ಮುಡಾ ಹಗರಣ : `CM ಸಿದ್ದರಾಮಯ್ಯ’ ವಿಚಾರಣೆಗೆ ಲೋಕಾಯುಕ್ತ ಸಿದ್ಧತೆ! ಮೈಸೂರು : ಮುಡಾ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಈಗಾಗಲೇ ವಿಚಾರಣೆ ನಡೆಸುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯಲು ಸಿದ್ಧತೆ ನಡೆಸಲಾಗಿದೆ. ಮುಡಾ ಹಗರಣ ಸಂಬಂಧ ಪ್ರಕರಣದ 3 ನೇ ಆರೋಪಿ, ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ, 4 ನೇ ಆರೋಪಿ ಜಮೀನಿನ ಮಾಲೀಕ ದೇವರಾಜು ವಿಚಾರಣೆ ಮಾಡಲಾಗಿತ್ತು. ಶುಕ್ರವಾರ 2 ನೇ …
Read More »Yearly Archives: 2024
ದೀಪಾವಳಿ ಹಬ್ಬದ ಸಂದರ್ಭ14 ಪ್ರಮುಖ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿ
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ. ಈ ಹಿನ್ನೆಲೆ ಕರ್ನಾಟಕಕ್ಕೆ ಸಂಬಂಧಿಸಿದ 14 ಪ್ರಮುಖ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ ನೀಡಿದ್ದು, ” ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು 14 ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದೆ. * ಅಕ್ಟೋಬರ್ 25 ರಿಂದ ನವೆಂಬರ್ 24 ರವರೆಗೆ …
Read More »ಬೇಲೆಕೇರಿ ಅದಿರು ಅಕ್ರಮ ನಾಪತ್ತೆ ಕೇಸ್ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!
ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿದ್ದಂತ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿತ್ತು. ಇಂದು ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ …
Read More »‘ಮಣ್ಣಲ್ಲಿ ಹುದುಗಿದ ಇತಿಹಾಸ ಬೆಳಗಲಿ’
ರಾಣಿ ಚನ್ನಮ್ಮ ವೇದಿಕೆ, ಚನ್ನಮ್ಮನ ಕಿತ್ತೂರು: ‘ಕಿತ್ತೂರು ಸಂಸ್ಥಾನದ ಇತಿಹಾಸದ ಈ ಭಾಗದ ಊರು ಹಾಗೂ ಮನೆಗಳಲ್ಲಿ ಹುದುಗಿಹೋಗಿದೆ. ಅದನ್ನು ಹೊರಗೆ ತೆಗೆಯುವ ಕೆಲಸವಾಗಬೇಕು. ಅದು ನಾಡಿನೆಲ್ಲೆಡೆ ಬೆಳಗುವಂತಾಗಬೇಕು’ ಎಂದು ಸಾಹಿತಿ ಶೇಖರ ಹಲಸಗಿ ಬಯಸಿದರು. ಕಿತ್ತೂರು ಉತ್ಸವದ ಕೊನೆಯ ದಿನವಾದ ಶುಕ್ರವಾರ ನಡೆದ ಎರಡನೇ ಗೋಷ್ಠಿಯಲ್ಲಿ ಅವರು ಆಶಯ ನುಡಿಗಳನ್ನಾಡಿದರು. ‘ಕಿತ್ತೂರು ಸಂಸ್ಥಾನದ ಹಿರೇಮಲ್ಲಶೆಟ್ಟಿ ಹಾಗೂ ಚಿಕ್ಕಮಲ್ಲಶೆಟ್ಟಿ ವ್ಯಾಪಾರಕ್ಕಾಗಿ ಬಂದು ದೊರೆಗಳಾದವರು. ಅವರಲ್ಲಿ ಐದನೆಯ ದೊರೆಯಾಗಿದ್ದ ಅಲ್ಲಪ್ಪಗೌಡ …
Read More »ಶಿಗ್ಗಾವಿ: ಸಚಿವ ಜಮೀರ್ ಮನವೊಲಿಕೆ ಯಶಸ್ವಿ- ನಾಮಪತ್ರ ಹಿಂಪಡೆಯಲು ಖಾದ್ರಿ ಒಪ್ಪಿಗೆ
ಬೆಂಗಳೂರು: ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಜ್ಜಂ ಪೀರ್ ಖಾದ್ರಿ ಸ್ಪರ್ಧೆಯಿಂದ ಹಿಂದೆಸರಿಯಲು ಒಪ್ಪಿದ್ದಾರೆ. ಖಾದ್ರಿ ಅವರನ್ನು ಮನವೊಲಿಸುವಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಯಶಸ್ವಿಯಾಗಿದ್ದಾರೆ. ಖಾದ್ರಿ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಜತೆ ಶಿಗ್ಗಾವಿಯಿಂದ ಬೆಂಗಳೂರಿಗೆ …
Read More »ಶಾಸಕ ಸ್ಥಾನದಿಂದ ಸತೀಶ್ ಸೈಲ್ ರನ್ನು ತಕ್ಷಣ ವಜಾಗೊಳಿಸಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ
ಹುಬ್ಬಳ್ಳಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕರಣವಾಗಿರುವ ಹಿನ್ನೆಲೆಯಲಿ ತಕ್ಷಣ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸತೀಶ್ ಸೈಲ್ ಅವರನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಸ್ಪೀಕರ್ ಅವಜಾಗೊಳಿಸಬೇಕು ಹಾಗೂ ಚುನಾವಣೆ ಘೋಷಿಸಬೇಕು ಎಂದರು. ಇನ್ನು ಕಾಂಗ್ರೆಸ್ ನ ಕೆಲ ನಾಯಕರು ಸತೀಶ್ …
Read More »ವಕ್ಫ್ ಬೋರ್ಡ್-ರೈತರ ಜಟಾಪಟಿ, ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ
ವಿಜಯಪುರ ಜಿಲ್ಲೆಯಲ್ಲಿನ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ್ದು, ಹಲವು ವರ್ಷಗಳಿಂದ ರೈತರು ಉಳುಮೆ ಮಾಡಿಕೊಂಡಿದ್ದ ಭೂಮಿಯು ವಕ್ಫ್ ಬೋರ್ಡ್‌ಗೆ ಸೇರಿದ್ದು ಎಂದು ನೋಟಿಸ್‌ನಲ್ಲಿ ತಿಳಿಸಿದೆ. ಇದೇ ವಿಚಾರವಾಗಿ ವಕ್ಫ್ ಹಾಗೂ ರೈತರ ನಡುವೆ ಜಟಾಪಟಿ ಮುಂದುವರಿದಿದೆ. ಮತ್ತೊಂದೆಡೆ ಇದು ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದೆ. ವಕ್ಫ್ ಬೋರ್ಡ್‌ನಿಂದ ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ …
Read More »ಮೂರು ತಿಂಗಳಲ್ಲಿ 41 ಶಿಶುಗಳು ಸಾವು:
ಮೂರು ತಿಂಗಳಲ್ಲಿ 41 ಶಿಶುಗಳು ಸಾವು: ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ-ಬಿಮ್ಸ್ ನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಮೂರು ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬರೋಬ್ಬರಿ 41 ಶಿಸುಗಳು ಸಾವನ್ನಪ್ಪಿದ್ದು, ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದಾರೆ. 41 ಶಿಶುಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು ಬಿಮ್ಸ್ ಆಸ್ಪತ್ರೆಯ ಆಡಳಿತ ಮಂಡಳಿಯಾಗಲಿ, ವೈದ್ಯರುಗಳಾಗಲಿ ತಲೆಕೆಡಿಸಿಕೊಂಡಿಲ್ಲ. ನವಜಾತ ಶಿಶುಗಳ ಸಾವಿಗೆ ಶಿಶುಗಳ ತೂಕದಲ್ಲಿ ಕಡೆ, ಅವಧಿಪೂರ್ವ ಪ್ರಸವ ಹೀಗೆ ಬೇರೆ ಬೇರೆ ಕಾರಣಗಳನ್ನು ನೀಡಿ ಸಮಾಜಿಯಿಷಿ ಕೊಡುತ್ತಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ತಿಂಗಳಿಗೆ …
Read More »ಶಾಸಕ ಸತೀಶ್ ಸೈಲ್ ಗೆ 7 ವರ್ಷ ಶಿಕ್ಷೆ ನೀಡಿದ ಕೋರ್ಟ್ ಆದೇಶ ತಿಳಿದು ಶಾಕ್ ಆಯ್ತು : ಡಿ.ಕೆ .ಶಿ.
ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.ಈ ಒಂದು ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಕೋರ್ಟ್ ಆದೇಶ ನಿಜಕ್ಕೂ ನನಗೆ ಶಾಕ್ ನೀಡಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ವಿಚಾರದ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಕಾನೂನಿಗೆ ಯಾರೇ ಆಗಲಿ ಗೌರವ ಕೊಡಬೇಕು. …
Read More »*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ
*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ* ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಸಿಬ್ಬಂದಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಸಿಬ್ಬಂದಿಗಳು, ಊರಿನ ಮುಖಂಡರು …
Read More »