ಚಿಕ್ಕೋಡಿ: ‘ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು. ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು. ಪ್ರಾಥಮಿಕ ಆರೋಗ್ಯ …
Read More »Yearly Archives: 2024
ಕಂದಾಯ ಅಧಿಕಾರಿಗೆ ಪ್ರಶಸ್ತಿ
ಬೆಳಗಾವಿ: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿದ ಕಾರಣಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವಿಪತ್ತು ನಿರ್ವಹಣಾ ಸಮಾಲೋಚಕ ನಿಂಗನಗೌಡ ಚನಬಸನಗೌಡರ ಅವರಿಗೆ ‘ಅತ್ಯುತ್ತಮ ಕಂದಾಯ ಅಧಿಕಾರಿ-2024’ ಪ್ರಶಸ್ತಿ ಲಭಿಸಿದೆ. ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ನಿಂಗನಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಸೇರಿದಂತೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ …
Read More »ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಗಳಿಸಿದ ರೈತ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೇರೂರ ಗ್ರಾಮದ ರೈತ ಅಪ್ಪಾಸಾಬ ರೇಂದಾಳೆ ಅವರು, ಒಂದು ಎಕರೆಯಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಆದಾಯ ಗಳಿಸಿದ್ದಾರೆ. ಅಪ್ಪಾಸಾಬ ಅವರಿಗೆ 8 ಎಕರೆ ಜಮೀನಿದೆ. 7 ಎಕರೆಯಲ್ಲಿ ಕಬ್ಬು ಬೆಳೆದಿದ್ದು, 1 ಎಕರೆಯಲ್ಲಿ ಕೊತ್ತಂಬರಿ ಬೀಜ ಬಿತ್ತಿದ್ದರು. ಹದ ಮಳೆ ಸುರಿದಿದ್ದರಿಂದ ಉತ್ತಮ ಇಳುವರಿ ಬಂದಿದೆ. ಕೊತ್ತಂಬರಿ ಸೊಪ್ಪಿನ ದರ ಏರಿಕೆಯಿಂದಾಗಿ ಕೈತುಂಬ ಹಣವೂ ಸಿಕ್ಕಿದೆ. ಕೆ.ಜಿಗೆ ₹370ರ ದರದಲ್ಲಿ ಅಶೋಕ ತಳಿಯ …
Read More »ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಇಂದು: ನಿಷೇಧಾಜ್ಞೆ
ಮೈಸೂರು: ಮಹಿಷ ದಸರಾ ಆಚರಣೆ ಸಮಿತಿಯು ಭಾನುವಾರ (ಸೆ.29) ‘ಮಹಿಷ ಮಂಡಲೋತ್ಸವ’ದ ಅಂಗವಾಗಿ, ಬೆಳಿಗ್ಗೆ 8.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಪುರಭವನದಲ್ಲಿ ಕಾರ್ಯಕ್ರಮ ನಡೆಸಲಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾರ್ಯಕ್ರಮದ ಕುರಿತು ತಮ್ಮ ಫೇಸ್‌ಬುಕ್ ಪುಟದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ ಸಿಂಹ, ‘ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ, ನೋಡೆ ಬಿಡೋಣ’ ಎಂದು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಅವರು, ಮಹಿಷ ದಸರಾಕ್ಕೆ ಪ್ರತಿಯಾಗಿ ಚಾಮುಂಡಿ ಬೆಟ್ಟ …
Read More »ಕೌಟುಂಬಿಕ ಕಲಹದಿಂದ ಕುಡುಗೋಲಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ
ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವಂತ ಘಟನೆ ಕಲಬುರ್ಗಿಯ ಸೇಡಂನ ಬೇಟಗೇರ(ಬಿ) ಗ್ರಾಮದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಬೇಡಗೇರ(ಬಿ) ಗ್ರಾಮದ ನಾಗಮ್ಮ ಹಾಗೂ ಶೇಖರಪ್ಪ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. ದಿನೇ ದಿನೇ ಹೆಚ್ಚಾಗಿ ಇದರಿಂದ ಬೇಸತ್ತು ಕೂಡ ಹೋಗಲಾಗಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದಂತ ಶೇಖರಪ್ಪ ತನ್ನ ಪತ್ನಿ ನಾಗಮ್ಮ(42) ಎಂಬುವರನ್ನು ಕುಡುಗೋಲಿನಿಂದ ಕೊಚ್ಚಿ …
Read More »Bigg Boss ಸೀಸನ್-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು
ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ಬಾಸ್ (Bigg Boss) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ ನಟ ಕಿಚ್ಚ ಸುದೀಪ್ ಅವರೇ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈಗಾಗಲೇ ಯಶಸ್ವಿ 10 ಆವೃತ್ತಿಯನ್ನು ಮುಗಿಸಿರುವ ಬಿಗ್ಬಾಸ್ ಶೋ 11ನೇ ಆವೃತ್ತಿಗೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಈ ಬಾರಿ ಸ್ವರ್ಗ-ನರಕ ಎಂಬ ಥೀಮ್ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೊಸ ಅಧ್ಯಾಯದ ಮೇಲೆ ಜನರು ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಬಿಗ್ಬಾಸ್ ಸೀಸನ್-11ರ ಮೊದಲ ಸ್ಫರ್ಧಿಯಾಗಿ ನಟಿ …
Read More »ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್
ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲವು ದಿನಗಳಲ್ಲಿ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಇದು ನಿರಂತರ ಪ್ರಕ್ರಿಯೆಯಾಗಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಜಾರಿಗೊಳಿಸಲಾದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು …
Read More »ರಾಜ್ಯದಾದ್ಯಂತ ಅ. 2ರಂದು ಗಾಂಧಿ ನಡಿಗೆ, ಸ್ವಚ್ಛತೆ ಪ್ರತಿಜ್ಞೆ:
ಬೆಂಗಳೂರು: ‘ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಕಾರಣ, ಒಂದು ವರ್ಷ ರಾಜ್ಯದಾದ್ಯಂತ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ಅಕ್ಟೋಬರ್ 2ರಂದು ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ, ತಾಲ್ಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು. ‘ಬೆಂಗಳೂರಿನಲ್ಲಿ …
Read More »ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
ವಿಜಯಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗೌರವಯುತವಾಗಿ ರಾಜೀನಾಮೆ ನೀಡಬೇಕು. ಅವರು ಕಳ್ಳರಿದ್ದಾರೆ, ಇವರು ಕಳ್ಳರಿದ್ದಾರೆ ಎನ್ನುವುದು ಬೇಡ. ರಾಜಕೀಯದಲ್ಲಿ ನೀವು ಸ್ವಚ್ಛವಾಗಿರಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ವಿಷಯವನ್ನು ಎತ್ತಿದಾಗ ಕೇಂದ್ರ ಸಚಿವ ಎಚ್. ಡಿ. …
Read More »ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಶಾಕ್
ಬೆಂಗಳೂರು, ಸೆಪ್ಟೆಂಬರ್ 28: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ಅವರ ವಿರುದ್ಧ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಇದೀಗ ಮುನಿರತ್ನ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಧಿ ವಿಜ್ಞಾನ ಪ್ರಾಯೋಗಾಲಯದ ತಜ್ಞರನ್ನು ಕೂಡ ಜೊತೆಗೆ ಕರೆದೊಯ್ದಿದ್ದಿರುವ ಅಧಿಕಾರಿಗಳ ತಂಡ, ಮಹತ್ವದ ಮಾಹಿತಿ ಕಲೆಹಾಕಿದೆ …
Read More »