ಹುಬ್ಬಳ್ಳಿಯ ಗೋಪನಕೊಪ್ಪ ಸಮೀಪ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಶಿವರಾಜ್(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಿನ್ನ ಸಂದೀಪ್ ಎಂಬಾತನ ಜೊತೆಗೆ ಗಲಾಟೆಯಾಗಿತ್ತು. ಹೀಗಾಗಿ ಶಿವರಾಜನನ್ನು ಸಂದೀಪ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮನೆಯಿಂದ ಹೊರಗೆ ಹೋದಾಗ ದುಷ್ಕರ್ಮಿಗಳು ಶಿವರಾಜ್ ನನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯ ಅಶೋಕನಗರ …
Read More »Yearly Archives: 2024
ಇನ್ಮುಂದೆ 7 ದಿನಗಳಲ್ಲೇ ಸಿಗಲಿದೆ ಜನನ-ಮರಣ ಪ್ರಮಾಣಪತ್ರ!
ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರದ ವಿತರಣೆಯ ಕುರಿತು ಉಲ್ಲೇಖ (1) ರಂತೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ 4ನೇ ವರದಿಯ ಶಿಫಾರಸ್ಸು ಸಂಖ್ಯೆ 131 ಕ್ಕೆ …
Read More »ಅನ್ನಭಾಗ್ಯ ಯೋಜನೆಯ ಡಿಬಿಟಿ ಹಣ ಬಿಡುಗಡೆ: ಗುಡ್ನ್ಯೂಸ್ ಕೊಟ್ಟ ಮುನಿಯಪ್ಪ
ಕೋಲಾರ, ಅಕ್ಟೋಬರ್ 11:ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಮಹತ್ವದ ಯೋಜನೆಯಾಗಿದೆ. ಈ ಅನ್ನ ಭಾಗ್ಯ ಯೋಜನೆಯ ಡಿಬಿಟಿ ಹಣವನ್ನ ಸರ್ಕಾರ ಎರಡು ತಿಂಗಳಿನಿಂದ ಕೊಟ್ಟಿರಲಿಲ್ಲ. ಹೀಗಾಗಿ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಹಣ ಬಿಡುಗಡೆ ಕುರಿತು ಮಹತ್ವದ ಮಾಹಿತಿಯನ್ನ ಸಚಿವ ಕೆ ಎಚ್ ಮುನಿಯಪ್ಪ ಅವರು ನೀಡಿದ್ದಾರೆ. ಈ ಕುರಿತು ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವ ಕೆ …
Read More »ದೇಶದಲ್ಲಿ ‘ನೇರ ತೆರಿಗೆ’ ಸಂಗ್ರಹದಲ್ಲಿ ಶೇ.18.4ರಷ್ಟು ಹೆಚ್ಚಳ |
ನವದೆಹಲಿ:ಮರುಪಾವತಿಯ ನಂತರ ಕೇಂದ್ರದ ನೇರ ತೆರಿಗೆ ಸಂಗ್ರಹವು ಏಪ್ರಿಲ್ 1-ಅಕ್ಟೋಬರ್ 10 ರಲ್ಲಿ 11.26 ಟ್ರಿಲಿಯನ್ ರೂ.ಗಳಷ್ಟಿದ್ದು, ಇದು ಪೂರ್ಣ ವರ್ಷದ ಗುರಿಯ 51% ರಷ್ಟಿದೆ ಎಂದು ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿ ಅಂಶಗಳು ತಿಳಿಸಿವೆ ಇಲ್ಲಿಯವರೆಗೆ ಸಂಗ್ರಹವು ವರ್ಷಕ್ಕೆ 18.4% ಹೆಚ್ಚಾಗಿದೆ, ಇದು ಪೂರ್ಣ ವರ್ಷದ ಬೆಳವಣಿಗೆಯ ಅಂದಾಜು 12.8% ಕ್ಕಿಂತ ಹೆಚ್ಚಾಗಿದೆ. ಇದು ಮುಂದುವರಿದರೆ, ನಿಜವಾದ ಸಂಗ್ರಹವು ಬಜೆಟ್ ಅಂದಾಜು 22.07 ಟ್ರಿಲಿಯನ್ ರೂ.ಗಳನ್ನು ಯೋಗ್ಯ ಅಂತರದಿಂದ …
Read More »ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ
ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು) ಕಾಯಿಲೆ ಕೂಡ ಹೆಚ್ಚಿನ ಜನರಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿವೆ. ಸಂಧಿವಾತ ( Arthritis ) ವಯಸ್ಸಾದವರಲ್ಲಿ ಮಾತ್ರ ಕಾಣಿಸುತ್ತದೆ ಎನ್ನುವ ತಪ್ಪು ಕಲ್ಪನೆ ಬಹುತೇಕರಲ್ಲಿದೆ. ಆದರೆ, ಈ ಸಮಸ್ಯೆ ಎಲ್ಲ ವಯೋಮಾನದವರಲ್ಲೂ ಪರಿಣಾಮ ಬೀರುತ್ತಿದ್ದು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನೂ ಕಾಡುತ್ತಿದೆ. ಇಂತಹ ಕಾಯಿಲೆ ಲಕ್ಷಣ, ಪರಿಹಾರ, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಚಿಕಿತ್ಸಾ ಪದ್ಧತಿಗಳ …
Read More »ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿ ‘ಸದಸ್ಯ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಗೌರವಧನ’ ಹೆಚ್ಚಳ!
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇನ್ನೂ ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ …
Read More »ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಖಾತೆಗೆ ಜಮಾ!
ಕೋಲಾರ: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೇ ಅಕ್ಕಿ ದೊರೆಯದ ಕಾರಣ, ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೇ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ. ಇದಕ್ಕೆ ಸರ್ವರ್ ಸಮಸ್ಯೆ ಕಾರಣ, ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು …
Read More »ಕರ್ನಾಟಕ ಸೇರಿ ಈ 7 ರಾಜ್ಯಗಳಲ್ಲಿ ಇಂದು ಭಾರೀ ಮಳೆ
ಬೆಂಗಳೂರು : ಕರ್ನಾಟ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಇಂದು ಅಂದರೆ ಅಕ್ಟೋಬರ್ 12 ರಂದು ಭಾರೀ ಮಳೆಯಾಗಲಿದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಭಾರೀ ಮಳೆ ಇತ್ತೀಚಿನ ಮಾಹಿತಿ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ …
Read More »43 ಕ್ರಿಮಿನಲ್ ಕೇಸ್ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ: ಎಚ್.ಕೆ. ಪಾಟೀಲ
ಬೆಂಗಳೂರು: ರಾಜ್ಯದ ವಿವಿಧ ಠಾಣೆಗಳಲ್ಲಿ ರೈತ ಮುಖಂಡರು, ಕನ್ನಡಪರ ಹೋರಾಟಗಾರರು, ಕೆಲವು ಸ್ಥಳೀಯ ರಾಜಕೀಯ ಮುಖಂಡರ ವಿರುದ್ಧ ದಾಖಲಾಗಿರುವ 43 ಕ್ರಿಮಿನಲ್ ಪ್ರಕರಣಗಳನ್ನು ಸರಕಾರ ಹಿಂಪಡೆದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ 60 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪೈಕಿ ಕೂಲಂಕಷವಾಗಿ ಚರ್ಚಿಸಿ 43 ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ …
Read More »ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ
ಕುಂದಾಪುರ: ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಆರಂಭವಾಗಲಿದ್ದು, ಆ ಮೂಲಕ ಕರಾವಳಿಗರ ದೀರ್ಘ ಕಾಲದ ಬೇಡಿಕೆ ಈಡೇರಿದಂತಾಗಲಿದೆ. ವಿಸ್ತರಣೆಗೊಂಡ ಕಾಚಿಗುಡ ರೇಣಿಗುಂಟ ತಿರುಪತಿ ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರ ಆರಂಭಗೊಳ್ಳಲಿದೆ. ಈ ರೈಲು ಕೊಯಮತ್ತೂರು ಮೂಲಕವೂ ಓಡಲಿರುವುದರಿಂದ ಸದ್ಗುರು ಜಗ್ಗಿ ವಾಸುದೇವರ ಈಶ ಯೋಗ ಕೇಂದ್ರ ಮತ್ತು ಆದಿ ಯೋಗಿ ದರ್ಶನಕ್ಕೂ ಸಹಾಯವಾಗಲಿದೆ. ವೇಳಾಪಟ್ಟಿ ಮುರುಡೇಶ್ವರದಿಂದ ಬುಧವಾರ, ಶನಿವಾರ, ತಿರುಪತಿಯಿಂದ ಮಂಗಳವಾರ, ಶುಕ್ರವಾರ ಎಂದು ವಾರಕ್ಕೆರಡು ದಿನ …
Read More »