ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಇತ್ತೀಚೆಗೆ ಸಂಭವಿಸಿದೆ. ಬಾಲಕೃಷ್ಣ (44) ಮೃತ ವ್ಯಕ್ತಿ. ಇವರು 25 ದಿನಗಳಿಂದ ಜ್ವರ ವಾಂತಿ ಸಹಿತ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಇರಬಹುದು ಎಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಣಿಪಾಲ ಕೆಎಂಸಿ, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಮಂಗಳೂರಿನ ವೆಲ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೆ …
Read More »Yearly Archives: 2024
ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ
ಹುಬ್ಬಳ್ಳಿ: ಕಾಂಗ್ರೆಸ್ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಇದೀಗ ಬಿಜೆಪಿಯಲ್ಲಿ ಆಗುತ್ತಿರುವುದೇನು? ರಾಜಕಾರಣದಲ್ಲಿ ಇಂತಹ ಹೇಳಿಕೆ ನೀಡುವ ಮೊದಲು ಯೋಚಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸುಮಾರು ಐದಾರು ಕುಟುಂಬಗಳು ಕುಟುಂಬ ರಾಜಕಾರದಲ್ಲಿವೆ. ಇದು ರಾಜಕಾರಣದಲ್ಲಿ ಸ್ವಾಭಾವಿಕ. ಇಂತಹ ಹೇಳಿಕೆ ನೀಡುವ ಮೊದಲು ಯೋಚಿಸಬೇಕು. ಹೇಳಿಕೆ ನೀಡುತ್ತಿದ್ದವರೇ ಇದೀಗ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದರು. ಶಿಗ್ಗಾವಿಯಲ್ಲಿ …
Read More »ದಲಿತರ ಮೇಲೆ ದೌರ್ಜನ್ಯ ಪ್ರಕರಣ; ಒಂದೇ ಗ್ರಾಮದ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ! ಸುದ್ದಿ ತಿಳಿಯುತ್ತಿದಂತೆ ಓರ್ವ ಸಾವು!
ಕೊಪ್ಪಳ: ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ (Assault Case) ಸಂಬಂಧಿಸಿದಂತೆ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಪ್ಪಳ ಜಿಲ್ಲೆಯ (Koppala) ಗಂಗಾವತಿ ತಾಲೂಕಿನ (Gangavathi) ಮರಕುಂಬಿ ಗ್ರಾಮದ ನಿವಾಸಿಗಳಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ನೀಡಿ ಆದೇಶ ನೀಡಿದೆ. 2014ರ ಆಗಸ್ಟ್ 28 ರಂದು ಘಟನೆ ನಡೆದಿತ್ತು. ಮಂಜುನಾಥ್ ಎನ್ನುವವರಿಗೆ ನಾಲ್ವರು ಯುವಕರು ಹಲ್ಲೆ ಮಾಡಿದ್ದರು. ಥಿಯೇಟರ್ನಿಂದ (Cinema Theatre) ಊರಿಗೆ ತೆರಳಿದ್ದ ಮಂಜುನಾಥ್ ಊರಿವರಿಗೆ ವಿಷಯ ಮುಟ್ಟಿಸಿದ್ದರು. …
Read More »ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : `ಗೃಹ ಆರೋಗ್ಯ ಯೋಜನೆ’ಯಡಿ ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!
ಬೆಂಗಳೂರು : ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ʼಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆʼ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ. ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ನೀಡಲು ಆರೋಗ್ಯ ಇಲಾಖೆಯು …
Read More »ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಎಂಇಎಸ್ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕರಾಳ ದಿನಾಚರಣೆ ಆಚರಿಸಲು ಅನುಮತಿ ಕೋರಿ ಬರುವ ಎಂಇಎಸ್ ನಾಯಕರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಈ ಬಾರಿ ಯಾವುದೇ ಕಾರಣಕ್ಕೂ ಕದ್ದು ಮುಚ್ಚಿ ಕರಾಳ ದಿನಾಚರಣೆಗೆ ಅನುಮತಿ ನೀಡಿದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.
Read More »ಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ:ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು ನಗರದ ಎನ್.ಎಸ್.ಎಫ್ ಕಛೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಸಕ್ರೀಯ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು ಐವತ್ತು ಸಾವಿರಕ್ಕಿಂತ ಅಧಿಕ ಸದಸ್ಯರನ್ನು …
Read More »ಹಾಡಹಗಲೇ ಮನೆಯಿಂದ ಕಳವು
ಕುಂದಾಪುರ: ಹಾಡಹಗಲೇ ಜನನಿಬಿಡ ಪ್ರದೇಶವಾದ ಹಂಗಳೂರಿನ ಬ್ರಹ್ಮಗುಡಿ ರಸ್ತೆಯಲ್ಲಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಹಣ ಹಾಗೂ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಗುರುವಾರ ನಡೆದಿದೆ. ಬ್ರಹ್ಮಗುಡಿಯ ಜಗದೀಶ್ ಚಂದ್ರ ನಾಯರ್ ಅವರ ಮನೆಗೆ ಗುರುವಾರ ಮಧ್ಯಾಹ್ನ 2ರಿಂದ 4 ಗಂಟೆಯ ಮಧ್ಯದ ಅವಧಿಯಲ್ಲಿ ನುಗ್ಗಿದ ಕಳ್ಳರು ಮನೆಯೊಳಗಿದ್ದ ಸುಮಾರು 25-30 ಸಾವಿರ ರೂ. ಹಾಗೂ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಕಳವಾಗಿರುವ ಸೊತ್ತುಗಳ ನಿಖರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಜಗದೀಶ್ ಕುಂದಾಪುರದಲ್ಲಿ ಪ್ರಿಂಟಿಂಗ್ …
Read More »ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ\:C.M.
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಮುಗಿದ ಬಳಿಕ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ’ಯನ್ನು (ಜಾತಿ ಗಣತಿ ವರದಿ) ಸಚಿವ ಸಂಪುಟದಲ್ಲಿಟ್ಟು ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳ ನಿಯೋಗಕ್ಕೆ ಭರವಸೆ ನೀಡಿದರು. ಮಹಾಒಕ್ಕೂಟದ ಪ್ರಧಾನ ಸಂಚಾಲಕರಾದ ಕೆ.ಎಂ.ರಾಮಚಂದ್ರಪ್ಪ ನೇತೃತ್ವದ ನಿಯೋಗ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ …
Read More »ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್ ನಾಮಪತ್ರ ಸಲ್ಲಿಕೆ
ರಾಮನಗರ: ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಯೋಗೇಶ್ವರ್ ಕೊನೆ ಕ್ಷಣದಲ್ಲಿ ಕೈ ಹಿಡಿದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಮೈತ್ರಿ ಪಕ್ಷದ ನಾಯಕರು ಘೋಷಣೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಶಕ್ತಿಪ್ರದರ್ಶನಕ್ಕೆ ಜೆಡಿಎಸ್ ಸಿದ್ಧತೆ ಮಾಡಿಕೊಂಡಿದೆ. ಕೊನೆ ಕ್ಷಣದವರೆಗೂ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಥವಾ ಜಯಮುತ್ತು ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತಿತ್ತು. ಇಬ್ಬರೂ ಚುನಾವಣಾ ಧಿಕಾರಿ ಕಚೇರಿಯಿಂದ ನಾಮಪತ್ರ …
Read More »ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ: ಸಂಸತ್ ಆವರಣದಲ್ಲಿ ಚನ್ನಮ್ಮ ಸ್ಮರಣೆ
ನವದೆಹಲಿ: ವೀರ ವನಿತೆ ಕಿತ್ತೂರು ಚನ್ನಮ್ಮ ಜನ್ಮದಿನಾಚರಣೆ ಹಾಗೂ ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷಗಳು ಸಂದ ಸಂದರ್ಭದಲ್ಲಿ ಸಂಸತ್ ಆವರಣದಲ್ಲಿ ಚನ್ನಮ್ಮ ಅವರ ಸಾಧನೆಯನ್ನು ಸ್ಮರಿಸಲಾಯಿತು. ಚನ್ನಮ್ಮ ಪ್ರತಿಮೆಗೆ ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಕೂಡಲ ಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಶಾಸಕರಾದ ಬಸನಗೌಡ …
Read More »