ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದ್ದು, ಪಡಿತರ ಚೀಟಿದಾರರು ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಆಹಾರ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 07 ರಿಂದ ಮಧ್ಯಾಹ್ನ 12 ಗಂಟೆಯವರೆಗೆ, ಸಾಯಂಕಾಲ 04 ರಿಂದ ರಾತ್ರಿ 09 ಗಂಟೆಯವರೆಗೆ ಮಂಗಳವಾರ ರಜಾ …
Read More »Yearly Archives: 2024
ರತನ್ ಟಾಟಾ ನಿಧನ: ಶೋಕಾಚರಣೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ
ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರ ಗುರುವಾರ ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಟಾಟಾ ಗ್ರೂಪ್ ಅನ್ನು ಜಾಗತಿಕವಾಗಿ ಹೆಸರಾಂತ ಸಂಘಟಿತ ಸಂಸ್ಥೆಯಾಗಿ ಪರಿವರ್ತಿಸಿದ ಕೀರ್ತಿಗೆ ಪಾತ್ರರಾದ ಟಾಟಾ ಅವರು ಬುಧವಾರ ಮುಂಬೈ ಆಸ್ಪತ್ರೆಯಲ್ಲಿ 86 ನೇ ವಯಸ್ಸಿನಲ್ಲಿ ನಿಧನರಾದರು. ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಅಕ್ಟೋಬರ್ 10 ರಂದು ಶೋಕಾಚರಣೆಯ ಸಂಕೇತವಾಗಿ …
Read More »ಭಾರತದ ಹೆಮ್ಮೆಯ ಉದ್ಯಮಿ ರತನ್ ಟಾಟಾ ನಿಧನ!
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ ಅಭಿಮಾನಿಗಳು ಒಪ್ಪಿರಲಿಲ್ಲ. ರತನ್ಟಾಟಾ ಅವರನ್ನು …
Read More »ಎಂ.ಕೆ.ಹುಬ್ಬಳ್ಳಿಯಲ್ಲಿ ಭಾರಿ ಮಳೆ ಜಲಾವೃತಗೊಂಡ ಪಟ್ಟಣ
ಎಂ.ಕೆ.ಹುಬ್ಬಳ್ಳಿ: ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ರಸ್ತೆಗಳೆ ಮೇಲೆ ನೀರು ಹರಿಯಿತು. ಚರಂಡಿಗಲ್ಲಿ ಮಳೆ ನೀರು ತುಂಬಿತು. ಪ್ಲಾಸ್ಟಿಕ್, ತ್ಯಾಜ್ಯ ವಸ್ತುಗಳು ತೇಲಿದವು. ತಗ್ಗು ಪ್ರದೇಶ, ಚರಂಡಿ ಪಕ್ಕದ ಕೆಲ ಮನೆಗಳಿಗೆ ನೀರು ನುಗ್ಗಿತು. ಹೆದ್ದಾರಿ ಕೆಳಗೆ ಹಾಗೂ ವಿವಿಧೆಡೆ ರಸ್ತೆಗಳು ಜಲಾವೃತಗೊಂಡವು. ಕೆಲಹೊತ್ತು ಸಂಚಾರಕ್ಕೆ ಸಮಸ್ಯೆಯಾಯಿತು. ಮಂಗಳವಾರವೂ ಎಂ.ಕೆ. ಹುಬ್ಬಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮಳೆಯಾಯಿತು. ೯ಎಂಕೆಎಚ್೧ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ …
Read More »ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಶಿಕ್ಷೆ
ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಇಲ್ಲಿನ ರುಕ್ಮಿಣಿ ನಗರದ ನಿವಾಸಿ ಚಂದ್ರು ಮೋಹನ ಹರಿಜನ (26) ಶಿಕ್ಷೆಗೆ ಒಳಗಾದವ. ಮದುವೆ ಆಗುವುದಾಗಿ ನಂಬಿಸಿ, 2019ರ ಜನವರಿ 14ರಂದು ಬಾಲಕಿ ಒಡವೆಗಳನ್ನು ಬ್ಯಾಂಕಿನಲ್ಲಿ ಒತ್ತೆ ಇರಿಸಿ ಹಣ ಪಡೆದಿದ್ದ. ನಂತರ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಅಪಹರಿಸಿಕೊಂಡು ಹೋಗಿ, ನಿರಂತರವಾಗಿ …
Read More »ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಊಹಾಪೋಹ ಅಲ್ಲ: ಬಿ.ವೈ.ವಿಜಯೇಂದ್ರ
ಗದಗ: ‘ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬುದು ಊಹಾಪೋಹ ಅಲ್ಲ. ನೂರಕ್ಕೆ ನೂರು ಸತ್ಯ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ‘ಅವರು ಕೆಳಗಿಳಿಯುತ್ತಿರುವುದು ಗೊತ್ತಾಗಿರುವ ಕಾರಣದಿಂದಲೇ ಕೆಲವು ನಾಯಕರು ತಮ್ಮ ಬಳಿ ಎಷ್ಟು ಜನ ಇದ್ದಾರೆ ಎಂಬುದನ್ನು ತೋರಿಸಲು ಸಭೆ ನಡೆಸುತ್ತಿದ್ದಾರೆ’ ಎಂದು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಸಿಎಂ ರಾಜೀನಾಮೆ ಕೊಡುವ ಸಂದರ್ಭದಲ್ಲಿ ಜಾತಿಗಣತಿ ದಾಳ ಉರುಳಿಸಿದ್ದಾರೆ. ಆದರೆ, ಸಿಎಂ ಸ್ಥಾನ ಉಳಿಸಲು …
Read More »ಬಿಡುಗಡೆಯಾಗದ ಗೌರವ ಧನ. ಆಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
ದಾವಣಗೆರೆ: ಕಳೆದ ಮೂರು ತಿಂಗಳನಿಂದ ಗೌರವ ಧನ ಬಿಡುಗಡೆಯಾಗದೆ ಜೀವನ ನಿರ್ವಹಣೆಗೆ ತೊಂದರೆಯಿಂದ ಬೇಸತ್ತ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಡಾಂಗೇ ಪಾರ್ಕಿನ ಅಂಗನವಾಡಿ ಕೇಂದ್ರದ ಸಹಾಯಕಿ ಭಾರತಿ ಆತ್ಮಹತ್ಯೆಗೆ ಯತ್ನಿಸಿದವರು. ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ, ಇತರೆಡೆ ಕರೆದೊಯ್ಯಲು ಹಣಕಾಸಿನ ತೊಂದರೆಯಿಂದ ಕುಟುಂಬದವರು ಪರಿತಪಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕಳೆದ ಮೂರು ತಿಂಗಳನಿಂದ ಗೌರವ ಧನ …
Read More »ರತನ್ ಟಾಟಾ ಆರೋಗ್ಯ ಗಂಭೀರ:
ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಅವರ ಆರೋಗ್ಯ ಏರುಪೇರಾಗಿರುವ ಬಗ್ಗೆ ವರದಿಗಳು ಬಂದಿದ್ದವು. ಆದರೆ, ಸೋಷಿಯಲ್ ಮೀಡಿಯಾದ ಮೂಲಕ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಆದರೆ, ಇದೀಗ ಅವರ ಆರೋಗ್ಯ ಕ್ಷಿಣಿಸುತ್ತಿರುವ ಬಗ್ಗೆ ವರದಿಯಾಗಿದೆ. ರತನ್ ಟಾಟಾ ಅವರ ಆರೋಗ್ಯ ಕ್ಷೀಣಿಸುತ್ತಿರುವ …
Read More »ರಕ್ಷಣೆ ಕೊಟ್ರೆ ಆ ‘ಮಾಜಿ ಸಿಎಂಗಳ’ ಹನಿಟ್ರ್ಯಾಪ್ ಸಾಕ್ಷಿ ಕೊಡ್ತೀನಿ: ಸಂತ್ರಸ್ತೆ ಸವಾಲ್
ರಕ್ಷಣೆ ಕೊಟ್ರೆ ಆ ‘ಮಾಜಿ ಸಿಎಂಗಳ’ ಹನಿಟ್ರ್ಯಾಪ್ ಸಾಕ್ಷಿ ಕೊಡ್ತೀನಿ: ಸಂತ್ರಸ್ತೆ ಸವಾಲ್ ಇಲ್ಲಿವರೆಗೆ ಉದ್ಯಮಿಗಳು, ಅಧಿಕಾರಿಗಳು ಹಾಗೂ ಕೆಲ ರಾಜಕೀಯ ನಾಯಕರ ಹನಿಟ್ರ್ಯಾಪ್ ಬಗ್ಗೆ ಸದ್ದು ಕೇಳಿಬರುತ್ತಿದೆ. ಆದರೆ, ಈ ಹಿಂದೆ ಕರ್ನಾಟಕದ ಸಿಎಂ ಸ್ಥಾನದಲ್ಲಿದ್ದವರೂ ಈ ಹನಿಟ್ರ್ಯಾಪ್ ಬಲೆಯಲ್ಲಿ ಸಿಲುಕಿದ್ದರು ಎನ್ನುವ ವಿಚಾರ ಸದ್ಯ ರಾಜ್ಯ ರಾಜಕಾರಣವನ್ನು ತಲ್ಲಣಗೊಳಿಸಿದೆ. ಬಿಜೆಪಿ ಶಾಸಕ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾದರು ಎನ್ನಲಾದ ಸಂತ್ರಸ್ತ ಮಹಿಳೆಯು ಇಂದು ಸುದ್ದಿಗೋಷ್ಠಿ ನಡೆಸಿ, …
Read More »ಪಾಕಿಸ್ತಾನದಲ್ಲೂ ಅದ್ಧೂರಿ ನವರಾತ್ರಿ ಸಂಭ್ರಮ!
ಭಾರತದಲ್ಲಿ ನವರಾತ್ರಿ ಹಬ್ಬಕ್ಕೆ (Navaratri Festival) ವಿಶೇಷ ಆದ್ಯತೆ ನೀಡಲಾಗುತ್ತದೆ 9 ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಎಲ್ಲೆಡೆ ಬೀದಿ ಬೀದಿಗಳಲ್ಲಿ ದುರ್ಗಾದೇವಿಯನ್ನು (Durga ) ಕೂರಿಸಿ ಆರಾಧನೆ ಮಾಡಲಾಗುತ್ತದೆ. ಅದೇ ರೀತಿ ಕೆಲವರು ಮನೆಯಲ್ಲಿಯೂ ಕೂಡ ದುರ್ಗಾಮಾತೆಯನ್ನು ಕೂರಿಸಿ, ಅಥವಾ ಗೊಂಬೆಗಳನ್ನು ಕೂರಿಸಿ ಒಂಭತ್ತು ದಿನಗಳ ಕಾಲ ವೃತ ಮಾಡಿ ಪೂಜೆ (Puja) ಮಾಡಿ ಭಕ್ತಭಾವದಿಂದ ನವದುರ್ಗೆಯರಿಗೆ ಪ್ರಾರ್ಥನೆ ಮಾಡುತ್ತಾರೆ. ಆದರೆ ಮುಸ್ಲಿಮರೇ (Muslims) ಬಹುಸಂಖ್ಯಾತರಾಗಿರುವ ಹಿಂದುಗಳು ಕೇವಲ …
Read More »