ದಾವಣಗೆರೆ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ವಿಚಾರವಾಗಿ ಸಂಸದ ಜಗದೀಶ್ ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೊನ್ನೆ ಬೆಳಗಾವಿಯಲ್ಲಿ ಹೆಬ್ಬಾಳ್ಕರ್ ಪಿಎ ಕಿರುಕುಳದಿಂದ ಎಸ್ಡಿಎ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ ಸಾಯುವ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಿಎ ಹೆಸರು ಬರೆದಿಟ್ಟಿದ್ದ. ಆದರೂ ಅವರ ಪಿಎ ಬಂಧನ ಆಗದೆ ಬೇಲ್ ಪಡೆದು ಆಚೆ ಓಡಾಡುತ್ತಿದ್ದಾರೆ. ಈಗ ಕಲಬುರಗಿಯಲ್ಲಿ …
Read More »Daily Archives: ಡಿಸೆಂಬರ್ 29, 2024
ಬೆಳಗಾವಿ: ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಯುವಕ ಸಾವು
ಬೆಳಗಾವಿ: ಪಾರ್ಟಿ ಮಾಡಲು ಹೋಗಿದ್ದಾಗ ಈಜುಕೊಳದಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ಭಾನುವಾರ ನಡೆದಿದೆ. ಬೆಳಗಾವಿಯ ಖಾಸಬಾಗ ನಿವಾಸಿ ಮಹಾಂತೇಶ ಗುಂಜೀಕರ (26) ಮೃತ ಯುವಕ. ಎಲ್‌ಜಿ ಕಂಪನಿಯಲ್ಲಿ ಮಹಾಂತೇಶ ಉದ್ಯೋಗಿಯಾಗಿದ್ದ. ಕಂಪನಿಯ ಬೆಳಗಾವಿ ಶಾಖೆಯ 22 ಜನ ಸಿಬ್ಬಂದಿ ನಿನ್ನೆ ಸಂಜೆ ಕಣಕುಂಬಿ ಬಳಿಯ ಖಾಸಗಿ ರೆಸಾರ್ಟ್‌ಗೆ ತೆರಳಿದ್ದರು. ಇಂದು ಇವರೆಲ್ಲಾ ಮನೆಗೆ ಮರಳಬೇಕಿತ್ತು. ಭಾನುವಾರ ಬೆಳಗ್ಗೆ ರೆಸಾರ್ಟ್ನ ಈಜುಕೊಳದಲ್ಲಿ …
Read More »ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಘಟನೆಯಿಂದ ಮನನೊಂದು ದೇಗುಲ ನೆಲಸಮಕ್ಕೆ ನಿರ್ಧಾರ
ಹುಬ್ಬಳ್ಳಿ, ಡಿಸೆಂಬರ್ 29: ನಗರದ ಅಯ್ಯಪ್ಪ (Ayyappa) ಮಾಲಾಧಾರಿಗಳ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಒಂಬತ್ತು ಜನರ ಪೈಕಿ ಒಬ್ಬೊಬ್ಬರೆ ಪ್ರಾಣ ಬಿಡುತ್ತಿದ್ದಾರೆ. ಹೀಗಾಗಿ ಸದ್ಯ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಮಧ್ಯೆ 22 ವರ್ಷದ ಹಿಂದೆ ನಿರ್ಮಿಸಿದ್ದ ಅಯ್ಯಪ್ಪ ಸನ್ನಿಧಿ ನೆಲಸಮಕ್ಕೆ ನಿರ್ಧಾರ ಮಾಡಲಾಗಿದೆ. ನಗರದ ಅಚ್ಚವ್ವನ ಕಾಲೋನಿಯಲ್ಲಿ 22 ವರ್ಷದ ಹಿಂದೆ ಅಯ್ಯಪ್ಪ ಸನ್ನಿಧಿ ನಿರ್ಮಿಸಲಾಗಿತ್ತು. ಗಜಾನನ ಜಿತೂರಿ ಸ್ವಾಮೀಜಿ ಅವರು ಈ ಸನ್ನಿಧಿ ನಿರ್ಮಿಸಿದ್ದರು. ಇದೀಗ ಘಟನೆಯಿಂದ …
Read More »ಜನವರಿ 02 2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು
ಘಟಪ್ರಭಾ: ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಜನವರಿ 02 2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಪುಣೆಯಿಂದ ಮಧ್ಯಾಹ್ನ 02.15 ಕ್ಕೆ ಹೊರಟು ರಾತ್ರಿ 07.38 ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರೈಲು ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು. ಜನವರಿ 3 …
Read More »ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ: ಆರ್.ಅಶೋಕ
ಬೆಂಗಳೂರು: “ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?. ಪ್ರಿಯಾಂಕ್ ಖರ್ಗೆ ಕಲಬುರಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ …
Read More »ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಪಾಲಕರ ವರ್ಕ ಶಾಪ್
ಮಕ್ಕಳ ಪಾಲಕರ ಬಾಂಧವ್ಯ ಗಟ್ಟಿಯಾಗಿರಲಿ ಚೇತನ ಸಂಪ್ರದಾಯ್ ಖ್ಯಾತ ಸಂಪನ್ಮೂಲ ವ್ಯಕ್ತಿ ಚೇತನ ಸಂಪ್ರದಾಯ್ ಮಾತನಾಡಿದರು ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಪಾಲಕರ ವರ್ಕ ಶಾಪ್ ಸಭೆಯಲ್ಲಿ ಖ್ಯಾತ ಸಂಪನ್ಮೂಲ ವ್ಯಕ್ತಿ ಚೇತನ ಸಂಪ್ರದಾಯ್ ಅಭಿಪ್ರಾಯ ಪಟ್ಟರು “ಮಕ್ಕಳು ಮತ್ತು ಪಾಲಕರ ಬಾಂಧವ್ಯ ಯಾವಾಗಲೂ ಗಟ್ಟಿಯಾಗಿರಲಿ ಎಂದು ಚೇತನ ಸಂಪ್ರದಾಯ ಹೇಳಿದರು ತಂದೆ ತಾಯಿಗಳು ಮತ್ತು ಪಾಲಕರು ಮಕ್ಕಳಿಂದ ದೂರ ಸರಿಯದೇ ಚಿಕ್ಕವರಿದ್ದಾಗಿನ ಬಾಂಧವ್ಯವನ್ನೇ ಮಕ್ಕಳು ಟೀನೇಜ್ ಗೆ ಬಂದಾಗಲೂ ಮುಂದು …
Read More »ರಾಜಕಾರಣಿಗಳು ಕ್ರಿಕೆಟ್‌ನಿಂದ ದೂರವಿರಬೇಕು: ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜಕಾರಣ ಹಾಗೂ ಕ್ರಿಕೆಟ್ ಎರಡೂ ಸಹ ಬೇರೆ ಬೇರೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಇಂದು ಆಯೋಜಿಸಲಾಗಿದ್ದ 1983 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ, ಕನ್ನಡಿಗ ಸೈಯದ್ ಕಿರ್ಮಾನಿ ಅವರ ಆತ್ಮಕಥೆ “ಸ್ಟಂಪ್ಡ್ : ಲೈಫ್ ಬಿಹೈಂಡ್ ಆ್ಯಂಡ್ ಬಿಯಾಂಡ್ ದಿ ಟ್ವೆಂಟಿ ಟು ಯಾರ್ಡ್ಸ್” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ರಾಜಕೀಯ ಹಾಗೂ ಕ್ರಿಕೆಟ್ ಎರಡೂ …
Read More »ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ;D.C.M.
ಬೆಂಗಳೂರು: ”ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ಮನವಿ ಎಂದಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದರು. ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ …
Read More »ಕಟಾವು ಮಾಡಲಿದ್ದ ಬೆಳೆಯನ್ನು ಕಾಡಾನೆಗಳು ನಾಶಪಡಿಸಿರುವುದರಿಂದಾಗಿ ಹಲವು ರೈತರಿಗೆ ಲಕ್ಷಾಂತರ ರೂ. ನಷ್ಟ
ಹಾಸನ (ಬೇಲೂರು): ಕಟಾವಿಗೆ ಬಂದಿರುವ ಭತ್ತದ ಬೆಳೆಗಳನ್ನ ಕಾಡಾನೆಗಳ ಹಿಂಡು ತುಳಿದು ನಾಶಪಡಿಸಿರುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಮಲಸಾವರ ಹಾಗೂ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಶನಿವಾರ ರಾತ್ರಿ ನಡೆದಿದೆ. 22 ಕಾಡಾನೆಗಳು ಚಿಕ್ಕ ಸಾಲಾವರ (ಬಾವಿಕಟ್ಟೆ) ಗ್ರಾಮದ ಹರೀಶ್, ಶಾಂತಪ್ಪ, ಅಶೋಕ, ಉಪೇಂದ್ರ ಅವರಿಗೆ ಸೇರಿದ ಭತ್ತದ ಪೈರನ್ನು ನಾಶಪಡಿಸಿ ಮಂಜುನಾಥ್ ಎಂಬುವರಿಗೆ ಸೇರಿದ ತೆಂಗಿನ ಮರಗಳನ್ನು ಮುರಿದಿವೆ. ಬಾವಿಕಟ್ಟೆ ಗ್ರಾಮದ ಸುಶೀಲಮ್ಮ ಎಂಬ ರೈತ …
Read More »ಕರ್ನಾಟಕ ಲೋಕಸೇವಾ ಆಯೋಗದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ನಡೆದಿದೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಸುಸೂತ್ರವಾಗಿ ಜರುಗಿದೆ. ಇಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ಪೊಲೀಸರು ಸೇರಿದಂತೆ ಗುಪ್ತಚರ ಸಿಬ್ಬಂದಿಗಳನ್ನು ನೇಮಕ ಮಾಡಿ ಯಾವುದೇ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು. ರಾಜ್ಯದ 204 ಸರ್ಕಾರಿ, 189 ಅನುದಾನಿತ ಹಾಗೂ 161 ಖಾಸಗಿ ಶಾಲಾ – ಕಾಲೇಜುಗಳಲ್ಲಿ ಪರೀಕ್ಷೆ ನಡೆದಿದ್ದು, ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಪರೀಕ್ಷೆ ಒಂದು ಹಾಗೂ ಮಧ್ಯಾಹ್ನ 2 …
Read More »