Breaking News

Yearly Archives: 2024

ಬಿಜೆಪಿಯಿಂದ ಮುಂದೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಈಗ ಚುನಾವಣೆ ನಡೆದರೆ ಬಿಜೆಪಿ 140 ಸ್ಥಾನ ಗೆಲ್ಲಲಿದೆ: ಯತ್ನಾಳ

ರಾಮದುರ್ಗ: ‘ಕಾಂಗ್ರೆಸ್‌ ಬಗ್ಗೆ ರಾಜ್ಯದ ಜನರಲ್ಲಿ ಈಗ ಆಕ್ರೋಶ ಮಡುಗಟ್ಟಿದೆ. ಈಗಲೇ ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸಿದರೆ, ಬಿಜೆಪಿ ಸುಮಾರು 140 ಸ್ಥಾನ ಗೆಲ್ಲಲಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ತಾಲ್ಲೂಕಿನ ಬಟಕುರ್ಕಿ ಗ್ರಾಮದಲ್ಲಿ ವಿಶ್ವ ಹಿಂದು ಪರಿಷತ್‌ ಹಾಗೂ ಭಜರಂಗ ದಳ ಶನಿವಾರ ಹಮ್ಮಿಕೊಂಡಿದ್ದ 60ನೇ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಅವರು ಮಾತನಾಡಿದರು.   ‘ಕಾಂಗ್ರೆಸ್‌ನಲ್ಲಿ ಎಲ್ಲರೂ ಸಿದ್ದರಾಮಯ್ಯ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಹಾಗಾಗಿ ಸಿ.ಎಂ ಸ್ಥಾನಕ್ಕಾಗಿ …

Read More »

ನೈತಿಕ ಹೊಣೆಹೊತ್ತು ಸಿ.ಎಂ ರಾಜೀನಾಮೆ ನೀಡಲಿ: ಎನ್.ರವಿಕುಮಾರ

ಎಂ.ಕೆ.ಹುಬ್ಬಳ್ಳಿ: ‘ಮುಡಾ ಹಗರಣದಲ್ಲಿ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಹೇಳಿದರು. ಚನ್ನಮ್ಮನ ಕಿತ್ತೂರು ತಾಲೂಕಿನ ಕಾದರವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ಈ ಮುಂಚೆ ರಾಜೀನಾಮೆ ಕೇಳಿದಾಗ, ಪ್ರಕರಣ ದಾಖಲಾಗಿದೆಯಾ ಎಂದು ಪ್ರಶ್ನಿಸುತ್ತಿದ್ದರು. ಈಗ ಎಫ್‌ಐಆರ್ ದಾಖಲಾಗಿದೆ. ಈಗ್ಯಾಕೆ ರಾಜೀನಾಮೆ ಕೊಡಲು ಹಿಂಜರಿಯುತ್ತಿದ್ದೀರಾ? ತಪ್ಪು ಮಾಡದಿದ್ದರೆ, ಹೆದರುವ ಅವಶ್ಯಕತೆ ಇಲ್ಲ’ …

Read More »

ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

ಉಡುಪಿ: ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ ಎಂಬ ವಿಚಾರದಿಂದ ನನ್ನ ಜಾತಿ ಗೊತ್ತಾಯಿತು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.   ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರವಿವಾರ (ಸೆ.29) ಕುಂಜಿಬೆಟ್ಟು ಶಾರದ ಕಲ್ಯಾಣ ಮಂಟಪದಲ್ಲಿ …

Read More »

ಬಿಗ್ ಮನೆಗೆ ಸೀರಿಯಲ್ ಸುಂದರಿಯರಎಂಟ್ರಿ

ಬೆಂಗಳೂರು: ಬಿಗ್ ಬಾಸ್ ಕನ್ನಡ (Big Boss Kannada-11) ಆರಂಭವಾಗಿದೆ. ಕಿಚ್ಚ ಸುದೀಪ್ (Kiccha Sudeep) ಸ್ಟೈಲಿಸ್ಟ್ ಆಗಿ ಬಿಗ್ ಬಾಸ್ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆ ಬಿಗ್ ಬಾಸ್ ಮನೆಯೊಳಗೆ ಹೋಗುವ ನಾಲ್ವರು ಸ್ಪರ್ಧಿಗಳನ್ನು ರಿವೀಲ್ ಮಾಡಲಾಗಿತ್ತು. ಇಂದು ಬಿಗ್ ಬಾಸ್ ಗೆ ಹೋಗುವ ಮೊದಲ ಸ್ಪರ್ಧಿ ತಮ್ಮದೇ ಸ್ಟೈಲ್ ನಲ್ಲಿ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿರುವ ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸಿದ್ದಾರೆ. …

Read More »

ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

ವೈದ್ಯಶಾಸ್ತ್ರ ಪರಿಣತಿ ಹೊಂದಿದವರಿಂದಲೇ ವೈದ್ಯಕೀಯ ಚಿಕಿತ್ಸೆಗಳನ್ನು ಮಾಡಿಸಿಕೊಳ್ಳುತ್ತೇವೆ. ಅಡುಗೆ ಬಲ್ಲವರಿಂದಲೇ ಅಡುಗೆ ಮಾಡಿಸಿಕೊಳ್ಳುತ್ತೇವೆ. ಅದರಂತೆಯೇ ಧಾರ್ಮಿಕ ವಿಧಿ ವಿಧಾನಗಳನ್ನು ಬಲ್ಲವರ ಮುಖೇನವೇ ಮಾಡಿಸಬೇಕು. ಲೆಕ್ಕಪರಿಶೋಧನೆಯನ್ನು ಬೇರೆ ಯಾವುದೋ ಹುದ್ದೆಯವರು ಮಾಡಲು ಸಾಧ್ಯವಿಲ್ಲ. ಲೆಕ್ಕಪರಿಶೋಧಕರೇ ಅದನ್ನು ನಿರ್ವಹಿಸಬೇಕು. ಹಾಗೆಯೇ ದೇವಸ್ಥಾನ/ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ನಿರ್ವಹಣೆಯನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ನಡೆಸಬೇಕೇ ಹೊರತು ಸರಕಾರ ಅಲ್ಲ. ಹಿಂದೂ ದೇವಸ್ಥಾನ, ಧಾರ್ಮಿಕ ಕೇಂದ್ರಗಳು ಸರಕಾರದ ಹಿಡಿತದಿಂದ ಹೊರಬರಬೇಕು ಎಂಬ ಆಂದೋಲನ ದಶಕಗಳಿಂದ …

Read More »

ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

ಮೈಸೂರು: ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 50 ಕ್ಕೂ ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂದರ್ಭದಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಾರ್ಟಿ ಮೇಲೆ ದಾಳಿ ಮಾಡಿದ್ದಾರೆ. 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಎ.ಎಸ್.ಪಿ ಪಿ.ನಾಗೇಂದ್ರ ಹಾಗೂ ಡಿವೈಎಸ್ಪಿ ಕರೀಂ …

Read More »

ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

ಸಿರವಾರ: ಪಟ್ಟಣದ ಲಿಂಗಸೂರು ಮುಖ್ಯರಸ್ತೆಯ ಬಂಗ್ಲೆ ಹಳ್ಳದ ಸಮೀಪ ರವಿವಾರ (ಸೆ.29) ಅನ್ನಭಾಗ್ಯದ ಅಕ್ಕಿಯ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ರಾಯಚೂರಿನಿಂದ ಲಿಂಗಸೂರು ಕಡೆಗೆ ಹೊರಟಿದ್ದ ಅನ್ನಭಾಗ್ಯದ ಲಾರಿಯು ಬೈಕ್ ನಲ್ಲಿ ತೆರಳುತ್ತಿದ್ದವರಿಗೆ ಡಿಕ್ಕಿ ಹೊಡೆದ ಪರಿಣಾಮ ಕೆ.ಗುಡದಿನ್ನಿ ಗ್ರಾಮದ ಚನ್ನಪ್ಪ (27) ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಗಂಭೀರ ಗಾಯಗೊಂಡಿರುವ ಚನ್ನಬಸವ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಸ್ಥಳಕ್ಕೆ …

Read More »

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

ಬೀದರ್ : ಡ್ಯೂಟಿಗೆ ತಡವಾಗಿ ಬಂದಿರುವುದನ್ನು ಪ್ರಶ್ನಿಸಿದ್ದ ಮಹಿಳಾ ಪಿಎಸ್‌ಐ ಮೇಲೆ ಪೊಲಿಸ್ ಪೇದೆಯೊಬ್ಬ ಹಲ್ಲೆ ಮಾಡಿರುವ ಘಟನೆ ರವಿವಾರ(ಸೆ29)ನಗರದಲ್ಲಿ ನಡೆದಿದ್ದು, ಪೇದೆಯನ್ನು ಅಮಾನತು ಮಾಡಲಾಗಿದೆ. ಇಲ್ಲಿನ ಮಹಿಳಾ ಪೊಲೀಸ್ ಠಾಣೆ ಪಿಎಸ್‌ಐ ಮಲ್ಲಮ್ಮ ಎಂಬುವರೇ ಹಲ್ಲೆಗೊಳಗಾಗಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಪರೀಕ್ಷೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ನ್ಯೂಟೌನ್ ಠಾಣೆಯ ಪೇದೆ ಧನರಾಜ್ ಅವರು ಎರಡು ಗಂಟೆ ತಡವಾಗಿ ಹಾಜರಾಗಿದ್ದು, ಈ ಬಗ್ಗೆ ಪಿಎಸ್‌ಐ ಮಲ್ಲಮ್ಮ ಪ್ರಶ್ನಿಸಿದ್ದಾರೆ. …

Read More »

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.

ಬೆಳಗಾವಿ: ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಮಿರಜ್ ತಾಲೂಕಿನ ಮೈಶಾಳ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ಮೈಶಾಳ ಗ್ರಾಮದ ಪಾರೀಶನಾಥ ಹೊನಮೋರೆ(40), ಸಾಯಿರಾಜ ಪಾರೀಶನಾಥ ಹೊನಮೋರೆ(13), ಪ್ರದೀಪ ಶ್ರೀಕೃಷ್ಣ ಮೋಠೆ (35) ಮೃತಪಟ್ಟಿದ್ದು, ಹೇಮಂತ ಹೊನಮೋರೆ(14) ಗಂಭೀರ ಗಾಯಗೊಂಡು ಮಿರಜ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರವಿವಾರ ಬೆಳಗ್ಗೆ ಹೊಲದಲ್ಲಿ ಮೇವು ಸಂಗ್ರಹಿಸಿ ಇಡುವಾಗ ವಿದ್ಯುತ್ ತಂತಿ ಮುರಿದು ಬಿದ್ದಿತ್ತು. …

Read More »

ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ. ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More »