕೆ ಪತ್ರ ಬರೆದ ಯತ್ನಾಳ್
ವಿಜಯಪುರ, ಡಿಸೆಂಬರ್ 27: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆಯಲ್ಲಿ (Waqf Board) ಮನಬಂದಂತೆ ಪೆಟ್ರೋಲ್ ಇಂಡೆಂಟ್ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್ಗಳು ದೊಡ್ಡ ಭ್ರಷ್ಟಾಚಾರವನ್ನು ಎಸಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸರ್ಕಾರದ ಎಲ್ಲ ಇಲಾಖೆಗಳಿಗೂ ಇಂಧನ ಮಿತಿ ಮಾರ್ಗಸೂಚಿ ಹೊರಡಿಸುವಂತೆ ಮನವಿ ಮಾಡಿದ್ದಾರೆ. …
Read More »ಗದಗ ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಆರು ಜನರಿಗೆ ಚೂರಿಯಿಂದ ಇರಿತ
ಗದಗ, ಡಿಸೆಂಬರ್ 27: ಗದಗ ನಗರದಲ್ಲಿ ಪುಡಿ ರೌಡಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಜುಮ್ಮಾ ಮಸೀದಿ ಬಳಿ ಗುರುವಾರ ಸಂಜೆ ಆರು ಜನರಿಗೆ ಚೂರಿಯಿಂದ ಇರಿತಯಲಾಗಿದ್ದು, ಗಾಯಾಳುಗಳ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಅನಿಲ್ ಮುಳ್ಳಾಳ (27), ಚೇತನ್ ಮುಳ್ಳಾಳ, ವಿನಾಯಕ್ ಮುಳ್ಳಾಳ, ಶಾರುಖ್ ಮುಲ್ಲಾ, ಅಭಿಷೇಕ್ ಹರ್ಲಾಪುರ, ಕಿರಣ್ ಸಾಲಿಮಠ ಹೀಗೆ ಆರು ಮಂದಿ ಗಾಯಗೊಂಡಿದ್ದಾರೆ. ಇಬ್ಬರ ಕುತ್ತಿಗೆಗೆ ಗಂಭೀರ ಗಾಯಗಳಾಗಿವೆ. ಅನಿಲ್ …
Read More »ನಾಳೆ ಕರೆ ಕೊಟ್ಟಿದ್ದ ವಿಜಯಪುರ ಬಂದ್ ಮುಂದೂಡಿಕೆ
ವಿಜಯಪುರ, : ಬಿಆರ್ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವಮಾನಕಾರಿ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳು ನಾಳೆ ವಿಜಯಪುರ ಬಂದ್ಗೆ ಕರೆ ನೀಡಿದ್ದರು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ ವಿಜಯಪುರ ಬಂದ್ ಅನ್ನು ಹೋರಾಟಗಾರರು ಮುಂದೂಡಿದ್ದಾರೆ. ನಾಳೆ ಬದಲಾಗಿ ಡಿಸೆಂಬರ್ 30ರಂದು ಬಂದ್ಗೆ ಕರೆ ನೀಡಿದ್ದಾರೆ.ಮಾಜಿ ಶಾಸಕ ಪ್ರೊ. ರಾಜು ಅಲಗೂರು, ಸೋಮನಾಥ ಕಳ್ಳಿಮನಿ, ಅಬ್ದುಲ್ ಹಮೀದ್ ಮುಶ್ರೀಫ್ ಹಾಗೂ …
Read More »ಸಿನಿಮಾ ಶೈಲಿಯಲ್ಲಿ ಬ್ಯಾಂಕಿಗೆ ವಂಚನೆ: ತಂಗಿ ಮದ್ವೆ ಸಾಲಕ್ಕೆ ಅಣ್ಣ ಜೈಲು ಸೇರುವ ಪರಿಸ್ಥಿತಿ
ನೆಲಮಂಗಲ, ಡಿಸೆಂಬರ್ 27: ಆಭರಣ ಮೌಲ್ಯಮಾಪಕನಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ 23 ಲಕ್ಷಕ್ಕೂ ಹೆಚ್ಚು ಹಣ ವಂಚನೆ (fraud) ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ಆಭರಣ ಮೌಲ್ಯಮಾಪಕ ಮಂಜುನಾಥ ವಂಚಕ. ನೆಲಮಂಗಲ ಪೊಲೀಸ್ ಠಾಣೆಗೆ ಮ್ಯಾನೇಜರ್ ಆನಂದ್ ದೂರು ನೀಡುತ್ತಿದ್ದಂತೆ ಇತ್ತ ವಂಚಕ ಪರಾರಿ ಆಗಿದ್ದಾರೆ. ತಂಗಿಯ ಮದುವೆ ಸಾಲಕ್ಕೆ ಅಣ್ಣ ಜೈಲು ಸೇರುವ ಪರಿಸ್ಥಿತಿ ಎದರಾಗಿದೆ.ಅರ್ಧ ಕೆಜಿಯಷ್ಟು ನಕಲಿ ಚಿನ್ನಾಭರಣ ಅಡವಿಟ್ಟು ಮಂಜುನಾಥ …
Read More »ಚಾಟಿಯಿಂದತಮಗೆ ತಾವೇ ಹೊಡೆದುಕೊಂಡಅಣ್ಣಮಲೈ
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್ನಲ್ಲಿ …
Read More »ಮುದ್ದುಲಕ್ಷ್ಮಿ’ ನಟ ಚರಿತ್ ಬಾಳಪ್ಪ ಬಂಧನ
ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಹಾಗಾಗಿ ಆರ್ಆರ್ ನಗರ ಠಾಣೆಯ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ. ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿದಂತೆ ಹಲವು ಸೀರಿಯಲ್ನಲ್ಲಿ ಚರಿತ್ ನಟಿಸಿದ್ದಾರೆ. ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ. ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಈಗ ಚರಿತ್ ಬಾಳಪ್ಪ ಮೇಲೆ ಎದುರಾಗಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು …
Read More »ರೈಲಿನಲ್ಲಿ 1 ಕೋಟಿ ರೂ. ಮೌಲ್ಯದ ಗಾಂಜಾ ಸರಬರಾಜು: ಆರೋಪಿಗಳು ಅರೆಸ್ಟ್
ಬೆಂಗಳೂರು,: ರೈಲಿನಲ್ಲಿ (Train) ಕೆಜಿಗಟ್ಟಲೇ ಗಾಂಜಾ (Ganja) ಸರಬರಾಜು ಮಾಡುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರೆ. ಆರೋಪಿಗಳ ಬಳಿ ಇದ್ದ, ಬರೊಬ್ಬರಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದು, ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳ ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.ಹೀಗಾಗಿ, ಪೆಡ್ಲರ್ಗಳು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಪೊಲೀಸ್ ಶ್ವಾನಕ್ಕೂ ವಾಸನೆ ಬಾರದ …
Read More »ಟೀ ಕುಡಿಯಲು ಮನೆಗೆ ಆಹ್ವಾನಿಸಿ ಸುಲಿಗೆ ಮಾಡಿದ ಸುಂದರಿ ಅಂಡ್ ಟೀಂ:
ಬೆಂಗಳೂರು: ಪರಿಚಿತ ಮಹಿಳೆ ಕರೆದಳೆಂದು ಮನೆಗೆ ಹೋದ ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 57 ವರ್ಷದ ಸಿವಿಲ್ ಕಾಂಟ್ರಾಕ್ಟರ್ ಒಬ್ಬರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂತೋಷ್, ಅಜಯ್ ಹಾಗೂ ಜಯರಾಜ್ ಎಂಬಾತನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ನಯನಾ ಎಂಬಾಕೆಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ದೂರುದಾರ ವ್ಯಕ್ತಿಗೆ 5 – 6 ತಿಂಗಳುಗಳ ಹಿಂದಷ್ಟೆ ಪರಿಚಯವಾಗಿದ್ದ ನಯನಾ ಆಗಾಗ ತನ್ನ ಮಗುವಿಗೆ …
Read More »ಮನಮೋಹನ ಸಿಂಗ್ ಅವರ ಬದುಕು ಒಂದು ರೀತಿ ಪವಾಡ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: “ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ನಿನ್ನೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಒಂದು ರೀತಿ ಅವರದ್ದು ಪವಾಡದ ಬದುಕಾಗಿತ್ತು. ದೇಶವನ್ನು ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಇವತ್ತಿನ ಪಾಕಿಸ್ತಾನ ದೇಶದ ಕುಗ್ರಾಮವೊಂದರಲ್ಲಿ ಜನಿಸಿದ್ದರು. ಅಲ್ಲಿಂದ ದೇಶ ಅಷ್ಟೇ ಅಲ್ಲದೇ ಜಗತ್ತಿನ ಓರ್ವ ಪ್ರಸಿದ್ದ …
Read More »