ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಹಾಗೂ ಸಂಜಯ ಸವದತ್ತಿ (20) ಎಂಬ ಇಬ್ಬರು ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದರು. ಬಳಿಕ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿ (21) ಕೂಡ …
Read More »Daily Archives: ಡಿಸೆಂಬರ್ 27, 2024
ಮನಮೋಹನ್ ಸಿಂಗ್ ಇನ್ನಿಲ್ಲ: ಬೆಳಗಾವಿಯಿಂದ ದೆಹಲಿಗೆ ಹೊರಟ ಕಾಂಗ್ರೆಸ್ ನಾಯಕರು
ಬೆಳಗಾವಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ನಿಧನರಾದ ಹಿನ್ನೆಲೆಯಲ್ಲಿ ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕಾಂಗ್ರೆಸ್‌ನ ರಾಷ್ಟ್ರ ಹಾಗೂ ರಾಜ್ಯದ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಅಗಲಿದ ಆರ್ಥಿಕ ತಜ್ಞರಿಗೆ ಸಂತಾಸ ಸೂಚಿಸಿದರು. ಸಿಂಗ್ ಹೃದಯ, ಮನಸ್ಸು ಬಹಳ ವಿಶಾಲವಾದದ್ದು: ಸಂಸದ ಡಾ. ಶಶಿತರೂರ್ ಮಾತನಾಡಿ, ”ಇದು ಅತ್ಯಂತ ದುಃಖದ ವಿಚಾರ. ಮನಮೋಹನ್ ಸಿಂಗ್ ಅವರು ಹಲವು ವರ್ಷಗಳಿಂದ ನನಗೆ ಗೊತ್ತು. …
Read More »ಹಾವೇರಿ: ಅನೈತಿಕ ಸಂಬಂಧ ಆರೋಪ: ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ- ವ್ಯಕ್ತಿ ಸಾವು
ಹಾವೇರಿ: ಅನೈತಿಕ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಲವರು ಲೈಟ್ ಕಂಬಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರುವ ಪ್ರಕರಣ ಜಿಲ್ಲೆಯ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತನನ್ನು ಪ್ರಕಾಶ್ ಓಲೇಕಾರ ಎಂದು ಗುರುತಿಸಲಾಗಿದೆ. ಆರೋಪಿಗಳು ಪ್ರಕಾಶನನ್ನು ಲೈಟ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಅಲ್ಲದೇ, ಪ್ರಕಾಶ ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಲಾಗಿದೆ. ಎಫ್ಐಆರ್ ವಿವರ: ”ಗುರುವಾರ …
Read More »ಅನ್ಯ ರಾಜ್ಯಗಳಿಂದ ಸಾಗಿಸುತ್ತಿದ್ದ ₹86 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಮಾದಕ ದಂಧೆಕೋರರ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, 8 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ರೈಲುಗಳ ಮೂಲಕ ನಗರಕ್ಕೆ ಗಾಂಜಾ ಪೂರೈಸುತ್ತಿದ್ದ ಪ್ರತ್ಯೇಕ 5 ಪ್ರಕರಣಗಳಲ್ಲಿ 8 ಜನರನ್ನು ರಾಜ್ಯ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಆರೋಪಿಗಳಿಂದ ಸರಿಸುಮಾರು 86 ಲಕ್ಷ ರೂ. ಮೌಲ್ಯದ ಗಾಂಜಾ …
Read More »ಜಪಾನ್ ಪ್ರಜೆಗೆ ಡಿಜಿಟಲ್ ಅರೆಸ್ಟ್: ₹35 ಲಕ್ಷ ಲೂಟಿ, ಬೆಂಗಳೂರಲ್ಲಿ ಎಫ್ಐಆರ್ ದಾಖಲು
ಬೆಂಗಳೂರು: ನಗರದಲ್ಲಿ ವಾಸವಾಗಿರುವ ಜಪಾನ್ ಮೂಲದ ಪ್ರಜೆಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ 35.49 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಜಪಾನ್ ಮೂಲದ 59 ವರ್ಷದ ವ್ಯಕ್ತಿ ನೀಡಿರುವ ದೂರಿನ ಅನ್ವಯ ಆಗ್ನೇಯ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರರಿಗೆ ಡಿಸೆಂಬರ್ 12ರಂದು ಟೆಲಿಫೋನ್ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ ಪ್ರತಿನಿಧಿಗಳ ಹೆಸರಿನಲ್ಲಿ ಕರೆ ಮಾಡಿದ್ದ ವಂಚಕರು, ‘ನಂಬರ್ ಬ್ಲಾಕ್ ಮಾಡುತ್ತಿರುವುದಾಗಿ’ ತಿಳಿಸಿದ್ದರು. ನಂತರ …
Read More »ಒಂದೇ ದಿನದ ಅಂತರದಲ್ಲಿ ಮೂವರು ರೈಲಿಗೆ ಬಲಿ
ಬೆಂಗಳೂರು: ಒಂದೇ ದಿನ ಅಂತರದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವತಿ ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಂಬಂಧ ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ನಗರ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬಿನ್ನಿಪೇಟೆ ಗೇಟ್ ಬಳಿ ಹಳಿ ದಾಟುತ್ತಿದ್ದ ಇಬ್ಬರು ಯುವಕರು ಚಲಿಸುತ್ತಿದ್ದ ರೈಲಿಗೆ ಬಲಿಯಾದರೆ, ಮತ್ತೊಂದು ಘಟನೆಯು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಭರದಲ್ಲಿ ಕಾಲು ಜಾರಿ ಯುವತಿ ಸಾವನ್ನಪ್ಪಿದ್ದಾಳೆ. ಬುಧವಾರ ರಾತ್ರಿ …
Read More »ಮೌನಕ್ಕೆ ಜಾರಿದ ಮನಮೋಹನ್ ಸಿಂಗ್.
ಮೌನಕ್ಕೆ ಜಾರಿದ ಮನಮೋಹನ್ ಸಿಂಗ್. ಭಾರತದ ಹೆಚ್ಚುತ್ತಿರುವ ಇಂಧನ ಬೇಡಿಕೆಗಳನ್ನು ಪೂರೈಸುವ ಪ್ರಯತ್ನದಲ್ಲಿ, ಸಿಂಗ್ 2005 ರಲ್ಲಿ US ಅಧ್ಯಕ್ಷ ಜಾರ್ಜ್ W. ಬುಷ್ ಅವರೊಂದಿಗೆ ಪರಮಾಣು ಸಹಕಾರ ಒಪ್ಪಂದಕ್ಕಾಗಿ ಮಾತುಕತೆ ನಡೆಸಿದರು. ಮೇ 2004 ರ ಸಂಸತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸಿತು. ಕಾಂಗ್ರೆಸ್‌ನ ನಾಯಕಿ, ಸೋನಿಯಾ ಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ನಿರಾಕರಿಸಿದರು, ಬದಲಿಗೆ ಸಿಂಗ್ ಅವರನ್ನು ಹುದ್ದೆಗೆ ಶಿಫಾರಸು …
Read More »
Laxmi News 24×7