Breaking News

Yearly Archives: 2024

ಬೆಳಗಾವಿಯಲ್ಲಿ ಲವ್.. ಡೋಖಾ.. ಶೂಟೌಟ್ ಪ್ರಕರಣ ಮೂವರು ಆರೋಪಿಗಳನ್ನು ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು

ಬೆಳಗಾವಿಯಲ್ಲಿ ಲವ್.. ಡೋಖಾ.. ಶೂಟೌಟ್ ಪ್ರಕರಣ ಮೂವರು ಆರೋಪಿಗಳನ್ನು ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಮಾಜಿ ಪ್ರಿಯಕರ ಪ್ರಣೀತಕುಮಾರ್ ಮೇಲೆ ಶೂಟೌಟ್ ಮಾಡಿಸಿದ್ದ ಮಾಜಿ ಪ್ರೇಯಸಿ ನಿಧಾ ಕಿತ್ತೂರ ಬೆಳಗಾವಿಯ ಮಹಾಂತೇಶ ನಗರದ ಮನೆಯೊಂದರಲ್ಲಿ ನಡೆದಿದ್ದ ಶೂಟೌಟ್ ಆರೋಪಿಗಳಾದ ನಿಧಾ ಕಿತ್ತೂರು, ಅಯೂಬ್ ಕಿತ್ತೂರು, ನಿಧಾ ಪರಿಚಯಸ್ಥೆ ಜಾಬೀನ್ ಕಿಣೇಕರ ಕೋರ್ಟ್‌ಗೆ ಹಾಜರು ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದ ಮಾಳಮಾರುತಿ ಠಾಣೆ ಪೊಲೀಸರು ಮೂವರಿಗೂ ನ್ಯಾಯಾಂಗ ಬಂಧನಕ್ಕೆ …

Read More »

ಕರ್ನಾಟಕದ ಈ ರೈಲುಗಳು ಭಾಗಶಃ ರದ್ದು, ತಿರುಪತಿ-ಹುಬ್ಬಳ್ಳಿ ರೈಲು ಸಂಖ್ಯೆ ಬದಲು; ಇಲ್ಲಿದೆ ವಿವರ

ರಾಯದುರ್ಗ, ಕದಿರಿದೇವರಪಲ್ಲಿ, ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವಿನ ಕೆಲವು ರೈಲುಗಳ ಸಂಚಾರ ಡಿಸೆಂಬರ್ ತಿಂಗಳಲ್ಲಿ ಭಾಗಶಃ ರದ್ದಾಗಲಿದೆ. ಮಾರ್ಗದುರಸ್ತಿ ಮತ್ತು ಯಾರ್ಡ್ ಮಾರ್ಪಾಡು ಕಾಮಗಾರಿಗಳಿಂದಾಗಿ ಈ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳ ಸಂಖ್ಯೆಗಳನ್ನೂ ಬದಲಾಯಿಸಲಾಗಿದೆ. ಪ್ರಯಾಣಿಕರು ಹೊಸ ವೇಳಾಪಟ್ಟಿಯನ್ನು ಪರಿಶೀಲಿಸುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.   ನವೆಂಬರ್​ 29: ರಾಯದುರ್ಗ ಮತ್ತು ಕದಿರಿದೇವರಪಲ್ಲಿ ನಿಲ್ದಾಣ ಮತ್ತು ಲೋಂಡಾ (Londa) ಮತ್ತು ಕ್ಯಾಸಲ್ ರಾಕ್ (Castlerock) ನಿಲ್ದಾಣಗಳ ನಡುವೆ …

Read More »

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು? ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆದಿದೆ. ಅಮಿತ್​ ಶಾ ಜತೆಗೆ ನಡೆದ ಸಭೆ ಸಕಾರಾತ್ಮಕವಾಗಿತ್ತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳಿಲ್ಲ.ರಾಜ್ಯಕ್ಕೆ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಶಿಂಧೆ ಹೇಳಿದ್ದಾರೆ. ದೆಹಲಿಯ ಅಮಿತ್ …

Read More »

ಬಾರ್​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ, ಎಫ್​ಐಆರ್ ದಾಖಲಾದರೆ ಚಲುವರಾಯಸ್ವಾಮಿಗೂ ಸಂಕಷ್ಟ

ಮಂಡ್ಯ, ನವೆಂಬರ್ 29: ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಪರವಾನಗಿ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ ಸಲ್ಲಿಕೆಯಾಗಿರುವ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯದ ಸತ್ಯಾಸತ್ಯತೆ ಅರಿಯಲು ಲೋಕಾಯುಕ್ತ ಮುಂದಾಗಿದೆ. ಎಫ್​ಐಆರ್​ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂದು ವೇಳೆ ಎಫ್​ಐಆರ್ ದಾಖಲಾದರೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ. ಯಾಕೆಂದರೆ, ದೂರುದಾರರು ಸಲ್ಲಿಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವ ಸಲುವರಾಯಸ್ವಾಮಿ ಬಗ್ಗೆಯೂ …

Read More »

ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ

ನವೆಂಬರ್​ 29: ಬಾಂಗ್ಲಾದೇಶದಿಂದ (Bangladesh) ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ (Fake Documents) ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. ಆರೋಪಿ ಅರ್ನಾಬ್ ಮಂಡಲ್ ಮೂಲತಃ ಪಶ್ಚಿಮ ಬಂಗಾಳದವನು. ಈ ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ ಸೈಬರ್​ ಸೆಂಟರ್ ತೆರೆದಿದ್ದನು. ಕರ್ನಾಟಕ ಪೊಲೀಸರು ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ಬಾಂಗ್ಲಾದೇಶ ಪ್ರಜೆಗಳ ಬೆನ್ನಬಿದ್ದಿದ್ದಾರೆ. ಈಗಾಗಲೆ ಅನೇಕರ ಹೆಡೆಮುರಿ ಕಟ್ಟುತ್ತಿದ್ದಾರೆ. ಈ ಎಲ್ಲ …

Read More »

ಪಂಚಮಸಾಲಿ ಮೀಸಲಾತಿ ಜೊತೆ ಕೇಂದ್ರ ಸರ್ಕಾರ ಲಿಂಗಾಯತರನ್ನು ಒಬಿಸಿಗೆ ಸೇರಿಸುವಂತೆಯೂ ಹೋರಾಟ: ಯತ್ನಾಳ್

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲೋದಿಲ್ಲ, ಡಿಸೆಂಬರ್ 10ರಂದು ಬೇರೆಯವರು ಜೊತೆಗೂಡದಿದ್ದರೂ ತಾನು ಹೋರಾಟ ಮುಂದುವರಿಸುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಪಂಚಮಸಾಲಿ ಮೀಸಲಾತಿಯಲ್ಲದೆ ಕೇಂದ್ರ ಸರ್ಕಾರವು ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂತಲೂ ಹೋರಾಟ ನಡೆಸಲಾಗುವುದು ಎಂದು ಯತ್ನಾಳ್ ಹೇಳಿದರು. ಬಿಜೆಪಿ ಅಧಿಕಾರಲ್ಲಿದ್ದಾಗ ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ಮಾಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಮೌನವಾಗಿರುವುದನ್ನು ಗೇಲಿ ಮಾಡಿದ ಯತ್ನಾಳ್ ಅವರಿಗೆ ನಿಜಕ್ಕೂ ಸಮುದಾಯದ …

Read More »

ಸಂಪುಟ ಪುನರ್ ರಚನೆಗೆ ‘ಕೈ’ ಕಮಾಂಡ್ ಬ್ರೇಕ್

ನವೆಂಬರ್ 29: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಕಾಂಗ್ರೆಸ್ ಕ್ಲೀನ್​​ಸ್ವೀಪ್ ಮಾಡಿತ್ತು. ಭರ್ಜರಿ ಗೆಲುವು ದೊರೆಯುತ್ತಿದ್ದಂತೆಯೇ ರಾಜ್ಯ ಸಂಪುಟ ಪುನರ್ ರಚನೆಯ ಸುದ್ದಿ ಮುನ್ನೆಲೆಗೆ ಬಂದಿತ್ತು. ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬ ಬವದಂತಿಗಳೂ ಹರಿದಾಡಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ರಾಜ್ಯ ನಾಯಕರು ಮಾತನಾಡಿದ್ದರು. ಅತ್ತ ಸಚಿವಕಾಂಕ್ಷಿಗಳು ಲಾಬಿ ಶುರು ಮಾಡಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದರು. ಇನ್ನೇನು ಸಂಪುಟ ಪುನರ್ …

Read More »

ಸಿಪಿಐ ಧರೇಗೌಡ ಪಾಟೀಲ್ ವಿರುದ್ಧ ಕಿರುಕುಳ ಆರೋಪ; ಆತ್ಮಹತ್ಯೆಗೆ ಮುಂದಾದ ಪೊಲೀಸ್ ಪೇದೆ

ಬೆಳಗಾವಿ, ನ.28 – ಬೆಳಗಾವಿಯ ಉದ್ಯಮಭಾಗ ನಗರ ಪೊಲೀಸ್ ಠಾಣೆಯ ಸಿಪಿಐ ಧರೇಗೌಡ ಪಾಟೀಲ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಐದು ಪುಟಗಳ ಕೈ ಬರಹದ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿದ್ದ ಪೊಲೀಸ್ ಪೇದೆಯ‌‌ನ್ನು ರಕ್ಷಿಸಲಾಗಿದೆ. ಬೆಳಗಾವಿಯ ಉದ್ಯಮಭಾಗ ಪೊಲೀಸ್ ಠಾಣೆ ಸಿಪಿಐ ಧರೇಗೌಡ ಪಾಟೀಲ್ ವಿರುದ್ಧ ಅದೇ ಠಾಣೆಯ ಪೊಲೀಸ್ ಪೇದೆ ವಿಠ್ಠಲ್ ಮುನ್ಯಾಳ ಹೆಸರಿನಲ್ಲಿ ಸಹಿ ಇರುವ ಐದು ಪುಟಗಳ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ …

Read More »

ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅಧಿಕಾರಿಗಳಿಗೆ ಶಾಸಕ ದುರ್ಯೋಧನ ಐಹೊಳೆ ಸೂಚನೆ

ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅಧಿಕಾರಿಗಳಿಗೆ ಶಾಸಕ ದುರ್ಯೋಧನ ಐಹೊಳೆ ಸೂಚನೆ ಚಿಕ್ಕೋಡಿ: ರಾಯಬಾಗ ಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ೧೧ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗಬಾರದು. ಜಲಜೀವನ್ ಮಿಷನ್ ಯೋಜನೆ ಮೂಲಕ ಜನರಿಗೆ ನಿರಂತರ ನೀರು ಸರಬರಾಜು ಮಾಡಬೇಕು. ಮಂಜೂರಾದ ಕಾಮಗಾರಿ ಆರಂಭ ಮಾಡದ ಗುತ್ತಿಗೆದಾರರಿಗೆ ನೋಟಿಸ್ ನೀಡುವಂತೆ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸೂಚನೆ ನೀಡಿದರು. ಚಿಕ್ಕೋಡಿ ತಾಲೂಕು …

Read More »

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಬೆಂಡಿಗೇರಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ವಿರುಪಾಕ್ಷಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅಮಾನತ್ತು ಮಾಡಿ ಆದೇಶ ಮಾಡಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಗ್ರಾಮದಲ್ಲಿ ದಾಬಾ ನಡೆಸುತ್ತಿದ್ದ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹನಮಂತ ಎಂಬುವನ ಮೇಲೆ ಕಾನ್ಸ್ಟೇಬಲ್ ವಿರುಪಾಕ್ಷಿ ಜಗಳ …

Read More »