ಬೆಳಗಾವಿ: ‘ಈ ಹಿಂದೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿಗೆ ಹೋಗಿದೆ’ ಎಂದು ಶಾಸಕ ಅಭಯ ಪಾಟೀಲ ಪ್ರಶ್ನಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ‘ರಾಜ್ಯದಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳದೆ ಕೆಲಸ ಮಾಡಿದ ಕೆಲವೇ ರಾಜಕಾರಣಿಗಳ ಪೈಕಿ ಸಿದ್ದರಾಮಯ್ಯ …
Read More »Yearly Archives: 2024
ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ಸರ್ಕಾರಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ: ಯತ್ನಾಳ
ದಾವಣಗೆರೆ: ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. ಶಾಸಕರ ಖರೀದಿ, ಆಪರೇಷನ್‌ಗೆ ಬಿಜೆಪಿ ವರಿಷ್ಠರು ಅವಕಾಶ ನೀಡುವುದಿಲ್ಲ, ನಾವೂ ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಆರೋಪ ಮಾಡಿದರು. ‘ರಾಜ್ಯ ಸರ್ಕಾರ ತಾನಾಗಿಯೇ ಪತನವಾಗುವ ಕಾಲ ಸನ್ನಿಹಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ ಮಾಡುವುದಿಲ್ಲ. ಸರ್ಕಾರ ಬೀಳಿಸಲು ಕೆಲವರ ಬಳಿ ಹಣ ಇರಬಹುದು. ಏಕೆಂದರೆ …
Read More »ಹೊಂಡ-ಗುಂಡಿಗಳ ರಸ್ತೆ: ಬಸ್ ಸಂಚಾರ ಬಂದ್
ಹಾನಗಲ್: ತಾಲ್ಲೂಕಿನ ಯಳ್ಳೂರ-ಬಸಾಪುರ ಗ್ರಾಮೀಣ ರಸ್ತೆ ಹದಗೆಟ್ಟಿದೆ. ಮೊಣಕಾಲು ಮಟ್ಟದ ತಗ್ಗುಗಳು ಸೃಷ್ಟಿಯಾಗಿದ್ದು ಸಾರಿಗೆ ಬಸ್ ಸಂಚಾರ ಕೂಡ ಅಸಾಧ್ಯವಾಗಿದೆ. ಈ ಭಾಗದ ಜನರು ಮತ್ತು ಶಾಲೆ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಮಳೆಗಾಲದ ಆರಂಭದಿಂದಲೇ ರಸ್ತೆ ಸಂಚಾರ ದುಸ್ತರವಾಗುತ್ತಿದೆ. ಈಚೆಗಂತೂ ಹೆಜ್ಜೆಗೊಂದು ಗುಂಡಿ ಬಾಯ್ತೆರೆದುಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಈ ರಸ್ತೆಯಲ್ಲಿ ಹಾನಗಲ್ ಸಾರಿಗೆ ಘಟಕದ ಬಸ್ ಸಂಚಾರ ಬಂದ್ ಮಾಡಿ ಒಂದು ತಿಂಗಳು ಗತಿಸಿದೆ. ಮಹರಾಜಪೇಟೆ …
Read More »ಮಾವನ ಮೇಲೆ ಸಿಟ್ಟು: 106 ಅಡಿಕೆ ಗಿಡ ಕಡಿದು ಹಾಕಿದ ಅಳಿಯ
ಹಾವೇರಿ: ತನ್ನ ಪತ್ನಿಯನ್ನು ಮನೆಗೆ ಕಳುಹಿಸಲಿಲ್ಲವೆಂಬ ಕಾರಣಕ್ಕೆ ಮಾವನ ಮೇಲೆ ಸಿಟ್ಟಾದ ಅಳಿಯನೊಬ್ಬ, ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ಹಾಕಿ ನಾಶಪಡಿಸಿರುವ ಬಗ್ಗೆ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.‘ಹಾನಗಲ್ ತಾಲ್ಲೂಕಿನ ಬಸಾಪುರ ಗ್ರಾಮದ ದೇವೇಂದ್ರಪ್ಪ ಫಕ್ಕೀರಪ್ಪ ಗಾಣಿಗೇರ (55) ಅವರು ದೂರು ನೀಡಿದ್ದಾರೆ. ಅವರ ಅಳಿಯನಾದ ಬಸವರಾಜ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ದೂರುದಾರ ದೇವೇಂದ್ರಪ್ಪ, ತಮ್ಮ ಮಗಳನ್ನು …
Read More »ತೇವಾಂಶ ಹೆಚ್ಚಳ; ಕುಸಿದ ಮೆಕ್ಕೆಜೋಳ ಬೆಲೆ
ರಾಣೆಬೆನ್ನೂರು: ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೆಳೆ ಕಟಾವಿಗೆ ಬಂದಿದೆ. ಜಿಲ್ಲೆಯ ಹಲವು ತಾಲ್ಲೂಕು ಹಾಗೂ ಹೊರ ಜಿಲ್ಲೆಗಳ ರೈತರು ತಾವು ಬೆಳೆದಿರುವ ಮೆಕ್ಕೆಜೋಳವನ್ನು ಮಾರಾಟ ಮಾಡಲು ನಗರದ ಎಪಿಎಂಸಿಗೆ ತರುತ್ತಿದ್ದಾರೆ. ಬದಲಾದ ವಾತಾವರಣದಿಂದಾಗಿ ಮೆಕ್ಕೆಜೋಳದ ತೇವಾಂಶ ಹೆಚ್ಚಾಗಿದ್ದು, ಬೆಲೆಯಲ್ಲಿಯೂ ಕುಸಿತ ಕಂಡುಬರುತ್ತಿದೆ. ಜಿಲ್ಲೆಯಲ್ಲಿ ವಾರದಿಂದ ವಾತಾವರಣ ಹೆಚ್ಚು ತಂಪಾಗಿದ್ದು, ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಕೆಲ ರೈತರು, ಮೆಕ್ಕೆಜೋಳದ ತೆನೆ ಮುರಿದು ಅಲ್ಲಲ್ಲಿ ರಾಶಿ ಮಾಡಿ ಇರಿಸುತ್ತಿದ್ದಾರೆ. …
Read More »ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್ 26ರ ಮುನ್ನ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಮುಂಬೈಗೆ ಭೇಟಿ ನೀಡಿದ್ದ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾವು 11 ಪಕ್ಷಗಳ ನಾಯಕರನ್ನು ಭೇಟಿಯಾಗಿದ್ದೇವೆ. ಚುನಾವಣೆ ದಿನಾಂಕಗಳನ್ನು ಘೋಷಿಸುವ ಮುನ್ನ ದೀಪಾವಳಿ …
Read More »ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ₹60 ಕೋಟಿ ಅವ್ಯವಹಾರದ ತನಿಖೆಗೆ ನಿರ್ಣಯ!
ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ₹60 ಕೋಟಿ ಅವ್ಯವಹಾರದ ತನಿಖೆಗೆ ನಿರ್ಣಯ ಕೈಗೊಳ್ಳಲಾಗಿದೆ. ಇದೇ ವಿಚಾರವಾಗಿ ರೈತರು ಕಳೆದ ವಾರ ನಿರಂತರ ಹೋರಾಟ ಮಾಡಿದರು. ಫಲವಾಗಿ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ರೈತರು ತನಿಖೆ ಮಾಡಿಸುವ ನಿರ್ಧಾರಕ್ಕೆ ಬಂದಿದ್ದಾರೆ. ದಶಕಗಳಿಂದಲೂ ರೈತರ ಜೀವನಾಡಿಯಾಗಿದ್ದ ಕಾರ್ಖಾನೆಯ ಈಗ ವಿವಾದದ ಕೇಂದ್ರವಾಗಿದೆ. ‘ಕಾರ್ಖಾನೆಯಲ್ಲಿ ನಡೆದ ಅವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಕಾರ್ಖಾನೆಯ ಈ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅವರ …
Read More »ಸೈಬರ್ ವಂಚನೆ: ₹8.64 ಕೋಟಿ ಕಳೆದುಕೊಂಡ ಜನ
ಬೆಳಗಾವಿ: ‘ನೀವು ಗಂಭೀರವಾದ ಅಪರಾಧ ಮಾಡಿದ್ದೀರಿ. ಆನ್‌ಲೈನ್‌ನಲ್ಲಿ ನಿಮಗೆ ಬಂದಿರುವ ಪಾರ್ಸೆಲ್‌ನಲ್ಲಿ ಮಾದಕ ದ್ರವ್ಯ ಕಂಡುಬಂದಿವೆ. ವಿಡಿಯೊ ಕರೆ ಮೂಲಕವೇ ನಾವು ನಡೆಸುವ ವಿಚಾರಣೆಗೆ ಹಾಜರಾಗಿ. ನಮ್ಮ ಕ್ಯಾಮೆರಾ ಕಣ್ಗಾವಲಿನಲ್ಲೇ ಇರಿ…’ ಇಂಥ ಕರೆಗಳು ನಿಮಗೂ ಬಂದರೆ ಎಚ್ಚರ. ಇಂಟರ್‌ನೆಟ್ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಹೀಗೆ ಕರೆ ಮಾಡುತ್ತಿರುವ ವಂಚಕರು ಹಣಕ್ಕೆ ಪೀಡಿಸುತ್ತಿದ್ದಾರೆ. ಅವರಿಗೆ ಹೆದರಿ ಮಾಹಿತಿ ಹಂಚಿಕೊಂಡು ಸಂಕಷ್ಟಕ್ಕೆ ಸಿಲುಕಿದವರು, ನ್ಯಾಯ ಕೋರಿ ಬೆಳಗಾವಿ ನಗರ …
Read More »ನಕಲಿ ಗೋಲ್ಡ್ ಪ್ಲ್ಯಾಕ್ ಸಿಗರೇಟ್ ಹಾಗೂ ಲೈಟ್ಸ್ ಪ್ಯಾಕ್ ಸಿಗರೇಟ್ ವಶ: ಇಬ್ಬರ ಬಂಧನ
ನವಲಗುಂದ: ಹುಬ್ಬಳ್ಳಿ-ವಿಜಯಪೂರ ರಾಷ್ಟ್ರೀಯ ಹೆದ್ದಾರಿ ಶೆಟ್ಟರ ಕೆರೆ ಹತ್ತಿರ ಅಂದಾಜು ₹5.40 ಲಕ್ಷ ಮೌಲ್ಯದ ನಕಲಿ ಗೋಲ್ಡ್ ಪ್ಲ್ಯಾಕ್ ಸಿಗರೇಟ್ ಹಾಗೂ ಲೈಟ್ಸ್ ಪ್ಯಾಕ್ ಸಿಗರೇಟ್ ಪ್ಯಾಕೇಟ್‌ಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ವಾಹನ ಸಮೇತ ಪೊಲೀಸರು ಬಂಧಿಸಿದ್ಧಾರೆ. ಉಡುಪಿ ಸಂತೆಕಟ್ಟೆ ಮೂಲದ ಮಹ್ಮದ ನೌಶಾದ, ಬೆಂಗಳೂರು ಮೂಲದ ಮಹ್ಮದ ನಾಸಿರ್ ಬಂಧಿತ ಆರೋಪಿಗಳು. ಆರೋಪಿಗಳು 160 ಬಂಡಲ್‌ಗಳಲ್ಲಿ 3200 ನಕಲಿ ಸಿಗರೇಟ್ ಪಾಕೀಟ್‌ಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದರು. ಈ ಕುರಿತು ಬೆಂಗಳೂರು …
Read More »ಇಂಧನ ಪೂರೈಕೆ ಟ್ಯಾಂಕರ್ ಸಂಚಾರ ಸ್ಥಗಿತ
ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಪೆಟ್ರೋಲ್, ಡೀಸೆಲ್ ಪೂರೈಕೆ ಟ್ಯಾಂಕರ್ ಸಂಚಾರಕ್ಕೆ ವಿಧಿಸಿದ ನಿರ್ಬಂಧ ತೆರವಿಗೆ ಆಗ್ರಹಿಸಿ ಐಒಸಿಎಲ್ ಮತ್ತು ಎಚ್‌ಪಿಸಿಎಲ್ ಟ್ರಾನ್ಸ್‌ಪೋರ್ಟರ್ ಕಂಟ್ರಾಕ್ಟರ್ಸ್ ಸಂಘಟನೆ ಮತ್ತು ಉತ್ತರ ಕರ್ನಾಟಕ ಟ್ಯಾಂಕರ್ ಡ್ರೈವರ್ಸ್ ಅಂಡ್ ಹೆಲ್ಪರ್ಸ್ ಸಂಘದವರು ಶನಿವಾರ ಟ್ಯಾಂಕರ್ ಸಂಚಾರ ಸ್ಥಗಿತಗೊಳಿಸಿ, ಪ್ರತಿಭಟನೆ ಆರಂಭಿಸಿದರು. ‘ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಮತ್ತು ಮಧ್ಯಾಹ್ನ 4 ರಿಂದ ರಾತ್ರಿ 9ರವರೆಗಿನ ಅವಧಿಯಲ್ಲಿ ಟ್ಯಾಂಕರ್‌ಗಳಿಗೆ ಹುಬ್ಬಳ್ಳಿ-ಧಾರವಾಡ ಪ್ರವೇಶಿಸಲು ನಿರ್ಬಂಧಿಸಿರುವುದನ್ನು ತೆರವುಗೊಳಿಸಬೇಕು. ಶನಿವಾರ ಟ್ಯಾಂಕರ್‌ಗಳಿಗೆ …
Read More »