ಬೆಂಗಳೂರು, ಅಕ್ಟೋಬರ್ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೊಸ ಬಸ್ ಖರೀದಿ ಪ್ರಕ್ರಿಯೆ ಮುಂದುವರೆಸಿದೆ. ಜನ ಸಾಮಾನ್ಯರಿಗೆ ಉತ್ತಮ ಅನುಭವ ನೀಡುವ ಉದ್ದೇಶದಿಂದ ಹೊಸ 9600 ವೋಲ್ವೊ ಮಲ್ಟಿಎಕ್ಸೆಲ್ ಮಾದರಿಯ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್‌ಗಳನ್ನು ಖರೀದಿಸುತ್ತಿದೆ. ಈಗಾಗಲೇ ಒಂದನ್ನು ಪ್ರಾಯೋಗಿಕವಾಗಿ ಪರಿಶೀಲಿಸಿರುವ ಸಾರಿಗೆ ಸಚಿವರು ಇಂದು ಖುದ್ದು ತಯಾರಿಕಾ ಘಟಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ …
Read More »Yearly Archives: 2024
ಮುಖ್ಯಮಂತ್ರಿ ಆಕಾಂಕ್ಷಿತರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು: ಬಿ.ವೈ.ವಿಜಯೇಂದ್ರ
ಹುಬ್ಬಳ್ಳಿ: ‘ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇರುವವರೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಅವಧಿ ಪೂರ್ಣಗೊಳಿಸುವರು ಎಂದು ಹೇಳುವವರೇ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಅವರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು’ ಎಂದರು. ‘ಸಿದ್ದರಾಮಯ್ಯ ಅವರು ಸೂಚಿಸುವ ವ್ಯಕ್ತಿಗಳೇ ಸಹಜವಾಗಿ ಮುಖ್ಯಮಂತ್ರಿಯಾಗುತ್ತಾರೆ. ಹೀಗಾಗಿ ಅವರನ್ನು ಓಲೈಸಿಕೊಳ್ಳಲು ಪದೇ ಪದೇ …
Read More »ಆಯುಧ ಪೂಜೆಗೆ ಸಿದ್ಧತೆ: ಕುಂಬಳಕಾಯಿ ಮಾರಾಟ ಜೋರು
ಆಯುಧ ಪೂಜೆಗೆ ಸಿದ್ಧತೆ: ಕುಂಬಳಕಾಯಿ ಮಾರಾಟ ಜೋರು ಹುಬ್ಬಳ್ಳಿ: ದಸರಾ ಹಬ್ಬದ ನಿಮಿತ್ತ ಅ.11ರಂದು ನಡೆಯುವ ಆಯುಧ ಪೂಜೆಯ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಕುಂಬಳಕಾಯಿ, ಬೂದ ಕುಂಬಳಕಾಯಿ, ಬಾಳೆ ಕಂದು, ನಿಂಬೆಹಣ್ಣು ಹಾಗೂ ಹೂವಿನ ಮಾರಾಟ ಜೋರಾಗಿದೆ. ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತ, ದುರ್ಗದ ಬೈಲು ಮಾರುಕಟ್ಟೆ, ಜನತಾ ಬಜಾರ್, ಕೇಶ್ವಾಪುರ, ಹಳೇ ಹುಬ್ಬಳ್ಳಿ ಹಾಗೂ ಗೋಕುಲ ರಸ್ತೆಯ ಬದಿ ಸೇರಿದಂತೆ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಈಗಾಗಲೇ …
Read More »ಸಮಸ್ಯೆಗಳ ನಡುವೆಯೇ ನಿತ್ಯದ ಬದುಕು
ಹುಬ್ಬಳ್ಳಿ: ಕಿರಿದಾದ ಮಣ್ಣಿನ ರಸ್ತೆಗಳು, ಚರಂಡಿ ವ್ಯವಸ್ಥೆ ಇಲ್ಲ. ಪದೇ ಪದೇ ರಸ್ತೆಯಲ್ಲಿಯೇ ಹರಿಯುವ ಗಟಾರದ ಕೊಳಚೆ ನೀರು, ಮಳೆಗಾಲದ ವೇಳೆ ಮನೆಯೊಳಗೆ ನುಗ್ಗುವ ಗಲೀಜು ನೀರು, ರಸ್ತೆ ಬದಿಯಲ್ಲಿಯೇ ತ್ಯಾಜ್ಯದ ರಾಶಿ, ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಹಾವಳಿ, ಕೊಳಚೆ ನೀರು ಮಿಶ್ರಿತ ಕುಡಿಯುವ ನೀರು ಪೂರೈಕೆ, ಪಾಲಿಕೆಗೆ ಸಕಾಲಕ್ಕೆ ತೆರಿಗೆ ಪಾವತಿಸಿದರೂ ಸಿಗದ ಮನೆಯ ಹಕ್ಕುಪತ್ರ. -ಇದು ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ 49 ವಾರ್ಡ್‌ನಲ್ಲಿನ ಹನುಮಂತ ನಗರ, ಶೆಟ್ಟರ …
Read More »ರಭಸದ ಗಾಳಿ, ಮಳೆ: ನೆಲಕಚ್ಚಿದ ಟೊಮೆಟೊ, ಹಾಗಲಕಾಯಿ, ಭತ್ತ
ಹುಬ್ಬಳ್ಳಿ: ಧಾರವಾಡ ಜಿಲ್ಲೆ, ಹುಬ್ಬಳ್ಳಿ ನಗರ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಬೆಳಗಿನ ಜಾವದಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನಲ್ಲಿ ರಭಸದ ಗಾಳಿಗೆ ನೂರಾರು ಎಕರೆ ಭತ್ತದ ಗದ್ದೆಗೆ ಹಾನಿಯಾಗಿದೆ. ಧಾರಾಕಾರ ಮಳೆಗೆ ಧಾರವಾಡ ತಾಲ್ಲೂಕಿನ ಕಮಲಾಪುರದಲ್ಲಿ ಜಮೀನಿನಲ್ಲಿ ಟೊಮೆಟೊ ಹಾಗೂ ಹಾಗಲಕಾಯಿ ಬೆಳೆ ನೆಲಕಚ್ಚಿವೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು ಕಲಘಟಗಿ ಭಾಗದಲ್ಲಿ ಹೆಚ್ಚು 5.5 ಸೆಂ.ಮೀ ಮಳೆಯಾಗಿದೆ. ಹುಬ್ಬಳ್ಳಿ …
Read More »ಬೆಳಗಾವಿ: ಬಡ ವಿದ್ಯಾರ್ಥಿಗಳ ಭರವಸೆ ‘ಸಿಇಟಿ-ಸಕ್ಷಮ
ಬೆಳಗಾವಿ: ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ರೂಪಿಸಿದ ‘ಸಿಇಟಿ- ಸಕ್ಷಮ’ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಗ್ರಾಮೀಣ, ಬಡ ವಿದ್ಯಾರ್ಥಿಗಳು ಕೂಡ ಸಿಇಟಿ-ನೀಟ್‌ಗಳಲ್ಲಿ ಉತ್ತಮ ರ್‍ಯಾಂಕ್ ಗಳಿಸಲು ಈ ವಿನೂತನ ಪ್ರಯೋಗ ಮಾಡಲಾಗಿದೆ. ಇದರಿಂದ ಜಿಲ್ಲೆಯ 6,063 ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿದೆ. ಪ್ರಥಮ ಹಾಗೂ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ತರಬೇತಿ ನೀಡುವುದು, ಪ್ರತಿ ತಿಂಗಳು ಮಾದರಿ ಪರೀಕ್ಷೆ ನಡೆಸುವುದು ಇದರ ಉದ್ದೇಶ. ಕರ್ನಾಟಕ ಪರೀಕ್ಷಾ …
Read More »ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರ ₹3.69 ಕೋಟಿ ಆಸ್ತಿ ತೆರಿಗೆ ಬಾಕಿ
ಬೆಳಗಾವಿ: ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರ ₹3.69 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಅದರ ವಸೂಲಾತಿಗಾಗಿ ಸಾಂಬ್ರಾ ಗ್ರಾಮ ಪಂಚಾಯಿತಿ ನೋಟಿಸ್ ಜಾರಿಗೊಳಿಸಿದೆ. ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನ ನಡದಿವೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರಂತರವಾಗಿ ಸಭೆ ನಡೆಸಿ, ಇದಕ್ಕೆ ಪೂರಕವಾಗಿ ಮೂಲಸೌಕರ್ಯ ಸಿದ್ಧಪಡಿಸುತ್ತಿದ್ದಾರೆ. ಹೊಸ ಟರ್ಮಿನಲ್ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿ ಆರಂಭಗೊಂಡಿವೆ. ಆದರೆ, ವಿಮಾನ ನಿಲ್ದಾಣದವರು ಕಳೆದ ಏಳು …
Read More »ಅನುಮತಿ ಇಲ್ಲದೇ ಮರಕ್ಕೆ ಕೊಡಲಿ: ಸಚಿವರಿಗೆ ದೂರು
ಖಾನಾಪುರ (ಬೆಳಗಾವಿ ಜಿಲ್ಲೆ): ‘ತಾಲ್ಲೂಕಿನ ಲೋಂಡಾ ಅರಣ್ಯ ವಲಯ ವ್ಯಾಪ್ತಿಯ ಶಿರೋಲಿ ಗ್ರಾಮದ ಕೃಷಿ ಭೂಮಿಯಲ್ಲಿ ಬೆಳೆದ 40 ಮರಗಳನ್ನು ಅನುಮತಿ ಇಲ್ಲದೇ ಕತ್ತರಿಸಲಾಗಿದೆ. ಪ್ರಕರಣ ನಡೆದು ಆರು ತಿಂಗಳಾಗಿದೆ. ಈ ಬಗ್ಗೆ ಕಾಂಗ್ರೆಸ್ ಹೋರಾಟ ಮಾಡಿದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಖುದ್ದಾಗಿ ತಾವೇ ಶಿಸ್ತುಕ್ರಮ ಜರುಗಿಸಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳಕರ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಮಂಗಳವಾರ ಭೇಟಿ ಮಾಡಿ …
Read More »‘ಕೆರೆಗಳ ಅಭಿವೃದ್ಧಿ ಶ್ರೇಷ್ಠ ಕೆಲಸ’
ಬೆಳಗಾವಿ: ‘ಸಾಮಾಜಿಕ ಮತ್ತು ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡುವ ಮೂಲಕ ಧರ್ಮಸ್ಥಳದ ಧರ್ಮಾಧ್ಯಕ್ಷರಾದ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನಿಲಜಿ ಗ್ರಾಮ ಪಂಚಾಯಿತಿ, ಶಿಂದೊಳ್ಳಿ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ಪುನಃಶ್ಚೇತನಗೊಳಿಸಿದ ಶಿಂದೊಳ್ಳಿ ಸರ್ಕಾರಿ ಕೆರೆ ಹಸ್ತಾಂತರ ಮತ್ತು ಬಾಗಿನ ಅರ್ಪಣೆ ಮಾಡಿ ಮಾತನಾಡಿದರು. ‘ಧರ್ಮಸ್ಥಳ ಯೋಜನೆಯವರು ಜಿಲ್ಲೆಯಲ್ಲಿ ಸುಮಾರು 48 ಕೆರೆಗಳನ್ನು …
Read More »ಬೆಳಗಾವಿಗೆ ಇಂದು ವಿಜಯೇಂದ್ರ
ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅ.10ರಂದಿ ಬೆಳಿಗ್ಗೆ 11ಕ್ಕೆ ಜಿಲ್ಲೆಯ ಹುಕ್ಕೇರಿ ಹುರೇಮಠದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2ಕ್ಕೆ ಬೆಳಗಾವಿ ನಗರಕ್ಕೆ ಬಂದು ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸುವರು. ನಂತರ ಪತ್ರಿಕಾಗೋಷ್ಠಿ ನಡಸಲಿದ್ದಾರೆ ಎಂದು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ತಿಳಿಸಿದ್ದಾರೆ.
Read More »